Home Posts tagged #v4news karnataka (Page 90)

ಮೂಡುಬಿದಿರೆ : ಸುರತ್ಕಲ್ ಟೋಲ್‍ಗೇಟ್ ತೆರವಿಗೆ ಆಗ್ರಹ,ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಮೂಡುಬಿದಿರೆ : ಅನಧಿಕೃತ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಕಾರ್ಯಚರಿಸುತ್ತಿರುವ ಸುರತ್ಕಲ್ ಟೋಲ್ಗೇಟನ್ನು ತೆರವುಗೊಳಿಸುವಂತೆ ಆಗ್ರಹಿಸಿ ಮೂಡುಬಿದಿರೆಯ ಬ್ಲಾಕ್ ಕಾಂಗ್ರೆಸ್, ಸಿಪಿಐಎಂ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ತಾಲೂಕು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಯಿತು. ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿ

ಕುಕ್ಕೆ ಸುಬ್ರಹ್ಮಣ್ಯ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ದೇವಸ್ಥಾನದ ಹೆಸರಿಗೆ ಮಾಲಿಕತ್ವದ ಪ್ರಮಾಣಪತ್ರ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಯಶಸ್ವಿನಿ ಆನೆಗೆ ಅರಣ್ಯ ಇಲಾಖೆಯಿಂದ ಮಾಲಿಕತ್ವ ಪ್ರಮಾಣ ಪತ್ರ ದೊರೆತಿದೆ. ಕಳೆದ 18 ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವಸ್ಥಾನದಲ್ಲಿ ಆನೆಗೆ ಇದ್ದರೂ ಮಾಲಿಕತ್ವ ಪ್ರಮಾಣ ಪತ್ರ ದೊರೆತಿರಲಿಲ್ಲ. ಇದೀಗ ಮುಂದಿನ 5 ವರ್ಷಗಳ ವರೆಗೆ ಮಾಲಿಕತ್ವ ದೊರೆತಿರುವುದಾಗಿ ಅರಣ್ಯ ಇಲಾಖೆಯ ಆದೇಶದಲ್ಲಿ ಉಲ್ಲೇಖಿಸಲಾಗಿದೆ. ಕೆಲ ವರ್ಷಗಳ ಹಿಂದೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹಾಲಿ ಕರ್ನಾಟಕ ಸರ್ಕಾರದ ಪ್ರವಾಸೋದ್ಯಮ ಸಚಿವರಾಗಿರುವ

ಶಾಸಕ ಹರೀಶ್ ಪೂಂಜರಿಗೆ ಜೀವ ಬೆದರಿಕೆ ಒಡ್ಡಿದ ಆರೋಪಿಯ ಬಂಧನ

ಬಂಟ್ವಾಳ: ಶಾಸಕ ಹರೀಶ್ ಪೂಂಜಾ ಅವರ ಕಾರನ್ನು ಅಡ್ಡಗಟ್ಟಿ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಶುಕ್ರವಾರ ರಾತ್ರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಅವರು, ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಫಳ್ನೀರು ನಿವಾಸಿ ರಿಯಾಜ್ (38) ಎಂಬಾತನನ್ನು ಬಂಧಿಸಲಾಗಿದ್ದು, ಘಟನೆಗೆ ಸಂಬಂಧಿಸಿ

ಬಹರೇನ್ ದ್ವೀಪದಲ್ಲಿ “ಪಟ್ಲ ಸಂಭ್ರಮ”ಕ್ಕೆ ಕ್ಷಣಗಣನೆ ಆರಂಭ

ಬಹರೈನ್ : ಯಕ್ಷಧ್ರುವ ಪಟ್ಲಾ ಫೌಂಡೇಶನ್‍ನ ಬಹರೈನ್ ಹಾಗು ಸೌದಿ ಅರೇಬಿಯಾ ಘಟಕವು ದ್ವಿತೀಯ ವಾರ್ಷಿಕೋತ್ಸವದ ಸಂಭ್ರಮದಲ್ಲಿದ್ದು ತನ್ನ ಎರಡನೇ ವಾರ್ಷಿಕೋತ್ಸವದ ಅಂಗವಾಗಿ ” ಶಶಿಪ್ರಭಾ ಪರಿಣಯ” ಎನ್ನುವ ಪ್ರಸಂಗವನ್ನು ಆಡಿತೋರಿಸಲಿದೆ. ಈ ಕಾರ್ಯಮದ ಪೂರ್ವಭಾವಿ ತಯಾರಿಯು ಭರದಿಂದ ಸಾಗಿದ್ದು ದ್ವಿತೀಯ ವಾರ್ಷಿಕ ಪಟ್ಲ ಸಂಭ್ರಮಕ್ಕೆ ಇದಾಗಲೇ ಕ್ಷಣಗಣನೆ ಪ್ರಾರಂಭವಾಗಿದೆ. ಈ ಯಕ್ಷಗಾನ ಕಾರ್ಯಕ್ರಮವು ಅಕ್ಟೋಬರ್ 28ರ ಶುಕ್ರವಾರದಂದು ಮನಾಮದಲ್ಲಿರುವ

ಡಿ. 16ರಂದು ಕರಾವಳಿಯಾದ್ಯಂತ ಶಕಲಕ ಬೂಮ್ ಬೂಮ್ ತುಳು ಸಿನಿಮಾ ಬಿಡುಗಡೆ

ತುಳು ಸಿನಿಮಾದಲ್ಲಿ ವೈವಿಧ್ಯತೆ ಇರಬೇಕು ಎಂಬ ನೆಲೆಯಲ್ಲಿ ಯು ಎನ್ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಶ್ರೀಷಾ ಎಲಾರೆ ಅವರು ನಿರ್ದೇಶಿಸಿದ ಹಾರರ್, ಥ್ರಿಲ್ಲರ್ ಸಸ್ಪೆನ್ಸ್ ಕಾಮಿಡಿಯನ್ನು ಹೊಂದಿರುವ ಹೊಸತನದ ಬಹು ನಿರೀಕ್ಷೆಯ ಶಕಲಕ ಬೂಮ್ ಬೂಮ್ ಚಿತ್ರ ಡಿಸೆಂಬರ್ 16 ರಂದು ಕರಾವಳಿಯ ಎಲ್ಲಾ ಚಿತ್ರಮಂದಿರಗಳಲ್ಲಿ ತೆರೆಕಾಣಲಿದೆ. ನಗರದ ಪ್ರಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಚಿತ್ರದ ನಿರ್ದೇಶಕ ಸುನೀಲ್ ಕಡತಳ ಅವರು, ತುಳು ಚಿತ್ರರಂಗ

“ಕೋಟಿ-ಚೆನ್ನಯ” ಹೆಸರಿನಲ್ಲಿ ಬಸ್ ನಿಲ್ದಾಣ

ಪುತ್ತೂರು: ಇನ್ಮುಂದೆ ಪುತ್ತೂರು ಕೆಎಸ್‌ಆರ್‌ಟಿಸಿಗೆ ಬಸ್‌ ನಿಲ್ದಾಣಕ್ಕೆ ತುಳುನಾಡಿನ ಅವಳಿ ವೀರಪುತ್ರರ ಹೆಸರಿನಲ್ಲಿ “ಕೋಟಿ-ಚೆನ್ನಯ” ಬಸ್ ನಿಲ್ದಾಣ ಎಂಬುದಾಗಿ ನಾಮಕರಣ ಮಾಡಲು ಸರ್ಕಾರದ ಅನುಮೋದನೆ ನೀಡಿದೆ. ಈ ಹಿಂದೆ ಪಡುಮಲೆ ಕೋಟಿ ಚೆನ್ನಯ್ಯ ಸಂಚಲನ ಟ್ರಸ್ಟ್‌ ನಿಯೋಗದಿಂದ ಶಾಸಕ ಸಂಜೀವ ಮಠಂದೂರು ಅವರಿಗೆ ಈ ಬಗ್ಗೆ ಮನವಿ ನೀಡಲಾಗಿತ್ತು.ಈ ಪ್ರಸ್ತಾವನೆಯನ್ನು ಪರಿಶೀಲಿಸಿ, ದಕ್ಷಿಣ ಕನ್ನಡ ಜಿಲ್ಲೆ, ಪುತ್ತೂರು ನಗರದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ

ಉಡುಪಿ : ದಿಶಾ ಸರ್ಜಿಕಲ್ಸ್ & ಲೈಫ್ ಕೇರ್ ಶುಭಾರಂಭ

ಉಡುಪಿ ನಗರದಲ್ಲಿ ನೂತನವಾಗಿ ಶುಭಾರಂಭಗೊಂಡ ದಿಶಾ ಸರ್ಜಿಕಲ್ಸ್ & ಲೈಫ್ ಕೇರ್, ಹಳೆ ಡಯಾನ ಸರ್ಕಲ್ ನ ಕಲ್ಪನಾ ರೆಸಿಡೆನ್ಸಿ ಬಿಲ್ಡಿಂಗ್ ನೆಲ ಮಹಡಿಯಲ್ಲಿ ಜನರ ಸೇವೆಗಾಗಿ ತೆರೆದುಕೊಂಡಿದೆ. ಇದರ ಉದ್ಘಾಟನಾ ಸಮಾರಂಭವು ಅಕ್ಟೋಬರ್ 14, 2022 ರ ಶುಕ್ರವಾರದಂದು ಜರುಗಿತ್ತು. ಈ ಶುಭ ಸಂದರ್ಭದಲ್ಲಿ ಕೇಂದ್ರ ಕೃಷಿ ಹಾಗೂ ರೈತ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಉದ್ಘಾಟನೆ ನೆರವೇರಿಸಿದರು. ಕರ್ಲಾನ್ ಲಿಮಿಟೆಡ್ ಸಂಸ್ಥೆಯ ಸಿಎಂಡಿ ಟಿ. ಸುಧಾಕರ್ ಪೈ

ಬೈಕಂಪಾಡಿ :ಫಾಕ್ಟರಿಯಲ್ಲಿ ಕೋಟ್ಯಾಂತರ ಮೌಲ್ಯದ ಕಚ್ಚಾ ಸಾಮಾಗ್ರಿ ಕಳವು

ಮಂಗಳೂರು ನಗರದ ಬೈಕಂಪಾಡಿ ಇಂಡಸ್ಟ್ರೀಯಲ್ ಏರಿಯಾದಲ್ಲಿರುವ ಬ್ರೈಟ್ ಪ್ಯಾಕೇಜಿಂಗ್ ಪ್ರೈವೆಟ್ ಲಿಮಿಟೆಡ್ ಕಂಪೆನಿಗೆ ಗುಜರಾತ್‍ನಿಂದ ಬರುತ್ತಿದ್ದ ಕೋಟ್ಯಾಂತರ ಪ್ಲಾಸ್ಟಿಕ್ ಕಚ್ಛಾ ಸಾಮಾಗ್ರಿಗಳನ್ನು ಕಳವು ಮಾಡಿ ಮಾರಾಟ ಮಾಡಿ ಕಂಪೆನಿಗೆ ಮೋಸ ಮಾಡಿದ ಕಂಪೆನಿಯ ನೌಕರ ಹಾಗೂ ಇತರ ಮೂರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಹಾಗೂ ಪಣಂಬೂರು ಪೆÇಲೀಸರು ಜಂಟಿ ಕಾರ್ಯಾಚರಣೆ ನಡೆಸಿ ದಸ್ತಗಿರಿ ಮಾಡಿ ಪ್ರಕರಣವನ್ನು ಭೇದಿಸಿರುತ್ತಾರೆ.

ಉಚ್ಚಿಲ : ಏಕಾಏಕಿ ಮುಚ್ಚಿದ ಹೆದ್ದಾರಿ,ಗಲಿಬಿಲಿಗೊಂಡ ವಾಹನ ಸವಾರರು

ಕಾಮಗಾರಿಯ ಹೆಸರಲ್ಲಿ ಹೆದ್ದಾರಿಯನ್ನು ಏಕಾಏಕಿ ಮುಚ್ಚಿದ ಪರಿಣಾಮ ವಾಹನ ಸವಾರರು ಗಲಿಬಿಲಿಕೊಂಡು ರಾತ್ರಿ ಹೊತ್ತು ಸರಣಿ ಅಪಘಾತ ನಡೆದ ಘಟನೆ ಉಚ್ಚಿಲದಲ್ಲಿ ನಡೆದಿದೆ. ಪೊಲೀಸ್ ಇಲಾಖೆ ಸಹಿತ ಸಾರ್ವಜನಿಕರಿಗೆ ಯಾವುದೇ ಮಾಹಿತಿ ನೀಡಿದೆ ಕಾಮಗಾರಿ ಹೆಸರಲ್ಲಿ ಅಪಾಯಕಾರಿಯಾಗಿ ಹೆದ್ದಾರಿ ಮುಚ್ಚಿದ್ದು ಒಂದು ಕಡೆಯಾದರೆ, ಮತ್ತೊಂದು ಕಡೆ ಹೆದ್ದಾರಿ ಡಿವೈಡರ್ ಗಳಲ್ಲಿ ದಾರಿದೀಪಕ್ಕಾಗಿ ಎಲ್ಲೆಡೆ ಟವರ್‍ಗಳನ್ನು ನಿರ್ಮಿಸಿ ಅದೆಷ್ಟೋ ಕಾಲವಾದರೂ ದೀಪ

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

ಉಡುಪಿಯಲ್ಲಿ ಅಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಯುವಕ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಲು ನಿರ್ಧರಿಸಿದ್ದರು, ಅಂತೆಯೇ ಅಂಗಾಂಗಗಳನ್ನು ದಾನ ಮಾಡುವ ಪಕ್ರಿಯೆ ನಡೆಯಿತು. ಮಣಿಪಾಲ ಆಸ್ಪತ್ರೆಯ ವೈದ್ಯರು ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರನ್ನು ರಕ್ಷಿಸಲು