ತಲಪಾಡಿ ಗಡಿ ಬಂದ್ ವಿರೋಧಿಸಿ ಕೇರಳಿಗರು ಗಡಿಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ.ಕೇರಳ ಭಾಗದ ರಸ್ತೆ ಬಂದ್ ಮಾಡಿ ಕೇರಳಿಗರು ಪ್ರತಿಭಟನೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಕೇರಳಕ್ಕೆ ತೆರಳುವ ರಸ್ತೆಗೆ ಅಡ್ಡಲಾಗಿ ನಿಂತು ಪ್ರತಿಭಟನೆ ನಡೆಸಿದ್ರು. ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ವೇಳೆ ಪ್ರತಿಭಟನಾಕಾರರು ಪ್ರತಿಭಟನೆ ನಡೆಸಿ, ನೆಗೆಟಿವ್ ರಿಪೋರ್ಟ್ ಕಡ್ಡಾಯ
ಮಂಗಳೂರಿನ ತಲಪಾಡಿ ಚೆಕ್‌ಪೋಸ್ಟ್‌ಗೆ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿ ಭದ್ರತೆ ಬಗ್ಗೆ ಪರಿಶೀಲನೆ ನಡೆಸಿದ್ರು.ಕೇರಳದಲ್ಲಿ ಕೊರೊನಾ ಪ್ರಕರಣ ಏರಿಕೆ ಹಿನ್ನಲೆ ಕಾಸರಗೋಡು ದಕ್ಷಿಣಕನ್ನಡ ಜಿಲ್ಲೆಯ ಗಡಿ ಭಾಗದಲ್ಲಿ ಬಿಗಿ ಬಂದೋಬಸ್ತ್ ಎರ್ಪಡಿಸಲಾಗಿದ್ದು, ಕೊರೊನಾ ನೆಗೆಟಿವ್ ವರದಿ ಇಲ್ಲದವರಿಗೆ ಕರ್ನಾಟಕ ಪ್ರವೇಶಕ್ಕೆ ಸಂಪೂರ್ಣ ನಿಷೇಧ ಹೇರಲಾಗಿದೆ. ಈ ನಿಟ್ಟಿನಲ್ಲಿ ಎಡಿಜಿಪಿ ಪ್ರತಾಪ್ ರೆಡ್ಡಿ ಭೇಟಿ ನೀಡಿದ್ದಾರೆ. ಬಳಿಕ
ರಾಜ್ಯ ಕಾನೂನು ಸುವ್ಯವಸ್ಥಾ ವಿಭಾಗದ ಎಡಿಜಿಪಿ ಪ್ರತಾಪ್ ರೆಡ್ಡಿ ಸೋಮವಾರ ಸಂಜೆ ಮಂಗಳೂರಿಗೆ ಆಗಮಿಸಿದ್ದಾರೆ.ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಳ ವಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳ ಗಡಿಭಾಗದ ಬಂದೋಬಸ್ತ್ ಮಾಹಿತಿ ಕಲೆ ಹಾಕುವ ನಿಟ್ಟಿನಲ್ಲಿ ಅವರು ಆಗಮಿಸಿದ್ದು, ಖಾಸಗಿ ಹೋಟೆಲ್ ನಲ್ಲಿ ತಂಗಿದ್ದು, ಇಂದು ಮುಂಜಾನೆ ಕೇರಳ ಗಡಿ ಪ್ರದೇಶವಾದ ತಲಪಾಡಿಗೆ ತೆರಳಿ ಪರಿಶೀಲನೆ ನಡೆಸಿದ್ರು. ಈ ವೇಳೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಕಮೀಷನರ್
ಎಸ್.ಡಿ.ಎಂ-ನ ಜಾಗತಿಕ ಮಟ್ಟದ ಹಿರಿಯ ವಿದ್ಯಾರ್ಥಿಗಳ ವೆಬಿನಾರ್ ಸರಣಿಗೆ ಚಾಲನೆಎಸ್.ಡಿ.ಎಂ ಸಂಸ್ಥೆ ಕೌಶಲ್ಯಯುತ ವಿದ್ಯಾರ್ಥಿಗಳು, ಸಂಶೋಧಕರು, ಅನ್ವೇಷಕರು ಹಾಗೂ ಚಿಂತನಶೀಲ ವ್ಯಕಿತ್ವಗಳನ್ನು ಸೃಷ್ಟಿಸುತ್ತದೆ. ಸಂಸ್ಥೆಯ ಹಿರಿಯ ವಿದ್ಯಾರ್ಥಿಗಳ ಸಂಘ ಅದಕ್ಕೆ ಪೂರಕ ಶಕ್ತಿಯಾಗಬೇಕು. ನಮ್ಮೆಲ್ಲಾ ವಿದ್ಯಾರ್ಥಿಗಳ ಏಳಿಗೆ ಮತ್ತು ಸಾಧನೆಯ ಸಾಕ್ಷಿಗಳಾಗಬೇಕು ಎಂದು ಡಾ.ಬಿ ಯಶೋವರ್ಮ ಕರೆ ನೀಡಿದರು. ಅವರು ಇತ್ತೀಚೆಗೆ ಉಜಿರೆಯ ಎಸ್.ಡಿ.ಎಂ ಸ್ವಾಯತ್ತ ಕಾಲೇಜಿನ ಹಳೆ
ಕುಂದಾಪುರ: ಕೋಟೇಶ್ವರದ ಕಾಳಾವರ ಸಮೀಪದಲ್ಲಿ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಯುವಕನೋರ್ವನ ಕುತ್ತಿಗೆ ಕೊಯ್ದು ಭೀಕರವಾಗಿ ಹತ್ಯೆಗೈದಿದ್ದು, ಹತ್ಯೆಗೆ ಹಣಕಾಸಿನ ವ್ಯವಹಾರ ಹಾಗೂ ಹೊಸ ಕಾರು ಖರೀದಿ ಕಾರಣ ಎಂದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಾಲು ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಯುವಕ. ಮೇಲ್ನೋಟಕ್ಕೆ ಹಣಕಾಸಿನ ವಿಚಾರದಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದ್ದು, ಫೈನಾನ್ಸ್ ಪಾಲುದಾರ ಅನೂಪ್ ಮೇಲೆ ಅನುಮಾನ
ಮಂಗಳೂರು: ರಾಜ್ಯ ಸರ್ಕಾರ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ವಿದ್ಯಾರ್ಥಿಗಳ ಭವಿಷ್ಯಕ್ಕೆ ಸಂಬಂಧಪಟ್ಟಂತೆ ಸ್ಪಷ್ಟಯೋಜನೆ ರೂಪಿಸಬೇಕೆಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದ್ರು. ಈ ಕುರಿತು ಮಂಗಳೂರಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿಯೊಂದು ವಿದ್ಯಾರ್ಥಿಗಳು, ಹೆತ್ತವರು ಮಾನಸಿಕ ಒತ್ತಡದಲ್ಲಿಯೇ ಜೀವನ ಸಾಗಿಸಿಕೊಳ್ಳುತ್ತಿದ್ದಾರೆ. ಇದಕ್ಕೆ ನೇರ ಕಾರಣ ಬಿಜೆಪಿ ಸರ್ಕಾರ ಎಂದು ಅವರು ದೂರಿದರು. ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಳ್ಳುತ್ತಿಲ್ಲ ಇನ್ನು
ರಾಜ್ಯದಲ್ಲಿ ಸರಕಾರ ಇದೆಯೋ ಇಲ್ಲವೋ ಎಂದು ಜನ ಕೇಳುತ್ತಿದ್ದಾರೆ. ರಾಜ್ಯದಲ್ಲಿ ಆಡಳಿತ ಅಷ್ಟು ನಿಷ್ಕ್ರೀಯವಾಗಿದೆ ಎಂದು ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕ ಮತ್ತು ಮಾಜಿ ಸಚಿವ ಯು.ಟಿ. ಖಾದರ್ ಸುದ್ದಿಗೋಷ್ಠಿಯಲ್ಲಿಂದು ಟೀಕಿಸಿದ್ದಾರೆ. ರಾಜ್ಯದಲ್ಲಿ ಆಡಳಿತ ನಡೆಸಿದ ಯಡಿಯೂರಪ್ಪ ನೇತೃತ್ವದ ಸರಕಾರ ಎಲ್ಲಾ ಕ್ಷೇತ್ರದಲ್ಲೂ ವಿಫಲವಾಗಿದೆ. ಅವರ ಪಕ್ಷದವರೆ ಬಿಜೆಪಿಯ ಭ್ರಷ್ಟಾಚಾರದ ಬಗ್ಗೆ ಬಹಿರಂಗ ಹೇಳಿಕೆ ನೀಡಿದ್ದಾರೆ. ರಾಜ್ಯಪಾಲರಿಗೆ ದೂರು ನೀಡಿದ್ದಾರೆ. ಈ
ನವದೆಹಲಿ: ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರು ಇಂದು ನವದೆಹಲಿಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.ಕಳೆದ ವರ್ಷ ಕೇಂದ್ರ ಸರ್ಕಾರವು 12 ಸಾವಿರ ಕೋಟಿ ರೂ. ಜಿ.ಎಸ್.ಟಿ ಪರಿಹಾರ ನೀಡಿದ್ದು, ಇನ್ನು 11 ಸಾವಿರ ಕೋಟಿ ರೂ. ಗಳಷ್ಟು ಪರಿಹಾರ ಬಿಡುಗಡೆಯಾಗಬೇಕಿದೆ. ಈ ಪರಿಹಾರದ ಬಿಡುಗಡೆ ಕುರಿತು ಚರ್ಚಿಸಿದರು. ಈ ವರ್ಷ ಸುಮಾರು 18 ಸಾವಿರ ಕೋಟಿ ಪರಿಹಾರವನ್ನು ಸಾಲ ರೂಪದಲ್ಲಿ ಬಿಡುಗಡೆ
ವ್ಯಾಕ್ಸಿನ್ ವಿಚಾರದಲ್ಲಿ ಮಾತಿನ ಚಕಮಕಿ ನಡೆದ ಘಟನೆ ಕಾಸರಗೋಡಿನ ಮೊಗ್ರಾಲ್ ಪುತ್ತೂರಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರು ಹೈಯರ್ ಸೆಕೆಂಡರಿ ಶಾಲೆಯಲ್ಲಿ ವ್ಯಾಕ್ಸಿನ್ ನೀಡಲಾಗುತ್ತಿತ್ತು ಪಂಚಾಯತ್ ನ ಮೊದಲ ಮತ್ತು ಎರಡನೇ ವಾರ್ಡಿನವರಿಗೆ ಶುಕ್ರವಾರ ವ್ಯಾಕ್ಸಿನ್ ನೀಡಲು ತೀರ್ಮಾನಿಸಲಾಗಿತ್ತು .ಈ ಮಧ್ಯೆ ಹೊರ ವಾರ್ಡಿನವರು ವ್ಯಾಕ್ಸಿನ್ ಪಡೆಯಲು ಬಂದಿದ್ದಾರೆ ಎಂಬ ವಿಚಾರದಲ್ಲಿ ಘರ್ಷಣೆ ನಡೆದಿದೆ.ಹೀಗಾಗಿ ಗಂಟೆಗಳ ಕಾಲ ವ್ಯಾಕ್ಸಿನ್ ನೀಡಿಕೆ ಸ್ಥಗಿತಗೊಂಡಿತ್ತು.
ಮಂಗಳೂರು : ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದಲ್ಲಿ ಹಿರಿಯ ರಾಜಕಾರಣಿ, ಕುಂದಾಪುರ ಕ್ಷೇತ್ರದ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರನ್ನು ಸಚಿವ ಸಂಪುಟಕ್ಕೆ ಸೇರಿಸಿ ಕೊಳ್ಳುವಂತೆ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮನವಿ ಮಾಡಿದೆ. ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಅವರು ಈ ಕುರಿತು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದು, ಕರ್ನಾಟಕ ರಾಜ್ಯ ಕಂಡ ಬಲು ಅಪರೂಪದ ರಾಜಕೀಯ ರತ್ನ ಹಾಲಾಡಿ ಶ್ರೀನಿವಾಸ ಶೆಟ್ಟರು. ಶ್ವೇತ ಚಾರಿತ್ರ್ಯದ ಮಾನ್ಯರ ರಾಜಕೀಯ


















