ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಹೆಚ್.ಡಿ. ಕುಮಾರಸ್ವಾಮಿ ಸೇರಿ ಹಲವು ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ. “ರಾಜ್ಯಸಭಾ ಸಂಸದ ಆಸ್ಕರ್ ಫೆರ್ನಾಂಡೀಸ್ ರ ನಿಧನದಿಂದ ದುಃಖವಾಗಿದೆ. ಈ
ಭೋಪಾಲ್: ಭೂಪೇಂದ್ರಬಾಯ್ ಪಟೇಲ್ ಸೋಮವಾರ ಮಧ್ಯಾಹ್ನ ಗುಜರಾತ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರಿಗೆ ರಾಜ್ಯಪಾಲರಾದ ಆಚಾರ್ಯ ದೇವವ್ರತ ಅವರು ಪ್ರಮಾಣವಚನ ಬೋಧಿಸಿದರು. ಭಾನುವಾರ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಪಕ್ಷವು ಅವರನ್ನು ನಾಯಕನಾಗಿ ಅವಿರೋಧವಾಗಿ ಆಯ್ಕೆ ಮಾಡಿತು. ರಾಜ್ಯ ವಿಧಾನಸಭೆಯಲ್ಲಿ ಒಟ್ಟು 182 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 112 ಸದಸ್ಯರನ್ನು ಹೊಂದಿದೆ. ಅವರೆಲ್ಲ ಶಾಸಕಾಂಗ ಪಕ್ಷದ ಸಭೆಯಲ್ಲಿ ಭಾಗವಹಿಸಿದ್ದರು. ಶನಿವಾರ
ಮಂಗಳೂರು:ಯೋಗ ಮಾಡುತ್ತಿದ್ದಾಗ ತಲೆಗೆ ಪೆಟ್ಟಾಗಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫೆರ್ನಾಂಡಿಸ್ ವಿಧಿವಶರಾಗಿದ್ದಾರೆ.ಆಸ್ಕರ್ ಫೆರ್ನಾಂಡಿಸ್ ಅವರಿಗೆ ತಲೆಯ ಒಳಭಾಗಕ್ಕೆ ಪೆಟ್ಟು ಬಿದ್ದು, ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿತ್ತು. ಈ ಹಿನ್ನೆಲೆಯಲ್ಲಿ, ಆಸ್ಕರ್ ಫರ್ನಾಂಡಿಸ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೆ ಅವರಿಂದು ಕೊನೆಯುಸಿರೆಳೆದಿದ್ದಾರೆ.
ನಟನೆ ಎಂಬುವುದು ಒಂದು ಕಲೆ ಆ ಕಲೆಯನ್ನು ಪ್ರದರ್ಶಿಸುವ ಜಾಣ್ಮೆ ಎಲ್ಲರಲ್ಲಿಯೂ ಇರುವುದಿಲ್ಲ, ಇನ್ನೂ ಕೆಲವರಿಗೆ ಅವಕಾಶ ದೊರೆಯುವುದಿಲ್ಲ, ಅದರೆ ಸಿಕ್ಕ ಅವಕಾಶವನ್ನು ಸದುಪಯೋಗ ಪಡಿಸಿಕೊಂಡವರು ಉತ್ತಮ ನಟನಾಗಬಹುದು. ನಟನೆ ಎಂಬುವುದು ಜೀವವಿಲ್ಲದ ಪಾತ್ರಕ್ಕೆ ಜೀವ ತುಂಬುವುದು. ತನನ್ನು ತಾನು ಆ ಪಾತ್ರಕ್ಕೆ ಅರ್ಪಿಸಿಕೊಳ್ಳಬೇಕಾಗುತ್ತದೆ. ಎಂತಹ ಪಾತ್ರವಾದರು ನಿರ್ವಹಿಸುತ್ತೇನೆ ಎಂಬ ಗಟ್ಟಿ ನಿರ್ಧಾರ ನಮ್ಮಲ್ಲಿರಬೇಕು ಆಗ ಮಾತ್ರ ಆ ಪಾತ್ರಕ್ಕೆ ಜೀವ ಬರುತ್ತದೆ. ಅಂತಹ
ಪುತ್ತೂರು ಕಮ್ಯುನಿಟಿ ಸೆಂಟರ್ ಹಮ್ಮಿಕೊಂಡಿದ್ದ ಸಿಇಟಿ/ನೀಟ್ ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಪೂರ್ವ ಮಾರ್ಗದರ್ಶನ ಶಿಬಿರವು ಇಂದು ಪುತ್ತೂರಿನಲ್ಲಿ ನಡೆಯಿತು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಮಂಗಳೂರಿನ ದಿ ಕ್ಯಾಂಪಸ್ ಕರಿಯರ್ ಅಕಾಡೆಮಿಯ ಆಡಳಿತ ನಿರ್ದೇಶಕ ಉಮರ್ ಯು.ಹೆಚ್. ಮಾತನಾಡಿ ಸಿಇಟಿ/ನೀಟ್ ಆನ್’ಲೈನ್ ಕೌನ್ಸಿಲಿಂಗ್ ವಿಧಾನ ಮತ್ತು ಹಂತಗಳು, ದಾಖಲೆಗಳ ಪರಿಶೀಲನೆ, ಲಭ್ಯವಿರುವ ವಿವಿಧ ವಿಭಾಗದ ಸೀಟುಗಳು ಹಾಗೂ ಕರಿಯರ್ ಆಯ್ಕೆಯ ಅಗತ್ಯತೆ
ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ. ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ,
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ಬಾಬು ರೈ ಯವರು ಸಣ್ಣ ಗುಡಿಸಲಿನಲ್ಲಿ ವಾಸಿಸುತ್ತಿದ್ದು, ವೀಪರೀತ ಮಳೆಯಿಂದ 15 ದಿನಗಳ ಹಿಂದೆ ಮನೆಯು ಪೂರ್ತಿ ಕುಸಿದಿದ್ದು ವಾಸಿಸಲು ಮನೆ ಇಲ್ಲದಂತಾಗಿದೆ. ಇವರಿಗೆ ಸರಕಾರದಿಂದ ಇದುವರೆಗೂ ಯಾವುದೇ ಪರಿಹಾರವೂ ಸಿಕ್ಕಿರುವಿದಿಲ್ಲ , ಇವರ ಈ ಪರಿಸ್ಥಿತಿ ಕಂಡು ಅಶೋಕ್ ರೈ ಸೇವಾ ಟ್ರಸ್ಟ್ ಕೌಡಿಚ್ಚಾರ್ ಘಟಕದ ಅಭಿಮಾನಿ ಬಳಗದವರು ಉದ್ಯಮಿ , ರೈ ಎಸ್ಟೇಟ್ ಮಾಲಕರಾದ ಅಶೋಕ್ ಕುಮಾರ್ ರೈ ಯವರ ಗಮನಕ್ಕೆ ತಂದಾಗ ,
ಕಲಬುರಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯೇ ಮೇಯರ್ ಆಗುತ್ತಾರೆ ಎಂಬ ವಿಶ್ವಾಸ ಇದೆ ಎಂದು ಶಾಸಕ ಯು.ಟಿ. ಖಾದರ್ ಹೇಳಿದರು. ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಜನರು ನಮಗೆ ಮತ ನೀಡಿ ಸ್ಪಷ್ಟ ಬಹುಮತ ಕೊಟಿದ್ದಾರೆ. ಜೆಡಿಎಸ್ ತತ್ವ ಪ್ರಕಾರ ಕಾಂಗ್ರೆಸ್‌ಗೆ ಬೆಂಬಲ ನೀಡಬೇಕು. ಜೆಡಿಎಸ್ ಕಾಂಗ್ರೆಸ್ ಮಾಡಿದ ಉಪಕಾರ ಮರಿಯಲ್ಲ. ಜ್ಯಾತ್ಯಾತೀತ ನಿಲುವಿನ ಹಿನ್ನೆಲೆ ನಾವು ಅವ್ರಿಗೆ ಅವಕಾಶ ನೀಡಿದ್ದೇವೆ. ರಾಜ್ಯಸಭೆ
ಮುಸ್ಲಿಮ್ ಬರಹಗಾರರ ಕನ್ನಡ ಸಾಹಿತ್ಯಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕರ್ನಾಟಕ ಮುಸ್ಲಿಮ್ ಲೇಖಕರ ಸಂಘವು ಪ್ರತಿವರ್ಷ ಮುಸ್ಲಿಮ್ ಬರಹಗಾರರ ಅತ್ತ್ಯುತ್ತಮ ಕನ್ನಡ ಕೃತಿಗೆ ರಾಜ್ಯ ಮಟ್ಟದ ‘ಮುಸ್ಲಿಮ್ ಸಾಹಿತ್ಯ ಪ್ರಶಸ್ತಿ’ಯನ್ನು ನೀಡುತ್ತಾ ಬಂದಿದ್ದು, 2020ನೇ ಸಾಲಿನ ಪ್ರಶಸ್ತಿಗಾಗಿ ಕೃತಿಗಳನ್ನು ಆಹ್ವಾನಿಸಿದೆ. ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಪತ್ರವನ್ನೊಳಗೊಂಡಿರುತ್ತದೆ. ಆಸಕ್ತ ಮುಸ್ಲಿಮ್ ಬರಹಗಾರರು ಕನ್ನಡದಲ್ಲಿ ಪ್ರಕಟಿತ
ಮಂಗಳೂರು: ನಗರದ ಪಣಂಬೂರು ಬೀಚ್ ಬಳಿ ಮೀನುಗಾರಿಕೆಗೆಂದು ತೆರಳಿದ್ದ ಬೋಟ್ ಇಂದು ಬೆಳಗ್ಗೆ ದುರಂತಕ್ಕೀಡಾಗಿದೆ. ಪರಿಣಾಮ ಓರ್ವ ಮೀನುಗಾರ ನಾಪತ್ತೆಯಾಗಿದ್ದು, ನಾಲ್ವರನ್ನು ರಕ್ಷಿಸಲಾಗಿದೆ. ಮೀನುಗಾರಿಕೆಗೆ ತೆರಳಿರುವ ಶರೀಫ್ ನಾಪತ್ತೆಯಾದವರು. ಮೀನುಗಾರಿಕೆ ನಡೆಸಲು ಅಝರ್ ಎಂಬವರ ಮಾಲಕತ್ವದ ಎಫ್.ಎನ್.ಚಿಲ್ಡ್ರನ್ಸ್ ಗಿಲ್ ನೆಟ್ ದೋಣಿಯು ಸಮುದ್ರಕ್ಕೆ ತೆರಳಿತ್ತು. ಆದರೆ ಇಂದು ಬೆಳಗ್ಗೆ 7.30 ಸುಮಾರಿಗೆ ಈ ದೋಣಿಯು ಪಣಂಬೂರು ಬೀಚ್ ಬಳಿ ಬಿರುಗಾಳಿಯ ಹೊಡೆತಕ್ಕೆ


















