ಮೈಸೂರು: ಮೈಸೂರಿನಲ್ಲಿ ಅಪರಾಧ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇದ್ದು ಸಾಂಸ್ಕೃತಿಕ ನಗರಿ ಜನತೆಯ ನಿದ್ದೆಗಡಿಸಿದೆ. ಇದೀಗ ಖಾಸಗಿ ಕಾಲೇಜು ವಿದ್ಯಾರ್ಥಿನಿಯೋರ್ವಳ ಮೇಲೆ ಗ್ಯಾಂಗ್ ರೇಪ್ ನಡೆದಿದೆ ಎನ್ನಲಾಗಿದ್ದು ಜನತೆಯನ್ನು ಆತಂಕಕ್ಕೆ ನೂಕಿದೆ. ಹಾಡುಹಗಲಲ್ಲೇ ಯುವಕನಿಗೆ ಗುಂಡು ಹಾರಿಸಿ ಜ್ಯುವೆಲಲ್ಲರಿ ಶಾಪ್ ದರೋಡೆ, ಯುವತಿಗೆ ಚಾಕುವಿನಿಂದ ಇರಿತ
ಬಂಟ್ವಾಳ: ಶಾಸಕ ರಾಜೇಶ್ ನಾಕ್ ನೇತೃತ್ವದಲ್ಲಿ ಸರಕಾರಿ ಶಾಲೆ ಉಳಿಸಿ ಬೆಳೆಸಿ ರಾಜ್ಯ ಸಮಿತಿ ಅಧ್ಯಕ್ಷ ಪ್ರಕಾಶ್ ಅಂಚನ್ ಅವರಿದ್ದ ನಿಯೋಗ ಬುಧವಾರ ಬೆಂಗಳೂರಿನ ಕಚೇರಿಯಲ್ಲಿ ರಾಜ್ಯ ಪ್ರಾಥಮಿಕ ಹಾಗೂ ಪೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರನ್ನು ಭೇಟಿ ಮಾಡಿತು. ಕೋವಿಡ್ ಕಾರಣದಿಂದಾಗಿ ಸ್ಥಗಿತಗೊಂಡಿರುವ ಶಾಲೆಗಳನ್ನು ಒಂದನೇ ತರಗತಿಯಿಂದಲೇ ಆರಂಭಿಸಬೇಕು ಎನ್ನುವ ನಿಯೋಗದ ಮನವಿಗೆ ಸ್ಪಂದಿಸಿದ ಸಚಿವರು 9 ಮತ್ತು 10ನೇ ತರಗತಿಗಳು ಆರಂಭಗೊಂಡ ಬಳಿಕ ಎರಡು ದಿನದಲ್ಲಿ
ಮಂಗಳೂರಿನ ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತರು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ನೀರುಮಾರ್ಗ ಗ್ರಾಮ ಪಂಚಾಯತ್‌ನಲ್ಲಿ ಅಭಿವೃದ್ದಿ ವಿಚಾರದಲ್ಲಿ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅನುದಾನ ವಿಚಾರದಲ್ಲಿ ತಾರತಮ್ಯ ಮಾಡುತ್ತಿದ್ದಾರೆ ಎಂದು ಬಿಜೆಪಿ ಬೆಂಬಲಿತ ಸದಸ್ಯರು ಧ್ವನಿ ಎತ್ತಿದ್ದಾರೆ. ಮಾತ್ರವಲ್ಲದೆ ಸಭೆಯನ್ನು ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿದ್ದಾರೆ.
ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಬಂಗ್ರಕೂಳೂರು ವಾರ್ಡ್ 16 ರ ಸಮಗ್ರ ಅಭಿವೃದ್ಧಿಗಾಗಿ 33.07 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗಳಿಗೆ ಇಂದು ಶಾಸಕರಾದ ಡಾ.ವೈ ಭರತ್ ಶೆಟ್ಟಿಯವರು ಗುದ್ದಲಿಪೂಜೆಯ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮನಪಾ ಸದಸ್ಯರಾದ ಶ್ರೀ ಕಿರಣ್ ಕುಮಾರ್, ಹಿರಿಯರಾದ ಗೋಪಾಲ್ ಕೋಟ್ಯಾನ್, ಹಾಗೂ ಶ್ರೀ ಮಹಾಗಣಪತಿ ಭಜನಾ ಮಂದಿರ ಕೋಡಿಕಲ್ ಇದರ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಮೂಡುಬಿದಿರೆ : ಭಾರತೀಯ ಜನತಾ ಪಾರ್ಟಿ ಮೂಲ್ಕಿ-ಮೂಡುಬಿದಿರೆ ಮಂಡಲದ ವತಿಯಿಂದ ಪುರಸಭೆ ಮತ್ತು ಗ್ರಾ.ಪಂಚಾಯತ್ ಸದಸ್ಯರಿಗೆ ಪ್ರಶಿಕ್ಷಣ ವರ್ಗ ಸ್ಕೌಟ್ ಗೈಡ್ ಕನ್ನಡ ಭವನದಲ್ಲಿ ನಡೆಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಎಂ. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಸಂಘಟನೆಯ ಆಧಾರ ಕಾರ್ಯಕರ್ತರು. ಕಾರ್ಯಕರ್ತರನ್ನು ಸಜ್ಜುಗೊಳಿಸಬೇಕು ಮತ್ತು ವಿಚಾರವಂತರಾಗಿ ಸಾಗಬೇಕೆನ್ನುವ ದೃಷ್ಠಿಕೋನದಿಂದ ಪ್ರಶಿಕ್ಷಣ ವರ್ಗ ರೂಪುಗೊಂಡಿದೆ. ಹಲವು ವರ್ಷಗಳ ನಂತರ ಜನರು
ಬಹುನಿರೀಕ್ಷಿತ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನವು ಮಂಗಳೂರಿನ ಪ್ರಶಾಂತವಾದ ಕುಳಾಯಿ ಕೋಡಿಕೆರೆ ಎಂಬಲ್ಲಿ 1.5 ಎಕರೆ ಭೂಮಿಯಲ್ಲಿ ನಿರ್ಮಾಣವಾಗಲಿದೆ. ಆಗಸ್ಟ್ 27ರಂದು ಭೂಮಿ ಪೂಜೆಯನ್ನು ನೆರವೇರಿಸಲು ತೀರ್ಮಾನಿಸಿದ್ದಾರೆ. ಈ ಬಗ್ಗೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಶ್ರೀ ರಾಧಾ ಗೋವಿಂದ ದೇವಸ್ಥಾನದ ನಾಮ ನಿಷ್ಠ ದಾಸ್ ಅವರು ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನ ನಿರ್ಮಾಣದ ಭೂಮಿ ಪೂಜೆಯು ಸಂಸದ ನಳಿನ್ ಕುಮಾರ್
ಪರಿಸರ ಉಳಿಸಬೇಕು, ಪರಿಸರ ಬೆಳೆಸಬೇಕು ಎನ್ನುವುದು ಕೇವಲ ಭಾಷಣ ಹಾಗೂ ಸೆಮಿನಾರ್ ಗಳಿಗೆ ಸೀಮಿತವಾಗಿದೆ. ಫೀಲ್ಡ್ ಗೆ ಇಳಿದು ಪ್ರಕೃತಿಯನ್ನು ಸಂರಕ್ಷಿಸುವ ಕೆಲಸಗಳು ಕೇವಲ ಬೆರಳೆಣಿಕೆಯ ಜನರಿಂದ ಮಾತ್ರ ಆಗುತ್ತಿದೆ. ಇಂಥಹುದೇ ಒರ್ವ ಪರಿಸರ ಸಂರಕ್ಷಕ ಹಾಗೂ ಕೃತಕ ಕಾಡುಗಳ ಸೃಷ್ಟಿಕರ್ತ ದಕ್ಷಿಣಕನ್ನಡ ಜಿಲ್ಲೆಯಲ್ಲಿದ್ದಾರೆ. ಮನೆಯ ಸಣ್ಣ ಜಾಗದಲ್ಲೇ ದಟ್ಟ ಕಾಡುಗಳನ್ನು ಹೇಗೆ ಬೆಳೆಸಬಹುದು ಎನ್ನುವುದಕ್ಕೆ ಮಾದರಿಯಾಗಿರುವ ಈ ವ್ಯಕ್ತಿ ಯಾರು ಹಾಗೂ ಇವರ ಸಾಧನೆಯೇನು
ಪುತ್ತೂರು: ಕೋವಿಡ್ ಬಂದ ಮೇಲೆ ಸಾರ್ವಜನಿಕರಲ್ಲಿ ಸರಕಾರಿ ಆಸ್ಪತ್ರೆಯ ಬಗ್ಗೆ ಹೆಚ್ಚು ವಿಶ್ವಾಸ ಬರುವಂತೆ ನಮ್ಮ ವೈದ್ಯರು ಮಾಡಿದ್ದಾರೆ ಈ ನಿಟ್ಟಿನಲ್ಲಿ ಅವರಿಗೆ ಮೊದಲಾಗಿ ಅಭಿನಂದನೆ ಸಲ್ಲಿಸಬೇಕು. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಅತೀ ಕಡಿಮೆ ಶೇ.1.94 ಪಾಸಿಟಿವ್ ರೇಟ್ ಇರುವುದು ನಮ್ಮ ತಾಲೂಕಿನಲ್ಲಿ ಈ ನಿಟ್ಟನಲ್ಲಿ ಮುಂಬರುವ ದಿನಗಳಲ್ಲಿ ಶಾಲೆಯನ್ನು ಆರಂಭಿಸುವ ಕುರಿತು ಚರ್ಚಿಸಲಾಗುವುದು ಎಂದು ಶಾಸಕ ಸಂಜೀವ ಮಠಂದೂರು ಹೇಳಿದರು. ತಾಲೂಕು ಆರೋಗ್ಯ
ಮಂಗಳೂರಿನ ಪಣಂಬೂರಿನ ಸಮುದ್ರ ತೀರದಲ್ಲಿ ತ್ಯಾಜ್ಯ ರಾಶಿಗೆ ಕೊನೆಗೂ ಮುಕ್ತಿ ಸಿಕ್ಕಿದಂತಾಗಿದೆ. ವಿ4 ನ್ಯೂಸ್‌ನ ವರದಿಗೆ ಎಚ್ಚೆತ್ತು ಮಂಗಳೂರು ಮಹಾನಗರ ಪಾಲಿಕೆ ಸ್ವಚ್ಛತಾ ಕಾರ್ಯವನ್ನ ಕೈಗೊಂಡಿದೆ. ಇನ್ನು ನಗರ ಪಾಲಿಕೆ ಸಿಬ್ಬಂದಿಗಳು ಸ್ವಚ್ಛ ಕಾರ್ಯವನ್ನು ಕೈಗೊಂಡಿದ್ದಾರೆ. ಪಣಂಬೂರು ಸಮುದ್ರ ತೀರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಕಸದ ರಾಶಿ ಬಿದ್ದಿರುವುದರಿಂದ ಬೀಚ್ ಸೌಂದರ್ಯಕ್ಕೆ ಧಕ್ಕೆಯಾಗಿತ್ತು. ಸಮುದ್ರಕ್ಕೆ ಪ್ರವಾಸಿಗರೇ ಎಸೆದ ಕಸ ಈಗ ದೊಡ್ಡ
ಮಣಿಪಾಲ: ಎಎಚ್‌ಪಿಐ -ಅಸೋಸಿಯೇಷನ್ ಆಫ್ ಹೆಲ್ತ್‌ಕೇರ್ ಪ್ರೊವೈಡರ್ಸ್ (ಭಾರತ) ದಿಂದ ಆರೋಗ್ಯದ ಶ್ರೇಷ್ಠತೆಗಾಗಿ ಕೊಡಲ್ಪಡುವ 2021 ರ ಸಾಲಿನ ನರ್ಸಿಂಗ್ ಎಕ್ಸಲೆನ್ಸ್ ಪ್ರಶಸ್ತಿಯನ್ನು ಪಡೆದಿದೆ. ಕಸ್ತೂರ್ಬಾ ವೈದ್ಯಕೀಯ ಮಹಾವಿದ್ಯಾಲಯ, ಮಣಿಪಾಲದ ಡೀನ್ ಡಾ. ಶರತ್ ಕೆ ರಾವ್ ಅವರು ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ನರ್ಸಿಂಗ್ ಸೇವೆಗಳ ಮುಖ್ಯಸ್ಥರಾದ ಶ್ರೀಮತಿ ಶುಭ ಸೂರಿಯ ಅವರಿಗೆ ಪ್ರಶಸ್ತಿಯನ್ನು ಹಸ್ತಾಂತರಿಸಿದರು. ಕಸ್ತೂರ್ಬಾ ಆಸ್ಪತ್ರೆಯ ಮುಖ್ಯ


















