ಪುತ್ತೂರು: ದ.ಕ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಯವರು ಲಾಕ್‌ಡೌನ್ ನಿಯಮಗಳನ್ನು ಬಿಗಿಗೊಳಿಸುವಂತೆ ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಪುತ್ತೂರು ತಹಸೀಲ್ದಾರ್ ರಮೇಶ್ ಬಾಬು ಮತ್ತು ನಗರಸಭೆ ಪೌರಾಯುಕ್ತ ಮಧು ಎಸ್.ಎಮ್ ರವರು ಕಾರ್ಯಾಚರಣೆಗೆ ಇಳಿದಿದ್ದಾರೆ. ಅನಗತ್ಯವಾಗಿ ತಿರುಗಾಡುತ್ತಿರುವ ವಾಹನಗಳಿಗೆ ಪುತ್ತೂರು ಪೊಲೀಸರ ಸಹಕಾರದೊಂದಿಗೆ ಅವರು ಕಡಿವಾಣ
ವಿವಾಹ ನಿಶ್ಚಿತಾರ್ಥಗೊಂಡಿದ್ದ 25 ರ ಹರೆಯದ ಯುವತಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ಹೊರವಲಯ ಈಶ್ವರಮಂಗಲ ಸಮೀಪದಿಂದ ವರದಿಯಾಗಿದೆ. ಕಾಸರಗೋಡು ಜಿಲ್ಲೆಯ ನೆಟ್ಟನಿಗೆ ಗ್ರಾಮದ ಕುಳದಪಾರೆ ಸಮೀಪದ ನಿದಿಯಡ್ಕದ ಸುಬ್ಬಣ್ಣ ನಾಯ್ಕ ಎಂಬವರ ಪುತ್ರಿ ಪ್ರಿಯಾ ಆತ್ಮಹತ್ಯೆ ಮಾಡಿಕೊಂಡವರು. ಇವರಿಗೆ ಈಗಾಗಲೇ ವಿವಾಹ ನಿಶ್ಚಿತಾರ್ಥವಾಗಿದ್ದೂ ಕಳೆದ ಮೇ ತಿಂಗಳಿನಲ್ಲಿ ವಿವಾಹಕ್ಕೆ ದಿನಾಂಕ ನಿಗದಿಯಾಗಿತ್ತು . ಲಾಕ್ ಡೌನ್ ಹೇರಲ್ಪಟ್ಟ
ಅನಾರೋಗ್ಯದಿಂದ ಬಳಲುತ್ತಿದ್ದ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿ ನಿಧರಾಗಿದ್ದಾರೆ. ಅವರಿಗೆ 85ವರ್ಷ ವಯಸ್ಸಾಗಿತ್ತು. ಕಳೆದ ಕೆಲ ದಿನಗಳಿಂದ ರಕ್ತ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಸಿಎಂ ಉದಾಸಿ ಈಶ್ವರಪ್ಪ, ಗೃಹ ಸಚಿವ ಬೊಮ್ಮಾಯಿ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ . 1983 ರಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಗೆಲುವು
ಕುಂದಾಪುರ: ಮಹಾಮಾರಿ ಕೊರೋನಾ ಹೊಡೆದುರುಳಿಸಲು ಸರ್ಕಾರ ಇಷ್ಟೊಂದು ಪ್ರಮಾಣದಲ್ಲಿ ಗಟ್ಟಿಯಾಗಿ ನಿಂತಿದೆ. ಕಾರ್ಯಪಡೆಯವರು ಮನೆಮನೆಗೆ ಭೇಟಿ ನೀಡಿ, ಸಭೆ ನಡೆಸಿ ಶ್ರಮ ಹಾಕಿದ್ದರಿಂದಾಗಿ ನಿಮ್ಮ ವ್ಯಾಪ್ತಿಯಲ್ಲಿ 80ರಷ್ಟಿದ್ದ ಪಾಸಿಟಿವ್ ಪ್ರಕರಣ ಈಗ 8ಕ್ಕೆ ಬಂದು ತಲುಪಿದೆ. ಈ ಸಂಖ್ಯೆ ಶೂನ್ಯಕ್ಕಿಳಿದು ತಲ್ಲೂರು ಗ್ರಾಮಪಂಚಾಯತ್ ಶೀಘ್ರವೇ ಕೊರೋನಾ ಮುಕ್ತವಾಗಬೇಕು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಇಲ್ಲಿಗೆ ಸಮೀಪದ ತಲ್ಲೂರಿನ ಅಂಬೇಡ್ಕರ್
ಕುಂದಾಪುರ: ಸರ್ಕಾರ ಹೊರಡಿಸಿರುವ ನಿಯಮಗಳ ಪ್ರಕಾರವಾಗಿಯೇ ಲಸಿಕೆ ಹಂಚಿಕೆಯಾಗುತ್ತಿದೆ. ರಾಜಕೀಯ ಪಕ್ಷವಾಗಿ ಭಾರತೀಯ ಜನತಾ ಪಾರ್ಟಿ ಅಧಿಕಾರದಲ್ಲಿರುವಾಗ ಕೆಲವರಿಗೆ ಬಿಜೆಪಿಯವರು ಲಸಿಕೆ ಕೊಡುತ್ತಿದ್ದಾರೆ ಎಂದು ಅನಿಸಿರಬಹುದು. ಇದರಲ್ಲಿ ಯಾವುದೇ ಗೊಂದಲಗಳಿಲ್ಲ. ಲಸಿಕೆ ಹಂಚಿಕೆ ಪಾರದರ್ಶಕವಾಗಿಯೇ ನಡೆಯುತ್ತಿದೆ ಎಂದು ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟಪಡಿಸಿದರು. ಮಂಗಳವಾರ ತಲ್ಲೂರು ಗ್ರಾ.ಪಂ ನಲ್ಲಿ ನಡೆದ ಕೋವಿಡ್ ಟಾಸ್ಕ್‌ಫೋರ್ಸ್ ಸಭೆಯ
ಉಡುಪಿ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದ ಉದ್ಯಮಿ ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣ ತೀರ್ಪು ಇಂದು ಪ್ರಕಟಗೊಂಡಿದ್ದು, ಮೂವರು ಪ್ರಮುಖ ಆರೋಪಿಗಳು ದೋಷಿಗಳೆಂದು ಉಡುಪಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ನ್ಯಾಯಾಧೀಶ ಸುಬ್ರಹ್ಮಣ್ಯ ಜೆ.ಎನ್ ತೀರ್ಪು ನೀಡಿದ್ದಾರೆ. ಬಾಸ್ಕರ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳು ರಾಜೇಶ್ವರಿ ಶೆಟ್ಟಿ, ರಾಜೇಶ್ವರಿ ಶೆಟ್ಟಿ ಮಗ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ಆರೋಪಿಗಳಾಗಿದ್ದರು. ಆರೋಪಿಗಳು ದೋಷಿ ಎಂದು ನ್ಯಾಯಾಲಯ
ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ನಡೆಸಲಾಗುವ ಸಿಇಟಿ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿದ್ದು, ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಇಂದು ನಡೆದ ಸಭೆ ಬಳಿಕ ಮಾತನಾಡಿದ ಅವರು, ಜೂನ್ 15ರಿಂದ ಸಿಇಟಿ ನೋಂದಣಿ ಆರಂಭವಾಗಲಿದೆ. ಆಗಸ್ಟ್ 28 ಹಾಗೂ ಆಗಸ್ಟ್ 29ರಂದು ಸಿಇಟಿ ನಡೆಯಲಿದ್ದು, ಮೊದಲ ದಿನ ಗಣಿತ, ಜೀವಶಾಸ್ತ್ರ ಪರೀಕ್ಷೆಗಳು ನಡೆಯುತ್ತದೆ. ಎರಡನೇ ದಿನ ರಸಾಯನಶಾಸ್ತ್ರ,
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಈಗಾಗಲೇ ಜಿಲ್ಲಾಧಿಕಾರಿಗಳು ಕಠಿಣ ನಿಯಮಗಳನ್ನು ಜಾರಿಗೊಳಿಸಿದ್ದು, ತೊಕ್ಕೊಟ್ಟುವಿನಲ್ಲಿ ಉಳ್ಳಾಲ ಪೊಲೀಸರಿಂದ ಬಿಗು ತಪಾಸಣೆ ಕೈಗೊಂಡಿದ್ದಾರೆ. ಉಳ್ಳಾಲ ಪಿಎಸ್‌ಐ ರೇವಣ್ಣ ಸಿದ್ದಯ್ಯ ಅವರ ನೇತೃತ್ವದಲ್ಲಿ ತಪಾಸಣೆ ನಡೆಸುತ್ತಿದ್ದಾರೆ. ಹಲವು ವಾಹನಗಳನ್ನು ಪೊಲೀಸರು ಸೀಝ್ ಮಾಡಿದ್ದಾರೆ.
ಆಲೂರು ತಾಲ್ಲೂಕಿನಲ್ಲಿ ಇತ್ತೀಚೆಗೆ ಅತಿ ಹೆಚ್ಚಾಗಿ ಅಕ್ರಮ ಮರಳುಗಾರಿಕೆ ಹೆಚ್ಚಾಯಿತು. ತಾಲೂಕಾಡಳಿತ ಮತ್ತು ಪೊಲೀಸ್ ಅಧಿಕಾರಿಗಳು ಕಂಡು ಕಾಣದಂತೆ ಕಣ್ಮುಚ್ಚಿ ಕುಳಿತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಘಟಕದ ಅಧ್ಯಕ್ಷ ನಟರಾಜ್ ಹೇಳಿದರು. ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿ ಈ ಹಿಂದೆ ಮರಳುಗಾರಿಕೆ ನಡೆಸುತ್ತಿದ್ದ ರಸ್ತೆಗಳು ಸರ್ಕಾರದಿಂದ ಅನುಮತಿ ಪಡೆದು ಬೆಂಗಳೂರಿನಲ್ಲಿಯೇ ನೆಲೆಸಿದ್ದರು. ಆದರೆ ಇತ್ತೀಚೆಗೆ ಅಕ್ರಮ ಮರಳುಗಾರಿಕೆ
ಕುಂದಾಪುರ: ಆಕಸ್ಮಾತ್ ಸೌಕೂರು ಏತ ನೀರಾವರಿ ಯೋಜನೆಯ ಮೂಲನಕ್ಷೆ ಬದಲಾವಣೆಯಾಗಿದೆ ಎಂದಾದರೆ ಈ ಬಗ್ಗೆ ಪರಿಶೀಲನೆ ಮಾಡೋಣ. ಕುಡಿಯಲು ಹಾಗೂ ಕೃಷಿಗೆ ನೀರು ನೀಡಲು ಸೌಕೂರು ಹಾಗೂ ಸಿದ್ದಾಪುರ ಎರಡು ಯೋಜನೆಗಳು ಆಗಬೇಕು ಎನ್ನುವುದು ನಮ್ಮ ಉದ್ದೇಶ ಎಂದು ಸಂಸದ ಬಿವೈ ರಾಘವೇಂದ್ರ ಹೇಳಿದರು. ಇಲ್ಲಿನ ಹೆಮ್ಮಾಡಿಯ ಜ್ಯೂವೆಲ್ ಪಾರ್ಕ್ನ ಜಯಶ್ರೀ ಸಭಾಂಗಣದಲ್ಲಿ ಸೋಮವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಜಿ ಶಾಸಕ ಗೋಪಾಲ ಪೂಜಾರಿಯವರ ಆರೋಪಗಳ ಬಗ್ಗೆ ಪತ್ರಕರ್ತರು ಗಮನ ಸೆಳೆದಾಗ