Home Posts tagged #v4news karnataka (Page 64)

ಗಣರಾಜ್ಯೋತ್ಸವ ಫೆರೇಡಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜೀದಾಬಾನು ಆಯ್ಕೆ

2023 ನೇ ಸಾಲಿನಲ್ಲಿ ದೆಹಲಿಯಲ್ಲಿ ನಡೆಯಲಿರುವ ಭಾರತ ಗಣರಾಜ್ಯೋತ್ಸವ ಫೆರೇಡ್ ನಲ್ಲಿ ಭಾಗವಹಿಸಲು ಪುತ್ತೂರಿನ ಡಾ| ವಜಿದಾಬಾನು ಆಯ್ಕೆ. ಎನ್ ಎಸ್ ಎಸ್ ವತಿಯಿಂದ ನಡೆದ ದಕ್ಷಿಣ ಪ್ರಾಂತೀಯ ಪ್ರೀ ಆರ್ ಡಿ ತರಬೇತಿ ಶಿಬಿರದಲ್ಲಿ ಕರ್ನಾಟಕದಿಂದ ಆಯ್ಕೆಗೊಂಡಿರುವ ಏಳು ಮಂದಿಯಲ್ಲಿ ಇವರು ಒಬ್ಬರಾಗಿದ್ದಾರೆ. ಇವರು ಪುತ್ತೂರು ಅಂಬಿಕಾ ಪದವಿಪೂರ್ವ ಕಾಲೇಜಿನ ಹಿರಿಯ

ಕುಕ್ಕೆ ಸುಬ್ರಹ್ಮಣ್ಯ: ಭಕ್ತಿ ಸಂಭ್ರಮದ ಕಿರುಷಷ್ಠಿ ರಥೋತ್ಸವ

ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದಲ್ಲಿ ಪುಷ್ಯ ಶುದ್ದ ಕಿರುಷಷ್ಠಿಯ ದಿನವಾದ ಬುಧವಾರ ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವರ ಕಿರುಷಷ್ಠಿ ರಥೋತ್ಸವವು ಭಕ್ತಿ ಸಡಗರದಿಂದ ನೆರವೇರಿತು. ಸಹಸ್ರಾರು ಸಂಖ್ಯೆಯ ಭಗವದ್ಬಕ್ತರ ಪರಾಕುಗಳೊಂದಿಗೆ ತಳಿರು, ತೋರಣ, ಸೀಯಾಳ, ಅಡಿಕೆ,ಬಾಳೆ, ಬಾಳೆಗೊನೆ ಮತ್ತು ವಿದ್ಯುತ್ ಅಲಂಕಾರದ ರಥದಲ್ಲಿ ಶ್ರೀ ದೇವರ ಉತ್ಸವ ನೆರವೇರಿತು. ರಥಾರೋಹಣದ ಬಳಿಕ ಶ್ರೀ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತರಾಮ ಎಡಪಡಿತ್ತಾಯರು

ಪ್ರಧಾನಿ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರು

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾ ಬೆನ್‌ ಆರೋಗ್ಯದಲ್ಲಿ ಏರುಪೇರಾಗಿದೆ. ಗುಜರಾತ್‌ನ ಅಹಮದಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ತಾಯಿ ಆರೋಗ್ಯ ವಿಚಾರಿಸಲು ಸಂಜೆ ತೆರಳಲಿದ್ದಾರೆ. ಈ ವರ್ಷದ ಜೂನ್‌ನಲ್ಲಿ 99 ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರ ಆರೋಗ್ಯ ಕಳೆದ ರಾತ್ರಿ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಧಾನಿ ತಾಯಿ ಅವರ ಆರೋಗ್ಯ ಸ್ಥಿತಿ

ಶಬರಿಮಲೆ ಯಾತ್ರೆ : ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಲು ಖಾದರ್ ಮನವಿ

ಕರ್ನಾಟಕದಿಂದ ಶಬರಿಮಲೆಗೆ ಹೋಗುವ ಮತ್ತು ಮರಳಿ ಬರುವ ಅಯ್ಯಪ್ಪ ಮಾಲಾಧಾರಿಗಳಿರುವ ಕರ್ನಾಟಕ-ಕೇರಳದ ವಾಹನಗಳಿಗೆ ತೆರಿಗೆಯಲ್ಲಿ ರಿಯಾಯಿತಿ ಕಲ್ಪಿಸಬೇಕು ಎಂದು ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪನಾಯಕ ಯು.ಟಿ. ಖಾದರ್ ಮನವಿ ಮಾಡಿದ್ದಾರೆ. ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವ ಅಯ್ಯಪ್ಪಮಾಲಾಧಾರಿಗಳ ವಾಹನಗಳಿಗೆ ಕರ್ನಾಟಕ ಮತ್ತು ಕೇರಳದ ಎರಡೂ ರಾಜ್ಯಗಳ ತೆರಿಗೆ ಪಾವತಿಸಲು ಕಷ್ಟವಾಗುತ್ತಿರುವುದರಿಂದ ತೆರಿಗೆಯಲ್ಲಿ ವಿಶೇಷ ರಿಯಾಯಿತಿ ಕಲ್ಪಿಸಲು ಅಧಿಕಾರಿಗಳು

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಕಡಬ: ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ನಾಗಾರಾಧನೆಯ ಪುಣ್ಯ ತಾಣ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದರು. ಕುಟುಂಬ ಸಮೇತರಾಗಿ ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಸಚಿವರು ಆರಂಭದಲ್ಲಿ ಸಂಕಲ್ಪ ನೆರವೇರಿಸಿದರು. ಬಳಿಕ ಶ್ರೀ ದೇವರ ದರುಶನ ಪಡೆದು ಪಂಚಾಮೃತ ಮಹಾಭಿಷೇಕ ಸೇವೆಯನ್ನು ಸಮರ್ಪಿಸಿದರು. ನಂತರ ಮದ್ಯಾಹ್ನ ಶ್ರೀ ದೇವರ ಮಹಾಪೂಜೆ ವೀಕ್ಷಿಸಿ ಮಹಾಪೂಜಾ ಸೇವೆ ನೆರವೇರಿಸಿದರು.ಬಳಿಕ ಪ್ರಾರ್ಥನೆ

ರಸ್ತೆ ಬದಿ ನಿಂತಿದ್ದ ಬಾಲಕನಿಗೆ ಕಾರು ಢಿಕ್ಕಿ , ಬಾಲಕ ಸ್ಥಳದಲ್ಲೇ ಸಾವು

ರಸ್ತೆ ಬದಿ ನಿಂತಿದ್ದ ಎಂಟನೇ ತರಗತಿ ವಿದ್ಯಾರ್ಥಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಸಂಭವಿಸಿದೆ.ಬೋಳಿಯಾರು ಭಟ್ರಬೈಲು ನಿವಾಸಿ ಹರಿಶ್ಚಂದ್ರ -ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಮೃತ ಬಾಲಕ. ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದನು. ಶಾಲೆ ಬಿಟ್ಟು ಮನೆಗೆ ತೆರಳಲು ರಸ್ತೆಬದಿಯಲ್ಲಿ ನಿಂತಿದ್ದ ಬಾಲಕನಿಗೆ ಮುಡಿಪು ಕಡೆಗೆ ತೆರಳುತ್ತಿದ್ದ ಕಾರು ಢಿಕ್ಕಿ ಹೊಡೆದಿದೆ. ಕಾರು ಚಾಲಕನ

ಕಾಟಿಪಳ್ಳದ ಜಲೀಲ್ ಹತ್ಯೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ

ಕಾಟಿಪಳ್ಳ ಜಲೀಲ್ ಹತ್ಯೆ ಪ್ರಕರಣದಲ್ಲಿ ಪೆÇಲೀಸರು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಕಾಟಿಪಳ್ಳ ನಾಲ್ಕನೇ ಬ್ಲಾಕ್ ಕೃಷ್ಣಾಪುರ ನಿವಾಸಿ ಲಕ್ಷ್ಮೀಶ ದೇವಾಡಿಗ(28) ಬಂಧಿತ. ಈಗಾಗಲೇ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಶೈಲೇಶ್ ಪೂಜಾರಿ, ಸವಿನ್ ಕಾಂಚನ್ ಮತ್ತು ಪವನ್ ಎಂಬವರನ್ನು ಬಂಧಿಸಲಾಗಿತ್ತು. ಇದೀಗ ಪ್ರಮುಖ ಆರೋಪಿಯನ್ನು ಬಂಧಿಸಲಾಗಿದೆ. ಲಕ್ಷ್ಮೀಶ ಮತ್ತು ಶೈಲೇಶ್ ಸೇರಿಕೊಂಡು ಜಲೀಲ್ ಕೊಲೆಗೆ ಸಂಚು ಹೆಣೆದಿದ್ದರು ಎನ್ನಲಾಗಿದೆ.

ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯ ಬಂಧನ

ಮೂಡುಬಿದಿರೆ : ಹಿಂದೂ ದೇವರುಗಳನ್ನು ಅವಮಾನಿಸಿ ಮಕ್ಕಳನ್ನು ಬಲತ್ಕಾರದ ಮತಾಂತರಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯನ್ನು ಮೂಡುಬಿದಿರೆ ಪೊಲೀಸರು ಮಂಗಳವಾರ ವಿದ್ಯಾಗಿರಿಯಲ್ಲಿ ಬಂಧಿಸಿದ್ದಾರೆ. ಮೈಸೂರಿನ ನಿವಾಸಿ ಬೆಂಜಮಿನ್ ವಾಸ್ ಎಂಬಾತ ಬಂಧಿಸಲ್ಪಟ್ಟ ವ್ಯಕ್ತಿ. ವಿದ್ಯಾಗಿರಿಯಲ್ಲಿ ನಡೆಯುತ್ತಿದ್ದ ಸ್ಕೌಟ್ಸ್ ಗೈಡ್ಸ್ ಅಂತರಾಷ್ಟ್ರೀಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಮತ್ತು ಜನರು ಸೇರುತ್ತಿದ್ದ ಕಡೆಗೆ ಧಾವಿಸುತ್ತಿದ್ದ ಬೆಂಜಮಿನ್, ಹಿಂದುಗಳ

ಬೆಳ್ತಂಗಡಿಯ ಶಿಬಾಜೆಯಲ್ಲಿ ನಡೆದ ದಲಿತ ಯುವಕನ ಕೊಲೆ ಪ್ರಕರಣ : ಆರೋಪಿಗಳ ಬಂಧನಕ್ಕೆ ಒತ್ತಾಯ

ಬೆಳ್ತಂಗಡಿ ತಾಲೂಕಿನ ಶಿಬಾಜೆ ಕುರುಂಜಿ ಗ್ರಾಮದ ತೋಟದ ಕಾರ್ಮಿಕನಾಗಿ ದುಡಿಯುತ್ತಿದ್ದ ದಲಿತ ಸಮುದಾಯಕ್ಕೆ ಸೇರಿದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಹತ್ಯೆ ಗೈದಿರುವ ಆರೋಪಿಗಳ ಮೇಲೆ ಕೊಲೆ, ದರೋಡೆ, ಹಲ್ಲೆ, ದಲಿತ ದೌರ್ಜನ್ಯ ದಾಖಲಾದರೂ ರಾಜಕೀಯ ಒತ್ತಡಕ್ಕೆ ಒಳಗಾದ ಪೊಲೀಸ್ ಇಲಾಖೆ ಆರೋಪಿಗಳನ್ನು ಬಂಧಿಸದೆ ರಕ್ಷಣೆಗೆ ಮುಂದಾಗಿರುವ ಘಟನೆ ನಡೆದಿದೆ. ಆರೋಪಿಗಳನ್ನು ತಕ್ಷಣವೇ ಬಂಧಿಸಿ ಕ್ರಮ ಜರುಗಿಸಬೇಕೆಂದು ಮೊಗೇರ ಸಂಘ ಮತ್ತು ದಲಿತ ಸಂಘಗಳು ಒತ್ತಾಯಿಸಿವೆ. ಈ

ಜಲೀಲ್ ಕುಟುಂಬಕ್ಕೆ ನಾಗರಿಕ ಸಂಘಟನೆಗಳ ಪ್ರತಿನಿಧಿಗಳಿಂದ ಸಾಂತ್ವನ.

ಮತಾಂಧ ಕ್ರಿಮಿನಲ್ ಗಳಿಂದ ಕೊಲೆಗೀಡಾದ ಕಾಟಿಪಳ್ಳದ ಜಲೀಲ್ ನಿವಾಸಕ್ಕೆ ಮಂಗಳೂರಿನ ನಾಗರಿಕ ಸಂಘಟನೆಗಳು, ಜಾತ್ಯಾತೀತ ಪಕ್ಷಗಳ ಪ್ರತಿನಿಧಿಗಳ ನಿಯೋಗ ಭೇಟಿ ನೀಡಿ ದುಃಖತಪ್ತ ಕುಟುಂಬಕ್ಕೆ ಸಾಂತ್ವನ ಹೇಳಿತು. ಕೊಲೆಗಡುಕರಿಗೆ ಶಿಕ್ಷೆ ನೀಡಲು, ಸಂತ್ರಸ್ತ ಕುಟುಂಬಕ್ಕೆ ನ್ಯಾಯ ಒದಗಿಸಲು ನಡೆಸುವ ಪ್ರಯತ್ನದಲ್ಲಿ ಜೊತೆಗಿರುವುದಾಗಿ ಭರವಸೆ ನೀಡಿತು. ಯಾರ ತಂಟೆತಕರಾರಿಗೂ ಹೋಗದ, ತನ್ನ ಪಾಡಿಗೆ ಬದುಕು ನಡೆಸುತ್ತಿದ್ದ ಜಲೀಲ್ ಹತ್ಯೆ ಮತಾಂಧ ಶಕ್ತಿಗಳಿಂದ ಕುರುಡು