Home Posts tagged #v4news karnataka (Page 4)

ಮಂಗಳೂರು : ಡಿ.14ರಂದು ಉಚಿತ ವೃತ್ತಿ ಜಾಗೃತಿ ಕಾರ್ಯಾಗಾರ

ಭಾರತದ ಟ್ರೆಂಡಿಂಗ್ ಕೆರಿಯರ್ ಗೈಡೆನ್ಸ್ ಪ್ಲಾಟ್ಫಾರ್ಮ್ ಮತ್ತು ಮಂಗಳೂರಿನ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ನ ಸಹಯೋಗದೊಂದಿಗೆ “ಡ್ರಾ ಮೈ ಕೆರಿಯರ್” ವೃತ್ತಿ ಜಾಗೃತಿ ಕಾರ್ಯಾಗಾರವು ಡಿ.14 ರಂದು ನಗರದ ಐಎಂಎ ಸಭಾಂಗಣದಲ್ಲಿ ನಡೆಸುತ್ತಿದೆ.ಕಾರ್ಯಾಗಾರವು 9,10, ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿಗಳು ಮತ್ತು ಅವರ ಪೋಷಕರ ಅಭಿರುಚಿಯನ್ನು ಅರ್ಥಮಾಡಿಕೊಳ್ಳಲು ಮತ್ತು ವೃತ್ತಿ ಅವಕಾಶಗಳ ಬಗ್ಗೆ ಮಾರ್ಗದರ್ಶನ ನೀಡುವ ಗುರಿಯನ್ನು ಹೊಂದಿದೆ.ಐಐಎಂ

Big Breaking: ಭಾರತದ ಹೆಮ್ಮೆಯ ಉದ್ಯಮಿ ರತನ್‌ ಟಾಟಾ ಇನ್ನಿಲ್ಲ

ಭಾರತದ ಹೆಮ್ಮೆಯ ಹಾಗೂ ಮಧ್ಯಮ ವರ್ಗದ ಪ್ರೀತಿಯ ರತನ್‌ ಟಾಟಾ ಅವರು ಇನ್ನಿಲ್ಲ. ರತನ್‌ಟಾಟಾ ಅವರು ಬುಧವಾರ ತಡರಾತ್ರಿ ಮೃತಪಟ್ಟಿದ್ದಾರೆ. ಅವರ ಆರೋಗ್ಯ ಗಂಭೀರವಾಗಿದೆ ಎಂದು ಬುಧವಾರ ಸಂಜೆಯಷ್ಟೇ ಸುದ್ದಿಯಾಗಿತ್ತು. ರಾತ್ರಿ ವೇಳೆಗೆ ಅವರು ನಮ್ಮನ್ನೆಲ್ಲ ಅಗಲಿದ್ದಾರೆ. ದೇಶದ ಪ್ರಮುಖ ಉದ್ಯಮಗಳಲ್ಲಿ ಒಂದಾಗಿರುವ ಹಾಗೂ ಭಾರತೀಯರೊಂದಿಗೆ ಆತ್ಮೀಯ ಒಡನಾಟವನ್ನು ಹೊಂದಿರುವ ಟಾಟಾ ಸನ್ಸ್‌ನ ಅಧ್ಯಕ್ಷರಾದ ರತನ್ ಟಾಟಾ ಅವರ ಆರೋಗ್ಯ ಗಂಭೀರವಾಗಿದೆ ಎನ್ನುವ ಸುದ್ದಿಯನ್ನೇ

ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು

ಜೆಸಿಐ ಭಾರತದ ವಲಯ 15 ರ 2024 ರ ಸಾಲಿನಲ್ಲಿ ಕೊಡಮಾಡುವ ಈ ವರ್ಷದ ಅತ್ತ್ಯುತ್ತಮ ತರಬೇತುದಾರ ಪ್ರಶಸ್ತಿ ಗೆ ಜೆಸಿಐ ರಾಷ್ಟ್ರೀಯ ತರಬೇತುದಾರ ಸುಧಾಕರ್ M ಪೂಜಾರಿ ಕಾರ್ಕಳ ರವರು ಭಾಜನರಾದರು ಜೇಸಿ ಸುಧಾಕರ್ ಪೂಜಾರಿ ಯವರು 2007 ರಿಂದ ವ್ಯಕ್ತಿತ್ವ ವಿಕಸನ ತರಬೇತುಧಾರರಾಗಿ ವಿದ್ಯಾರ್ಥಿಗಳಿಗೆ ಶಿಕ್ಷಕರಿಗೆ, ಉದ್ಯಮಿಗಳಿಗೆ ಜೇಸಿ loins ರೋಟರಿ ಸದಸ್ಯರಿಗೆ, ವಿವಿಧ ಸಂಘ ಸಂಸ್ಥೆಗಳಿಗೆ ವ್ಯಕ್ತಿತ್ವ ವಿಕಸನ, ಉಧ್ಯಮ ವಿಕಾಸನಕ್ಕೆ ಪೂರಕ ತರಬೇತಿಗಳನ್ನು ನೀಡುತಾ

ಪಡುಬಿದ್ರಿ: ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ವರ್ಷಾಚರಣೆ

ಬಿಲ್ಲವರ ಸಂಘದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ವರ್ಷಾಚರಣೆಯನ್ನು ಬಹಳ ವಿಜ್ರಂಬಣೆಯಿಂದ ಆಚರಿಸಲಾಯಿತು.ಈ ಬಾರಿ ನಾರಾಯಣ ಗುರುಗಳ ಮೂರ್ತಿಯನ್ನು ಪಾದೆಬೆಟ್ಟು ಧೂಮಾವತಿ ದೈವಸ್ಥಾನದಿಂದ ಶೋಭಾಯಾತ್ರೆಯ ಮೂಲಕ ಹೆದ್ದಾರಿ ಕನ್ನಾಂಗಾರು ಬ್ರಹ್ಮ ಬೈದರ್ಕಳ ಗರೋಡಿಯವರಗೆ ಸಾಗಿ ಅಲ್ಲಿಂದ ಬಿಲ್ಲವರ ಸಂಘದ ಬಳಿಯ ನಾರಾಯಣ ಗುರು ಮಂದಿರಕ್ಕೆ ಬರಲಿದೆ. ಶೋಭಾಯಾತ್ರೆಯಲ್ಲಿ ಕುಣಿತ ಭಜನೆ ಕೊಂಬು ವಾದ್ಯಘೋಷ ವಿಶೇಷವಾಗಿದ್ದು.ಆ ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ

ಮೂಡುಬಿದಿರೆಯಲ್ಲಿ ಗಾಳಿ ಮಳೆಯ ಅವಾಂತರ

ಮೂಡುಬಿದಿರೆ ತಾಲೂಕಿನ ಪುರಸಭಾ ವ್ಯಾಪ್ತಿಯಲ್ಲಿ ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರಗಳು ಮತ್ತು ವಿದ್ಯುತ್ ತಂತಿಗಳು ಧರೆಗುರುಳಿದ್ದಲ್ಲದೆ ಹಲವಾರು ಮನೆಗಳಿಗೆ ಹಾನಿಯುಂಟ್ಟಾಗಿ ಲಕ್ಷಾಂತರ ರೂ ನಷ್ಟ ಸಂಭವಿಸಿದ ಘಟನೆ ನಡೆದಿದೆ. ಒಂಟಿಕಟ್ಟೆ, ಸ್ವರಾಜ್ಯಮೈದಾನ ಪರಿಸರ, ಮಾಸ್ತಿಕಟ್ಟೆ ಪ್ರದೇಶಗಳಲ್ಲಿ ಸಂಜೆ ಮಳೆಯೊಂದಿಗೆ ಭಾರೀ ಗಾಳಿ ಬೀಸಿದ್ದು ೧೫ಕ್ಕೂ ಅಧಿಕ ವಿದ್ಯುತ್ ಕಂಬಗಳು ಧರೆಗುರಿಳಿವೆ ಹಾಗೂ ಸ್ವರಾಜ್ಯ ಮೈದಾನದ ಬಳಿಯಿರುವ ಪತ್ರಕರ್ತ ಧನಂಜಯ

ನೀಟ್ ಫಲಿತಾಂಶ, ರಾಜಸ್ತಾನ, ಗುಜರಾತ್, ತಮಿಳುನಾಡು ಉತ್ತಮ ಸಾಧನೆ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ವಲಯವಾರು ನೀಟ್ ಫಲಿತಾಂಶ ಪ್ರಕಟವಾಗಿದ್ದು ರಾಜಸ್ತಾನ, ಗುಜರಾತ್ ಮತ್ತು ತಮಿಳುನಾಡಿನ ಕೆಲವು ಪ್ರದೇಶಗಳು ಉತ್ತಮ ಸಾಧನೆ ಮಾಡಿವೆ. ಹರಿಯಾಣದ 720ಕ್ಕೆ 720 ಪಡೆದಿದ್ದ ಒಬ್ಬರು ಕೂಡ ಮತ್ತೆ ಆ ಸಾಧನೆ ಪಡೆದಿಲ್ಲ. 700ಕ್ಕೆ ಮೇಲೆ ಅಂಕ ಗಳಿಸಿದವರಿಗೆ ಮರು ಪರೀಕ್ಷೆ ನಡೆಸಲಾಗಿತ್ತು. ನೀಟ್ ಫಲಿತಾಂಶದಂತೆ 2,250 ಮಂದಿ ಸೊನ್ನೆ ಅಂಕ ಪಡೆದಿದ್ದಾರೆ ಮತ್ತು 9,400 ವಿದ್ಯಾರ್ಥಿಗಳು ನಕಾರಾತ್ಮಕ ಅಂಕ ಪಡೆದಿದ್ದಾರೆ. ಪ್ರಶ್ನೆಪತ್ರಿಕೆ

ವಿಜಯ ಅಮೃತರಾಜ್, ಲಿಯಾಂಡರ್‌ರಿಗೆ ಸಾಧನೆಗೆ ಪುರಸ್ಕಾರ

ಭಾರತದ ಪ್ರಸಿದ್ಧ ಟೆನ್ನಿಸ್ ಆಟಗಾರರಾದ ವಿಜಯ ಅಮೃತರಾಜ್ ಮತ್ತು ಲಿಯಾಂಡರ್ ಪಯಸ್‌ರಿಗೆ ಅಂತರರಾಷ್ಟ್ರೀಯ ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಸಂದಿದೆ. ಟೆನ್ನಿಸ್ ಆಟಗಾರರಾಗಿ ಲಿಯಾಂಡರ್ ಪಯಸ್ ಮತ್ತು ಟೆನ್ನಿಸ್‌ಗೆ ನೀಡಿರುವ ಕೊಡುಗೆಗಾಗಿ ವಿಜಯ ಅಮೃತ್‌ರಾಜ್ ಅವರುಗಳಿಗೆ ಈ ಗೌರವ ಸಲ್ಲುತ್ತಿದೆ. ಇಲ್ಲಿಗೆ ೨೮ ದೇಶಗಳ ೨೬೭ ಜನರು ಟೆನ್ನಿಸ್ ಹಾಲ್ ಆಫ್ ಫೇಮ್ ಗೌರವ ಪಡೆದಂತಾಯಿತು ಎಂದು ಇಂಟರ್ನ್ಯಾಶನಲ್ ಟೆನ್ನಿಸ್ ಹಾಲ್ ಆಫ್ ಫೇಮ್ ಒಕ್ಕೂಟವು ತಿಳಿಸಿದೆ.ಟೆನ್ನಿಸ್

ಸುರತ್ಕಲ್ ಬಂಟರ ಸಂಘದಲ್ಲಿ ಸಸಿ ವಿತರಣೆ, ಸಾಧಕರಿಗೆ ಸನ್ಮಾನ

ಸುರತ್ಕಲ್: ಬಂಟರ ಸಂಘ ಸುರತ್ಕಲ್, ರೋಟರಿ ಕ್ಲಬ್ ಬೈಕಂಪಾಡಿ ಹಾಗೂ ಸುಭಾಷಿತ ನಗರ ರೆಸಿಡೆಂಟ್ಸ್ ವೆಲ್ಫೇರ್ ಅಸೋಸಿಯೇಷನ್ ಸುರತ್ಕಲ್ ಇದರ ಸಹಯೋಗದಲ್ಲಿ ಮೇಬೈಲು ಸದಾಶಿವ ಶೆಟ್ಟಿ ನೇತೃತ್ವದಲ್ಲಿ 15ನೇ ವರ್ಷದ ಸಸಿ ವಿತರಣಾ ಕಾರ್ಯಕ್ರಮ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದವರಿಗೆ ಗೌರವಾರ್ಪಣೆ ಕಾರ್ಯಕ್ರಮ ಇಲ್ಲಿನ ಬಂಟರ ಭವನದಲ್ಲಿ ಜರುಗಿತು. ಉದ್ಘಾಟನೆಯನ್ನು ನೆರವೇರಿಸಿ ಮಾತಾಡಿದ ವಿ.ಕೆ ಸಮೂಹ ಸಂಸ್ಥೆ ಮುಂಬಯಿ ಇದರ ಸಿಎಂಡಿ ಕರುಣಾಕರ ಎಂ. ಶೆಟ್ಟಿ

ಶಾಸಕರಾದ ಗುರುರಾಜ್ ಗಂಟಿಹೊಳೆ ಗುಜ್ಜಾಡಿ ನಾಯಕವಾಡಿ ಕಡಲ ಕೊರೆತ ವೀಕ್ಷಣೆ

ಬೈಂದೂರು; ಶಾಸಕರಾದ ಗುರುರಾಜ್ ಗಂಟಿಹೊಳೆ ಅವರು ತ್ರಾಸಿ ಗ್ರಾಮ ಪಂಚಾಯಿತ ವ್ಯಾಪ್ತಿಯ ಗುಜ್ಜಾಡಿ, ನಾಯಕವಾಡಿ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಸಮುದ್ರ ಅಲೆಗಳ ಆರ್ಭಟದಿಂದ ಉಂಟಾದ ಕಡಲ ತೀರದ ಹಾನಿಗಳ ಕುರಿತು‌ ಸ್ಥಳೀಯರು ಹಾಗೂ ಊರಿನ ಪ್ರಮುಖರಿಂದ ಮಾಹಿತಿ ಪಡೆದು. ತುರ್ತು ಪರಿಹಾರದ ಕಾರ್ಯ ಬಗ್ಗೆ ಮುಂಜಾಗ್ರತಾ ಕ್ರಮದ ಕುರಿತು ಚರ್ಚೆ ನಡೆಸಿದರು. ಕಡಲ್ಕೊರೆತ ಸಮಸ್ಯೆಗೆ ಶಾಶ್ವತ ಪರಿಹಾರಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ‌ಸರಕಾರದ