Home Posts tagged #v4news karnataka (Page 44)

ಕೂಳೂರಿನ ಮೇಲ್ಸೇತುವೆ ತಳಭಾಗ ಸುಂದರೀಕರಣ :ಫೆ.9ಕ್ಕೆ ಲೋಕಾರ್ಪಣೆ ಕಾರ್ಯಕ್ರಮ

ಸುರತ್ಕಲ್: “ಕುಳೂರಿನ ಮೇಲ್ಸೇತುವೆ ತಳಭಾಗದಲ್ಲಿ ತ್ಯಾಜ್ಯ ರಾಶಿ ಬಿದ್ದು ಸಾರ್ವಜನಿಕರು ಓಡಾಡದ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದನ್ನು ಗಮನಿಸಿದ ನಾವು ನಾಗರಿಕ ಹಿತರಕ್ಷಣಾ ಸಮಿತಿ ಅಸ್ತಿತ್ವಕ್ಕೆ ತಂದು 1,100,00 ರೂ. ಖರ್ಚು ಮಾಡಿ ಫ್ಲೈ ಓವರ್ ಕೆಳಗಡೆ ಸುಂದರಗೊಳಿಸುವ ಕೆಲಸಕ್ಕೆ ಚಾಲನೆ ನೀಡಲಾಗಿದ್ದು, ಫೆಬ್ರವರಿ 9ರಂದು ಉದ್ಘಾಟನೆ ಕಾರ್ಯಕ್ರಮ

ಶಕ್ತಿನಗರದ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಆಹಾರ ಸೇವಿಸಿದ ಬಳಿಕ ವಿದ್ಯಾರ್ಥಿನಿಯರು ಅಸ್ವಸ್ಥ

ಊಟ ಸೇವಿಸಿದ ಬಳಿಕ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಘಟನೆ ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್ ನಲ್ಲಿ ನಡೆದಿದೆ. ಮಂಗಳೂರಿನ ಶಕ್ತಿನಗರದಲ್ಲಿರುವ ನರ್ಸಿಂಗ್ ಹಾಸ್ಟೆಲ್‍ನಲ್ಲಿ ಫುಡ್ ಪಾಯಿಸನ್ ನಿಂದಾಗಿ 137 ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು, ವಿದ್ಯಾರ್ಥಿನಿಯರನ್ನು ಮಂಗಳೂರಿನ ವಿವಿಧ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರ್ಥಿನಿಯರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗೆ ಮಂಗಳೂರು ಪೆÇಲೀಸ್

ತುಳುನಾಡಿನಲ್ಲೊಂದು ಅಪರೂಪದ ನವಗುಳಿಗ ದೈವದ ಗಗ್ಗರ ಸೇವೆ…!

ಬೆಳ್ತಂಗಡಿ : ದೈವಸ್ಥಾನಗಳಲ್ಲಿಕ್ಷೇತ್ರಪಾಲ ದೈವವಾಗಿ ಒಂದು ಅಥವಾ ಎರಡು ಗುಳಿಗ ದೈವದ ಸಾನಿಧ್ಯವಿರುವುದು ಮಾಮೂಲಿ. ಗುಳಿಗ ನೀಚನೂ, ಉಗ್ರನೂ ಆದ ದೈವ. ಇಂತಹ ಗುಳಿಗನ ಕೋಲ ನೋಡಲೆಂದು ಭಾರೀ ಜನಸ್ತೋಮವೇ ಸೇರುತ್ತದೆ. ಆದರೆ ಇಲ್ಲೊಂದು ಕಡೆಗಳಲ್ಲಿ ಒಂಬತ್ತು ಗುಳಿಗ ದೈವಗಳಿಗೆ ಒಂದೇ ಬಾರೀ ಕೋಲ ನಡೆಯುತ್ತದೆ. ಏನಿದರ ವಿಶೇಷವೆಂದು ನೋಡಲು ಈ ಸ್ಟೋರಿ ನೋಡಿ ಹೌದು.. ದೇವಿಯ ದೂತನಾಗಿರುವ ಗುಳಿಗನಿಗೆ ದೇವಿ ಆಲಯಗಳಲ್ಲಿ ಪ್ರತ್ಯೇಕ ಸಾನಿಧ್ಯವಿರುತ್ತದೆ. ಆದರೆ ದಕ್ಷಿಣ

ಮಂಗಳೂರು- ರಾಷ್ಟ್ರೀಯ ಶಿಕ್ಷಣ ನೀತಿ : ವಿಚಾರ ಸಂಕಿರಣ

ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಒಳಿತಾಗುವುದೇ ಎಂಬ ವಿಷಯದ ಬಗ್ಗೆ ವಿಚಾರ ಸಂಕಿರಣ ಮಂಗಳೂರಿನ ಬಲ್ಮಠ ಸಹೋದಯ ಸಭಾಂಗಣದಲ್ಲಿ ಭಾನುವಾರ ನಡೆಯಿತು.ಅಖಿಲ ಭಾರತ ಯುಜನ ಒಕ್ಕೂಟ , ಸಮದರ್ಶಿ ವೇದಿಕೆ , ಕರ್ನಾಟಕ ಥಿಯೋಲಾಜಿಕಲ್ ರಿಸರ್ಜ್ ಇನ್ಸಿಟ್ಯೂಟ್ ಸಹಯೋUದÀಲ್ಲಿ ವಿಚಾರಗೋಷ್ಠಿಯನ್ನು ನಡೆಯಿತು. ಹೊಸತು ಪತ್ರಿಕೆಯ ಸಂಪಾದಕ ಡಾ.ಸಿದ್ಧನಗೌಡ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆದ ಗೋಷ್ಠಿಯನ್ನು ಕೆ.ಟಿ.ಸಿ ಪ್ರಾಂಶುಪಾಲ ಪ್ರೊ.ಎಚ್.ಎಂ. ವಾಟ್ಸನ್ ಅವರು ಉದ್ಘಾಟಿಸಿದರು.

ಶೂದ್ರ ಶಿವ ನಾಟಕಕ್ಕೆ ಚಾಲನೆ, ರುದ್ರ ಥೇಟರ್ ಪ್ರಸ್ತುತ ಪಡಿಸಿದ ನಾರಾಯಣ ಗುರುಗಳ ಇತಿಹಾಸ ಬಿಂಬಿಸುವ ನಾಟಕ

ಮಂಗಳೂರಿನ ರುದ್ರ ಥೇಟರ್ ಪ್ರಸ್ತುತ ಪಡಿಸಿದ ಶೂದ್ರ ಶಿವ ನಾಟಕದ ಪಥಮ ಪ್ರದರ್ಶನ ಕುದ್ರೋಳಿ ಗೋಕರ್ಣನಾಥ ದೇವಸ್ಥಾನದ ಸಭಾಂಗಣದಲ್ಲಿ ರವಿವಾರ ನಡೆಯಿತು. ಶೂದ್ರ ಶಿವ ನಾಟಕದ ಪ್ರಥಮ ಪ್ರದರ್ಶನವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಬಿ. ಜನಾರ್ದನ ಪೂಜಾರಿ ಅವರು ನಗಾರಿ ಬಾರಿಸುವ ಮೂಲಕ ಉದ್ಘಾಟಿಸಿದರು. ಬ್ರಹ್ಮಶ್ರೀ ನಾರಾಯಣ ಗುರುಗಳ ತತ್ವ ಸಿದ್ಧಾಂತವನ್ನು ಪರಿಚಯಿಸುವ ಈ ನಾಟಕವನ್ನು ಖ್ಯಾತ ಯುವ ನಿರ್ದೇಶಕ ವಿದ್ದು ಉಚ್ಚಿಲ್ ಅವರು ನಿದೇರ್ಶನ ಮಾಡಿದ್ದಾರೆ. ಬಾಬು ಶಿವ

ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಪ್ರಾಮಣಿಕ ಪ್ರಯತ್ನ ಮಾಡ್ತೇವೆ : ಜಿ.ಎ ಶಂಸುದ್ದೀನ್ ಅಜ್ಜಿನಡ್ಕ

ಪುತ್ತೂರು:- ಕರ್ನಾಟಕ ರಾಜ್ಯದಲ್ಲಿ ಮುಂಬರಲಿರುವ ಸಾರ್ವತ್ರಿಕ ವಿಧಾನ ಸಭಾ ಚುನಾವಣೆಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೇ ಆದರೂ ನಾವೆಲ್ಲರೂ ಪಕ್ಷ ಮುಖ್ಯ ಎನ್ನುವ ನಿಟ್ಟಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಪ್ರಾಮಾಣಿಕವಾಗಿ ಗೆಲ್ಲಿಸಲು ಪ್ರಯತ್ನ ಮಾಡ್ತೇವೆ ಮತ್ತು ಸಂಘಟಿತರಾಗಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಲು ಪಣತೊಟ್ಟಿದ್ದೇವೆ ಎಂದು ದ.ಕ.ಜಿಲ್ಲಾ ಕಾಂಗ್ರೆಸ್ ಮಾಜಿ ಮಾಧ್ಯಮ ವಕ್ತಾರ ಜಿ.ಎ ಶಂಸುದ್ದೀನ್

ಅಮಿತ್ ಶಾ ಆಗಮನ ಹಿನ್ನಲೆ : ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಚಪ್ಪರಮುಹೂರ್ತ

ಪುತ್ತೂರಿನಲ್ಲಿ ಫೆ.10 ರಿಂದ ನಡೆಯುವ ಕೃಷಿಯಂತ್ರ ಮೇಳ ಹಾಗೂ ಕ್ಯಾಂಪ್ಕೋ ಸಂಸ್ಥೆಯ ಸುವರ್ಣ ಮಹೋತ್ಸವಕ್ಕೆ ಅಮಿತ್ ಶಾ ಭೇಟಿ ಹಿನ್ನಲೆಯಲ್ಲಿ ಸಭಾ ಕಾರ್ಯಕ್ರಮ ನಡೆಯುವ ತೆಂಕಿಲ ವಿವೇಕಾನಂದ ಶಾಲಾ ಮೈದಾನದಲ್ಲಿ ಸಭಾ ಕಾರ್ಯಕ್ರಮ ವೇದಿಕೆಗೆ ಗುದ್ದಲಿಪೂಜೆ ಚಪ್ಪರ ಮುಹೂರ್ತ ಸೋಮವಾರ ನಡೆಯಿತು. ಪುತ್ತೂರು ಶಾಸಕಸಂಜಿವ ಮಠಂದೂರು ಗುದ್ದಲಿ ಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಚನಿಲ ತಿಮಪ್ಪ ಶೆಟ್ಟಿ, ಬಿಜೆಪಿ ನಗರ ಮಂಡಲ

ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು: ಡಾ. ಜಗದೀಶ್ ಬಾಳ

ಉಜಿರೆ, : ಮುಂದಿನ ಪೀಳಿಗೆಯನ್ನು ಗಮನದಲ್ಲಿಟ್ಟುಕೊಂಡು ಮಾಡಿದ ಅಭಿವೃದ್ಧಿ ಮಾತ್ರ ಸುಸ್ಥಿರ ಅಭಿವೃದ್ಧಿ ಎಂದು ಪರಿಗಣಿಸಲ್ಪಡುತ್ತದೆ. ಪರಿಸರಕ್ಕೆ ಪೂರಕವಾಗಿ ಅಭಿವೃದ್ಧಿ ನಡೆಯಬೇಕು ಎಂದು ಬಲ್ಮಠದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್ ಬಾಳ ಹೇಳಿದರು. ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ

ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನ

ಉಜಿರೆ, ಫೆ.5: ಇಲ್ಲಿನ ಶ್ರೀ ಕೃಷ್ಣಾನುಗ್ರಹ ಸಭಾಭವನದ ಕುಂಬ್ಳೆ ಸುಂದರ ರಾವ್ ಪ್ರಾಂಗಣದ ಸಾರಾ ಅಬೂಬಕ್ಕರ್ ವೇದಿಕೆಯಲ್ಲಿ ನಡೆಯುತ್ತಿರುವ ಮೂರು ದಿನಗಳ ದ.ಕ. ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಕೊನೆಯ ದಿನವಾದ ರವಿವಾರದ ಕಾರ್ಯಕ್ರಮಗಳು ಮುಂಜಾನೆ ಉದಯರಾಗದೊಂದಿಗೆ ಪ್ರಾರಂಭಗೊಂಡವು.  ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಆಕಾಶವಾಣಿ ‘ಎ’ ಗ್ರೇಡ್ ಕಲಾವಿದ ಡಿ.ಬಿ. ಪ್ರಕಾಶ ದೇವಾಡಿಗ ಅವರು ಸ್ಯಾಕ್ಸೋಫೋನ್ ವಾದನದ ಮೂಲಕ ಭಕ್ತಿಭಾವದ

ಸಮ್ಮೇಳನಕ್ಕೆ ಮೆರಗು ನೀಡಿದ ‘ಕಲಾವೈಭವ’

ಉಜಿರೆ, : ದಕ್ಷಿಣ ಕನ್ನಡ ಜಿಲ್ಲಾ 25ನೆಯ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಶನಿವಾರ ಸಂಜೆ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಎಸ್ ಡಿ ಎಂ ಕಾಲೇಜಿನ ಕಲಾಕೇಂದ್ರದ ವಿದ್ಯಾರ್ಥಿಗಳು ‘ಕಲಾವೈಭವ’ ನೃತ್ಯದ ಮೂಲಕ ಕಲಾರಾಧಕರನ್ನು ರಂಜಿಸಿದರು. ಕಲಾಕೇಂದ್ರದ ಒಟ್ಟು 200 ಮಂದಿ ವಿದ್ಯಾರ್ಥಿಗಳು ತಂಡೋಪತಂಡವಾಗಿ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಿದರು. ಕೇರಳ ಶೈಲಿಯ ಮೋಹಿನಿಯಾಟ್ಟಂ, ಶಿವತಾಂಡವ ನೃತ್ಯ, ಗುಜರಾತಿನ ಗರ್ಬಾ ದಾಂಡ್ಯ, ಕಥಕ್ ಹೀಗೆ ವಿವಿಧ ರೀತಿಯ