Home Posts tagged #v4news karnataka (Page 54)

ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಗೃಹ ಸಚಿವರ ಮಾರಕ ಹೇಳಿಕೆ ಆರೋಪ

ಪುತ್ತೂರು: ವಿಧಾನಸಭೆಯ ಅಧಿವೇಶನದಲ್ಲಿ ಅಡಿಕೆ ಬೆಳೆಗಾರರಿಗೆ ಭವಿಷ್ಯವಿಲ್ಲ, ಅಡಿಕೆ ಬೀದಿ ಪಾಲಾಗುತ್ತದೆ ಎಂಬ ಮಾರಕ ಹೇಳಿಕೆ ನೀಡಿ ಬೆಳೆಗಾರರನ್ನು ಸಂದಿಗ್ಧ ಪರಿಸ್ಥಿತಿಗೆ ತಂದೊಡ್ಡಿದ್ದಾರೆಂದು ಆರೋಪಿಸಿದಲ್ಲದೆ ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ಅವರನ್ನು ತತ್‍ಕ್ಷಣವೆ ಸಚಿವ ಸ್ಥಾನದಿಂದ ಕೈ ಬಿಡುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು

ಕಿನ್ನಿಗೋಳಿ : ಶಾಲಾ ಬಾಲಕನಿಗೆ ಬಸ್ ಢಿಕ್ಕಿ, ಬಾಲಕ ಸ್ಥಳದಲ್ಲೇ ಮೃತ್ಯು

ಶಾಲಾ ಬಾಲಕನಿಗೆ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಧಳದಲ್ಲಿಯೇ ಸಾವನ್ನಪ್ಪಿದ ಘಟನೆ ಕಿನ್ನಿಗೋಳಿ ಸಮೀಪದ ಕಟೀಲು ಹೆದ್ದಾರಿಯಲ್ಲಿ ನಡೆದಿದೆ. ಮೃತ ಬಾಲಕನನ್ನು ಚರಣ್ (15) ಗುರುತಿಸಲಾಗಿದೆ. ಚರಣ್ ಕಟೀಲು ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವಾಗ ಕಿನ್ನಿಗೋಳಿ ಕಡೆಯಿಂದ ಕಟೀಲು ಕಡೆಗೆ ಹೋಗುತ್ತಿದ್ದ ಖಾಸಗಿ ಬಸ್ಸು ಡಿಕ್ಕಿ ಹೊಡೆದ ಪರಿಣಾಮ ಚರಣ್ ಸ್ಧಳದಲ್ಲಿಯೇ ಮೃತ ಪಟ್ಟಿದ್ದಾನೆ ಎನ್ನಲಾಗಿದೆ. ಸ್ಧಳಕ್ಕೆ

ಅಡಕೆಗೆ ಭವಿಷ್ಯವಿಲ್ಲ ಗೃಹ ಸಚಿವರ ಬಾಲಿಶತನದ ಹೇಳಿಕೆಗೆ ಖಂಡನೆ, ಕಿಸಾನ್ ಘಟಕದ ವತಿಯಿಂದ ಪ್ರತಿಭಟನೆ

ಪುತ್ತೂರು:ಪುತ್ತೂರು ಬ್ಲಾಕ್ ಕಾಂಗ್ರೆಸ್ ಹಾಗೂ ಬ್ಲಾಕ್ ಕಿಸಾನ್ ಕಾಂಗ್ರೆಸ್ ಜಂಟಿ ಆಶ್ರಯದಲ್ಲಿ ರಾಜ್ಯ ಗೃಹ ಸಚಿವರು ಅಡಕೆ ಬೆಳೆಗಾರರ ಕುರಿತು ವಿರೋಧಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನಾ ಸಭೆ ಸೋಮವಾರ ಅಮರ್ ಜವಾನ್ ಸ್ಮಾರಕದ ಬಳಿಕ ನಡೆಯಿತು. ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ ಮಾತನಾಡಿ, ಜಿಲ್ಲೆಯ ಆರ್ಥಿಕ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿರುವ ಅಡಕೆಯ ಕುರಿತು ಗೃಹ ಸಚಿವರು ಅಡಕೆಗೆ ಭವಿಷ್ಯವಿಲ್ಲ ಎಂದು ವಿರೋಧಿ ಹೇಳಿಕೆ

ಜನಾರ್ದನ ಪೂಜಾರಿ ಅವರಿಂದ ಡೊಂಗರಕೇರಿಯ ವೆಂಕಟ್ರಮಣ ದೇವಾಲಯಕ್ಕೆ ಭೇಟಿ

ವೈಕುಂಟ ಏಕಾದಶಿಯ ಪ್ರಯುಕ್ತ ಮಾಜಿ ಕೇಂದ್ರ ಸಚಿವ ಬಿ ಜನಾರ್ದನ ಪೂಜಾರಿಯವರು ಇಂದು ಮಂಗಳೂರಿನ ಡೊಂಗರಕೇರಿಯ ಶ್ರೀ ವೆಂಕಟ್ರಮಣ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಕ್ಷೇತ್ರದ ಅರ್ಚಕರು ಹಾಗೂ ಆಡಳಿತ ಮಂಡಳಿಯ ಸದಸ್ಯರು ಪೂಜೆಯ ಬಳಿಕ ಜನಾರ್ದನ ಪೂಜಾರಿಯವರನ್ನು ಸನ್ಮಾನಿಸಿದರು ಈ ವೇಳೆ ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಅವರು ಜನಾರ್ದನ ಪೂಜಾರಿಯವರ ಜೊತೆಗಿದ್ದರು

2016ರ ನೋಟು ರದ್ಧತಿ ಮಾನ್ಯವಾಗಿದೆ: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

2016ರಲ್ಲಿ ನರೇಂದ್ರ ಮೋದಿ ಸರ್ಕಾರವು ಕೈಗೊಂಡ ನೋಟು ರದ್ಧತಿ ಕ್ರಮವು ಮಾನ್ಯವಾದುದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಇಂದು ಪ್ರಕಟಗೊಂಡ ಭಿನ್ನಮತದ ತೀರ್ಪಿನಲ್ಲಿ ಕೇಂದ್ರ ಸರ್ಕಾರವು ಅದನ್ನು ಆರಂಭಿಸಿದ ಮಾತ್ರಕ್ಕೆ ನಿರ್ಧಾರವನ್ನು ತಪ್ಪೆನ್ನಲು ಸಾಧ್ಯವಿಲ್ಲ ಎಂದು ಸುಪ್ರೀಂ ಹೇಳಿದೆ. ನೋಟು ಅಮಾನ್ಯೀಕರಣವನ್ನು ತಳ್ಳಿಹಾಕಲು ಸಾಧ್ಯವಿಲ್ಲ, ನೋಟುಗಳ ವಿನಿಮಯಕ್ಕೆ ನೀಡಿದ 52 ದಿನಗಳ ಅವಧಿಯು ಅಸಮಂಜಸವಲ್ಲ ಎನ್ನಲಾಗದು ಎಂದು ಸುಪ್ರೀಂ ಹೇಳಿದೆ. ಭಾರತೀಯ

ಪುತ್ತೂರಿನಲ್ಲಿ ರಸ್ತೆ ನಿರ್ಮಾಣಕ್ಕೆ ತಹಶೀಲ್ದಾರ್‍ಗೆ ಮನವಿ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಪಳ್ಳತ್ತೂರು -ಬಂಟಕಲ್ಲು-ಬಾರೆಕೊಚ್ಚಿ-ಕಟ್ಟತ್ತಾರು ಕಾಲನಿಗೆ ರಸ್ತೆ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ರೈತ ಸಂಘ ಹಸಿರು ಸೇನೆ (ವಾಸುದೇವ ಬಣ) ಹಾಗೂ ಸ್ಥಳೀಯ ನಿವಾಸಿಗಳು ಪುತ್ತೂರು ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದ್ದಾರೆ.ಈ ಭಾಗದಲ್ಲಿ ಸುಮಾರು ೩೦ ಮನೆಗಳಿಗೆ ಸಂಪರ್ಕ ರಸ್ತೆಯಿಲ್ಲ. ಹಲವು ದಶಕಗಳಿಂದ ಇವರು ವಾಸಿಸುತ್ತಿದ್ದರೂ ಅನಾರೋಗ್ಯದಂತಹ ತುರ್ತು ಸಂದರ್ಭದಲ್ಲಿ ರೋಗಿಯನ್ನು ಹೊತ್ತುಕೊಂಡೇ ಸಾಗಬೇಕಾದ ಸ್ಥಿತಿ

ಉಡುಪಿಯ ಮಲಬಾರ್ ಗೋಲ್ಡ್ & ಡೈಮಂಡ್ಸ್ ಮಳಿಗೆ : ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಪ್ರದರ್ಶನಕ್ಕೆ ಚಾಲನೆ

ಉಡುಪಿ: ನಗರದ ಮಲಬಾರ್ ಗೋಲ್ ಆಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಡಿ.31 ರಿಂದ ಜ.08 ರ ವರೆಗೆ ಹಮ್ಮಿಕೊಂಡಿರುವ ಆರ್ಟಿಸ್ಟ್ರಿ ಕಲಾತ್ಮಕ ಚಿನ್ನಾಭರಣಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಶನಿವಾರ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಈ ಪ್ರದರ್ಶನದಲ್ಲಿ ಟೆಂಪಲ್ ಸಂಗ್ರಹವನ್ನು ಇಲಾ ಕಿರಣ್ ಶೆಟ್ಟಿ, ಮೈನ್ ಡೈಮಂಡ್ಸ್ ನ್ನು ವೈಷ್ಣವಿ ಕೊಡವೂರು, ಜೆಮ್ಸ್ ಸ್ಟೋನ್ ಸಂಗ್ರಹವನ್ನು ನೊಲಿಟ ಸಲ್ಡಾನ ಪ್ರದರ್ಶನದಲ್ಲಿ ಅನಾವರಣಗೊಳಿಸಿದರು. ಇಲಾ ಕಿರಣ್ ಶೆಟ್ಟಿ

ಮೂಸೋಡಿಯಲ್ಲಿ ಪ್ರಯೋಜನಕ್ಕಿಲ್ಲದ ಮೀನುಗಾರಿಕಾ ಬಂದರು

ಮಂಜೇಶ್ವರ: ಮೂಸೋಡಿಯಲ್ಲಿ ನಿರ್ಮಾಣವಾಗಿರುವ ಮಂಜೇಶ್ವರ ಮೀನುಗಾರಿಕಾ ಬಂದರು ಊಟಕ್ಕಿಲ್ಲದ ಉಪ್ಪಿನಕಾಯಿಯಂತೆ ಉಪಯೋಗ ಶೂನ್ಯವಾಗಿರುವುದಾಗಿ ಮೀನು ಕಾರ್ಮಿಕರು ದೊರಿದ್ದಾರೆ. ಇದು ಉದ್ಘಾಟನೆಯಾಗಿ ಎರಡು ವರ್ಷ ಕಳೆದರೂ ಬೋಟ್‍ಗಳು, ಸಣ್ಣ ದೋಣಿಗಳು ಪ್ರವೇಶಿಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿರುವುದಾಗಿ ಮಿನು ಕಾರ್ಮಿಕರು ಆರೋಪಿಸುತಿದ್ದಾರೆ.ಮೀನುಗಾರಿಕಾ ಬಂದರು ನಿರ್ಮಾಣ ಕಾಮಗಾರಿ 2014 ಕ್ಕೆ ಅಂದಿನ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಉದ್ಘಾಟಿಸಿದ್ದರು.

ಶ್ರೀಕುರು ಅಂಬಾ ಅಯ್ಯಪ್ಪ ಭಕ್ತ ವೃಂದ : 18ನೇ ವರ್ಷದ ಶಬರಿಮಲೆ ಯಾತ್ರೆ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮ

ಕೋಡಿಕಲ್‍ನ ಕಲ್ಬಾವಿ ಬನದ ಶ್ರೀ ಶ್ರೀಕುರು ಅಂಬಾ ಅಯ್ಯಪ್ಪ ಭಕ್ತವೃಂದದ 18ನೇ ವರ್ಷದ ಶಬರಿಮಾಲೆ ಯಾತ್ರೆಯ ಪ್ರಯುಕ್ತ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವ ಹಾಗೂ ಅಪ್ಪಸೇವೆ ಮತ್ತು ಕೆಂಡಸೇವೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಮೂಡಬಿದ್ರಿ ಶ್ರೀ ಅಯ್ಯಪ್ಪ ದೇವಸ್ಥಾನದ ಪ್ರಧಾನ ಆರ್ಚಕರಾದ ಗುರುಸ್ವಾಮಿ ಶಿವಾನಂದ ಶಾಂತಿ ಇವರ ದಿವ್ಯ ಹಸ್ತದಿಂದ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಇನ್ನು ಈ ಪ್ರಯುಕ್ತ ಗಣಹೋಮ, ಭಜನಾ ಕಾರ್ಯಕ್ರಮ, ಪ್ರತಿಷ್ಠೆ, ಉಷಾ

“ಸ್ಮಾರ್ಟ್ & ಡಿಜಿಟಲ್ ಸುರತ್ಕಲ್”ಗೆ ಶಾಸಕ ಡಾ.ವೈ. ಭರತ್ ಶೆಟ್ಟಿ ಅವರಿಂದ ಚಾಲನೆ

ಸುರತ್ಕಲ್: ರಾಜ್ಯದಲ್ಲೇ ಪ್ರಥಮ ಹೈಟೆಕ್ ಬಸ್ ನಿಲ್ದಾಣವನ್ನು ಇಲ್ಲಿನ ಗೋವಿಂದ ದಾಸ್ ಕಾಲೇಜ್ ಮುಂಭಾಗ ಸೋಮವಾರ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ. ಭರತ್ ಶೆಟ್ಟಿ ಉದ್ಘಾಟಿಸಿದರು.ಈ ವೇಳೆ ಮಾತಾಡಿದ ಶಾಸಕರು, “ಸ್ಮಾರ್ಟ್ ಆಂಡ್ ಡಿಜಿಟಲ್ ಸುರತ್ಕಲ್” ಯೋಜನೆಯಡಿಯಲ್ಲಿ ಸುರತ್ಕಲ್ ಗೋವಿಂದ ದಾಸ್ ಕಾಲೇಜ್ ಮುಂಭಾಗ ರಾಜ್ಯದಲ್ಲೇ ಪ್ರಥಮವಾಗಿ ಸರ್ವ ರೀತಿಯಲ್ಲೂ ಸುಸಜ್ಜಿತವಾದ ಹೈಟೆಕ್ ಬಸ್ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಲಾಗಿದೆ. ಶುದ್ಧ ಕುಡಿಯುವ