ದ.ಕ. ಜಿಲ್ಲೆಯು ಕೋವಿಡ್ ವಿರುದ್ಧದ ಲಸಿಕೀಕರಣದಲ್ಲಿ ರಾಜ್ಯದಲ್ಲಿ ಪ್ರಸಕ್ತ 4ನೆ ಸ್ಥಾನದಲ್ಲಿದ್ದು, ಸೆ. 17ರಂದು ಮೆಗಾ ಲಸಿಕಾ ಮೇಳದ ಮೂಲಕ 1.50 ಲಕ್ಷ ಡೋಸ್ ಲಸಿಕೆ ನೀಡಲು ಸಿದ್ಧತೆ ನಡೆಸಿದೆ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆವಿ ತಿಳಿಸಿದ್ದಾರೆ. ಅವರು ಸುದ್ದಿಗೋಷ್ಠಿಯಲ್ಲಿಂದು ಮಾಹಿತಿ ನೀಡಿದ ಅವರು, ಜಿಲ್ಲೆಯಲ್ಲಿ ಈವರೆಗೆ ಶೇ. 80ರಷ್ಟು ಮಂದಿ
ಕೊರೊನಾದೊಂದಿಗೆ ನಿಫಾ ವೈರಸ್ ಮತ್ತಷ್ಟು ಆತಂಕ ತಂದೊಡ್ಡಿದ್ದು, ಇದೀಗ ಕಾರವಾರದ ವ್ಯಕ್ತಿಯೊಬ್ಬಗೆ ಸೋಂಕಿನ ಕೆಲ ಲಕ್ಷಣ ಕಂಡು ಬಂದಿದೆ. ಈ ಕುರಿತು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಕಾರವಾರದ ವ್ಯಕ್ತಿ ಗೋವಾದ ಆರ್.ಟಿ.ಪಿ.ಸಿ.ಆರ್ ಟೆಸ್ಟ್ ಕಿಟ್ ತಯಾರಿಕಾ ಲ್ಯಾಬ್‌ನಲ್ಲಿ ಕೆಲಸ ಮಾಡುತ್ತಿದ್ದು, ಕಾರವಾರಕ್ಕೆ ಬೈಕ್ ನಲ್ಲಿ ಮಳೆಯಲ್ಲಿ ಬಂದಿದ್ದು, ಆತನಿಗೆ ನಿಫಾ ಸೋಂಕಿನ ಶಂಕೆ ಇಲ್ಲದಿದ್ದರೂ ನಿರ್ಲಕ್ಷ ಮಾಡಲು
ಮಂಗಳೂರು ನಗರದ ಕಂಕನಾಡಿಯ ಸೇರಾವೋ ರಸ್ತೆ ಕಂಪೌಂಡ್‌ನಲ್ಲಿ ಪತಿಯೇ ಪತ್ನಿ ಮತ್ತು ಪುತ್ರನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮಂಗಳೂರು ನಗರದ ಕಂಕನಾಡಿ ಸೇರಾವೋ ರಸ್ತೆ ಕಂಪೌಂಡ್ ನಿವಾಸಿ ರಮೇಶ್ ಬಂಗೇರಾ (54) ಎಂಬುವವರು ಪ್ರಕರಣದ ಆರೋಪಿ. ಬೇಬಿ ಕುಂದರ್ ಮತ್ತು ಅಶ್ವಿನ್ ಹಲ್ಲೆಗೊಳಗಾಗಿದ್ದಾರೆ. ಬೇಬಿ ಕುಂದರ್ ಅವರು ತನ್ನ ಗಂಡ ರಮೇಶ್ ಬಂಗೇರಾ ಮತ್ತು ಮಗ ಅಶ್ವಿನ್ ಜತೆಯಲ್ಲಿ ವಾಸವಾಗಿದ್ದರು. ಸೆ.11ರಂದು ರಾತ್ರಿ 10:30ಕ್ಕೆ ಗಂಡ ರಮೇಶ್ ಬಂಗೇರಾ
ಆಸ್ಕರಣ್ಣ ತೀರಿಕೊಂಡಿದ್ದಾರೆ. ಅವರನ್ನು ಕಾಣುವುದು ಇನ್ನು ಸಾಧ್ಯವಾಗುವುದೇ ಇಲ್ಲ. ನಮಗೆ ಕಾಣದ ದೂರದ ಲೋಕಕ್ಕೆ ಹೋಗಿದ್ದಾರೆ. ಈ ಪರಿಸ್ಥಿತಿ ಬರಬಹುದು ಎಂದೂ ಯೋಚಿಸಿರಲಿಲ್ಲ ; ಒಂದು miracle ಆಗಬಹುದೆಂದು ದಿನಗಳನ್ನು ಎದುರಿಸುತ್ತಿದ್ದೆವು. ಅವರ ಬದುಕು, ರಾಜಕೀಯ ಅನುಭವಗಳು ಒಂದು ತೆರೆನ ವಿಶಿಷ್ಟವಾದವು. ಬುದ್ದನಂತಹ, ಯೇಸುವಿನಂತಹ, ಗಾಂಧಿಯಂತಹ ವ್ಯಕ್ತಿ ಆಸ್ಕರಣ್ಣ ರಾಗಿದ್ದರು. ಅವರ ಸಾವು ಕಾಂಗ್ರೆಸ್ ಪಕ್ಷಕ್ಕೆ ಮಾತ್ರ ಆಗಿರುವ ನಷ್ಟವಲ್ಲ ಅದು ಇಡೀ
ಉಡುಪಿ: ತೀವ್ರ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಸಾವನ್ನಪ್ಪಿದ ಕೇಂದ್ರದ ಮಾಜಿ ಸಚಿವ ಫೆರ್ನಾಂಡಿಸ್ ಅವರ ಪಾರ್ಥಿವ ಶರೀರ ಆಂಬುಲೆನ್ಸ್ ಮೂಲಕ ಉಡುಪಿಗೆ ಕರೆತರಲಾಯಿತು. ಪಾರ್ಥಿವ ಶರೀರದ ಜೊತೆಗೆ ಪತ್ನಿ ಬ್ಲೋಸಂ ಫೆರ್ನಾಂಡಿಸ್, ಮಕ್ಕಳಾದ ಓಶನ್, ಒಶಾನಿ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ಗೆ ಆಗಮಿಸಿದರು. ಬಳಿಕ ಉಡುಪಿಯ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ ನೇತೃತ್ವದಲ್ಲಿ ಚರ್ಚ್ ಹಾಲ್ ನಲ್ಲಿ ಸಾಮೂಹಿಕ ಪ್ರಾರ್ಥನೆ ಮಾಡಲಾಯಿತು.
ಪುತ್ತೂರು: ಆಟೋ ರಿಕ್ಷಾ ಮತ್ತು ಕಾರು ನಡುವೆ ಪುತ್ತೂರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯ ಎದುರು ಡಿಕ್ಕಿ ಸಂಭವಿಸಿದ ಘಟನೆ ನಡೆದಿದೆ. ಅಪಘಾತದಿಂದ ರಿಕ್ಷಾ ಚಾಲಕ ಸಹಿತ ಅದರಲ್ಲಿದ್ದ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ.ಗಾಯಾಳು ರಿಕ್ಷಾ ಚಾಲಕ ಕಂಬಳಬೆಟ್ಟು ನಿವಾಸಿ ಪಕೀರ್ ಸಾಹೇಬ್ ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ಸಂಚಾರ ಠಾಣೆಯ ಯಸ್. ಐ. ರಾಮ ನಾಯ್ಕ್ ಮತ್ತು ಸಿಬ್ಬಂದಿಗಳು ಭೇಟಿ ನೀಡಿದ್ದಾರೆ.
ಆಸ್ಕರ್ ಫೆರ್ನಾಂಡಿಸ್ ಮೃತದೇಹ ಉಡುಪಿಯ ಮದರ್ ಆಫ್ ಸಾರೋಸ್ ಚರ್ಚ್ ತಲುಪಿದ್ದು ಆಸ್ಕರ್ ಮೃತದೇಹ ತಲುಪಿದ್ದು ಉಡುಪಿ ಬಿಷಪ್ ಜೆರಾಲ್ಡ್ ಐಸಾಕ್ ಲೋಬೋ, ಫಾದರ್ ಡೆನ್ನಿಸ್, ಫಾದರ್ ಚಾರ್ಲ್ಸ್ ಉಪಸ್ಥಿತಿಯಲ್ಲಿ ಪ್ರಾರ್ಥನೆ ನಡೆಯಲಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಪ್ರಮೋದ್ ಮಧ್ವರಾಜ್ ಆಗಮಿಸಿದ್ದಾರೆ. ಬಳಿಕ ಅವರ ಪಾರ್ಥಿವ ಶರೀರವನ್ನು ಕಾಂಗ್ರೆಸ್ ಭವನಕ್ಕೆ ಕೊಂಡೊಯ್ದು ಅಲ್ಲಿ ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.
ಉಡುಪಿ: ಅನಾರೋಗ್ಯಕ್ಕೆ ತುತ್ತಾಗಿ ಸೋಮವಾರ ಮಂಗಳೂರಿನ ಎನಾಪೋಯ ಆಸ್ಪತ್ರೆಯಲ್ಲಿ ನಿಧನರಾದ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ಅವರ ಪಾರ್ಥೀವ ಶರೀರ ಇಂದು ಬೆಳಗ್ಗೆ 9:15 ಕ್ಕೆ ಉಡುಪಿ ಶೋಕ ಮಾತಾ ದೇವಾಲಯಕ್ಕೆ ಆಗಮಿಸಲಿದೆ ಎಂದು ಉಡುಪಿ ಧರ್ಮ ಪ್ರಾಂತ್ಯದ ಬಿಷಪ್ ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು. ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಆಸ್ಕರ್ ಅವರ ಕುಟುಂಬದ ಇಚ್ಛೆಯಂತೆ ಬೆಳಿಗ್ಗೆ 9:30 ಕ್ಕೆ ಪ್ರಾರ್ಥನಾ ವಿಧಿಗಳನ್ನು
ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿನ್ನೆ ಸೋಮವಾರ ಮಧ್ಯಾಹ್ನ ನಿಧನರಾಗಿದ್ದು, ಅವರ ಪಾರ್ಥಿವ ಶರೀರವನ್ನು ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆ ಶವಾಗಾರದಿಂದ ಉಡುಪಿಗೆ ಅಂಬ್ಯುಲೆನ್ಸ್ ಮೂಲಕ ರವಾನೆ ಮಾಡಲಾಗುತ್ತಿದೆ. ಪಾರ್ಥಿವ ಶರೀರಕ್ಕೆ ಭಾರತದ ಧ್ವಜ ಹೊದಿಸಿ ಮಂಗಳೂರು ಪೊಲೀಸರು ಗೌರವ ಸಲ್ಲಿಸಿದ್ದಾರೆ. ಈ ವೇಳೆ ಶಾಸಕ ಯು.ಟಿ.ಖಾದರ್, ಪರಿಷತ್ ಸದಸ್ಯ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಮಂಜುನಾಥ ಭಂಡಾರಿ, ಐವನ್ ಡಿಸೋಜಾ, ಆಸ್ಕರ್ ಪತ್ನಿ ಬ್ಲಾಸಂ,
ಜಿಲ್ಲೆಯಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ಶಾಲೆಗಳನ್ನು ತೆರೆಯಬೇಕು ಹಾಗೂ ಮಕ್ಕಳಿಗೆ ತೊಂದರೆಯಾಗದಂತೆ ಸಂಬಂಧಿಸಿದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆ.ವಿ ಅವರು ಸೂಚಿಸಿದ್ದಾರೆ.ಅವರು ಸೋಮವಾರದಂದು ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ಶಾಲೆಗಳನ್ನು ತೆರೆಯುವ ಬಗ್ಗೆ ಹಮ್ಮಿಕೊಳ್ಳಲಾಗಿದ್ದ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ ಸೆಪ್ಟೆಂಬರ್ 17ರಂದು 8,9 ಮತ್ತು 10 ನೇ ತರಗತಿಗಳನ್ನು ಆರಂಭಿಸಿ,


















