ಕುಂದಾಪುರ : ಕಾಲೇಜು ದಿನಗಳಲ್ಲಿ ಇಲ್ಲಿನ ಭಂಡಾರ್‍ಕಾರ್ಸ್ ಕಾಲೇಜು, ನ್ಯಾಯಾಲಯದ ಪರಿಸರದಲ್ಲಿ ಓಡಾಡಿದ್ದ ನೆನಪುಗಳನ್ನು ಹೊಂದಿರುವ ನನಗೆ ಇದೇ ನ್ಯಾಯಾಲಯದ ಸಂಕೀರ್ಣದಲ್ಲಿ ಗೌರವಾನ್ವೀತ ನ್ಯಾಯಮೂರ್ತಿಗಳ ಉಪಸ್ಥಿತಿಯಲ್ಲಿ ಸನ್ಮಾನ ಪಡೆದುಕೊಳ್ಳಲು ತುಂಬಾ ಹೆಮ್ಮೆಯಾಗುತ್ತಿದೆ ಎಂದು ಕಾಂತಾರ ಚಲನಚಿತ್ರ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಅಭಿಮಾನ
ಮೂಡುಬಿದರೆ : ವಸತಿ ಸಮುಚ್ಛಯಗಳಲ್ಲಿನ ಹಸಿಕಸವನ್ನು ಹಂದಿ ಸಾಕಾಣಿಕೆಗಾರರಿಗೆ ರವಾನಿಸಿ ವಿಲೇವಾರಿ ಮಾಡುವ ಪ್ರಕ್ರಿಯೆಯಲ್ಲಿ ಎರಡು ಮೂರು ಬಾರಿ ಅಡಚಣೆಯಾಗಿದ್ದು ಇದರಿಂದಾಗಿ ತ್ಯಾಜ್ಯ ದಲ್ಲಿ ಹುಳುಗಳಾಗಿರುವದರಿಂದ ತ್ಯಾಜ್ಯ ಸಂಗ್ರಹವಾಗಿಲ್ಲ, ವಿಲೇವಾರಿ ಮಾಡುವವರಿಗೆ ತಿಳಿಸಿದರೆ ಅವರು ಪುರಸಭೆಯ ಅಧಿಕಾರಿಗಳಿಗೆ ತಿಳಿಸಿ ಎಂದು ಹೇಳುತ್ತಾರೆ. ಹಾಗಾದರೆ ಪುರಸಭೆಯ ಸದಸ್ಯರಾಗಿರುವ ನಮಗೆ ಗೌರವವಿಲ್ಲವೇ. ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೆ 23ಕೋಟಿಯಷ್ಟು ಹಣವನ್ನು
ಪಡುಬಿದ್ರಿ: ಎಲ್ಲೂರು ಗ್ರಾಮದಲ್ಲಿ ಜನವಿರೋಧಿ ಯುಪಿಸಿಎಲ್ ಕಂಪನಿ ವಿದೇಶಿ ಕಲ್ಲಿದ್ದಲು ಬಳಸಿ ವಿದ್ಯುತ್ ಉತ್ಪಾದನೆ ನಡೆಸುವ ಒಡಂಬಡಿಕೆ ಇದ್ದರೂ ಇದೀಗ ಅದು ಜನರಿಗೆ ಸಮಸ್ಯೆಯೊಡ್ಡುವ ದೇಶೀ ಕಲ್ಲಿದ್ದಲು ಬಳಸುವ ಹುನ್ನಾರ ನಡೆಸುತ್ತಿದೆ ಎಂಬುದಾಗಿ ಎಲ್ಲೂರು ಗ್ರಾಮಸಭೆಯಲ್ಲಿ ಆಕ್ರೋಶ ವ್ಯಕ್ತವಾದ ಹಿನ್ನಲೆಯಲ್ಲಿ ಅದರ ವಿರುದ್ಧ ನಿರ್ಣಯ ಕೈಗೊಳ್ಳಲಾಗಿದೆ. ಈ ಬಗ್ಗೆ ಗ್ರಾಮಸಭೆಯಲ್ಲಿ ವಿಚಾರ ಮಂಡನೆ ಮಾಡಿದ ಗ್ರಾಮಸ್ಥ ನಾಗೇಶ್ ರಾವ್, ರಾಜ್ಯದಲ್ಲಿ ವಿದ್ಯುತ್ ಬರ
ಮಂಗಳೂರು : ಕಾರು ಅಪಘಾತಕ್ಕೀಡಾಗಿ ಅಡ್ಯಾರ್ ಬಾಳಿಕೆ ಮನೆ ನಿವಾಸಿ ಕೊರಗಪ್ಪ ಸಾಲ್ಯಾನ್ (65) ಎಂಬವರು ಮೃತಪಟ್ಟಿರುವ ಘಟನೆ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮುಂಭಾಗ ಸಂಭವಿಸಿದೆ. ಅಡ್ಯಾರ್ ಗಾರ್ಡನ್ ಎದುರುಗಡೆಯ ಸಂತೋಷ್ ಹೇರ್ ಡ್ರೆಸ್ಸಸ್೯ ಎಂಬ ಸೆಲೂನಿನ ಮಾಲಕರಾಗಿದ್ದ ಇವರು ಸೈಕಲ್ ಮೂಲಕ ರಸ್ತೆ ದಾಟುವಾಗ ಬಿ.ಸಿ.ರೋಡ್ ಕಡೆಯಿಂದ ಅಮಿತ ವೇಗದಲ್ಲಿ ಬಂದ ಸ್ವಿಫ್ಟ್ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿಯ ರಭಸಕ್ಕೆ ದೂರಕ್ಕೆ ಎಸೆಯಲ್ಪಟ್ಟು, ತಲೆಗೆ ಗಂಭೀರ ರೀತಿಯಲ್ಲಿ
ಕರಾವಳಿ ಕರ್ನಾಟಕದ ಪುಟಾಣಿ ಹಾಡುಗಾರರಿಗಾಗಿ ಸಜ್ಜಾಗಿರುವ ಹೊಚ್ಚ ಹೊಸ ಸಿಂಗಿಂಗ್ ಟಿವಿ ರಿಯಾಲಿಟಿ ಶೋ “ಹಾಡು ನೀ ಹಾಡು” ಸೀಸನ್ 1 ಕಾರ್ಯಕ್ರಮದ ಪೋಸ್ಟರ್ ಬಿಡುಗಡೆ ಸಮಾರಂಭ ಉಡುಪಿ ಇಂದ್ರಾಳಿಯ ರಿದ್ಧಿ ಕ್ರಿಯೇಷನ್ಸ್ ಸಿನಿ ಸ್ಟುಡಿಯೋದಲ್ಲಿ ಜರುಗಿತು. ಈ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಸಂಪಾದಕಿ, ಪತ್ರಕರ್ತೆ, ಖ್ಯಾತ ಚಿಂತಕಿ ಡಾ. ಸಂಧ್ಯಾ ಪೈ ಅವರು ಪೋಸ್ಟರ್ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು ಕಿರಿಯ ವಯಸ್ಸಿನಲ್ಲಿ ಮಕ್ಕಳ
ಉಳ್ಳಾಲದ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟನೆ ನಡೆಯಿತು. ರಾಜ್ಯ ವಿಧಾನಸಭೆಯ ಪ್ರತಿಪಕ್ಷ ಉಪ ನಾಯಕ, ಶಾಸಕ ಯು.ಟಿ. ಖಾದರ್ ಹರೇಕಳ ಗ್ರಾಮ ಪಂಚಾಯಿತಿ ನೂತನ ಕಚೇರಿ ಕಟ್ಟಡ “ಹರೇಕಳ ಗ್ರಾಮ ಸೌಧ ಉದ್ಘಾಟಿಸಿದರು. ನಂತರ ಮಾತನಡಿದ ಅವರು ಗ್ರಾಮ ಪಂಚಾಯಿತಿ ಕಚೇರಿ ಎಂಬುವುದು ಗ್ರಾಮದ ಆತ್ಮ.ಹರೇಕಳ ಗ್ರಾಮ ವಿವಿಧ ಅಭಿವೃದ್ಧಿ ಕಾಮಗಾರಿ ಮೂಲಕ ಮಾದರಿಯಾಗಿ ರೂಪುಗೊಳ್ಳುತ್ತಿದ್ದು ಇನ್ನೂ ಅಭಿವೃದ್ಧಿ ಆಗಬೇಕೆನ್ನುವ
ಬಂಟ್ವಾಳ: ಚಳಿಗಾಲದಲ್ಲಿ ತಣ್ಣೀರ ಸ್ನಾನ ಮಾಡಲು ನಾವು ಹಿಂದೆಟ್ಟು ಹಾಕುತ್ತೇವೆ. ಅಂತಹುದರಲ್ಲಿ ಮೈ ಕೊರೆಯುವ ಚಳಿ, ಮೈನಸ್ 18 ಡಿಗ್ರೆ ಸೆಲ್ಸಿಯಸ್ ವಾತವರಣವಿರುವ ಅರುಣಾಚಲ ಪ್ರದೇಶದ ಕೊರೆಯುವ ಚಳಿಯಲ್ಲಿ ಗಡಿ ಕಾಯುವ ನಮ್ಮ ದೇಶದ ವೀರಯೋಧರ ನಿತ್ಯದ ಬದುಕು ಹೇಗಿರಬಹುದು? ಇದಕ್ಕೊಂದು ತಾಜಾ ಉದಾಹರಣೆ ಈ ವಿಡಿಯೋವೊಂದು ಇಲ್ಲಿದೆ. ಭಾರತ ಚೀನಾ ಗಡಿಭಾಗವಾಗಿರುವ ಅರುಣಚಲಪ್ರದೇಶದ ಎತ್ತರದ ಪರ್ವತ ಭಾಗದಲ್ಲಿ ನಮ್ಮ ವೀರ ಯೋಧರು ಗಡಿಕಾಯುತ್ತಿದ್ದಾರೆ. ಕೊರೆಯುವ ಚಳಿಗೆ
ಸುರತ್ಕಲ್ ಟೋಲ್ ಗೇಟ್ ದಾಟಿ ಮುಲ್ಕಿ, ಕಿನ್ನಿಗೋಳಿ, ಮುಕ್ಕ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳು ಪ್ರಯಾಣಿಕರ ಟಿಕೆಟ್ ಮೇಲೆ ಹಾಕಿದ್ದ ಟೋಲ್ ತೆರಿಗೆಯನ್ನು ತಕ್ಷಣವೇ ಕೈಬಿಟ್ಟು ಪ್ರಯಾಣ ದರವನ್ನು ಇಳಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಏಳು ವರ್ಷಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಆರಂಭಗೊಂಡಾಗ ಮುಲ್ಕಿ, ಹಳೆಯಂಗಡಿ, ಕಿನ್ನಿಗೋಳಿ ಮುಂತಾದ ಮಂಗಳೂರು ಗ್ರಾಮೀಣ ಭಾಗಗಳಿಗೆ ಸಂಚರಿಸುತ್ತಿದ್ದ ಖಾಸಗಿ
ಮಂಜೇಶ್ವರ: ಉದ್ಯಾವರ ಎಎಚ್‍ಎಸ್ ತಂಡದ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತಿನ ಸಹಕಾರದೊಂದಿಗೆ ಸಪ್ತ ಭಾಷಾ ಸಂಗಮ ಭೂಮಿಯಾದ ಮಂಜೇಶ್ವರದ ಕುಂಡು ಕೊಳಕೆ ಬೀಚ್ ನಲ್ಲಿ ಸಂಭ್ರಮದ ಬೀಚ್ ಫೆಸ್ಟ್ ಗೆ ಚಾಲನೆ ದೊರಕಿತು. ಇನ್ನು ಮುಂದಿನ ಒಂದು ತಿಂಗಳಿನಲ್ಲಿ ನಡೆಯಲಿರುವ ಬೀಚ್ ಫೆಸ್ಟ್ ಮಂಜೇಶ್ವರದ ಬೀಚ್‍ನಲ್ಲಿ ಉತ್ಸವದ ಸಂಭ್ರಮವಾಗಲಿದೆ. ಈ ಸಲದ ಮಂಜೇಶ್ವರ ಕಂಡು ಕೊಳಕೆ ಬೀಚ್ ಫೆಸ್ಟ್ ವಿವಿಧ ವಿನ್ಯಾಸಗಳನ್ನು ಹೊಂದಿದ್ದು, ಮಕ್ಕಳಿಗೆ ಹಾಗೂ
ಪುತ್ತೂರು: ಮತದಾರನ ಗುರುತಿನ ಚೀಟಿಯನ್ನು ಅನಧಿಕೃತವಾಗಿ ವಿತರಣೆ ಮಾಡಿದ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪುತ್ತೂರಿನ ಜನಸೇವಾ ಕೇಂದ್ರವೊಂದರ ಮೇಲೆ ಅಧಿಕಾರಿಗಳ ತಂಡ ದಾಳಿ ಮಾಡಿ ಅಂಗಡಿಗೆ ಬೀಗ ಹಾಕಿದ ಘಟನೆ ನಡೆದಿದೆ. ಪುತ್ತೂರು ಸಹಾಯಕ ಆಯುಕ್ತರಾದ ಗಿರೀಶ್ ನಂದನ್ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ನಗರದ ಹಳೆ ತಾಲೂಕು ಕಚೇರಿ ರಸ್ತೆಯಲ್ಲಿರುವ ಜನಸೇವಾ ಕೇಂದ್ರದ ಮೇಲೆ ದಾಳಿ ಮಾಡಿದೆ. ತಹಸೀಲ್ದಾರ್ ನಿಸರ್ಗ ಪ್ರಿಯ ಮತ್ತು ತಾಲೂಕು ಕಚೇರಿಯ ಚುನಾವಣಾ ಶಾಖೆಗೆ