Home Posts tagged #v4news karnataka (Page 201)

ಪುತ್ತೂರಿನ ಕೊಡಂಗೆಯಲ್ಲಿ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ 10 ಮಂದಿ ಅಸ್ವಸ್ಥ-ಆಸ್ಪತ್ರೆಗೆ ದಾಖಲು

ಮನೆಯಲ್ಲಿ ತಯಾರಿಸಿದ ಅಣಬೆ ಪದಾರ್ಥ ಸೇವಿಸಿ ಒಂದೇ ಕುಟುಂಬದ ಹತ್ತು ಮಂದಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಪಡ್ನೂರು ಗ್ರಾಮದ ಕೊಡಂಗೆ ಎಂಬಲ್ಲಿ ನಡೆದಿದೆ. ಪಡ್ನೂರು ಕೊಡಂಗೆ ಸಾಂತಪ್ಪರವರ ಪುತ್ರ ರಾಘವ ರವರ ಮನೆಯಲ್ಲಿ ಈ ಘಟನೆ ನಡೆದಿದ್ದು ರಾಘವ, ಅವರ ತಾಯಿ ಹೊನ್ನಮ್ಮ, ಪತ್ನಿ ಲತಾ, ಪುತ್ರಿ ತೃಷಾ, ಸಹೋದರಿ ಬೇಬಿ, ಬಾವಂದಿರಾದ ದೇವಪ್ಪ, ಕೇಶವ, ರಾಘವರವರ

ಕಾಪುವಿನಲ್ಲಿ ಕೇಂದ್ರ, ರಾಜ್ಯ ಸರಕಾರದ ವಿರುದ್ಧ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಪಂಜಿನ ಮೆರವಣಿಗೆ

ರಾಜ್ಯ ಸರಕಾರದ ಧರ್ಮ ವಿರೋಧಿ ಮತ್ತು ಕೇಂದ್ರ ಸರಕಾರದ ಕೃಷಿ ವಿರೋಧಿ ಹಾಗೂ ಬೆಲೆ ಏರಿಕೆ ಮತ್ತು ಹಿಂದೂ ವಿರೋಧಿ ನೀತಿಯನ್ನು ಖಂಡಿಸಿ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರ ನೇತೃತ್ವದಲ್ಲಿ ಕಾಪು ಬ್ಲಾಕ್ ಕಾಂಗ್ರೆಸ್ ವತಿಯಿಂದ ಕಾಪುವಿನ ಶ್ರೀ ಜನಾರ್ದನ ದೇವಸ್ಥಾನದ ಎದುರಿನಿಂದ ಪೇಟೆಯವರೆಗೆ ಸಂಜೆ ಬೃಹತ್ ಪಂಜಿನ ಮೆರವಣಿಗೆ ನಡೆಯಿತು. ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಐತಿಹಾಸಿಕ ದೇವಸ್ಥಾನಗಳನ್ನು ಒಡೆಯುವುದರೊಂದಿಗೆ ಭ್ರಷ್ಟಾಚಾರ, ಅವ್ಯವಹಾರ,

ಹೆಚ್‌ಡಿಕೆ ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಮಾಜಿ ಮುಖ್ಯ ಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ಮೊದಲು ಒಂದು ವಾರ ಶಾಖೆಗೆ ಬಂದು ಆರ್‌ಎಸ್‌ಎಸ್ ಬಗ್ಗೆ ತಿಳಿದುಕೊಳ್ಳಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಇತ್ತೀಚೆಗೆ ಕುಮಾರಸ್ವಾಮಿ ಅವರು ಆರ್‌ಎಸ್‌ಎಸ್ ಬಗ್ಗೆ ನೀಡಿದ ಹೇಳಿಕೆಗೆ ನಗರದಲ್ಲಿಂದು ಸುದ್ದಿಗಾರರಿಗೆ ಪ್ರತಿಕ್ರೀಯೆ ನೀಡಿದರು. ಕಾಮಲೆ ರೋಗಿಗೆ ಜಗತ್ತೆಲ್ಲ ಹಳದಿಯಾಗಿ ಕಾಣುವಂತೆ ಕುಮಾರಸ್ವಾಮಿ ಆರ್‌ಎಸ್‌ಎಸ್ ಬಗ್ಗೆ ಹೇಳಿಕೆ ನೀಡುತ್ತಿದ್ದಾರೆ.

ಅ. 8ರಂದು ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆ ಉದ್ಘಾಟನೆ

ಪುತ್ತೂರು: ದೇವಾಲಯವೊಂದರಲ್ಲಿ ವಿನೂತನ ಪ್ರಯೋಗವಾಗಿ ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಧಾರ್ಮಿಕ ಶಿಕ್ಷಣವನ್ನು ಮತ್ತು ಮಕ್ಕಳಲ್ಲಿ ಧಾರ್ಮಿಕ ಪ್ರಜ್ಞೆಯನ್ನು ಮೂಡಿಸುವ ನಿಟ್ಟಿನಲ್ಲಿ ಹಮ್ಮಿಕೊಳ್ಳಲಾಗಿರುವ ‘ಸುಜ್ಞಾನ ದೀಪಿಕೆ’ ಧಾರ್ಮಿಕ ಶಿಕ್ಷಣ ಯೋಜನೆಯು ಅ. 8ರಂದು ಬೆಳಗ್ಗೆ 1೦ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ಶ್ರೀ ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಪ್ರಸಾದ್ ಮುಳಿಯ ಹೇಳಿದರು. ಅವರು ಶ್ರೀ ದೇವಾಲಯದ ಆಡಳಿತ

ತೊಕ್ಕೊಟ್ಟಿನಿಂದ ಕೊಣಾಜೆಗೆ ಮುಖ್ಯ ರಸ್ತೆಯನ್ನು ಸರಿಪಡಿಸುವಂತೆ ಒತ್ತಾಯಿಸಿ DYFI ನೇತ್ರತ್ವದಲ್ಲಿ ರಸ್ತೆ ತಡೆ ಪ್ರತಿಭಟನಾ ಪ್ರದರ್ಶನ

ಮಂಗಳೂರು ವಿಧಾನಸಭಾ ಕ್ಷೇತ್ರದ ತೊಕ್ಕೊಟ್ಟಿನಿಂದ ಕೋಣಾಜೆ ಗೆ ಸಂಪರ್ಕಿಸುವ ಮುಖ್ಯ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ಇದನ್ನು ಖಂಡಿಸಿ DYFI ಉಳ್ಳಾಲ ವಲಯ ನೇತ್ರತ್ವದಲ್ಲಿ ಚೆಂಬುಗುಡ್ಡೆಯಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು ಪ್ರತಿಭಟನೆ ಯನ್ನು ಉದ್ದೇಶಿಸಿ ಮಾತನಾಡಿದ ಡಿ ವೈ ಎಫ್ಐ ಜಿಲ್ಲಾ ಅಧ್ಯಕ್ಷರು B K ಇಮ್ತಿಯಾಜ್ ತೊಕ್ಕೋಟ್ಟಿನಿಂದ ಹಿಡಿದು ಚೆಂಬುಗುಡ್ಡೆ, ಬಬ್ಬುಕಟ್ಟೆ , ಕುತ್ತಾರ್ ಮತ್ತಿತ್ತರ ಪ್ರದೇಶದಲ್ಲಿ ಬಹು ದೊಡ್ಡ ಗುಂಡಿಗಳಿಂದ

ಕಾರ್ಕಳ ಆನೆಕೆರೆ ಮುಖ್ಯ ರಸ್ತೆಯ ಸಮಸ್ಯೆ ರಸ್ತೆಯಲ್ಲಿ ಬಾಳೆಗಿಡ ನೆಟ್ಟು ವಿನೂತನ ಪ್ರತಿಭಟನೆ

ಕಾರ್ಕಳ ಮೂರು ಮಾರ್ಗದಿಂದ ಆನೆಕೆರೆ ಮುಖ್ಯ ಮಾರ್ಗದಲ್ಲಿ ದಿನಕ್ಕೆ ಸಾವಿರಾರು ವಾಹನಗಳು ಓಡಾಡುತ್ತಿರುವ ರಸ್ತೆಯಾಗಿದೆ. ತಿಂಗಳುಗಳ ಹಿಂದೆ ಈ ರಸ್ತೆಯನ್ನು ಅಗೆದು ಒಳಚರಂಡಿಯ ಪೈಪ್ ಹಾಕಲಾಗಿತ್ತು. ಈ ಕಾಮಗಾರಿ ನಡೆದ ನಂತರ ಈ ರಸ್ತೆಯನ್ನು ಸರಿಯಾಗಿ ದುರಸ್ತಿ ಮಾಡದೆ ಹಾಗೆಯೇ ಬಿಡಲಾಯಿತು. ಒಂದೆರಡು ಬಾರಿ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾದ ಹಿನ್ನೆಲೆಯಲ್ಲಿ ಪುರಸಭೆಯವರು ಈ ರಸ್ತೆಯಲ್ಲಿ ಒಂದೆರಡು ಗಂಟೆಗಳ ಕಾಲ ರಿಪೇರಿ ಮಾಡುವ ನಾಟಕವನ್ನು ಮಾಡಿ ಹೋದರು. ಆದರೆ

ದಾನಿಗಳ ನೆರವನ್ನು ಎದುರು ನೋಡುತ್ತಿದೆ ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬ

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿರುವ ಬಡ ಕುಟುಂಬವೊಂದು ಚಿಕಿತ್ಸೆಗಾಗಿ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು ದಾನಿಗಳ ನೆರವನ್ನು ಎದುರು ನೋಡುತ್ತಿದೆ. ಈ ಮನೆಯಲ್ಲಿ ವಾಸವಿರುವ ಮೂರು ಮಂದಿಯನ್ನು ಆರೋಗ್ಯ ಸಮಸ್ಯೆ ಕಾಡುತ್ತಿದ್ದು ಮುಂದೇನು ಎನ್ನುವ ದಾರಿ ಕಾಣದೆ ಕಂಗೆಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಕೊಯಿಲ ಗ್ರಾಮದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿರುವ ಸೇಸಮ್ಮ ಪೂಜಾರ್ತಿಯವರದ್ದು ಬಡ ಕುಟುಂಬ. ಸೇಸಮ್ಮ ಅವರ ಹಿರಿಯ ಮಗಳು ವೇದ ಎಲ್ಲರಂತೆ ಲವಲವಿಕೆಯಿಂದ

ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್‌ದಾರರ ಸಭೆ

ದಕ್ಷಿಣ ಕನ್ನಡ ಮತ್ತು ಉಡುಪಿ ರಿಗ್ ಮಾಲೀಕರ ಮತ್ತು ಕಂಟ್ರಾಕ್ಟ್ದಾರರ ಸಂಘ ರಿಜಿಸ್ಟರ್ಡ್ ಮಂಗಳೂರು ವತಿಯಿಂದ ತಮಿಳುನಾಡು ರಿಗ್ ಮಾಲೀಕರ ಸಂಘದ ಪ್ರತಿನಿಧಿಗಳ ಜೊತೆ ಇಂದು ಮಂಗಳೂರಿನಲ್ಲಿ ಸಭೆ ನಡೆದಿದೆ. ಸಭೆಯಲ್ಲಿ ಡ್ರಿಲ್ಲಿಂಗ್ ದರ ಹೆಚ್ಚಳದ ಕುರಿತಾಗಿ ಚರ್ಚಿಸಿ, ಹೆಚ್ಚಾಗಿರುವ ಇಂಧನ ಬೆಲೆಗೆ ಅನುಗುಣವಾಗಿ ಡ್ರಿಲ್ಲಿಂಗ್ ದರವನ್ನು ನಿಗಧಿಪಡಿಲಾಗಿದೆ. ಒಂದು ಅಡಿ ಡ್ರಿಲ್ಲಿಂಗ್‌ಗೆ ಈ ಮೊದಲು 115 ರೂಪಾಯಿ ಇತ್ತು, ಈಗ ಈ ದರ 130 ಆಗಿದ್ದು, ಇದ್ರ ಜೊತೆಗೆ

ಅ.9ರಂದು ಕನ್ನಡಸೇನೆ ಕರ್ನಾಟಕ ದ.ಕ ಜಿಲ್ಲಾ ಕಚೇರಿ ಉದ್ಘಾಟನೆ

ಕನ್ನಡ ನಾಡು ನುಡಿ,ಜಲ ಸಂರಕ್ಷಣೆ, ಸ್ಥಳೀಯರಿಗೆ ಉದ್ಯೋಗ ಮತ್ತಿತರ ನ್ಯಾಯಯುತ ಬೇಡಿಕೆಗೆಹೋರಾಟ ನಡೆಸುತ್ತಾ ಬರುತ್ತಿರುವ ಕನ್ನಡ ಸೇನೆ ಕರ್ನಾಟಕ ಇದರ ದಕ್ಷಿಣಕನ್ನಡ ಜಿಲ್ಲಾ ಕಚೇರಿ” ಉದ್ಘಾಟನೆ ಸಮಾರಂಭ ಅ.9ರಂದು ಬೆಳಗ್ಗೆ 11.೦೦ ಗಂಟೆಗೆ ಕೂಳೂರಿನ ವ್ಯವಸಾಯ ಸೇವಾ ಸಹಕಾರಿ ಸಭಾಂಗಣದಲ್ಲಿ ಜರಗಲಿದೆ ಎಂದು ಕನ್ನಡ ಸೇನೆ ದ.ಕ ಜಿಲ್ಲಾ ಕಾರ್ಯಾಧ್ಯಕ್ಷ ಗುರುಚಂದ್ರ ಹೆಗ್ಡೆ ಗಂಗಾರಿ ಕೂಳೂರು ಸುದ್ದಿಗೋಷ್ಟಿಯಲ್ಲಿ ತಿಳಿಸಿದರು ಉದ್ಘಾಟನೆಯನ್ನು ಆಳ್ವಾಸ್ ಶಿಕ್ಷಣ

ಬಿಜೆಪಿ ಕಾರ್ಯಕರ್ತರಿಂದ ಸೇವಾ ಸಮರ್ಪಣಾ ಕಾರ್ಯಕ್ರಮ

ಆಲೂರು : ತಾಲೂಕಿನ ಬಿಜೆಪಿ ಸಭಾಂಗಣದಲ್ಲಿ ಇಂದು ಆಯೋಜಿಸಲಾದ ಸೇವಾ ಸಮರ್ಪಣ ಕಾರ್ಯಕ್ರಮವನ್ನು ಬಿಜೆಪಿ ತಾಲೂಕು ಅಧ್ಯಕ್ಷರಾದ ಹರೀಶ್ ಅವರು ಜ್ಯೋತಿ ಬೆಳಗುವುದರ ಮೂಲಕ ಉದ್ಘಾಟಿಸಿದರು ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ತಾಲೂಕು ಅಧ್ಯಕ್ಷರಾದ ಹರೀಶ್ ರವರು ನಮ್ಮ ಯುವ ಮೋರ್ಚಾ ರವರು ಬ್ಲಡ್ ಬ್ಯಾಂಕ್ ಕ್ಯಾಂಪನ್ನು ಮಾಡಿ ಸೇವಾ ಸಮರ್ಪಣೆಯಲ್ಲಿ ಭಾಗವಹಿಸಿ ಸಹಕರಿಸಿದ್ದಾರೆ. ಕಟ್ಟಾಯ ಭಾಗದಲ್ಲಿಯೂ ಕೂಡ ಸ್ವಚ್ಛತಾ ಕಾರ್ಯಕ್ರಮ ವಿರಬಹುದು, ಗಾಂಧಿ ಜಯಂತಿ ಕಾರ್ಯಕ್ರಮ