Home Posts tagged #v4news karnataka (Page 214)

ದೇವಸ್ಥಾನ ಕೆಡವಿರುವುದಕ್ಕೆ ಖಂಡಿಸಿ ಬಿ.ಸಿ.ರೋಡಿನಲ್ಲಿ ಕಾಂಗ್ರೆಸ್‍ನಿಂದ ಬೃಹತ್ ಪ್ರತಿಭಟನೆ

ನಂಜನಗೂಡಿನಲ್ಲಿ ದೇವಸ್ಥಾನ ಕೆಡವಿರುವುದಕ್ಕೆ ಅಧಿಕಾರದಲ್ಲಿರುವ ಬಿಜೆಪಿ ಸರಕಾರವೇ ನೇರ ಹೊಣೆ, 2008ರಲ್ಲಿ ಆದ ಸುಪ್ರೀ ಕೋರ್ಟ್ ಆದೇಶವನ್ನು ಪ್ರಯೋಗಕ್ಕೆ ಒಳಪಡಿಸಿದ್ದು ಬಿಜೆಪಿ ಸರಕಾರ, ಇದು ಸರಕಾರ ಪ್ರಾಯೋಜಿತ ಕಾರ್ಯಕ್ರಮ ಎಂದು ಎಂದು ಮಾಜಿ ಸಚಿವ ಬಿ.ರಮನಾಥ ರೈ ಆಕ್ರೋಶ ವ್ಯಕತಪಡಿಸಿದರು. ರಾಜ್ಯ ಬಿಜೆಪಿ ಸರಕಾರ ಧಾರ್ಮಿಕ ಕೇಂದ್ರಗಳನ್ನು ಧ್ವಂಸಗೊಳಿಸಿದ ಹಾಗೂ

ಮೀನುಗಾರಿಕೆ ದೋಣಿ ಮಗುಚಿ ದುರುಂತ

ಬೈಂದೂರು ಉಪ್ಪುಂದದ ತಾರಾಪತಿಯಲ್ಲಿ ಜೈಗುರೂಜಿ ಹೆಸರಿನ ದೋಣಿಯಲ್ಲಿ ಆರು ಜನರು ಮೀನುಗಾರಿಕೆ ತೆರಳಿದ್ದು, ಮೀನುಗಾರಿಕೆ ಮುಗಿಸಿ ಹಿಂತಿರುಗಿ ಬರುವ ವೇಳೆ ರಭಸದಿಂದ ಹೊಡೆದ ತೆರೆಗೆ ದೋಣಿ ಮಗುಚಿ ಬಿದ್ದ ಪರಿಣಾಮವಾಗಿ ಆರು ಜನರಲ್ಲಿ ನಾಲ್ವರನ್ನು ಕಾಪಾಡುವಲ್ಲಿ ಯಶಸ್ವಿಯಾಗಿ, ಉಳಿದಿಬ್ಬರು ಚರಣ್ ಹಾಗೂ ಗೊಂಡಯ್ಯ ಅಣ್ಣಪ್ಪ ಎಂಬುವರು ನಾಪತ್ತೆಯಾಗಿದ್ದರು. ನಾಪತ್ತೆಯಾಗಿದ್ದ ಚರಣ್ ಮತ್ತು ಅಣ್ಣಪ್ಪ ಎಂಬುವರಲ್ಲಿ ಚರಣ್ ಮೃತ ದೇಹ ಅಮ್ಮನವರ ತೊಪ್ಲು ಎಂಬಲ್ಲಿ ಶನಿವಾರದಂದು

ಶ್ರೀಮತಿ ಗಂಗಮ್ಮ ಹೊಸೊಳಿಕೆ ಅವರಿಗೆ ಶ್ರದ್ಧಾಂಜಲಿ ಸಮರ್ಪಣೆ ಕಾರ್ಯಕ್ರಮ

ಸುಳ್ಯ ತಾಲೂಕಿನ ಗುತ್ತಿಗಾರು ವಳಲಂಬೆಯ ಹೊಸೋಳಿಕೆ ಗಿರಿಯಪ್ಪ ಗೌಡ ಅವರ ಧರ್ಮ ಪತ್ನಿ ಶ್ರೀಮತಿ ಗಂಗಮ್ಮ ಅವರು ಸೆಪ್ಟಂಬರ್ 6ರಂದು ಅಸೌಖ್ಯದಿಂದ ನಿಧನರಾಗಿದ್ದು ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಕಾರ್ಯಕ್ರಮವು ಇಂದು ಹೊಸೊಳಿಕೆಯ ತಮ್ಮ ಸ್ವ ಗೃಹದಲ್ಲಿ ನೆರವೇರಿತ್ತು.ಈ ಸಂದರ್ಭದಲ್ಲಿ ಮೃತರ ಪತಿ ಗಿರಿಯಪ್ಪ ಗೌಡ ಹೊಸೊಳಿಕೆ, ಪುತ್ರಿಯರಾದ ಶ್ರೀಮತಿ ರೇಷ್ಮಾ ಗಂಗಾಧರ್ ಕೆದ್ಕಾರ್, ಶ್ರೀಮತಿ ಪ್ರೇಮ ಕುಶಾಲಪ್ಪ ಸೋಮರ್ ಪೇಟೆ ಸೇರಿದಂತೆ ಕುಟುಂಬಸ್ಥರು ಮತ್ತು

ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

ಬಂಟ್ವಾಳದ ಕಾವಳಮೂಡೂರು ಗ್ರಾಮದ ಕಾರಿಂಜ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ ಆಚರಣೆ ಸಂಪನ್ನಗೊಂಡಿತು. ಪ್ರತಿ ವರ್ಷ ಕನ್ಯಾ ಸಂಕ್ರಮಣದ ಮರು ದಿವಸ ನಡೆಯುವ ತೆನೆ ಹಬ್ಬ ಆಚರಣೆಗಾಗಿ ಕಾರಿಂಜದಿಂದ ಸುಮಾರು  9ಕಿ.ಮೀ. ದೂರವಿರುವ ಸರಪಾಡಿ ಹಲ್ಲಂಗಾರು ಗದ್ದೆಯೊಂದರಿಂದ ತೆನೆಗಳನ್ನು ತರಲಾಗುತ್ತಿದ್ದು, ಈ ಬಾರಿಯೂ ಸಂಪ್ರದಾಯದಂತೆ ನೆರವೇರಿಸಲಾಯಿತು. ಸೂರ್ಯೋದಯದ ಮುಂಚೆ ಶ್ರೀ ಕ್ಷೇತ್ರ ಕಾರಿಂಜದಿಂದ ವಾದ್ಯ ವೃಂದ ಸಹಿತ ಅರ್ಚಕರು, ತಂತ್ರಿಗಳು,

ರಸ್ತೆ ಬದಿಯ ಗಿಡಗಳನ್ನು ಕಿತ್ತೆಸೆದ ದುಷ್ಕರ್ಮಿಗಳು : ಅರಣ್ಯ ಹಾಗೂ ಪೊಲೀಸರಿಗೆ ದೂರು

ಪರಿಸರ ಪ್ರೇಮಿಯೋರ್ವರು ಸಾರ್ವಜನಿಕವಾಗಿ ರಸ್ತೆ ಬದಿಯಲ್ಲಿ ನೆಟ್ಟಿರುವ ಗಿಡಗಳನ್ನು ದುಷ್ಕರ್ಮಿಗಳು ಕಿತ್ತೆಸೆದ ಘಟನೆ ಬಡಗಕಜೆಕಾರು ಗ್ರಾಮದ ದೆತ್ತಿಮಾರು ಎಂಬಲ್ಲಿ ಸಂಭವಿಸಿದ್ದು, ಈ ಬಗ್ಗೆ ಅರಣ್ಯ ಹಾಗೂ ಪೊಲೀಸ್ ಇಲಾಖೆಗೆ ದೂರು ನೀಡಲಾಗಿದೆ. ಇನ್ನು ರಾತೋರಾತ್ರಿ ಸ್ಥಳೀಯ ಐವರು ವ್ಯಕ್ತಿಗಳು ಕಿತ್ತೆಸೆದು ಧ್ವಂಸಗೊಳಿಸಿರುವುದಾಗಿ ಮಾರ್ಕ್ ಸೇರಾ ಅವರು ದೂರು ನೀಡಿದ್ದಾರೆ. ನೆಟ್ಟ ಗಿಡಗಳನ್ನು ಕಿತ್ತು ಬಿಸಾಕಿದ ಘಟನೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಖಂಡನೆ

ಮಂಗಳೂರಿನ ಕರ್ನಾಟಕ ಆಯುರ್ವೇದ ಆಸ್ಪತ್ರೆಯಲ್ಲಿ ಲಸಿಕಾ ಶಿಬಿರ

ಮಂಗಳೂರಿನ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸ್ಬಾ ಬೆಂಗ್ರೆ ಇದರ ಸಹಭಾಗಿತ್ವದಲ್ಲಿ ನಗರದ ಕರ್ನಾಟಕ ಆಯುರ್ವೇದ ಆಸ್ಪತ್ರೆಯಲ್ಲಿ ಉಚಿತ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು. ಮಂಗಳೂರಿನ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಕಸ್ಬಾ ಬೆಂಗ್ರೆ ಇದರ ಸಹಭಾಗಿತ್ವದಲ್ಲಿ

ಬುಲೆಟ್ ಗ್ಯಾಸ್ ಟ್ಯಾಂಕರ್ ನಿಲುಗಡೆಗೆ ಸ್ಥಳೀಯರ ವಿರೋಧ

ಸುರತ್ಕಲ್ ಬಾಳ ಗ್ರಾಮದ ಎಂಆರ್‍ಪಿಎಲ್ ರಸ್ತೆಯಲ್ಲಿ ಸರ್ವೇ ನಂಬರ್ 185ರಲ್ಲಿ ಟ್ಯಾಂಕರ್ ಯಾರ್ಡ್ ನಿರ್ಮಾಣ ಮಾಡಲು ಕಂಪೆನಿ ಮುಂದಾಗಿದೆ. ಇದರಿಂದ ಪರಿಸರದ ನಿವಾಸಿಗಳಿಗೆ ತೊಂದರೆಯಾಗಲಿದೆ ಎಂದು ಆಕ್ಷೇಪ ವ್ಯಕ್ತಪಡಿಸಿ ನೂರಾರು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳೀಯರ ಮನವಿಗೆ ಈಗಾಗಲೇ ಶಾಸಕ ಉಮಾನಾಥ್ ಕೋಟ್ಯಾನ್ ಸ್ಪಂದಿಸಿದ್ದು ಸಮಸ್ಯೆ ಬಗೆಹರಿಯದಿದ್ದಲ್ಲಿ ಉಗ್ರ ಹೋರಾಟದ ಎಚ್ಚರಿಕೆಯನ್ನು ಸ್ಥಳೀಯರು ನೀಡಿದ್ದಾರೆ. ಕುಂಬ್ಳಕೆರೆ, ಒಟ್ಟೆಕಾಯರ್

ದೇವಸ್ಥಾನಗಳು ಅನಧಿಕೃತ ಇದ್ರೆ ಅದನ್ನು ಅಧೀಕೃತವನ್ನಾಗಿ ಮಾಡಬೇಕು : ಡಾ|ಡಿ.ವೀರೇಂದ್ರ ಹೆಗ್ಗಡೆ

ಮೈಸೂರು ದೇವಸ್ಥಾನ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನಲ್ಲಿ ಡಾ.ಡಿ ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೂ ಅನಧಿಕೃತ ದೇವಸ್ಥಾನ ಇಲ್ಲ ಇರೋದೆಲ್ಲವೂ ಅಧೀಕೃತ ದೇವಸ್ಥಾನಗಳೇ ಅನಧಿಕೃತ ಇದ್ರೆ ಅದನ್ನು ಅಧೀಕೃತ ವನ್ನಾಗಿ ಮಾಡಬೇಕು ಕಾನೂನು ಯಾರನ್ನೂ ಬಿಡೋದಿಲ್ಲ ಕಾನೂನನ್ನು ಎಲ್ಲರೂ ಪಾಲನೆ ಮಾಡಬೇಕು ಅನಧಿಕೃತ ದೇವಸ್ಥಾನಗಳಿದ್ದರು ಅದನ್ನು ಅಧೀಕೃತ ಮಾಡಬೇಕು ಸರ್ಕಾರ ಈ ಬಗ್ಗೆ ಗಮನಹರಿಸಬೇಕು ಎಂದರು.

ಕುಮಾರಿ ಬಿಂದಿಯಾ ಶೆಟ್ಟಿ : ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ

ಸುರತ್ಕಲ್ : ರಾಷ್ಟ್ರೀಯ ಸೇವಾ ಯೋಜನೆಯ ಅಡಿಯಲ್ಲಿ ನೀಡುವ ಅತ್ಯತ್ತಮ ಪ್ರತಿಭಾನ್ವಿತೆಗಾಗಿ ನೀಡುವ ರಾಷ್ಟ್ರೀಯ ಪ್ರಶಸ್ತಿಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ನ ಬಿಕಾಂ ಅಂತಿಮ ವರ್ಷದ ವಿದ್ಯಾರ್ಥಿನಿ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಆಯ್ಕೆಯಾಗಿದ್ದಾರೆ.ಸೆ. 24 ರಂದು ನವದೆಹಲಿಯಲ್ಲಿ ರಾಷ್ಟ್ರಪತಿಯವರಿಂದ ಕುಮಾರಿ ಬಿಂದಿಯಾ ಎಲ್ ಶೆಟ್ಟಿ ಸುರತ್ಕಲ್ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಈಕೆ ಕಟ್ಲ ಲೀಲಾಧರ ಶೆಟ್ಟಿ ಮತ್ರು ಸುಜಾತ ಶೆಟ್ಟಿ ದಂಪತಿಗಳ ಪುತ್ರಿಯಾಗಿದ್ದಾಳೆ.

ಶ್ರೀನಿವಾಸ್‌ ವಿಶ್ವವಿದ್ಯಾಲಯ: ಲಸಿಕೆ ಶಿಬಿರ

ನಗರದ ಶ್ರೀನಿವಾಸ್‌ ವಿಶ್ವವಿದ್ಯಾಲಯದ, ಸಿಟಿ ಕ್ಯಾಂಪಸ್‌ ಪಾಂಡೇಶ್ವರದಲ್ಲಿ ದ.ಕ. ಜಿಲ್ಲಾ ಆರೋಗ್ಯ ಕೇಂದ್ರ, ಜೆಪ್ಪು ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಕ್ಯಾಂಪಸ್‌ನ ವಿದ್ಯಾರ್ಥಿಗಳು, ಶಿಕ್ಷಕರು, ಭೋದಕೇತರ ಸಿಬ್ಬಂದಿಗಳು ಹಾಗೂ ಸಾರ್ವಜನಿಕರಿಗೆ ಕೋವಿಡ್‌ ಲಸಿಕೆ ನೀಡುವ ಶಿಬಿರವು ಸೆ. 17 ರ ಶುಕ್ರವಾರದಂದು ಜರಗಿತು. ಶ್ರೀನಿವಾಸ್‌ ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಎಸ್.‌ ಐತಾಳ್‌ ಕೋವಿಡ್‌ ವಾರಿಯರ್ಸ್‌ಗಳನ್ನು ಈ ಸಂದರ್ಭ ಅಭಿನಂದಿಸಿದರು. ಈ