ಕೇಂದ್ರ ಸರ್ಕಾರವು ತಳವಾರ ಸಮುದಾಯವನ್ನು ಪರಿಶಿಷ್ಟ ಪಂಗಡ ( ಎಸ್.ಟಿ ) ಮೀಸಲಾತಿಗೆ ಸೇರ್ಪಡೆಗೋಳಿಸಿದೆ ಈಗಾಗಲೇ ದೇಶದ ಹಲವು ರಾಜ್ಯಗಳಲ್ಲಿ ಎಸ್ .ಟಿ ಪ್ರಮಾಣ ಪತ್ರ ಕೊಡುತ್ತಿವೆ ಆದರೆ ಕರ್ನಾಟಕ ಸರ್ಕಾರ ಮಾತ್ರ ಈ ಮೀಸಲಾತಿಯಿಂದ ದೂರವಿಟ್ಟು ತಳವಾರ ಸಮುದಾಯಕ್ಕೆ ಅನ್ಯಾಯ ಮಾಡುತ್ತಿದೆ ಇದರಿಂದ ಶೈಕ್ಷಣಿಕ ಮತ್ತು ಸರ್ಕಾರಗಳ ಯೋಜನೆಗಳಿಂದ ವಂಚಿತರಾಗುತ್ತಿದ್ದಾರೆ.
ದೇಶದಲ್ಲಿ ಉಗ್ರರ ವಿಧ್ವಂಸಕ ಕೃತ್ಯ ಸಾಧ್ಯತೆ ಬೆನ್ನಲ್ಲೇ ಮಂಗಳೂರು ಏರ್ ಪೋರ್ಟ್ ಸುತ್ತಮುತ್ತ ಅಲರ್ಟ್ ಮಾಡಲಾಗಿದೆ. ಏರ್‍ಪೋರ್ಟ್ ಭದ್ರತೆಯ ಸಿಐಎಸ್‍ಎಫ್ ಹಾಗೂ ಬಜ್ಪೆ ಪೊಲೀಸರಿಂದ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಲಾಗುತ್ತಿದೆ. ಇನ್ನು ಅನುಮಾನಾಸ್ಪದ ವ್ಯಕ್ತಿ ಅಥವಾ ವಸ್ತು, ಡ್ರೋನ್ ಬಳಕೆ ಕಂಡು ಬಂದಲ್ಲಿ ಮಾಹಿತಿ ನೀಡಲು ಅಧಿಕಾರಿಗಳು ಸ್ಥಳೀಯರಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಪೊಲೀಸ್ ಕಮೀಷನರ್ ಎನ್. ಶಶಿಕುಮಾರ್ ಮಾತನಾಡಿ, ಅಂತಾರಾಷ್ಟ್ರೀಯ
ಪುತ್ತೂರು: 9 ತಿಂಗಳ ಹಿಂದೆ 2021 ರ ಜನವರಿ 3 ರಂದು ಪುತ್ತೂರಿನ ಬಲ್ನಾಡು ಚನಿಲದಿಂದ ಕೇರಳದ ಪಾಣತ್ತೂರಿಗೆ ಹೊರಟಿದ್ದ ಮದುವೆ ದಿಬ್ಬಣದ ಬಸ್ ಕೇರಳದ ಕಾಸರಗೋಡು ಜಿಲ್ಲೆಯ ಪಾಣತ್ತೂರು ಸಮೀಪದ ಪರಿಯಾರಂ ಎಂಬಲ್ಲಿ ಪಲ್ಟಿಯಾಗಿ ಬಸ್‌ನಲ್ಲಿದ್ದ 7 ಮಂದಿ ದಾರುಣ ಮೃತಪಟ್ಟಿದ್ದರು. ಇವರಿಗೆ ಈಗ ಕರ್ನಾಟಕ ಸರ್ಕಾರ ಪರಿಹಾರ ಘೋಷಿಸಿದೆ. ಅಪಘಾತದಲ್ಲಿ ಮೃತಪಟ್ಟಿರುವ ಕುಟುಂಬಕ್ಕೆ ಪರಿಹಾರಕ್ಕಾಗಿ ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ
ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಮಸೂದೆಯನ್ನು ವಿರೋಧಿಸಿ ಸೆ.27ರಂದು ಭಾರತ್ ಬಂದ್‍ಗೆ ರೈತ ಸಂಘಟನೆಗಳು ಕರೆ ನೀಡಿದ್ದು, ಬಂಟ್ವಾಳದ ಬಿ.ಸಿ. ರೋಡ್‍ನ ಮಿನಿ ವಿಧಾನಸೌಧದರಿಂದ ಕಾಲ್ನಡಿಗೆಯಲ್ಲಿ ಹೊರಟು ಬ್ರಹ್ಮಶ್ರೀ ನಾರಾಯಣಗುರು ವೃತ್ತದ ಬಳಿ ಬೃಹತ್ ಪ್ರತಿಭಟನಾ ಸಭೆ ಹಾಗೂ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿಯನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ ಹೇಳಿದರು.ಅವರು ಮಂಗಳೂರಿ ಪ್ರೆಸ್‍ಕ್ಲಬ್‍ನಲ್ಲಿ
ಮೂಡುಬಿದಿರೆ: ಮೂಡುಬಿದಿರೆ ಪುರಸಭಾ ವ್ಯಾಪ್ತಿಯ ಕಲ್ಲಬೆಟ್ಟು ಗ್ರಾಮದ ಕೋಂಕೆ ಎಂಬಲ್ಲಿರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಕೆಟ್ಟು 4 ದಿನಗಳಾಗಿದ್ದು ಸ್ಥಳಿಯ ನಿವಾಸಿಗಳು ಕುಡಿಯಲೂ ನೀರಿಲ್ಲದೆ ತೊಂದರೆ ಅನುಭವಿಸಿದ್ದಾರೆ. ಈ ಭಾಗದಲ್ಲಿ ಬಹಳಷ್ಟು ಕೃಷಿಕರೂ ಇದ್ದು ಕೃಷಿಗೆ ನೀರು ಬಿಡಲೂ ಸಾಧ್ಯವಾಗದೆ ತೊಂದರೆ ಅನುಭವಿಸಿದರೂ ಮೆಸ್ಕಾಂ ಇಲಾಖೆಯ ಎ.ಇ.ಇ., ಎಸ್ .ಒ. ಸಹಿತ ಸಿಬ್ಬಂದಿಗಳು ವಿಷಯ ತಿಳಿದರೂ ಸಹಕರಿಸದೆ ಬಹಳಷ್ಟು ತೊಂದರೆ ನೀಡಿದ್ದಾರೆ. ಕೊನೆಕೊನೆಗೆ
ವಿದ್ಯಾರ್ಥಿ ನಿಲಯದಿಂದ ಅಪ್ರಾಪ್ತ ವಿದ್ಯಾರ್ಥಿಯೊಬ್ಬ ಕಾಣೆಯಾದ ಬಗ್ಗೆ ನಿನ್ನೆ ವರದಿಯಾಗಿತ್ತು, ಇಂದು ಆತ ಸಂಬಂಧಿಕರ ಮನೆಯಲ್ಲಿ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬದಲ್ಲಿ ನಡೆದಿದೆ. ನಿನ್ನೆ ಕಡಬದ ಶ್ರೀ ರಾಮಕುಂಜೆಶ್ವರ ಪದವಿ ಪೂರ್ವ ಕಾಲೇಜು ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅಂಜನ್ ಸಿ.ಎಮ್ ಎಂಬ ಅಪ್ರಾಪ್ತ ಬಾಲಕ ಬೆಳಿಗ್ಗೆ 9 ಗಂಟೆಗೆ ಕಾಲೇಜಿಗೆ ಹೋಗುವುದಾಗಿ ತಿಳಿಸಿ ಹೋಗಿದ್ದು, ನಂತರ ಮಧ್ಯಾಹ್ನ 12.40 ಕ್ಕೆ ಕಾಲೇಜು
ಟೀಮ್ ಬಿ-ಹ್ಯೂಮನ್(ರಿ) ಮಂಗಳೂರು ಇದರ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೋಸೈಟಿ ಹಾಗೂ ಟೀಂ ಮೇಕ್-ಎ-ಚೇಂಜ್ ಇದರ ಸಹಭಾಗಿತ್ವದಲ್ಲಿ ಉಚಿತ ಕೋರೋನ ಲಸಿಕಾ ಶಿಬಿರವು ಬಲ್ಮಠದ ಬಿಷಪ್ ಜತ್ತನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಇದು ಟೀಂ ಬಿ-ಹ್ಯೂಮನ್ ತಂಡವು ಆಯೋಜಿಸಿದ ಆರನೇ ಲಸಿಕಾ ಶಿಬಿರವಾಗಿತ್ತು. ಅತ್ಯಂತ ವ್ಯವಸ್ಥಿತವಾಗಿ ಸಂಘಟಿಸಿದಂತಹ ಈ ಲಸಿಕಾ ಶಿಬಿರದಲ್ಲಿ ಸುಮಾರು 272 ಜನಸಾಮಾನ್ಯರು,ಹೋಟೆಲ್ ಕಾರ್ಮಿಕರು, ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ವಿಶೇಷ
ಹಾಸನ : ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಕಾಮಸಮುದ್ರದ ಬಳಿಯಲ್ಲಿ ಇಂದು ಕಾರು ಹಾಗೂ ಆಟೋ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದು. ಇದರಿಂದಾಗಿ ಆಟೋ ಚಾಲಕ ಐಚನಹಳ್ಳಿಯ ನಾಗಯ್ಯ (ನಾಗ) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರು ಚಾಲಕನ ಅತಿಯಾದ ವೇಗವೇ ಇದಕ್ಕೆ ಕಾರಣ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು , ಆಟೋದಲ್ಲಿ ಪ್ರಯಾಣ ಮಾಡುತ್ತಿದ್ದ ಇತರರು ಕೂಡ ಗಾಯಗೊಂಡಿರುವ ಘಟನೆ ನಡೆದಿದೆ. ಹೊಳೆನರಸೀಪುರ ಆನಂತರ
ಕುಂದಾಪುರ: ಮೊವಾಡಿ ಸೇತುವೆ ಬಳಿ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ಸಂದರ್ಭ ನೀರಿನ ಸೆಳೆತಕ್ಕೆ ಸಿಲುಕಿ ನೀರುಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. ಇಲ್ಲಿನ ತ್ರಾಸಿ ಸಮೀಪದ ಹೋಲಿಕ್ರಾಸ್ ನಿವಾಸಿ ಮಹೇಂದ್ರ (24) ಮೃತ ಯುವಕ. ಭಾನುವಾರ ಸಂಜೆ ಮೊವಾಡಿಯ ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ
ಕರಾವಳಿ ಜಿಲ್ಲೆಯಲ್ಲಿ ಬಹುಪ್ರಸಿದ್ಧಿ ಪಡೆದಿರುವ ಶ್ರೀ ನವದುರ್ಗಾ ಪ್ರಸಾದ್ ಬಸ್ ಸಂಸ್ಥೆಯ ಸ್ಥಾಪಕ ಕನಕಪ್ಪಾಡಿ ಬಿ . ಬಾಲಕೃಷ್ಣ ರೈ ಕದ್ರಿ ಕಂಬ್ಲ ಅವರು ಇಂದು ನಿಧನರಾದರು . ಬಾಲಕೃಷ್ಣ ರೈ ಅವರು ಕನಕಪ್ಪಾಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಆಡಳಿತ ಮೊಕ್ತೇಸರರಾಗಿಯೂ ಸೇವೆ ಸಲ್ಲಿಸಿದ್ದರು .ಕೆನರಾ ಬಸ್ ಮಾಲಕರ ಸಂಘದ ಉಪಾಧ್ಯಕ್ಷರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು . ಮೃತರುಪತ್ನಿ , ಮೂವರು ಹೆಣ್ಣು ಮಕ್ಕಳು ಹಾಗೂ ಬಂಧು ಮಿತ್ರರನ್ನು ಅಗಲಿರುತ್ತಾರೆ . #


















