ಮಂಗಳೂರಿನ ಬಿಜೈನ ಭಾರತೀನಗರದ ಶ್ರೀ ಕ್ಷೇತ್ರ ಬಲಿಪತೋಟ ಶ್ರೀ ದೈವರಾಜ ಬಬ್ಬುಸ್ವಾಮಿ ದೈವಸ್ಥಾನದ ಶ್ರೀ ದೈವರಾಜ ಬಬ್ಬುಸ್ವಾಮಿ ತನ್ನಿಮಾನಿಗ ಹಾಗೂ ಧೂಮಾವತಿ ಬಂಟ ಸಪರಿವಾರ ದೈವಗಳ ವರ್ಷಾವಧಿ ನೇಮೋತ್ಸವ ನವಕಲಶಾಭಿಷೇಕ ಜನವರಿ 28ರಿಂದ 30ರ ವರೆಗೆ ನಡೆಯಲಿದೆ. ಜನವರಿ 28ರ ಶನಿವಾರದಂದು ಬೆಳಿಗ್ಗೆ 8 ಗಂಟೆಗೆ ನವಕಲಶಾಭಿಷೇಕ, ಗಣಹೋಮ, ಚಪ್ಪರ ಮುಹೂರ್ತ, ಮಧ್ಯಾಹ್ನ
ಕುಂದಾಪುರ ತಾಲೂಕು ಯುವ ಬಂಟರ ಸಂಫದ ವತಿಯಿಂದ ರಾಜ್ಯಮಟ್ಟದ ಬಂಟರ ಕ್ರೀಡೋತ್ಸವ ಹಾಗೂ ಬಂಟರ ಸಮ್ಮಿಲನ ಕಾರ್ಯಕ್ರಮವು ಕುಂದಾಪುರದ ಗಾಂಧೀ ಮೈದಾನದಲ್ಲಿ ನಡೆಯಿತು. ರಾಜ್ಯದ ವಿವಿಧ ಕಡೆಗಳಿಂದ ಕ್ರೀಡಾಪಟುಗಳ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಮುಖ್ಯ ಪಾತ್ರವನ್ನು ವಹಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ ಗೌರವಿಸಲಾಯಿತು. ಸಂಘಟನೆ ಮೂಲಕ ಒಂದಷ್ಟು ಜನ ಸಮುದಾಯದವರು ಒಟ್ಟಾಗುವ ಅವಕಾಶ ಇಂತಹ
ಭಾತ್ರತ್ವದ ಸಂದರ್ಭದಲ್ಲಿ ಏಸು ರಾಜ ಕ್ರಿಸ್ತನನ್ನು ಸಾರ್ವಜನಿಕವಾಗಿ ಮೆರವಣಿಗೆಯಲ್ಲಿ ಬಂದು ವಿಶಾಲವಾದ ಮೈದಾನದಲ್ಲಿ ಏಸು ಕ್ರಿಸ್ತನ ದೇವರ ವಾಕ್ಯವನ್ನು ಕೇಳುತ್ತಾ ಅವರನ್ನು ಸ್ತುತಿಸುತ್ತ ಏಸು ಕ್ರಿಸ್ತನ ನಾಮದಲ್ಲಿ ಆಶೀರ್ವಾದ ಪಡೆದಿದ್ದೇವೆ. ಏಕತೆ, ಸಹೋದರತೆ, ಭಾತ್ರತ್ವ ಇರಬೇಕು ಎಂದು ಪ್ರವಚನ ನೀಡಿದಂತ ದಿವ್ಯ ಬಲಿ ಪೂಜೆಯನ್ನು ವಂದನೀಯ ಸ್ವಾಮಿ ಸಿರಿಲ್ ಲೋಬೋ ಉಡುಪಿ ಧರ್ಮಪ್ರಾಂತ್ಯದ ದಿವ್ಯ ಜ್ಯೋತಿ ಇದರ ನಿರ್ದೇಶಕರಾಗಿದ್ದವರು ಮುಂದಿನ ಐದು ದಿನಗಳ ಕಾಲ
ಮೂಡುಬಿದಿರೆ: ಇಲ್ಲಿನ ಒಂಟಿಕಟ್ಟೆಯ ಕಡಲಕೆರೆ ನಿಸರ್ಗಧಾಮದ ಬಳಿ ಸುಮಾರು 6 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಅಂಬೇಡ್ಕರ್ ಭವನಕ್ಕೆಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಿಲಾನ್ಯಾಸಗೈದರು. ನಂತರ ಮಾತನಾಡಿದ ಅವರು 1500 ಅಂಬೇಡ್ಕರ್ ಭವನಗಳು ಸೂಕ್ತ ರೀತಿಯಲ್ಲಿ ನಿರ್ವಹಣೆಯಿಲ್ಲದಿರುವುದರಿಂದ ಅವುಗಳನ್ನು ಗ್ರಂಥಾಲಯವಾಗಿ ಪರಿವರ್ತಿಸಲು ಈಗಾಗಲೇ ಆದೇಶಿಸಲಾಗಿದೆ. ಪರಿಶಿಷ್ಟ ಜಾತಿ, ಪಂಗಡದ
ಬೆಂಗಳೂರು; ಸ್ಯಾಂಡಲ್ ವುಡ್ ಇದೀಗ ಮತ್ತೊಮ್ಮೆ ಆಘಾತ ಎದುರಾಗಿದೆ. 200 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಹಿರಿಯ ನಟ ಲಕ್ಷ್ಮಣ್ (74) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಲಕ್ಷ್ಮಣ್ ಭಾನುವಾರ ರಾತ್ರಿ ಎದೆನೋವು ಕಾಣಿಸಿಕೊಂಡಿತ್ತು. ಈ ಹಿನ್ನೆಲೆ ಇಂದು ಮುಂಜಾನೆ 3.30 ಸುಮಾರಿಗೆ ಅವರನ್ನು ನಾಗರಬಾವಿಯಲ್ಲಿರುವ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಇಸಿಜಿ ಮಾಡಿ ಅವರನ್ನು ಮನೆಗೆ ಕರೆದುಕೊಂಡು ಬರಲಾಗಿತ್ತು. ಆ ಬಳಿಕ ಅವರಿಗೆ ಹೃದಯಾಘಾತವಾಗಿದೆ. ಇದೀಗ
ಕಡಬ ತಾಲೂಕಿನ ಕೊಯಿಲ ಗ್ರಾಮದ ಏಣಿತಡ್ಕ ಎಂಬಲ್ಲಿ ಕುಮಾರಾಧಾರ ನದಿಯಲ್ಲಿ ತೆಪ್ಪದಲ್ಲಿ ಸಾಗುತ್ತಿದ್ದಾಗ ಆಕಸ್ಮಿಕವಾಗಿ ತೆಪ್ಪ ಮಗುಚಿ ಮಹಿಳೆಯೊಬ್ಬರು ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಏಣಿತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬವರ ಪತ್ನಿ ಗೀತಾ (47) ಎಂದು ಗುರುತಿಸಲಾಗಿದೆ. ದನಗಳಿಗೆ ಮೇವಿನ ಹುಲ್ಲು ತರುವುದಕ್ಕಾಗಿ ಏಣಿತಡ್ಕ ಭಾಗದಿಂದ ನದಿಯ ಇನ್ನೊಂದು ಭಾಗ ಆರೆಲ್ತಡಿ ಎಂಬಲ್ಲಿಗೆ ತೆಪ್ಪದಲ್ಲಿ ತೆರಳಿ
ಭಾರತೀಯ ನೌಕಾಪಡೆಯ ಲೆಫ್ಟಿನೆಂಟ್ ಕಮಾಂಡರ್ ಮಂಗಳೂರಿನ ದಿಶಾ ಅಮೃತ್ ಅವರು ಹೊಸದಿಲ್ಲಿಯ ಕರ್ತವ್ಯಪಥದಲ್ಲಿ ಜ. 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ ನಲ್ಲಿ ನೌಕಾಪಡೆಯ ತುಕಡಿಯನ್ನು ಮುನ್ನಡೆಸುವರು. ಈ ತುಕಡಿಯಲ್ಲಿ ನೌಕಾಪಡೆಯ 144 ಯುವ ಯೋಧರು ಮತ್ತು “ನಾರಿಶಕ್ತಿ’ ಸ್ತಬ್ಧಚಿತ್ರ ಇರಲಿದೆ. ಇದರಲ್ಲಿ ಮೂವರು ಮಹಿಳಾ ಅಧಿಕಾರಿಗಳು ಮತ್ತು ಐವರು ಪುರುಷ ಅಗ್ನಿವೀರರು ಭಾಗಿಯಾ ಗುವರು. ಅಮೃತಾ ಅವರ ಜತೆಗೆ ಸಬ್ ಲೆ| ವಲ್ಲಿ ಮೀನಾ ಎಸ್. ಸಹ ಇರುವರು.
ಸುರತ್ಕಲ್: “ರಾಜ್ಯದಲ್ಲಿ ಬಿಜೆಪಿ ಸರಕಾರ ಮೈ ಭಿ ಖಾವೂಂಗಾ ತುಮ್ಕೋ ಭಿ ಖಿಲಾವೂಂಗಾ ಎಂಬ ಸ್ಲೋಗನ್ ಅಡಿಯಲ್ಲಿ ಕಾರ್ಯಾಚರಿಸುತ್ತಿದೆ. ಕಂಟ್ರಾಕ್ಟರ್ ಅಸೋಷಿಯೇಷನ್ ಶಾಸಕರು 40% ಕಮಿಷನ್ ತಗೊಳ್ಳೋದನ್ನು ಒಪ್ಪಿಕೊಂಡಿದೆ. ಇವರದ್ದು ಬರೀ ಸುಳ್ಳುಗಳ ಸರಕಾರ, ಚೋರ ಗುರು ಚಾಂಡಾಲ ಶಿಷ್ಯರು ಕೇಂದ್ರ ಮತ್ತು ರಾಜ್ಯ ಸರಕಾರವನ್ನು ಆಳ್ತಾ ಇದ್ದಾರೆ. ನರೇಂದ್ರ ಮೋದಿ ಅವರಿಂದ ಹಿಡಿದು ತಳಮಟ್ಟದ ನಾಯಕರವರೆಗೆ ಎಲ್ಲರೂ ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದ್ದಾರೆ”
ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಹೆಸರಾಂತ ಜ್ಯುವೆಲ್ಲರಿ ಗ್ರೂಪ್ ಜೋಸ್ ಆಲುಕ್ಕಾಸ್ ಚಿನ್ನಾಭರಣ ಮಳಿಗೆ ನವೀಕೃತಗೊಂಡಿದ್ದು, ಹೊಚ್ಚ ಹೊಸ ಶೋರೂಂನ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಜೋಸ್ ಆಲುಕ್ಕಾಸ್ ಬ್ರ್ಯಾಂಡ್ ಕಳೆದ 58 ವರ್ಷಗಳಿಂದ ನಂಬಿಕೆ ಮತ್ತು ಪರಿಶುದ್ಧತೆಗೆ ಸಮನಾರ್ಥಕವಾಗಿದೆ. ವಿಶಿಷ್ಠವಾದ ಕಾರ್ಯಾಚರಣೆ ವ್ಯವಸ್ಥೆ ಮತ್ತು ದೂರದೃಷ್ಟಿಯೊಂದಿಗೆ ಈ ಬ್ರ್ಯಾಂಡ್ ಆಭರಣ ವ್ಯಾಪಾರ ಕ್ಷೇತ್ರದಲ್ಲಿ ಬಲವಾದ ಪರಂಪರೆಯನ್ನು ಸ್ಥಾಪಿಸಿದೆ. ಇದೀಗ ಮಂಗಳೂರು
ಕಾಂಚನ ಸಮೂಹ ಸಂಸ್ಥೆಯ ಉಡುಪಿಯ ಕಡಿಯಾಳಿ ಶೋರೂಮ್‍ನಲ್ಲಿ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮಾರುಕಟ್ಟೆಗೆ ಬಿಡುಗಡೆಗೊಂಡಿತು. ಉಡುಪಿಯ ಕಡಿಯಾಳಿ ಕಾಂಚನ ಸಮೂಹ ಸಂಸ್ಥೆಯ ಶೋರೂಂನಲ್ಲಿ ನಡೆದ ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸಿ ಉದ್ಘಾಟಿಸಿದರು. ನಂತರ ಬಿಗ್‍ಬಾಸ್ ಸೀಸನ್ 9ರ ವಿಜೇತ, ನಟ ರಾಕ್‍ಸ್ಟಾರ್ ರೂಪೇಶ್ ಶೆಟ್ಟಿ ಅವರು ನೂತನ ಏಥರ್ ಎಲೆಕ್ಟ್ರಿಕ್ ದ್ವಿಚಕ್ರ ವಾಹನವನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ




























