ಉಪ್ಪಿನಂಗಡಿ: ಕಡಬ ತಾಲೂಕಿನ ಆಲಂಕಾರು ಸಮೀಪ ಪೊಲೀಸರು ವ್ಯಕ್ತಿಯೊಬ್ಬನನ್ನು ಮಕ್ಕಳ ಎದುರೇ ಕಾಲರ್ ಪಟ್ಟಿ ಹಿಡಿದೆಳೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಆರೋಪಿಸಿ ಸ್ಥಳೀಯರು ಕಡಬ ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಘಟನೆ ನಡೆದಿದೆ. ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಆಲಂಕಾರು ಪೇಟೆ ಸಮೀಪ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಮಯದಲ್ಲಿ ತನ್ನ
ಕುಂದಾಪುರ : ರಾಷ್ಟ್ರೀಯ ಹೆದ್ದಾರಿಯಿಂದ ನಗರ ಪರಿಮಿತಿಯೊಳಗೆ ಕುಂದಾಪುರ ಪ್ರವೇಶಕ್ಕೆ ಅನುಮತಿ ಕೊಡಿ ಎಂದು ಸಂಸದರು, ಶಾಸಕರು ಬೇಡಿಕೆ ಇಟ್ಟಿದ್ದಾರೆ. ನಾವೇನು ನಿಮ್ಮ ಬಳಿ ಭಿಕ್ಷೆ ಕೇಳುತ್ತಿಲ್ಲ. ಪ್ರತೀ ಬಾರಿ ಸಭೆಗೆ ಒಬ್ಬೊಬ್ಬ ಅಧಿಕಾರಿಗಳು ಬಂದು ಸುಳ್ಳು ಭರವಸೆಗಳನ್ನು ಕೊಟ್ಟು ಹೋಗುತ್ತೀರಿ. ನಾವೇನು ನಿಮಗೆ ಆಟದ ಗೊಂಬೆಗಳ ಹಾಗೆ ಕಾಣುತ್ತಿದ್ದೇವಾ. ನಿಮ್ಮಲ್ಲಿ ಸಾಧ್ಯವಿಲ್ಲದಿದ್ದರೆ ಹೇಳಿಬಿಡಿ. ನಮ್ಮ ಊರಿನ ಬಗ್ಗೆ ನಮಗೆ ಕಾಳಜಿ ಇದೆ. ನೀವು ಕೇಸು ಹಾಕಿ
ಕೊರೊನಾ ಸಾಂಕ್ರಾಮಿಕದ ನಡುವೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನರಿಗೆ ಮತ್ತೆ ಕಹಿಸುದ್ದಿ ಸಿಕ್ಕಿದೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್ ಬೆಲೆಯನ್ನು ಮತ್ತೆ ಏರಿಕೆ ಮಾಡಲಾಗಿದೆ. ಸೆಪ್ಟೆಂಬರ್ 01ರಿಂದ ಅಡುಗೆ ಅನಿಲ ಪ್ರತಿ ಸಿಲಿಂಡರ್ ಮೇಲೆ ಹೆಚ್ಚುವರಿ 25 ರು ತೆರಬೇಕಾಗುತ್ತದೆ. ಪರಿಷ್ಕೃತ ದರ ಪಟ್ಟಿ ಬುಧವಾರದಿಂದಲೇ ಜಾರಿಗೆ ಬರಲಿದೆ ಎಂದು ಸರ್ಕಾರಿ ಸ್ವಾಮ್ಯದ ಪೆಟ್ರೋಲಿಯಂ ಕಂಪನಿಗಳು ಹೇಳಿವೆ. ಸಬ್ಸಿಡಿ ರಹಿತ ಗೃಹ ಬಳಕೆಯ ಸಿಲಿಂಡರ್
ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕು ಬಾಣಾವರದಲ್ಲಿ ವಾಹನ ತಪಾಸಣೆ ವೇಳೆ ಹೆಚ್ಚು ಶುಲ್ಕ ವಿಧಿಸಿದ ಹಿನ್ನೆಲೆಯಲ್ಲಿ ಮನನೊಂದು ವಾಹನ ಚಾಲಕ ಮಂಜುನಾಥ್ (೫೦) ತನ್ನ ವಾಹನದಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ವ್ಯಕ್ತಿ ಬಾಣಾವರ ಸಮೀಪದ ಸರ್ವೆ ಕೊಪ್ಪಲು ಮೂಲದವರಾಗಿದ್ದು ಆರ್.ಟಿ.ಓ ಅಧಿಕಾರಿಗಳ ತಪಾಸಣೆಯ ವೇಳೆ ಹದಿನೇಳು ಸಾವಿರ ದಂಡವಿಧಿಸಿದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಕೊರೋನಾ ಹಿನ್ನೆಲೆಯಲ್ಲಿ ವಾಹನ
ಲಾರಿ ಚಾಲಕನೊರ್ವನ ಅಜಾಗರೂಕತೆಯ ಚಾಲನೆಯಿಂದಾಗಿ ರಸ್ತೆಯಂಚಿನಲ್ಲಿ ಪಾರ್ಕ್ ಮಾಡಲಾದ ದ್ವಿಚಕ್ರ ವಾಹನಗಳು, ಕಾರೊಂದರ ಸಹಿತ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ತಗ್ಗು ಪ್ರದೇಶದಲ್ಲಿ ನಿಂತಿದೆ. ಮಂಗಳೂರು ಕಡೆಯಿಂದ ಬಂದ ಲಾರಿಯೊಂದು ಪಡುಬಿದ್ರಿ ಬಂಟರ ಸಂಘದ ಮುಂಭಾಗದ ಹೊಟೇಲೊಂದರ ಮುಂಭಾಗ ರಸ್ತೆಯಂಚಿನಲ್ಲಿ ಹೊಟೇಲ್ ಗ್ರಾಹಕರುನಿಲ್ಲಿಸಿದ ಎರಡು ಬೈಕ್ ಒಂದು ಸ್ಕೂಟರ್ ಹಾಗೂ ಒಂದು ರಿಡ್ಜ್ ಕಾರಿಗೆ ಡಿಕ್ಕಿಯಾಗಿ ಮುಂದಿದ್ದ ವಿದ್ಯುತ್ ಕಂಬಕ್ಕೂ ಡಿಕ್ಕಿಯೊಡೆದು ಸುಮಾರು
ಉಡುಪಿ : ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಪ್ರಯುಕ್ತ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು, ಉಡುಪಿ, ಇದರ ದೈಹಿಕ ಶಿಕ್ಷಣ ವಿಭಾಗ, ತೆಂಕನಿಡಿಯೂರು ಸ್ಪೋರ್ಟ್ಸ್ ಕ್ಲಬ್ (ರಿ), ಲಯನ್ಸ್ ಮತ್ತು ಲಿಯೋ ಕ್ಲಬ್ ಮಲ್ಪೆ, ಉಡುಪಿ ಜಿಲ್ಲಾ ಅಮೆಚೂರ್ ಅತ್ಲೆಟಿಕ್ ಅಸೋಸಿಯೇಶನ್ ಇವರ ಜಂಟಿ ಆಶ್ರಯದಲ್ಲಿ ರಕ್ತದಾನ ಶಿಬಿರ ಸಂಘಟಿಸಲಾಗಿತ್ತು. ಕಾರ್ಯಕ್ರಮವನ್ನು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಶ್ರೀ ಹರಿಯಪ್ಪ ಕೋಟ್ಯಾನ್
ಬೆಂಗಳೂರು: ಪ್ರತಿ ಹತ್ತು ವರ್ಷಕ್ಕೊಮ್ಮೆ ಜಾತಿವಾರು ಜನಗಣತಿ ನಡೆಸುವುದರಿಂದ ವೈಜ್ಞಾನಿಕವಾಗಿ ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲು, ಅರ್ಹರಿಗೆ ಮೀಸಲಾತಿ ಒದಗಿಸಲು ಸಾಧ್ಯವಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, 90 ವರ್ಷಗಳ ಹಿಂದಿನ ಜಾತಿ ಜನಗಣತಿ ವರದಿ ಇಟ್ಟುಕೊಂಡು ಸಾಮಾಜಿಕ ಮತ್ತು ಆರ್ಥಿಕ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಇದು ಸರಿಯಲ್ಲ ಎಂದರು.
ಮೂಡುಬಿದಿರೆ: ತಾಲೂಕಿನ ವಿವಿಧ ಕಡೆ ಕೋವಿಡ್ ಲಸಿಕೆ ಕೊಡುವಲ್ಲಿ ತಾರತಮ್ಯವಾಗುತ್ತಿದೆ ಎಂದು ಆರೋಪಿ ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ವತಿಯಿಂದ ತಹಸೀಲ್ದಾರ್ ಕಚೇರಿ ಎದುರು ಮಂಗಳವಾರ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿ, ಕೋವಿಡ್ ವ್ಯಾಕ್ಸಿನ್ ವಿಚಾರದಲ್ಲಿ ಶಾಸಕರು, ಬಿಜೆಪಿ ಮುಖಂಡರು ತಾರತಮ್ಯ ಮಾಡುತ್ತಿದ್ದಾರೆ. ಸರ್ಕಾರಿ ಆರೋಗ್ಯ ಕೇಂದ್ರಗಳು, ಪಂಚಾಯಿತಿ ಕಾರ್ಯಾಲಯ ಅಥವಾ ಶಾಲೆಗಳಲ್ಲಿ ಕೋವಿಡ್
ಬಂಟ್ವಾಳ: ಕೆಎಸ್‍ಆರ್‍ಟಿಸಿಯ ಐಸಿಯು ಬಸ್ ಸೇವೆ, ಕೋವಿಡ್ ವ್ಯಾಕ್ಸಿನ್ ನೀಡಿಕೆ ಹಾಗೂ ಕಾರ್ಮಿಕ ಇಲಾಖೆಯಿಂದ ನೀಡುವ ಆಹಾರದ ಕಿಟ್‍ನಲ್ಲಿ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಬಿ.ಸಿ. ರೋಡಿನ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್ ಕಚೇರಿಗೆ ದಿಢೀರ್ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. ಸರಕಾರದ ಸೌಲಭ್ಯಗಳು ನೀಡಿಕೆಯಲ್ಲಿ ಕಾಂಗ್ರೆಸ್ ಹಾಗೂ
ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಸಹಭಾಗಿತ್ವದಲ್ಲಿ ಲೆನ್ಸ್ ಕ್ಯಾಪ್ ಪಿಕ್ಚರ್ಸ್ ನಡೆಸುವ ತುಳು ಹಾಗೂ ಕನ್ನಡ ಚಲನಚಿತ್ರ ನಟನಾ ತರಗತಿ ಸೆ.5ರಂದು ತುಳು ಭವನದಲ್ಲಿ ಉದ್ಘಾಟನೆಗೊಳ್ಳಲಿದೆ. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ದಯಾನಂದ ಕತ್ತಲ್‍ಸಾರ್, ತುಳು ಹಾಗೂ ಕನ್ನಡ ಭಾಷೆಯಲ್ಲಿ ಈ ನಟನಾ ತರಗತಿ ನಡೆಯಲಿದ್ದು ತುಳುವಿಗೆ ಆದ್ಯತೆ ನೀಡಲಾಗುತ್ತದೆ ಎಂದರು.ಮೂರು ತಿಂಗಳ ಕಾಲ


















