Home Posts tagged #v4news karnataka (Page 236)

ದಸರಾವರೆಗೆ ಸಾರ್ವಜನಿಕ ಸೇರುವಿಕೆಗೆ ಅವಕಾಶವಿಲ್ಲ: ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ

ಮಂಗಳೂರು ಕೋವಿಡ್ 3ನೆ ಅಲೆಯ ಸಾಧ್ಯತೆಯ ಹಿನ್ನೆಲೆಯಲ್ಲಿ ಈಗಾಗಲೇ ಜಿಲ್ಲೆಯಲ್ಲಿ ಮುಂಬರುವ ದಸರಾ ಹಬ್ಬದವರೆಗೆ ಸಾರ್ವಜನಿಕರ ಸಾಮೂಹಿಕ ಭಾಗವಹಿಸುವಿಕೆಯೊಂದಿಗೆ ಹಬ್ಬ ಹರಿದಿನಗಳ ಆಚರಣೆಗೆ ಅವಕಾಶವಿರುವುದಿಲ್ಲ ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದ್ದಾರೆ. ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರೆಸ್‍ಕ್ಲಬ್‍ನಲ್ಲಿ

ಹಳೆಯಂಗಡಿಯ ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್‌ನಿಂದ ಆಟಿದ ನೆಂಪು ಕಾರ್ಯಕ್ರಮ

ಮಂಗಳೂರು :ಆಟಿ ತಿಂಗಳ ತಿಂಡಿ ತಿನಿಸುಗಳು ಆಹಾರ ಕ್ರಮಗಳು ತನ್ನದೇ ಆದ ವೈಶಿಷ್ಟ್ಯಗಳನ್ನು ಹೊಂದಿದೆ. ಈ ಸಮಯದಲ್ಲಿ ಪ್ರಕೃತಿ ದತ್ತವಾಗಿ ಸಿಗುವ ಆಹಾರಗಳು ಜೌಷಧಿಯ ಗುಣಗಳನ್ನು ಹೊಂದಿದೆ. ಅಮಾಸ್ಯೆ ದಿನದ ಹಾಳೆ ಮರದ ಕೆತ್ತೆ ಅತ್ಯಧಿಕ ರೋಗ ನಿರೋಧಕ ಶಕ್ತಿಯಿಂದ ಕೂಡಿದೆ.ಇದರ ಕಷಾಯ ಸೇವಿಸಿದರೆ ರೋಗ ರುಜಿನಗಳು ದೂರವಾಗುವುದು ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಂಗಳೂರು  ಇದರ ಸದಸ್ಯ ನಾಗೇಶ್ ಕುಲಾಲ್  ಅವರು ಅಭಿಪ್ರಾಯ ಪಟ್ಟರು. ಆ.1 ರಂದು ಶ್ರೀ ಸುಬ್ರಹ್ಮಣ್ಯ

ಹೂಗುಚ್ಚ, ಹಾರ, ತುರಾಯಿ ಹಣ್ಣಿನ ಬುಟ್ಟಿ ನಿಷೇಧ ಹಿಂತೆಗುಕೊಳ್ಳುವಂತೆ ಆಗ್ರಹ: ಆಗಸ್ಟ್‌ 12 ರಂದು ಪುಷ್ಪ ಮಾರಾಟಗಾರರ ಸಂಘದಿಂದ ಪ್ರತಿಭಟನೆ

ಬೆಂಗಳೂರು: ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್‌ ಅವರು ಸರಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಈ ಕೂಡಲೇ ಹಿಂದಕ್ಕೆ ತಗೆದುಕೊಳ್ಳಬೇಕು ಎಂದು ಆಗ್ರಹಿಸಲು ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ನಾಳೆ (ಗುರುವಾರ 12 ನೇ

ಪೆರುವಾಜೆಯ ಕಾನಾವಿನಲ್ಲಿ ಉರುಳಿಗೆ ಬಿದ್ದ ಚಿರತೆ

ಕಾಣಿಯೂರು : ಪೆರುವಾಜೆ ಗ್ರಾಮದ ಕಾನಾವುನಲ್ಲಿ ಚಿರತೆಯೊಂದು ಉರುಳಿಗೆ ಬಿದ್ದ ಘಟನೆ ನಡೆದಿದೆ. ಅರಣ್ಯ ಪ್ರದೇಶದಲ್ಲಿ ಯಾರೋ ಹಂದಿಗೆ ಇಟ್ಟ ಉರುಳಿಗೆ ಚಿರತೆ ಬಿದ್ದಿದ್ದು ಚಿರತೆ ಜೀವಂತವಾಗಿದೆ. ಪೆರುವಾಜೆ ವಲಯ ಅರಣ್ಯಾಧಿಕಾರಿ ಪ್ರಸಾದ್ ಕೆ.ಜೆ.ಮತ್ತು ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿದ್ದಾರೆ. ಅರವಳಿಕೆ ತಜ್ಞರು ಬಂದ ಬಳಿಕ ಅರವಳಿಕೆ ಮದ್ದು ನೀಡಿ ಚಿರತೆಯನ್ನು ಹಿಡಿಯಬೇಕಷ್ಟೆ ಎಂದು ತಿಳಿದು ಬಂದಿದೆ.

ಅರಸೀಕೆರೆಯಲ್ಲಿ ರೌಡಿಶೀಟರ್‌ನ ಬರ್ಬರ ಹತ್ಯೆ

ಹಾಸನ: ರೌಡಿಶೀಟರ್ ಒಬ್ಬನನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನಲ್ಲಿ ನಡೆದಿದೆ. ನವಾಜ್ (27) ಕೊಲೆಯಾದ ರೌಡಿಶೀಟರ್. ಹಾಸನ ಜಿಲ್ಲೆಯ ಅರಸೀಕೆರೆ ನಗರದ ಹೊರವಲಯದ ಚಿಕ್ಕತಿರುಪತಿ ರಸ್ತೆಯ ಕಾರೆಹಳ್ಳಿ ಸಮೀಪ ನಡೆದಿದೆ. ಮೂರು ವರ್ಷಗಳ ಹಿಂದೆ ಮೀನು ಹಿಡಿಯುವ ಸಂಬಂಧ ಎರಡು ಯುವಕರ ತಂಡದ ನಡುವೆ ಗಲಾಟೆ ನಡೆದು ಕೊನೆಗೆ ಆಂಬುಲೆನ್ಸ್ ಚಾಲಕ ಅರುಣ್ ಎಂಬುವನನ್ನು ಅರಸೀಕೆರೆ ನಗರದ ಹೃದಯಭಾಗದಲ್ಲಿರುವ ಅಂಬೇಡ್ಕರ್ ವೃತ್ತದ ಬಳಿ ಚಾಕು

ಖಾಸಗಿ ಬಸ್ ಪ್ರಯಾಣ ದರ ಏರಿಕೆ ತಡೆ ಹಿಡಿಯಿರಿ: ಜಾತ್ಯಾತೀತ ಮತ್ತು ಸಮಾನ ಮನಸ್ಕ ಸಂಘಟನೆಗಳಿಂದ ಆಗ್ರಹ

ಖಾಸಗೀ ಬಸ್ ಪ್ರಯಾಣ ದರದ ವಿಪರೀತ ಏರಿಕೆಯನ್ನು ಖಂಡಿಸಿ, ದ.ಕ.ಜಿಲ್ಲಾಡಳಿತದ ಏಕಪಕ್ಷೀಯ ನಿರ್ಧಾರವನ್ನು ವಿರೋಧಿಸಿ, ದಕ.ಜಿಲ್ಲೆಯ ಜಾತ್ಯಾತೀತ ಪಕ್ಷಗಳ ಹಾಗೂ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತ್ರತ್ವದಲ್ಲಿ ದ.ಕ.ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಮನವಿಯನ್ನು ಅರ್ಪಿಸಲಾಯಿತು. ಸಾರಿಗೆ ಪ್ರಾಧಿಕಾರದ ಸಭೆಯನ್ನು ಕರೆಯದೆ ಏಕಾಏಕಿಯಾಗಿ ಬಸ್ ಪ್ರಯಾಣ ದರವನ್ನು ಏರಿಸಿದ್ದು ಸರ್ವಥಾ ಸರಿಯಲ್ಲ. ಕೊರೋನಾ ಸಂಕಷ್ಟದ ಕಾಲಘಟ್ಟದಲ್ಲಿ ಜಿಲ್ಲೆಯ ಲಕ್ಷಾಂತರ ಜನತೆ

ಹಿದಾಯ ಫೌಂಡೇಶನ್ ಗೆ ರಾಜೀನಾಮೆ ನೀಡಿದ ಟೀಂ ಬಿ-ಹ್ಯೂಮನ್ ಸಂಸ್ಥಾಪಕ

ಮಂಗಳೂರಿನ ಖ್ಯಾತ ಸಮಾಜ ಸೇವಾ ಸಂಸ್ಥೆಯಾದ ಟೀಂ ಬಿ-ಹ್ಯೂಮನ್ ಇದರ ಸಂಸ್ಥಾಪಕರಾದ ಆಸಿಫ್ ಡೀಲ್ಸ್ ರವರು ಹಿದಾಯ ಫೌಂಡೇಶನ್ ನ ಎಲ್ಲ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಕಳೆದ 13 ವರ್ಷಗಳಿಂದ ಸಕ್ರಿಯವಾಗಿ ಹಿದಾಯ ಫೌಂಡೇಶನ್ ಸದಸ್ಯರಾಗಿದ್ದು ಪ್ರಸ್ತುತ ವೈಸ್ ಚೇರ್ಮನ್ ಹಾಗೂ ಟ್ರಸ್ಟಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಇಷ್ಟು ವರ್ಷಗಳಿಂದ ಯಾವುದೇ ಪೂರ್ವಾಗ್ರಹವಿಲ್ಲದೆ ಎರಡೂ ಸಂಸ್ಥೆಗಳಲ್ಲಿ ಸಮಾನವಾಗಿ ತನ್ನನ್ನು ತಾನು ತೊಡಗಿಸಿಕೊಂಡು ಸೇವೆಗೈಯುತ್ತಿದ್ದುದು

ಕನ್ನಡ ದಿನಪತ್ರಿಕೆ – ಕನ್ನಡ ಪುಸ್ತಕ ಓದಿ : ಸುನಿಲ್ ಕುಮಾರ್

ಬೆಂಗಳೂರು ಆಗಸ್ಟ್ 11-ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ, ಹಾಗೆಯೇ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ಮಾಡಿಕೊಂಡರೆ ಆ ಮೂಲಕವೇ ಕನ್ನಡ ಭಾಷೆ ಮತ್ತು ಸಂಸ್ಕೃತಿ ಬೆಳೆಸುವಲ್ಲಿ ಜನರೂ ಸಹ ಪಾಲುಗೊಳ್ಳಲು ಸಾಧ್ಯವಾಗುತ್ತದೆ ಎಂದು ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ. ಸುನೀಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ

ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾಪ್ರಸಾದ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿ ಹಣಕ್ಕಾಗಿ ಬೇಡಿಕೆ

ಪುತ್ತೂರು: ಪುತ್ತೂರಿನ ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಹಣಕ್ಕಾಗಿ ಬೇಡಿಕೆ ಇಡುತ್ತಿರುವ ಘಟನೆ ನಡೆದಿದೆ. ಹಿಂದೂ ಸಂಘಟನೆಗಳ ಮುಂದಾಳು, ಖ್ಯಾತ ವೈದ್ಯ ಡಾ.ಎಂ.ಕೆ.ಪ್ರಸಾದ್ ಮತ್ತು ಅವರ ಪತ್ನಿ, ಮಾಜಿ ಶಾಸಕಿ ಮಲ್ಲಿಕಾ ಪ್ರಸಾದ್ ಅವರ ಭಾವಚಿತ್ರವನ್ನು ಪ್ರೊಫೈಲ್ ಹಾಕಿರುವ ನಕಲಿ ಫೇಸ್ಬುಕ್ ಖಾತೆ ಮೂಲಕ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗುತ್ತಿದೆ. ರಿಕ್ವೆಸ್ಟ್ ಆಕ್ಸೆಪ್ಟ್ ಮಾಡಿದವರಲ್ಲಿ ಹಣಕ್ಕೆ ಬೇಡಿಕೆ

ಸೋಲಾರ್ ಪಂಪ್‌ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಕೇಂದ್ರ ಸಚಿವೆ ಶೋಭಾಗೆ ಪುತ್ತೂರು ಶಾಸಕ ಸಂಜೀವ ಮಠಂದೂರು ಮನವಿ

ಪುತ್ತೂರು: ಶಾಸಕ ಸಂಜೀವ ಮಠಂದೂರು ಅವರು ಆ.10ರಂದು ದೆಹಲಿಯಲ್ಲಿ ಕೇಂದ್ರದ ಕೃಷಿ ರಾಜ್ಯ ರೈತರ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಅವರನ್ನು ಭೇಟಿ ಮಾಡಿ ದಕ್ಷಿಣ ಕನ್ನಡ ಜಿಲ್ಲೆಗೆ ಉತ್ತರ ಕನ್ನಡ ಜಿಲ್ಲೆಯ ಮಾದರಿಯಲ್ಲೇ ಸೋಲಾರ್ ಪಂಪ್ ಸೆಟ್‌ಗಳಿಗೆ ಸಬ್ಸಿಡಿ ನೀಡುವಂತೆ ಮನವಿ ಮಾಡಿದರು. ಈಗಾಗಲೇ ಉತ್ತರ ಕನ್ನಡ ಜಿಲ್ಲೆಯಲ್ಲಿ ಸೋಲಾರ್ ಪಂಪ್‌ಸೆಟ್‌ಗಳನ್ನು ಅಳವಡಿಸುವಾಗ ಸರಕಾರ ಸಬ್ಸಿಡಿ ನೀಡುತ್ತಿದೆ. ಆ ಸಬ್ಸಿಡಿಯನ್ನು ದಕ್ಷಿಣ ಕನ್ನಡ ಜಿಲ್ಲೆಗೂ ವಿಸ್ತರಿಸಬೇಕು