Home Posts tagged #v4news karnataka (Page 210)

ಕುಮಾರಧಾರ ನದಿಯಲ್ಲಿ ಮೃತದೇಹ ಪತ್ತೆ

ಕಡಬ ಸೆಪ್ಟಂಬರ್ 22ರಂದು ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ. ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು

ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗೆ ಸನ್ಮಾನ ಹಾಗೂ ಕಾರ್ಯಾಗಾರ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಸ್ವಚ್ಚ ಭಾರತ್ ಮಿಷನ್ ಗ್ರಾಮಾಂತರ ಮಂಗಳೂರು ತಾಲೂಕು, ಸಾಹಸ್ ಸಂಸ್ಥೆ ಸಹಯೋಗದಲ್ಲಿ ಪೌರ ಕಾರ್ಮಿಕ ದಿನಾಚರಣೆ ಪ್ರಯುಕ್ತ ಸ್ವಚ್ಛತಾ ಕಾರ್ಮಿಕರಿಗೆ ಸನ್ಮಾನ ಹಾಗೂ ಮಾಹಿತಿ ಕಾರ್ಯಾಗಾರವನ್ನ ಹಮ್ಮಿಕೊಳ್ಳಲಾಗಿತ್ತು. ಇನ್ನು ತಾಲೂಕು ಪಂಚಾಯತ್‍ನಲ್ಲಿ ನಡೆದ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಸರೋಜನಿ ಅವರು ಉದ್ಘಾಟಿಸಿದ್ರು. ತದ ಬಳಿಕ ಮಾತನಾಡಿದ ಅವರು, ಕೋವಿಡ್‍ನಲ್ಲೂ ಸ್ವಚ್ಚತಾ ಕಾರ್ಯಕ್ರಮದಲ್ಲಿ ತನ್ನ

ಉಚ್ಚಿಲ ಬಡಾ ಗ್ರಾ.ಪಂ. ವಾಚನಾಲಯಕ್ಕೆ ಶಾಲಾ ಪಠ್ಯ ಪುಸ್ತಕ ವಿತರಣೆ

ಉಡುಪಿ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎನ್.ಎಚ್.ನಾಗೂರರವರು ಪಠ್ಯಪುಸ್ತಕ ಸಮಿತಿ ಬೆಂಗಳೂರು ಇದರ ಆದೇಶದಂತೆ ಹಾಗೂ ಉಡುಪಿ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾ ಅಧಿಕಾರಿಯವರ ನಿರ್ದೇಶನದ ಮೇರೆಗೆ ಉಚ್ಚಿಲ ಬಡಾ ಗ್ರಾಮ ಪಂಚಾಯತಿಯ ವಾಚನಾಲಯಕ್ಕೆ 5ರಿಂದ 10 ನೇ ತರಗತಿಯ ಹಿಂದಿನ ವರ್ಷದ 2 ಜೊತೆ ಪುಸ್ತಕಗಳನ್ನು ಅಧ್ಯಕ್ಷೆ ಜ್ಯೋತಿ ಗಣೇಶ್ ರವರಿಗೆ ಹಸ್ತಾಂತರಿಸಿದರು. ಈ ಸಂದರ್ಭ ಡಿಡಿಪಿಐ ಎನ್.ಎಚ್.ನಾಗೂರರವರು ಮಾತನಾಡಿ, ರಜಾ ಅವಧಿಯಲ್ಲಿ 1-10ನೇ ತರಗತಿಗಳಲ್ಲಿ

ಬೆಳಪು ಹಾಲು ಉತ್ಪಾದಕರ ವಾರ್ಷಿಕ ಸಭೆ

ಬೆಳಪು ಹಾಲು ಉತ್ಪಾದಕರ ಸಹಕಾರ ಸಂಘ ಪಣಿಯೂರು ಇದರ ವಾರ್ಷಿಕ ಮಹಾಸಭೆ ಪಣಿಯೂರು ಸಂಘದ ಆವರಣದಲ್ಲಿ ನಡೆಯಿತು. ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಉಪ ವ್ಯವಸ್ಥಾಪಕ ಡಾ| ಅನಿಲ್ ಕುಮಾರ್ ಶೆಟ್ಟಿ ಅವರು ಮಾತನಾಡಿ, ಆರೋಗ್ಯಕರವಾಗಿ ಪಶು ಸಾಕಾಣಿಕೆ ಮಾಡಿ ಗುಣಮಟ್ಟದ ಹಾಲಿನ ಉತ್ಪಾದನೆ ಮೂಲಕ ಹೈನುಗಾರರು ಆರ್ಥಿಕ ಸ್ಥಿರತೆ ಹೆಚ್ಚಿಸಿಕೊಳ್ಳಲು ಸಾಧ್ಯ ಎಂದರು. ಎಸ್‍ಸಿಡಿಸಿಸಿ ಬ್ಯಾಂಕ್ ನಿರ್ದೇಶಕ ಡಾ| ದೇವಿಪ್ರಸಾದ್ ಶೆಟ್ಟಿ ಅವರು ಮಾತನಾಡಿ, ಹೈನುಗಾರಿಕೆಯಲ್ಲಿ ಲಾಭ

ಕುಬಣೂರಿನ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆ

ಮಂಜೇಶ್ವರ: ಮಂಗಲ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕುಬಣೂರಿನಲ್ಲಿ 30 ವರ್ಷಗಳ ಹಿಂದೆ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಕುಸಿದು ಸಂಚಾರಕ್ಕೆ ತಡೆಯಾಗಿದ್ದು ನಿತ್ಯ ಸಂಚಾರಿಗಳು ಸಂಕಷ್ಟಕ್ಕೂಳಗಾಗಿದ್ದಾರೆ. ಇದು ಸುವರ್ಣಗಿರಿ ತೋಡಿಗೆ ಕೃಷಿಗಾಗಿ ನಿರ್ಮಿಸಲಾದ ಸೇತುವೆಯಾಗಿದ್ದು ಅಗಲ ಕಿರಿದಾಗಿ ಸುಗಮ ಸಂಚಾರಕ್ಕೂ ಅಡ್ಡಿಯಾಗಿತ್ತು. ಇದರ ಮೇಲೆ ಕೆಂಪು ಕಲ್ಲು ಹಾಗೂ ಜಲ್ಲಿ ಕಲ್ಲು ಮಾಫಿಯಾಗಳು ಲಾರಿಗಳಲ್ಲಿ ಅಧಿಕ ಭಾರಗಳನ್ನು ಹೇರಿ ಸಾಗಾಟ ನಡೆಸುತಿದ್ದದ್ದು

ಪುತ್ತೂರಿನಲ್ಲಿ ಪೌರ ಕಾರ್ಮಿಕ ದಿನಾಚರಣೆ

ಪುತ್ತೂರು: ಪೌರ ಕಾರ್ಮಿಕರ ಜೊತೆಗೆ ನಾಗರಿಕರು ಸಹಕರಿಸಿದಾಗ ಮಾತ್ರ ಸ್ವಚ್ಚ ನಗರ ನಿರ್ಮಾಣ ಸಾಧ್ಯವಿದ್ದು, ನಮ್ಮ ಕಸವನ್ನು ನಾವೇ ನಿರ್ವಹಿಸುವಂತಹ ಮನೋಭಾವ ಪ್ರತಿಯೊಬ್ಬರಲ್ಲಿಯೂ ಬೆಳೆಯಬೇಕು ಎಂದು ಸವಣೂರು ವಿದ್ಯಾರಶ್ಮಿ ವಿದ್ಯಾಲಯದ ಪ್ರಾಂಶುಪಾಲ ಸೀತಾರಾಮ ಕೇವಳ ತಿಳಿಸಿದರು. ಅವರು ಪುತ್ತೂರಿನ ಪುರಭವನದಲ್ಲಿ ಗುರುವಾರ ನಡೆದ ಪೌರಕಾರ್ಮಿಕರ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ನಾಗರಿಕ ಜವಾಬ್ದಾರಿ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆ

ಯುವ ಕಾಂಗ್ರೆಸ್ ವಕ್ತಾರರ ಆಯ್ಕೆಗಾಗಿ “” ರಾಷ್ಟ್ರೀಯ ಮಟ್ಟದ ಭಾಷಣ ಸ್ಪರ್ಧೆಯನ್ನು ಭಾರತೀಯ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ ಶ್ರೀನಿವಾಸ್ ಅವರ ನೇತೃತ್ವದಲ್ಲಿ ನಡೆಯಲಿದೆ ಎಂದು ಯುವ ಕಾಂಗ್ರೆಸ್ ಮುಖಂಡ ಮನ್ನಾನ್ ಮನ್ನಾರ್ ಹೇಳಿದರು. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ ಅವರು ದೇಶದಲ್ಲಿ ಬಿಜೆಪಿ ಫ್ಯಾಸಿಸ್ಟ್ ಆಡಳಿತದಿಂದ ಜನರು ಬೇಸತ್ತಿದ್ದು ಯುವಕರನ್ನು ನಿರುದ್ಯೋಗಳನ್ನಾಗಿ ಮಾಡಿ ಅವರನ್ನು

ಬ್ಯಾರಿಸ್ ಗ್ರೂಪ್ ವತಿಯಿಂದ ಗ್ರೀನ್ ವಾಕಥಾನ್-2021

ಬ್ಯಾರಿಸ್ ಗ್ರೂಪ್ ವತಿಯಿಂದ ಸೆಪ್ಟಂಬರ್ 25ರಂದು ಗ್ರೀನ್ ವಾಕಥಾನ್-2021 ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಾ ಅಡಿಟೋರಿಯಂನಿಂದ ಬಿಐಟಿ ಕ್ಯಾಂಪಸ್ ವರೆಗೆ ಆಯೋಜನೆ ಮಾಡಲಾಗಿದೆ ಎಂದು ಬಿಐಟಿ ಪ್ರಿನ್ಸಿಪಾಲ್ ಡಾ. ಎಸ್.ಐ ಮಂಜೂರು ಬಾಷಾ ಹೇಳಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ವಿಶ್ವದಲ್ಲಿ ಬದಲಾಗುತ್ತಿರುವ ನಿರಂತರ ಹವಾಮಾನ ಬದಲಾವಣೆ, ಮನುಕುಲಕ್ಕೆ ದೊಡ್ಡ ಪರಿಣಾಮ ಬೀರಿದೆ. ಈ ಕಾರಣದಿಂದ ಭೂಮಿಯನ್ನು ರಕ್ಷಿಸುವ

ಸೆ.25ರಂದು ಮಂಗಳೂರಿನಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನೆ

ರಾಷ್ಟ್ರೀಯ ಆಯುಷ್ ಮಿಷನ್ ಯೋಜನೆಯ ಅಡಿಯಲ್ಲಿ ವೆನ್ಲಾಕ್ ಆವರಣದಲ್ಲಿ ಆಯುಷ್ ಸಂಯುಕ್ತ ಆಸ್ಪತ್ರೆಯ ಉದ್ಘಾಟನಾ ಸಮಾರಂಭವು ಸೆ.25ರಂದು ಸಂಜೆ 3.30ಕ್ಕೆ ನಡೆಯಲಿದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಆಯುಷ್ ಅಧಿಕಾರಿ ಡಾ. ಮಹಮ್ಮದ್ ಇಕ್ಬಾಲ್ ತಿಳಿಸಿದರು. ಅವರು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಕೇಂದ್ರ ಸರ್ಕಾರದ ಆಯುಷ್ ಸಂಪುಟ ದರ್ಜೆ ಸಚಿವರಾದ ಸರ್ಬಾನಂದ ಸೋನೋವಾಲ್ ಅವರು ಆಯುಷ್ ಸಂಯುಕ್ತ ಆಸ್ಪತ್ರೆಯನ್ನು

ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲ್ಯದ ಅಭಿವೃದ್ಧಿ ಇಂದಿನ ಅಗತ್ಯ – ಖಾಸಿಮ್ ಅಹ್ಮದ್ ಹೆಚ್.ಕೆ

ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಯಶಸ್ವಿಯಾಗಬೇಕಾದರೆ ವಿದ್ಯಾರ್ಥಿಗಳು ಪಠ್ಯದ ಕಲಿಕೆಯ ಜೊತೆಗೆ ಜೀವನ ಕೌಶಲಗಳನ್ನು ಅಭಿವೃದ್ಧಿ ಪಡಿಸಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಸಮಾಜ ಸೇವಾ ಸಂಸ್ಥೆ ಹಿದಾಯ: ಫೌಂಡೇಶನ್’ನ ಸ್ಥಾಪಕಾಧ್ಯಕ್ಚ ಖಾಸಿಮ್ ಅಹ್ಮದ್ ಹೆಚ್.ಕೆ. ಅಭಿಪ್ರಾಯಪಟ್ಟರು. ಅವರು ನೀಟ್/ಸಿಇಟಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳಿಗೆ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯು ಇಂದು ಹಮ್ಮಿಕೊಂಡಿದ್ದ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವನ್ನು