Home Posts tagged #v4news karnataka (Page 199)

ಉಪ್ಪಿನಂಗಡಿ: ಬಸ್ ಹರಿದು ತಾಯಿ, ಮಗು ಸಾವು

ಉಪ್ಪಿನಂಗಡಿ: ಅತೀ ವೇಗದಿಂದ ಬಸ್ ನಿಲ್ದಾಣದೊಳಗೆ ಬಂದ ಕೆಎಸ್ಸಾರ್ಟಿಸಿ ಬಸ್‌ನಡಿಗೆ ಸಿಲುಕಿ ತಾಯಿ ಹಾಗೂ ಆಕೆಯ ಒಂದು ವರ್ಷದ ಪುತ್ರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೂಲತಃ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಸಿದ್ದೀಕ್ ಎಂಬವರ ಪತ್ನಿ ಶಾಹಿದಾ (25) ಹಾಗೂ ಆಕೆಯ ಒಂದು ವರ್ಷದ ಪುತ್ರ ಶಾಹೀಲ್ ಮೃತಪಟ್ಟ ದುರ್ದೈವಿಗಳು.

ಎಸ್ ಡಿ ಎಂ ಪದವಿಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನೆ

ಯುವತಲೆಮಾರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರ್ಥೈಸಿಕೊಂಡು ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಮತದಾರರ ಸಾಕ್ಷರತಾ ಸಂಘದ ಬೆಳ್ತಂಗಡಿ ತಾಲೂಕು ನೋಡಲ್ ಅಧಿಕಾರಿ ಶುಭಾ ಪೌಲ್ ಹೇಳಿದರು. ಉಜಿರೆಯ ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನ ಮತದಾರರ ಸಾಕ್ಷರತಾ ಸಂಘದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ನೈತಿಕಪ್ರಜ್ಞೆಯಿಂದ ಮತವನ್ನು ಚಲಾಯಿಸುವ ಮೂಲಕ ಜವಾಬ್ದಾರಿಯುತ ನಾಯಕನನ್ನು ಆಯ್ಕೆ

“ವಿದ್ಯೆಯನ್ನು ಬಳಸಿ – ಬೆಳೆಸಿ” : ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್

ಉಜಿರೆ : ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ಜೀವನದಲ್ಲಿ ಛಲ ಎನ್ನುವುದು ಮುಖ್ಯ. ಛಲ ಇದ್ದರೆ ಎಂತಹ ಕಷ್ಟದ ಕೆಲಸವನ್ನಾದರೂ ಸಾಧಿಸಲು ಸಾಧ್ಯ ಎಂದು ಎಸ್.ಡಿ.ಎಂ ಸೊಸೈಟಿಯ ಕಾರ್ಯದರ್ಶಿ ಶ್ರೀ. ಡಿ. ಹರ್ಷೇಂದ್ರ ಕುಮಾರ್ ಹೇಳಿದರು. ಉಜಿರೆಯ ಎಸ್.ಡಿ.ಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಅವರು ಹಿರಿಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿಗಳು ನಮ್ಮ ವ್ಯಕ್ತಿತ್ವ ವಿಕಸನದ ಬಗ್ಗೆ ಹೆಚ್ಚಿನ ಒತ್ತು ನೀಡಬೇಕು.

ಶಿರ್ವ: ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ಶವ ಪತ್ತೆ

ಶಿರ್ವದ ನಡಿಬೆಟ್ಟು ಕಿಂಡಿ ಅಣೆಕಟ್ಟು ಬಳಿ ಮೀನಿಗೆ ಗಾಳ ಹಾಕಲು ಹೋಗಿ ಹೊಳೆಗೆ ಬಿದ್ದು ನಾಪತ್ತೆಯಾದ ಯುವಕನ ಶವ ಪತ್ತೆಯಾಗಿದೆ. ದಿಲೀಪ್ ಪಾಣಾರ (30) ಮೃತ ವ್ಯಕ್ತಿ  ದೈವ ನರ್ತನ ಕೆಲಸ ಮಾಡುತ್ತಿದ್ದ ದಿಲೀಪ್ ಪಾಣಾರ ತನ್ನ ಸಹಪಾಠಿಗಳೊಂದಿಗೆ ಭಾನುವಾರ ಹೊಳೆಗೆ ಮೀನು ಹಿಡಿಯಲು ಹೋಗಿದ್ದ ಈತ ಆಕಸ್ಮಿಕವಾಗಿ ಹೊಳೆಗೆ ಬಿದ್ದು ನಾಪತ್ತೆಯಾಗಿದ್ದ, ಸಂಜೆಯವರೆಗೂ ಈತನ ಪತ್ತೆಗಾಗಿ ಹುಡುಕಾಟ ನಡೆಸಿದರಾದರೂ ಕತ್ತಲಾವರಿಸಿದ್ದರಿ ಕಾರ್ಯಚರಣೆ ಸ್ಥಗಿತಗೊಳಿಸಿದ್ದರು. ಮತ್ತೆ

ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಇ ಸ್ಟ್ಯಾಂಪಿಂಗ್ ಬಿಡುಗಡೆ

ಬಂಟ್ವಾಳ: ಸಜೀಪಮುನ್ನೂರು ಮೂರ್ತೆದಾರರ ಸೇವಾ ಸಹಕಾರಿ ಸಂಘ ಸಜೀಪಮೂಡ ಇದರ ಸಿದ್ದಕಟ್ಟೆ ಶಾಖೆಯಲ್ಲಿ ಇ ಸ್ಟ್ಯಾಂಪಿಂಗ್ ಬಿಡುಗಡೆ ಸಮಾರಂಭ ನಡೆಯಿತು. ನ್ಯಾಯವಾದಿ ಸುರೇಶ್ ಶೆಟ್ಟಿ ಇ ಸ್ಟ್ಯಾಂಪಿಂಗ್ ಬಿಡುಗಡೆಗೊಳಿಸಿದರು. ಅವರು ಮಾತನಾಡಿ ಇಲ್ಲಿ ಇಸ್ಟ್ಯಾಂಪಿಂಗ್ ಆರಂಭಿಸಿರುವುದರಿಂದ ಗ್ರಾಮೀಣ ಜನರಿಗೆ ತುಂಬಾ ಅನುಕೂಲವಾಗಲಿದೆ. ಪ್ರಸ್ತುತ ದಿನಗಳಲ್ಲಿ ಪ್ರತಿಯೊಂದು ಕೆಲಸಗಳಿಗೂ ಈ ಸ್ಟ್ಯಾಂಪ್ ಅಗತ್ಯವಾಗಿರುವುದರಿಂದ ಜನರು ನಗರಕ್ಕೆ ಹೋಗಬೇಕಾಗುತ್ತದೆ. ಠಸೆ ಪೇಪರ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆ ಖಂಡಿಸಿ ಪುತ್ತೂರಿನಲ್ಲಿ ಬಜರಂಗದಳ, ವಿಶ್ವ ಹಿಂದೂ ಪರಿಷತ್

ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯನ್ನು ಖಂಡಿಸಿ ಬಜರಂಗದಳ ಪುತ್ತೂರು ಜಿಲ್ಲಾ ವತಿಯಿಂದ ಪ್ರತಿಭಟನಾ ಸಭೆ ಮಿನಿ ವಿಧಾನ ಸೌಧದ ಬಳಿ ಇರುವ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹಸಂಯೋಜಕ ಮುರಳೀಕೃಷ್ಣ ಹಸಂತಡ್ಕ ಮಾತನಾಡಿ, ದೇಶದ ಮೂಲ ನಿವಾಸಿಗಳಾದ ಕಾಶ್ಮೀರಿ ಪಂಡಿತರ ಮೇಲೆ ಪಾಕಿಸ್ತಾನಿ ಭಯೋತ್ಪಾದಕರು, ಮತಾಂದ ಜಿಹಾದಿಗಳಿಂದ ಆಗುತ್ತಿರುವ ದೌರ್ಜನ್ಯವನ್ನು ಇಡೀ ದೇಶದ ಹಿಂದೂ ಸಂಘಟನೆಗಳು

ಪಚ್ಚನಾಡಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಪ್ರದೇಶಕ್ಕೆ ಶಾಸಕರಾದ ಡಾ. ಭರತ್ ಶೆಟ್ಟಿ ಭೇಟಿ

ಬೊಂದೇಲ್ – ಪಚ್ಚನಾಡಿ ಸಂಪರ್ಕಿಸುವ ಮಧ್ಯ ಭಾಗದಲ್ಲಿ ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿ ಬಹುತೇಕ ಮುಗಿದಿದ್ದು, ಮುಂದಿನ ಹಂತವಾಗಿ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ಒಂದು ಬದಿಯ ರಸ್ತೆ ಕಾಂಕ್ರಿಟೀಕರಣ ಕಾರ್ಯವು ಪ್ರಗತಿಯಲ್ಲಿದೆ. ಅಕ್ಟೋಬರ್ 10 ರಿಂದ ಇನ್ನೊಂದು ಬದಿಯ ರಾಜಕಾಲುವೆ ವರೆಗೆ ರಸ್ತೆ ಕಾಮಗಾರಿಗಾಗಿ ಮುಖ್ಯ ರಸ್ತೆಯನ್ನು ಒಂದು ತಿಂಗಳ ಅವಧಿಗೆ ತಾತ್ಕಾಲಿಕವಾಗಿ ಮುಚ್ಚಲಾಗುತ್ತಿದ್ದು, ಈ ಸಂಬಂಧ ಮಾಹಿತಿ ಪಡೆಯಲು ಹಾಗೂ ಕಾಮಗಾರಿ ಪರಿಶೀಲಿಸಲು

ಸುರತ್ಕಲ್ ಬಂಟರ ಸಂಘದ ಅಧ್ಯಕ್ಷರಾಗಿ ಸುಧಾಕರ ಪೂಂಜ ಆಯ್ಕೆ

ಸುರತ್ಕಲ್ : ಬಂಟರ ಸಂಘ (ರಿ) ಸುರತ್ಕಲ್ ಇದರ 2021-2023 ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ. ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರ ಅಯ್ಕೆ ನಡೆಯಿತು. ಅಧ್ಯಕ್ಷರಾಗಿ ಸುಧಾಕರ ಎಸ್ ಪೂಂಜಾ ಹೊಸಬೆಟ್ಟು ಪುನರಾಯ್ಕೆಗೊಂಡಿದ್ದಾರೆ. ಉಪಾಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು ಕಾರ್ಯದರ್ಶಿಯಾಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿಯಾಗಿ ರತ್ನಾಕರ ಶೆಟ್ಟಿ ಸುರತ್ಕಲ್, ಜತೆ

ಹಿಂಜಾವೇ ಕಾರ್ಯಕರ್ತರಿಗೆ ಠಾಣಾಧಿಕಾರಿ ಹೊಡೆದಿದ್ದಾರೆಂಬ ಆರೋಪ ಕಾರ್ಯಕರ್ತರಿಂದ ನಗರ ಠಾಣೆಗೆ ಮುತ್ತಿಗೆ

ಕುಂದಾಪುರ: ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ನಗರ ಠಾಣಾಧಿಕಾರಿ ಹೊಡೆದಿದ್ದಾರೆ ಎಂದು ಆರೋಪಿಸಿ ಹಿಂದೂ ಜಾಗರಣಾ ವೇದಿಕೆಯ ನೂರಾರು ಕಾರ್ಯಕರ್ತರು ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಭಜನೆ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ನಡೆದಿದೆ ಅನ್ಯಧರ್ಮದ ಹುಡಗನೊಬ್ಬ ಚೈತ್ರಾ ಕುಂದಾಪುರ ಅವರ ಬಗ್ಗೆ ಅವಹೇಳನಕಾರಿ ವ್ಯಾಟ್ಸಪ್ ಸ್ಟೇಟಸ್ ಹಾಕಿದ ಹಿನ್ನೆಲೆ ಆ ಹುಡುಗ ಹಾಗೂ ಜಾಗರಣ ವೇದಿಕೆ ಕಾರ್ಯಕರ್ತರಿಗೆ ಜಗಳ ನಡೆದಿತ್ತು. ಘಟನೆಯ ಬಳಿಕ ಹಿರಿಯರ ನೇತೃತ್ವದಲ್ಲಿ ನಗರ