ಪುತ್ತೂರು:ನಮ್ಮ ದೇಶದಲ್ಲಿ ಸುಮಾರು 18 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ದೇಶಕ್ಕೆ ಬೇಕಾಗುವಷ್ಟು ಅಡಕೆ ಬೆಳೆಯಲಾಗುತ್ತಿದ್ದರೂ ಇದೀಗ ಭೂತಾನ್‍ನಿಂದ ಅಡಕೆ ಆಮದು ಮಾಡಿಕೊಳ್ಳುತ್ತಿದೆ. ಈ ನಿಟ್ಟಿನಲ್ಲಿ ದೇಶದ ಅಡಕೆ ಬೆಳೆಗಾರರ ಪರಿಸ್ಥಿತಿ ಏನಾಗಬಹುದು ಎಂಬುದನ್ನು ಕೇಂದ್ರ ಸರಕಾರ ವಿಮರ್ಶೆ ಮಾಡಬೇಕಾದ ಅಗತ್ಯವಿದೆ ಎಂದು ಕೆಪಿಸಿಸಿ ಸಂಯೋಜಕ ಕಾವು ಹೇಮನಾಥ
ಹೆಜಮಾಡಿ ಗುಂಡಿ ರಸ್ತೆ ದುರಸ್ತಿಗಾಗಿ ಕಳೆದ ಏಳು ತಿಂಗಳ ಹಿಂದೆ ಶಾಸಕರು ಗುದ್ದಲಿ ಪೂಜೆ ನಡೆಸಿದ್ದರಾದರೂ, ಈ ವರೆಗೂ ದುರಸ್ತಿ ಕಾಣದ ಹಿನ್ನಲೆಯಲ್ಲಿ ಆಕ್ರೋಶಗೊಂಡ ಗ್ರಾಮಸ್ಥರು ಚುನಾವಣೆಯಲ್ಲಿ ತಕ್ಕ ಉತ್ತರ ನೀಡುವ ಎಚ್ಚರಿಕೆ ನೀಡಿದ್ದಾರೆ. ಗ್ರಾಮಸ್ಥ ಯೋಗೀಶ್ ಶೆಣೈ ಮಾತನಾಡಿ, ನಮ್ಮ ಬಲು ಬೇಡಿಕೆಯ ಗುಂಡಿ ರಸ್ತೆ ದುರಸ್ತಿಗಾಗಿ ಅದೆಷ್ಟೋ ಮನವಿಗಳ ಬಳಿಕ ಕಳೆದ ಏಳು ತಿಂಗಳ ಹಿಂದೆ ಗುದ್ದಲಿ ಪೂಜೆ ನಡೆಸಲಾಗಿದ್ದು, ಗುದ್ದಲಿ ಪೂಜೆ ನಡೆದು ಎರಡು ತಿಂಗಳ ಬಳಿಕ
ಮಂಗಳೂರು: ಯುವಕನೋರ್ವ ಆಕಸ್ಮಿಕವಾಗಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಕುದ್ರೋಳಿಯ ಟಿಪ್ಪು ಸುಲ್ತಾನ್ ನಗರದಲ್ಲಿ ರಾತ್ರಿ ನಡೆದಿದೆ. ಕುದ್ರೋಳಿ ಸಮೀಪದ ಕಂಡತ್ ಪಳ್ಳಿ ಬಳಿಯ ಟಿ.ಕೆ.ಎಚ್. ಖಾದರ್ ಎಂಬವರ ಪುತ್ರ ಮುಹಮ್ಮದ್ ರಿಯಾಝ್ (33) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರಿಯಾಝ್ ಮನೆಯ ಮಹಡಿ ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಗಂಭೀರ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ
ಮಂಗಳೂರು,ಅ.18(ಕ.ವಾ):- ಪಂಪ್ ವೆಲ್ ನಲ್ಲಿ ಕರ್ನಾಟಕ ಬ್ಯಾಂಕ್ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ಮಹಾವೀರ ವೃತ್ತ ಅಭಿವೃದ್ಧಿ ಕಾಮಗಾರಿಗೆ ಅ.18ರಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ವೇದವ್ಯಾಸ್ ಕಾಮತ್, ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮಾ, ಸ್ಮಾರ್ಟ್ ಸಿಟಿ, ಕರ್ನಾಟಕ ಬ್ಯಾಂಕ್ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಹಾಗೂ ಇತರೆ ಜನ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಬಂಟ್ವಾಳ : ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣದ ತನಿಖೆಯನ್ನು ಸರ್ಕಾರವು ಸಿಐಡಿಗೆ ವರ್ಗಾಯಿಸಿದೆ. ಪ್ರಕರಣದ ಕಡತಗಳನ್ನು ಬಂಟ್ವಾಳ ಪೊಲೀಸರು ಸಿಐಡಿ ವಿಭಾಗಕ್ಕೆ ವರ್ಗಾವಣೆ ಮಾಡಿದ್ದಾರೆ. ಗುರುವಾರ ರಾತ್ರಿ ಸುಮಾರು 11.15ಕ್ಕೆ ಕೆಲ ದುಷ್ಕರ್ಮಿಗಳು ಶಾಸಕ ಹರೀಶ್ ಪೂಂಜಾರವರ ಕಾರನ್ನು ಅಡ್ಡಗಟ್ಟಿದ್ದರು. ಶಾಸಕರ ಕಾರು ಚಾಲಕನ ದೂರಿನಂತೆ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್
ಮಂಗಳೂರು: ನಗರದ ವೆಂಕಟ್ರಮಣ ದೇವಸ್ಥಾನದಲ್ಲಿ ಚಾತುರ್ಮಾಸ ವೃತದಲ್ಲಿರುವ ಕಾಶೀಮಠ ಸಂಸ್ಥಾನದ ಮಠಾಧೀಶರಾದ ಸಂಯಮೀಂದ್ರ ತೀರ್ಥ ಸ್ವಾಮೀಜಿಯವರ ದಿಗ್ವಿಜಯ ಮಹೋತ್ಸವ ಕಾರ್ಯಕ್ರಮ ಶನಿವಾರ ವೈಭವದಿಂದ ನಡೆಯಿತು. ಈ ಅಪೂರ್ವ ಕ್ಷಣಕ್ಕೆ ದೇಶದ ನಾನಾ ಕಡೆಯಿಂದ ಆಗಮಿಸಿದ ಸಹಸ್ರ ಸಹಸ್ರ ಸಂಖ್ಯೆಯ ಭಕ್ತಾದಿಗಳು ಸಾಕ್ಷಿಯಾದರು. ರಥಬೀದಿ ವೆಂಕಟರಮಣ ದೇವಸ್ಥಾನದ ಮುಂಭಾಗದಿಂದ ಚಾತುರ್ಮಾಸ್ಯ ಮೆರವಣಿಗೆ ಆರಂಭಗೊಂಡು ಮಹಾಮ್ಮಾಯ ದೇವಸ್ಥಾನ ರಸ್ತೆ, ಗದ್ದೆಕೇರಿ, ಮಂಜೇಶ್ವರ ಗೋವಿಂದ
ಸುಳ್ಯ: ಸುಳ್ಯದಲ್ಲಿ ಕಳೆದ 6 ಬಾರಿ ಶಾಸಕರಾಗಿ ಸಚಿವರಾಗಿರುವ ಅಂಗಾರರ ವಿರುದ್ಧ ಸುಳ್ಯದ ಕಾಂಗ್ರೆಸಿಗರಿಗೆ ಕಳೆದ 30 ವರ್ಷಗಳಿಂದ ಯಾವುದೇ ಸರ್ಕಸ್ ಮಾಡಿದರೂ ಗೆಲ್ಲಲು ಸಾಧ್ಯವಾಗಿಲ್ಲ. ಮುಂದೆಯೂ ಗೆಲ್ಲಲು ಸಾಧ್ಯವಿಲ್ಲ ಎಂದು ಸುಳ್ಯ ಬಿಜೆಪಿ ನಗರ ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಜಿನ್ನಪ್ಪ ಪೂಜಾರಿ ಮತ್ತು ಸಿಎ ಬ್ಯಾಂಕ್ ಅಧ್ಯಕ್ಷ ಬಾಲಗೋಪಾಲ ಸೇರ್ಕಜೆ ಹೇಳಿದರು. ಅವರು ಸುಳ್ಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, “ಸುಳ್ಯದ ಜನತೆ ಅಂಗಾರರನ್ನು
ಪುತ್ತೂರು : ಆಟೋ ರಿಕ್ಷಾವೊಂದು ಡಿವೈಡರ್ ಗೆ ಡಿಕ್ಜಿಯಾಗಿ ಪಲ್ಟಿಯಾದ ಘಟನೆ ಪುತ್ತೂರು ಉಪ್ಪಿನಂಗಡಿಯ ಪಡೀಲ್ ನಲ್ಲಿ ನಡೆದಿದ್ದು, ಘಟನೆಯಲ್ಲಿ ಗಾಯಗೊಂಡ ಮಹಿಳೆ ಮತ್ತು ಚಾಲಕನನ್ನು ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಪಿ.ಎಸ್.ಐ ಸೇಸಮ್ಮ ಮತ್ತು ಎ.ಎಸ್.ಐ ರಾಧಾಕೃಷ್ಣ ಅವರು ಆಸ್ಪತ್ರೆಗೆ ದಾಖಲಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಚಾಲಕ ಅಬ್ದುಲ್ ಎಂಬವರ ಆಟೋ ಡಿವೈಡರ್‍ಗೆ ಬಡಿದ ಹಿನ್ನಲೆಯಲ್ಲಿ ಮಹಿಳೆ ಕುಸುಮಾವತಿಯವರಿಗೆ ಗಾಯವಾಗಿತ್ತು. ಈ ವೇಳೆ ಜನರು
ಮಂಜೇಶ್ವರ : ಕಿಡ್ನಿ ವೈಫಲ್ಯಕ್ಕೊಳಗಾಗಿ ಚಿಕಿತ್ಸೆಯಲ್ಲಿರುವ ಮಂಜೇಶ್ವರದ ಕಾಂಗ್ರೆಸ್ ಕಾರ್ಯಕರ್ತ ಬಶೀರ್ ರವರಿಗೆ ಹರ್ಷಾದ್ ವರ್ಕಾಡಿಯವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ಸಂಗ್ರಹಿಸಿದ ಚಿಕಿತ್ಸಾ ಸಹಾಯ ಮೊತ್ತವನ್ನು ಹಸ್ತಾಂತರಿಸಲಾಯಿತು. ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ. ಕೆ. ಅವರು 40,000 ರೂ. ಮೊತ್ತವನ್ನು ಬಶೀರ್ ರವರಿಗೆ ಹಸ್ತಾಂತರಿಸಿದರು. ಮಾಜಿ ಜಿ.ಪಂ ಸ್ಥಾಯಿ ಸಮಿತಿ ಅಧ್ಯಕ್ಷ ಹರ್ಷಾದ್ ವರ್ಕಾಡಿ, ಮಂಜೇಶ್ವರ ಬ್ಲಾಕ್
ಸದಾ ಬದುಕಿನ ಜಂಜಾಟ ಕೆಲಸದ ಒತ್ತಡದ ನಡುವೆಯೂ ‘ಓ ಮನವೇ ರಿಲಾಕ್ಸ್ ಪ್ಲೀಸ್ ‘ ಎನ್ನುವ ಮನಗಳಿಗೆ ಮುದ ನೀಡುವಂತಹ ಬೀಸುವ ತಂಗಾಳಿಯ ಕಡಲ ಅಲೆಗಳ ನರ್ತನ ಮತ್ತೊಂದೆಡೆ ರಮ್ಯ ರಮಣೀಯ ಕಾಮಿನಿ ಹೊಳೆಯ ನಡುವೆ ಪ್ರವಾಸಿಗರನ್ನು ಕೈ ಬೀಸಿ ಸೆಳೆಯುತ್ತಿರುವ ಪ್ರಕೃತಿ ಸೌದರ್ಯದ ಸೊಬಗೇ ಪಡುಬಿದ್ರಿಯ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್.ಪ್ರವಾಸ್ಯೋದ್ಯಮ ಇಲಾಖೆ ಉಡುಪಿ ಜಿಲ್ಲೆಯ ಪಡುಬಿದ್ರಿ ಎಂಡ್ ಪಾಯಿಂಟ್ ಬ್ಲೂ ಫ್ಲ್ಯಾಗ್ ಬೀಚ್ ಮನಮೋಹಕವಾಗಿ