ಆಲೂರು: ಆಲೂರು ತಾಲೂಕಿನಾದ್ಯಂತ ವರುಣ ಆರ್ಭಟಿಸಿ ಬೊಬ್ಬಿರಿಯುತ್ತಿದ್ದು ತಾಲೂಕು ಪಾಳ್ಯ ಚಂದ್ರಶೇಖರ್ ಎಂಬುವವರು ಒಂದು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಶುಂಠಿ ಬೆಳೆಗೆ ಶಂಕುತೀರ್ಥ ಹೊಳೆಯ ನೀರು ದಿಡೀರನೆ ನುಗ್ಗಿದ ಪರಿಣಾಮವಾಗಿ ಶುಂಠಿ ಬೆಳೆಯುವ ಸಂಪೂರ್ಣವಾಗಿ ನೀರಿನಲ್ಲಿ ಮುಳುಗಿ ಹೋಗಿದೆ ಅಲ್ಲದೆ ಭತ್ತದ ನಾಟಿಗಾಗಿ ಸಿದ್ದಪಡಿಸಿದ್ದ ಸಸಿ ಕೂಡ ನೀರಿನಲ್ಲಿ
ನಾಗಮಂಗಲ: ಪ್ರತಿಯೊಬ್ಬರು ಸಮಾಜದಲ್ಲಿ ಇಂದಿನ ಪರಿಸ್ಥಿತಿಗೆ ಅನುಗುಣವಾಗಿ ಎಲ್ಲರೂ ಆರೋಗ್ಯದಿಂದ ಎಚ್ಚರಿಕೆಯಿಂದ ಇರುವಂತೆ ಶಾಸಕ ಸುರೇಶಗೌಡ ಕರೆ ನೀಡಿದರು. ಅವರಿಂದು ನಾಗಮಂಗಲ ಕಾಲೇಜು ಕ್ರೀಡಾಂಗಣದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಹಾಗೂ ಕೂಲಿ ಕಾರ್ಮಿಕರಿಗೆ ಆಹಾರಧಾನ್ಯ ಕಿಟ್ ವಿತರಿಸುತ್ತ ಕರೋನಾ ಮಹಾಮಾರಿಯ ಕಡಿಮೆ ಯಾಗಿದೆ ಎಂದು ಎಚ್ಚರ ತಪ್ಪಿದರೆ ಅಪಾಯ ಆದ್ದರಿಂದ ಸಾಮಾಜಿಕ ಅಂತರದೊಂದಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವಂತೆ ತಿಳಿಸಿದರು. ಈ
ಸುರತ್ಕಲ್ ಭಾಗದಲ್ಲಿ ಹಲವು ಸಮಯಗಳಿಂದ ಭಿಕ್ಷಾಟನೆಯ ಮಾಡುತ್ತಾ ಸಾರ್ವಜನಿಕರಿಗೆ ತೊಂದರೆಯನ್ನು ನೀಡುತ್ತಿದ್ದು ಇದರ ಬಗ್ಗೆ ಹಲವಾರು ಬಾರಿ ಆಪತ್ಭಾಂಧವ ಸಮಾಜ ಸೇವಾ ಸಂಘ(ರಿ.) ಸುರತ್ಕಲ್ ವಿವಿಧ ಇಲಾಖೆಗಳ ಗಮನಕ್ಕೆ ತಂದಿದ್ದರೂ ಅದರ ಬಗ್ಗೆ ಯಾವುದೇ ತರಹದ ಕ್ರಮ ಕೈಗೊಂಡಿಲ್ಲ. ಸುರತ್ಕಲ್ ನಲ್ಲಿ ಹಲವಾರು ದಾನಿಗಳ ನೆರವಿನಿಂದ ಫ್ಲೈ ಓವರ್ ಅಡಿಯನ್ನು ಸ್ವಚ್ಛ ಭಾರತದ ಯೋಜನೆಯಡಿಯಲ್ಲಿ ಸ್ವಚ್ಛ ಸುರತ್ಕಲ್ ಎಂಬ ಯೋಜನೆಯೊಂದಿಗೆ ನಿರ್ಮಿಸಲಾಗಿದ್ದ ಫ್ಲೈ ಓವರ್ ಅಡಿಯಲ್ಲಿ
ಒಲಿಂಪಿಕ್ಸ್‌ನ ಮೊದಲ ದಿನದಂದು ಪದಕದ ಬೇಟೆ ಆರಂಭಿಸಿದೆ. ಮಹಿಳೆಯರ 49 ಕೆಜಿ ವಿಭಾಗದ ವೇಟ್ ಲಿಫ್ಟಿಂಗ್ ನಲ್ಲಿ ಮೀರಾಬಾಯಿ ಚಾನು ಬೆಳ್ಳಿ ಗೆದ್ದರು. ವೇಟ್‌ಲಿಫ್ಟಿಂಗ್‌ನಲ್ಲಿ ಬೆಳ್ಳಿ ಗೆದ್ದ ಮೊದಲ ಭಾರತೀಯ ವೇಟ್ ಲಿಫ್ಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಚೀನಾದ ಝಿಹುಯಿ ಸ್ನ್ಯಾಚ್ ಹಾಗೂ ಕ್ಲೀನ್ ಮತ್ತು ಜೆರ್ಕ್ ಎರಡರಲ್ಲೂ ಒಲಿಂಪಿಕ್ ದಾಖಲೆಯೊಂದಿಗೆ ಚಿನ್ನ ಗೆದ್ದಿದ್ದಾರೆ. ಕ್ಲೀನ್ ಹಾಗೂ ಜರ್ಕ್ ನಲ್ಲಿ ಒಟ್ಟು 110 ಕೆಜಿ ಎತ್ತಿ ಹಿಡಿದಿರುವ ಭಾರತದ
ಜಿಟಿ ಜಿಟಿ ಮಳೆ. ತುಂಬಿ ಹರಿಯುತ್ತಿರುವ ಸೌಪರ್ಣಿಕೆ. ಆ ಭಾಗದ ಮಕ್ಕಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಬೇಕೆಂದರೆ ತುಂಬಿ ಹರಿಯುವ ನದಿಯನ್ನು ದೋಣಿ ಮೂಲಕ ದಾಟಿ ಜೀವವನ್ನು ಪಣಕ್ಕಿಟ್ಟು ಪರೀಕ್ಷೆಯನ್ನು ಬರೆಯಬೇಕು. ಆದರೆ ಮಕ್ಕಳ ಸುರಕ್ಷತೆಗಾಗಿ ಖುದ್ದು ಡಿಡಿಪಿಐ ಉಡುಪಿಯಿಂದ ಬಂದು ಪರೀಕ್ಷಾ ಕೇಂದ್ರಕ್ಕೆ ದೋಣಿಯ ಮೂಲಕ ಮಕ್ಕಳನ್ನು ಕರೆದೊಯ್ದ ಅಪರೂಪದ ಸ್ಟೋರಿಯನ್ನು ನಾವಿವತ್ತು ನಿಮ್ಮ ಮುಂದೆ ಇಡುತ್ತಿದ್ದೇವೆ ನೋಡಿ.. ಒಂದೆಡೆ ಜಿಟಿಜಿಟಿ ಮಳೆಯಲಿ ನೆನೆದು
ಸರ್ಕಾರಿ ಹಾಸ್ಟೆಲ್‍ಗಳಲ್ಲಿ ಈ ಕೂಡಲೇ ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಮತ್ತು ವಿದ್ಯಾರ್ಥಿಗಳಿಗೆ ಬಸ್ ಪಾಸ್ ಸೌಲಭ್ಯ ಒದಗಿಸಬೇಕೆಂದು ಆಗ್ರಹಿಸಿ, ಮಂಗಳೂರಲ್ಲಿ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ನಗರದ ಮಿನಿವಿಧಾನಸೌಧ ಮುಂಭಾಗದಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಇನ್ನು ರಾಜ್ಯದ ಅನೇಕ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಹಾಸ್ಟೆಲ್‍ಗಳಿಗೆ ಅವಲಂಬಿತರಾಗಿರುವುದರಿಂದ ರಾಜ್ಯದ ಹಿಂದುಳಿದ ವರ್ಗ, ಸಮಾಜ ಕಲ್ಯಾಣ ಮತ್ತು
ಕಿಕ್ಕಿರಿದು ತುಂಬಿದ್ದ ಬಸ್ ಚಲಾಯಿಸಿಕೊಂಡು ಹೋಗುತ್ತಿದ್ದ ವೇಳೆ ಬಸ್ ಚಾಲಕನಿಗೆ ರಕ್ತ ಒತ್ತಡ ಕಡಿಮೆಯಾದ ಪರಿಣಾಮ ಸ್ಟೇರಿಂಗ್ ಮೇಲ್ಗಡೆಯೇ ಉರುಳಿ ಬಿದ್ದ ಘಟನೆ ನಗರ ಹೊರವಲಯದ ಅಡ್ಯಾರ್ ನಲ್ಲಿ ನಡೆದಿದ್ದು ಪ್ರಯಾಣಿಕರು ಅದೃಷ್ಟವಶಾತ್ ಅಪಾಯದಿಂದ ಪಾರಾಗಿದ್ದಾರೆ. ಪುತ್ತೂರಿನಿಂದ ಮಂಗಳೂರಿನ ಸ್ಟೇಟ್ ಬ್ಯಾಂಕಿಗೆ ಬರುತ್ತಿದ್ದ ಸೇಫ್ ವೇ ಟ್ರಾವೆಲ್ಸ್ ಹೆಸರಿನ ಖಾಸಗಿ ಬಸ್ ಅಡ್ಯಾರ್ ಸಮೀಪಿಸುತ್ತಿದ್ದಂತೆ ಚಾಲಕನಿಗೆ ಕಣ್ಣು ಮಂಜಾಗಿದ್ದು ತಕ್ಷಣ ಬಸ್
ರಾಜ್ಯದಲ್ಲಿ ಶಾಲಾರಂಭಕ್ಕೆ ರಾಜ್ಯ ಸರಕಾರ ಚಿಂತನೆಯನ್ನು ನಡೆಸಿದೆ. ಈ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರ ವರದಿ ಕೈ ಸೇರಲಿದ್ದು, ನಂತರದಲ್ಲಿ ಶಾಲಾರಂಭದ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಬೆಂಗಳೂರಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಶಾಲಾರಂಭ ಮಾಡುವ ಹಿನ್ನೆಲೆಯಲ್ಲಿ ಸಾಧಕ ಬಾಧಕಗಳ ಕುರಿತು ಶಿಕ್ಷಣ ಇಲಾಖೆಯ ಆಯುಕ್ತರು ಅಧ್ಯಯನ ನಡೆಸುತ್ತಿದ್ದು,
ಹುತಾತ್ಮ ದಿನಾಚರಣೆಯ ಅಂಗವಾಗಿ ಐತಿಹಾಸಿಕ ನರಗುಂದ ಬಂಡಾಯದ ಹೋರಾಟ ಮುಗಿಸಿ ವಾಪಸ್ ಹಾಸನಕ್ಕೆ ತೆರಳುತ್ತಿದ್ದಾಗ ಸಂಭವಿಸಿದ ಕಾರು ಅಪಘಾತದಲ್ಲಿ ಹಿರಿಯ ರೈತ ಮುಖಂಡರಾದ ಜಿ.ಟಿ ರಾಮಸ್ವಾಮಿ ಮತ್ತು ಚನ್ನಪಟ್ಟಣ ರಾಮಣ್ಣನವರು ನಿಧನರಾಗಿದ್ದಾರೆ. ಚಿಕ್ಕಮಗಳೂರು ಬಳಿ ಅಪಘಾತ ಸಂಭವಿಸಿದ್ದು ತಕ್ಷಣವೇ ಅವರನ್ನು ಚಿಕ್ಕಮಗಳೂರು ಜಿಲ್ಲಾ ಆಸ್ಪತ್ರೆಗೆ ಸೇರಿಸಲಾಯಿತಾದರೂ ಅವರು ಬದುಕುಳಿಯಲಿಲ್ಲ.ಅವರೊಡನಿದ್ದ ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ರವಿಕಿರಣ್ ಪುಣಚರವರಿಗೆ
ಗುಂಡ್ಯ: ಎಡೆಬಿಡದೆ ಸುರಿದ ಭಾರಿ ಮಳೆಯಿಂದಾಗಿ ಸಕಲೇಶಪುರ ತಾಲೂಕಿನ ದೋಣಿಗಾಲ್ ಬಳಿಯ ರಾಷ್ಟ್ರೀಯ ಹೆದ್ದಾರಿ 75 ಬಳಿ ಭೂಕುಸಿತವಾಗಿದೆ. ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆ ಇದಾಗಿದೆ. ಪ್ರಸಿದ್ದ ಪುಣ್ಯ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳ, ಸೌತ್ತಡ್ಕ ಕ್ಷೇತ್ರಕ್ಕೆ ಭೇಟಿ ನೀಡುವ ವಾಹನದ ಚಾಲಕರು ಪರಾಡುತ್ತಿರುವ ಮಾಹಿತಿ ಲಭಿಸಿದೆ. ಇನ್ನು ಮುಂಜಾಗೃತವಾಗಿ ಗುಂಡ್ಯ ಚೆಕ್ ಪೋಸ್ಟ್ ಗಳಲ್ಲಿಯೇ ವಾಹನಗಳಿಗೆ ತಡೆ

















