Home Posts tagged #v4news karnataka (Page 240)

ಅಗಸ್ಟ್‌ 23ರಿಂದ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನ ನಡುವಲ್ಲೇ ಶಾಲೆಗಳನ್ನು ಆರಂಭಿಸುವ ಕುರಿತು ರಾಜ್ಯ ಸರಕಾರ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ಅಗಸ್ಟ್‌ 23ರಿಂದ 9, 10, 11 ಹಾಗೂ 12ನೇ ತರಗತಿಗಳನ್ನು ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಹೇಳಿದ್ದಾರೆ.ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿಂದು

ಚೌತಿ ಯ ಗಣಪನನ್ನೂ ಕಾಡಿದ ಜಿ ಎಸ್‍ ಟಿ : ತತ್ತರಿಸಿದ ಗಣಪತಿ ವಿಗ್ರಹ ತಯಾರಾಕರು

ದೇಶೆದೆಲ್ಲೆಡೆ ಚೌತಿ ಹಬ್ಬದ ವಿಗ್ರಹ ತಯಾರಿ ಈಗಾಗಲೇ ಆರಂಭಗೊಂಡಿದೆ. ಈ ನಡುವೆ ಗಣೇಶನ ಮೂರ್ತಿಗೆ ಫೈನಲ್ ಟಚ್ ಕೊಡಲಾಗುತ್ತಿದೆ. ಇನ್ನು ಮಂಗಳೂರಿನಲ್ಲೂ ಗಣೇಶ ಹಬ್ಬದ ಪ್ರಯುಕ್ತ ಪೂರ್ವತಯಾರಿ ಜೋರಾಗಿದ್ದು, ಕಳೆದ 92 ವರ್ಷದಿಂದ ಪಾರಂಪರಿಕವಾಗಿ ಗಣೇಶ ವಿಗ್ರಹ ತಯಾರಿ ಮಾಡುತ್ತಿರೋ ಸಹೋದರರ ಕೆಲಸ ಎಲ್ಲರ ಗಮನಸೆಳೆದಿದೆ. ಹಾಗಾದ್ರೆ ಇದು ಎಲ್ಲಿ ಅಂತೀರಾ ಇಲ್ಲಿದೆ. ಸ್ಪೆಷಲ್ ರಿಪೋರ್ಟ್… ಹೌದು ಮಂಗಳೂರಿನ ಮಣ್ಣಗುಡ್ಡೆಯ ರಾವ್ ಪ್ಯಾಮಿಲಿ, ಕಳೆದ 92 ವರ್ಷದಿಂದ,

ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ: ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ: ಸಿಎಂ ಬಸವರಾಜ್ ಬೊಮ್ಮಾಯಿ

ರಾಜ್ಯದಲ್ಲಿ ಕೊರೋನಾ 3ನೇ ಅಲೆಯ ಮುನ್ಸೂಚನೆ ನೀಡಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವಂತ ನಿರ್ಧಾರ ಕೈಗೊಳ್ಳಲಾಗಿದೆ. ಇಂದಿನಿಂದ ರಾತ್ರಿ 9 ಗಂಟೆಯಿಂದ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಬೆಳಿಗ್ಗೆ 5 ಗಂಟೆಯವರೆಗೆ ನೈಟ್ ಕರ್ಪ್ಯೂ ಜಾರಿಯಲ್ಲಿ ಇರಲಿದೆ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೋವಿಡ್ ನಿರ್ವಹಣೆ ಕುರಿತಂತೆ ನಡೆದಂತ ಸಭೆಯ ಬಳಿಕ ಸುದ್ದಿಗಾರರೊಂದಿಗೆ

ಉರ್ ದ ಮಾರಿ ಗಿಡಪೆರೆ ಬತ್ತೆ ಆಟಿ ಕಳಂಜೆ

ತುಳುನಾಡಿನಲ್ಲಿ ಆಷಾಢ ಮಾಸದಲ್ಲಿ ಆಟಿ ಕಳೆಂಜ ವೇಷ ಹಾಕುವ ಸಂಪ್ರದಾಯ ಈಗಲೂ ರೂಢಿಯಲ್ಲಿದೆ. ಆಟಿ ಕಳೆಂಜದ ವೇಷ ಹಾಕಿ ಮನೆ ಮನೆಗೆ ಹೋಗುವುದರಿಂದ ಮನೆಯನ್ನು ಸೇರಿಕೊಂಡಿರುವ ಮಾರಿ ಓಡಿ ಹೋಗುತ್ತದೆ ಎಂಬ ನಂಬಿಕೆ ಇದೆ. ಇಂತಹದೊಂದು ಸಾಂಪ್ರದಾಯಿಕ ಪದ್ಧತಿ ಮಂಗಳೂರಿನ ಸುಂಕದಕಟ್ಟೆಯ ಪರಿಸರದಲ್ಲಿ ರಾಮಸೇನಾ ನೇತೃತ್ವದಲ್ಲಿ ನಡೆಯಿತು. ತುಳುನಾಡು ಹಲವಾರು ಜನಪದ ಆಚರಣೆಗಳಿಗೆ ಪ್ರಸಿದ್ಧಿಯನ್ನು ಪಡೆದಿದೆ. ಅಂತಹ ಆಚರಣೆಗಳಲ್ಲಿ ಆಟಿ ಕಳೆಂಜವೂ ಒಂದು. ಆಷಾಢ ಮಾಸದಲ್ಲಿ

ಆಗಸ್ಟ್ 14ರಂದು ಲೋಕ ಅದಾಲತ್

ಜಿಲ್ಲೆಯಾದ್ಯಂತ ಆಗಸ್ಟ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಆಯೋಜಿಸಲಾಗಿದ್ದು, ಕಕ್ಷಿದಾರರಿಗೆ ರಾಜಿ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿರುತ್ತದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಪೃಥ್ವಿರಾಜ್ ವರ್ಣೇಕರ್ ತಿಳಿಸಿದರು. ಅವರು ಜಿಲ್ಲಾ ನ್ಯಾಯಾಲಯದ ಸಂಕೀರ್ಣದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಲೋಕ ಅದಾಲತ್‍ನಲ್ಲಿ ರಾಜಿ ಮೂಲಕ ಪರಿಹರಿಸಲಾದ ಪ್ರಕರಣಗಳಲ್ಲಿ ಮೇಲ್ಮನವಿಗೆ

ಸಕಲೇಶಪುರ : ನದಿಗೆ ಹಾರಿ ಯುವತಿ ಆತ್ಮಹತ್ಯೆ

ಕ್ಷುಲಕ ಕಾರಣಕ್ಕೆ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಕಲೇಶಪುರದಲ್ಲಿ ನಡೆದಿದೆ. ಪೂಜಾ (20) ವರ್ಷ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಯುವತಿಯಾಗಿದ್ದು ಮೂಲತ:ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ತಾಲೂಕಿನ ಶ್ರವಣಬೆಳಗೋಳ ಹೋಬಳಿ ಚೋಳನಹಳ್ಳಿ ಸಮೀಪದ ಬೆಕ್ಕ ಗ್ರಾಮದ ಕೆಂಪೇಗೌಡ ಹಾಗೂ ಜಯಮ್ಮ ಎಂಬುವರ ಪುತ್ರಿ ಎಂದು ತಿಳಿದು ಬಂದಿದೆ. ಇನ್ನು ಘಟನೆಗೆ ಸಂಬಂಧಿಸಿ ಯುವತಿಯ ಸಂಬಂಧಿಕರು ಯುವಕನ ಕುಟುಂಬದವರು ಯುವತಿಗೆ ವರದಕ್ಷಿಣೆ ಕಿರುಕುಳ

ಮುಡಿಪು: ಗೋಡೆ ಕೊರೆದು ಜ್ಯುವೆಲ್ಲರಿಯಿಂದ ಚಿನ್ನಾಭರಣ ದರೋಡೆ

ಉಳ್ಳಾಲ: ಮುಡಿಪು ಚಿನ್ನದ ಅಂಗಡಿಯ ಗೋಡೆ ಕೊರೆದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನ ದರೋಡೆ ನಡೆಸಿರುವ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡು ಬಳಿ ನಡೆದಿದೆ. ಮುಡಿಪುವಿನಲ್ಲಿರುವ ಗೋಲ್ಡ್ ಕಿಂಗ್ ಜ್ಯುವೆಲ್ಲರಿಯಲ್ಲಿ ಕಳವು ನಡೆದಿದೆ. ಕುರ್ನಾಡು ನಿವಾಸಿ ಇಬ್ರಾಹಿಂ ಮಾಲೀಕತ್ವದ ಅಂಗಡಿ ಇದಾಗಿದೆ. ಜ್ಯುವೆಲ್ಲರಿ ಅಂಗಡಿಯ ಎಡಭಾಗದ ಗೋಡೆಯನ್ನು ಕೊರೆದು ಕೃತ್ಯ ನಡೆದಿದೆ. ಘಟನಾ ಸ್ಥಳಕ್ಕೆ ಕೊಣಾಜೆ ಪೊಲೀಸರು ಭೇಟಿ ನೀಡಿ ಪ್ರಕರಣ

ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗ, ಬೇಹುಗಾರಿಕೆ ವಿರುದ್ಧ ಯುವ ಕಾಂಗ್ರೆಸ್ ನಿಂದ ಸಂಸತ್ ಘೆರಾವ್, ಪ್ರತಿಭಟನೆ

ನವದೆಹಲಿ; ನಿರಂತರ ಬೆಲೆ ಏರಿಕೆ, ಹಣದುಬ್ಬರ, ನಿರುದ್ಯೋಗದಿಂದ ಯುವ ಜನತೆ ತತ್ತರಿಸುತ್ತಿದ್ದು, ರೈತ ವಿರೋಧಿ ನೀತಿಗಳು ಹಾಗೂ ಕೇಂದ್ರದ ಪೆಗಾಸಸ್ ಬೇಹುಗಾರಿಕೆ ವಿರೋಧಿಸಿ ರಾಷ್ಟ್ರೀಯ ಯುವ ಕಾಂಗ್ರೆಸ್ ನಿಂದ ರಾಜಧಾನಿಯಲ್ಲಿಂದು ಸಂಸತ್ ಘೆರಾವ್ ಹಮ್ಮಿಕೊಳ್ಳಲಾಗಿತ್ತು. ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಶ‍್ರೀನಿವಾಸ್ ಬಿ.ಬಿ. ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಂ.ಎಸ್. ರಕ್ಷಾ ರಾಮಯ್ಯ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆಯಲ್ಲಿ ಕಾಂಗ್ರೆಸ್ ವರಿಷ್ಠ ನಾಯಕ

ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನಲ್ಲಿ ವಿಶ್ವ ಸ್ತನ್ಯ ಸಪ್ತಾಹ ಆಚರಣೆ

ವಿಶ್ವ ಸ್ತನ್ಯ ಸಪ್ತಾಹ ಆಚರಣೆಯ ಪ್ರಯುಕ್ತ ಮಂಗಳೂರಿನ ಎಸ್.ಸಿ.ಎಸ್. ಸಮೂಹ ಸಂಸ್ಥೆಗಳ ಅಂಗವಾದ ಕರ್ನಾಟಕ ಆಯುರ್ವೇದ ಮೆಡಿಕಲ್ ಕಾಲೇಜಿನ ಕೌಮಾರಭೃತ್ಯ ವಿಭಾಗದಿಂದ ವೆಬಿನಾರ್‌ನ್ನು ಆಯೊಜಿಸಲಾಗಿತ್ತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯೆನೆಪೊಯ ಆಯುರ್ವೇದ ಮೆಡಿಕಲ್ ಕಾಲೇಜು ಆಸ್ಪತ್ರೆಯ ಮುಖ್ಯ ಅಧೀಕ್ಷಕರು ಹಾಗೂ ಕೌಮಾರಭೃತ್ಯ ವಿಭಾಗದ ಮುಖ್ಯಸ್ಥರಾದ ಡಾ|| ಲಕ್ಷ್ಮೀಶ ಉಪಾಧ್ಯರು ಮಾತನಾಡಿ “ಮಾತುರೇವ ಪಿಬೇತ್ ಸ್ತನ್ಯಂ” (ಅಮ್ಮನ ಹಾಲನ್ನೆ ಮಗುವಿಗೆ

ಸಂಶೋಧಕನಿಗೆ ನೈತಿಕ ಜವಾಬ್ದಾರಿ ಮುಖ್ಯ – ಡಾ. ರವೀಂದ್ರನಾಥ್

ಉಡುಪಿ : ಶೈಕ್ಷಣಿಕ ಸಂಶೋಧನೆಯಲ್ಲಿ ಸಂಶೋಧಕನ ನೈತಿಕತೆ ಅತಿ ಮುಖ್ಯವಾಗುತ್ತದೆ. ಇದು ಸಂಶೋಧನೆಯಲ್ಲಿ ಸತ್ಯಶೋಧನೆಗೆ ದಾರಿಯಾಗುತ್ತದೆ. ಸಂಶೋಧಕನಲ್ಲಿ ಕರ್ತವ್ಯ ನಿಷ್ಠೆ ಇದ್ದಲ್ಲಿ ಕ್ಷೇತ್ರಕಾರ್ಯದ ಮೂಲಕ ಅಧ್ಯಯನ ಮಾಡಿ ಬೆಳಕಿಗೆ ಬಂದ ವಿಚಾರವನ್ನು ನಿರ್ಭೀತಿಯಿಂದ ಪ್ರಸ್ತುತಪಡಿಸಲು ಸಾಧ್ಯವಾಗುತ್ತದೆ. ಒಳ್ಳೆಯ ಸಂಶೋಧನಾ ವರದಿಯು ಸರಕಾರಕ್ಕೆ ಮುಂದಿನ ಯೋಜನೆಗಳನ್ನು ರೂಪಿಸಲು ದಾರಿದೀಪವಾಗುತ್ತದೆ ಎಂದು ಖ್ಯಾತ ಸಮಾಜಶಾಸ್ತ್ರಜ್ಞ, ನಿವೃತ್ತ ಪ್ರಾಂಶುಪಾಲ ಡಾ.