Home Posts tagged V4News (Page 114)

ಮುಲ್ಕಿ : ಪೇಜಾವರ ಸ್ವಾಮಿಗಳಿಗೆ ಪಿತೃ ವಿಯೋಗ

ಪೇಜಾವರ ಸ್ವಾಮೀಜಿಗಳ ಪೂರ್ವಶ್ರಮದ ತೀರ್ಥ ರೂಪರಾದ ಶತಾಯುಷಿ ಪಕ್ಷಿಕೆರೆ ಸಮೀಪದ ಅಂಗಡಿಮಾರು ಕೃಷ್ಣ ಭಟ್ಟರು ಭಾನುವಾರ ತಡರಾತ್ರಿ ನಿಧನ ರಾದರು.ಅವರಿಗೆ 103 ವರ್ಷ ವಯಸ್ಸಾಗಿತ್ತು. ಕೃಷ್ಣ ಭಟ್ಟರು ಪೇಜಾವರ ವಿಶ್ವಪ್ರಸನ್ನ ಸ್ವಾಮೀಜಿ ಸಹಿತ 5 ಪುತ್ರರು ಹಾಗೂ 6 ಪುತ್ರಿಯರನ್ನು ಅಗಲಿದ್ದಾರೆ. ಪಕ್ಷಿಕೆರೆ ಸಮೀಪದ ಅಂಗಡಿಮಾರು ಬಳಿ ಹಿರಿಯ ಕೃಷಿಕರಾಗಿದ್ದ ಅವರು ಕಳೆದ

ವಿಟ್ಲ ;ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ

ವಿಟ್ಲ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ ಬೈಕ್ ಸವಾರ ಅಬ್ದುಲ್ ಆಸೀಫ್ ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸಹ ಸವಾರ ಇಮ್ರಾನ್ ಅಪಾಯದಿಂದ ಪಾರಾಗಿದ್ದಾರೆ. ಇವರು ವಿಟ್ಲ ಕಡೆಯಿಂದ ಕಂಬಳಬೆಟ್ಟು ಕಡೆಗೆ ತೆರಳುತ್ತಿದ್ದಾಗ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಬೈಲೂರು : ಸೈಬರ್ ಕ್ರೈಂ ಮಾಹಿತಿ ಶಿಬಿರ ಉದ್ಘಾಟನೆ

ರಾಜ್ಯದಲ್ಲಿ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚುತಿದ್ದು ವಿದ್ಯಾವಂತ ನಿರುದ್ಯೋಗಿಗಳೆ ಇದರ ಟಾರ್ಗೆಟ್ ಆಗುತಿದ್ದಾರೆ ಎಂದು ಉಡುಪಿ ಜಿಲ್ಲಾ ಎ ಎಸ್ಪಿ ಸಿದ್ದಲಿಂಗಪ್ಪ ಹೇಳಿದರು. ಅವರು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಕಾರ್ಕಳ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಇದರ ರಜತ ಮಹೋತ್ಸವ ಅಂಗವಾಗಿ ಲಯನ್ಸ್ ಕ್ಲಬ್ ನೀರೆ ಬೈಲೂರು ಮತ್ತು ಧ್ವನಿ ಬೆಳಕು ಸಂಯೋಜಕರ ಸಂಘಟನೆ ಕಾರ್ಕಳ ಇವರ ಸಹಯೋಗದೊಂದಿಗೆ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜಿನ

ಹಕ್ಕು ಪತ್ರಕ್ಕಾಗಿ ಹಣವನ್ನು ಕಳೆದುಕೊಳ್ಳಬೇಡಿ : ಶಾಸಕ ಉಮಾನಾಥ್ ಕೋಟ್ಯಾನ್

ನಾವು ಹಕ್ಕುಪತ್ರ ನೀಡುತ್ತೇವೆ ಎಂದು ಮೀಟಿಂಗ್ ಗೆ ಕರೆದು ನಿಮ್ಮಿಂದ ಹಣವನ್ನು ಪಡೆದು ಮೋಸ ಮಾಡುವವರಿದ್ದಾರೆ ಆದ್ದರಿಂದ ಮೋಸದ ಮಾತುಗಳಿಗೆ ಬಲಿಯಾಗಿ ಹಣವನ್ನು ಕಳೆದುಕೊಳ್ಳದಿರಿ ಎಂದು ಶಾಸಕ ಉಮಾನಾಥ್ ಕೋಟ್ಯಾನ್ ಜನರನ್ನು ಎಚ್ಚರಿಸಿದ್ದಾರೆ. ಅವರು ಮೂಡುಬಿದಿರೆ ತಾಲೂಕು ವ್ಯಾಪ್ತಿಯ ಅರ್ಹ ಫಲಾನುಭವಿಗಳಿಗೆ 94ಸಿ 57, 94ಸಿಸಿ 17ಮಂಜೂರಾತಿ ಆದೇಶ ಪತ್ರ ಹಾಗೂ ಪಿಂಚಣಿ ದಿನದಂಗವಾಗಿ 31ಪಿಂಚಣಿ ಆದೇಶ ಪತ್ರವನ್ನು ತಾಲೂಕು ಆಡಳಿತ ಸೌಧದಲ್ಲಿ ವಿತರಿಸಿ ಮಾತನಾಡಿದರು.

ಲೋಕ ಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28 ಸ್ಥಾನದಲ್ಲೂ ಗೆಲುವು : ಡಿ.ವಿ. ಸದಾನಂದ ಗೌಡ

ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಎನ್.ಡಿ.ಎ. 25 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇದೀಗ ಜೆಡಿಎಸ್ ಕೂಡ ಎನ್.ಡಿ.ಎ. ಜೊತೆಯಿದ್ದು, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ 28ರಲ್ಲಿ 28 ಸ್ಥಾನಗಳನ್ನು ಎನ್.ಡಿ.ಎ. ಗೆದ್ದುಕೊಳ್ಳುವ ಮೂಲಕ ವಿಧಾನ ಸಭಾ ಚುನಾವಣೆಯಲ್ಲಿ ಕಳೆದುಕೊಂಡದನ್ನು ಬಡ್ಡಿ ಸಮೇತ ಪಡೆದುಕೊಳ್ಳಲಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಡಿ.ವಿ. ಸದಾನಂದ ಗೌಡ ಹೇಳಿದರು. ಅವರು ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಾಧ್ಯಮದವರೊಂದಿಗೆ

ಮೂಡುಬಿದಿರೆ : ಪ.ಪೂ ಕಾಲೇಜುಗಳ ತಾಲೂಕು ಮಟ್ಟದ ಕ್ರೀಡಾಕೂಟ

ವಿದ್ಯಾರ್ಥಿಗಳು ಕಲಿಕೆ ಜತೆಗೆ ಕ್ರೀಡೆಗೂ ಆದ್ಯತೆಯನ್ನು ನೀಡಬೇಕು. ಪಠ್ಯದಲ್ಲಿ ಸಾಧನೆ ಮಾಡಿದಂತೆ ಕ್ರೀಡೆಯಲ್ಲೂ ಸಾಧನೆ ಮಾಡುವ ವಿದ್ಯಾರ್ಥಿಗಳಿಗೆ ಉತ್ತಮ ಉದ್ಯೋಗವಕಾಶಗಳಿವೆ ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು. ಅವರು ಶಾಲಾ ಶಿಕ್ಷಣ ಇಲಾಖೆ ಹಾಗೂ ನ್ಯೂ ವೈಬ್ರೆಂಟ್ ಪ.ಪೂ ಕಾಲೇಜು ಸಂಯುಕ್ತ ಆಶ್ರಯದಲ್ಲಿ ಸ್ವರಾಜ್ಯ ಮೈದಾನದಲ್ಲಿ ನಡೆದ ಮೂಡುಬಿದಿರೆ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಪಾರಿವಾಳವನ್ನು ಬಾನೆತ್ತರಕ್ಕೆ ಬಿಡುವ ಮೂಲಕ ಉದ್ಘಾಟಿಸಿ

ಬೆಳ್ತಂಗಡಿ – ಬಾವಿಯಲ್ಲಿ ಮಹಿಳೆಯ ಶವ ಪತ್ತೆ

ಬೆಳ್ತಂಗಡಿಯಲ್ಲಿ ಮಹಿಳೆಯ ಶವ ಬಾವಿಯಲ್ಲಿ ಪತ್ತೆಯಾಗಿದ್ದು ಇದು ಕೊಲೆ ಎಂಬ ಅನುಮಾನ ವ್ಯಕ್ತವಾಗಿದೆ. ಬೆಳ್ತಂಗಡಿ ತಾಲೂಕಿನ ಬೆಲಾಲು ಗ್ರಾಮದ ಮಾಚಾರು ಬಳಿಯ ಕೆಂಪನೊಟ್ಟು ಎಂಬಲ್ಲಿ ಈ ಘಟನೆ ನಡೆದಿದ್ದು ಕೊಲೆ ಮಾಡಿ ಬಾವಿಗೆ ಎಸೆದಿದ್ದಾರೆ ಎಂಬ ಅನುಮಾನ ಇದೆ. ಮೃತಪಟ್ಟ ಮಹಿಳೆ ಸುಧಾಕರ ಎಂಬವರ ಪತ್ನಿ 27 ವರ್ಷದ ಶಶಿಕಲಾ ಎಂದು ಗುರುತಿಸಲಾಗಿದೆ. ಮೃತರ ಗಂಡ ಸುಧಾಕರ ರಬ್ಬರ್ ಟಾಪಿಂಗ್ ಮಾಡುತ್ತಿದ್ದು ಗಂಡ ಹೆಂಡತಿ ನಡುವೆ ಗಲಾಟೆ ನಡೆದು ನಂತರ ಕೊಲೆ ಮಾಡಿ ಶಶಿಕಲರನ್ನ

ಶ್ರವಣಬೆಳಗೊಳ – ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ

ಶ್ರವಣಬೆಳಗೊಳ ಹೋಬಳಿಯ ಹಡೇನಹಳ್ಳಿ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ಹಾಲು ಉತ್ಪಾದಕರು ಸುಮಾರು 1000 ಲೀಟರ್ ಹಾಲನ್ನು ನೆಲಕ್ಕೆ ಸುರಿದು ಪ್ರತಿಭಟನೆ ನಡೆಸಿದ್ದಾರೆ. 23 ವರ್ಷಗಳ ಹಿಂದೆ ಆರಂಭಗೊಂಡಿರುವ ಈ ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘಕ್ಕೆ ಅಂದಿನಿಂದ ಇಂದಿನವರೆಗೂ ಇದೇ ಗ್ರಾಮದ ಜಯಂತಿ ಎಂಬುವವರು ಕಾರ್ಯದರ್ಶಿಯಾಗಿದ್ದಾರೆ. ಇತ್ತೀಚೆಗೆ ಹೊಸ ಆಡಳಿತ ಮಂಡಳಿ ರಚನೆಯಾಗಿದ್ದು, ಜಯಂತಿಯವರನ್ನು ಈವರೆಗಿನ ಖರ್ಚು ವೆಚ್ಚದ ವರದಿಯನ್ನು ಕೇಳಲಾಗಿದೆ. ಆದರೆ

ಪಡುಬಿದ್ರಿ: ಪಡುಬಿದ್ರಿ ಪೇಟೆ ಸಂಚಾರ ಅವ್ಯವಸ್ಥೆಗೆ ಯುವಕ ಬಲಿ

ರಾಷ್ಟ್ರೀಯ ಹೆದ್ದಾರಿಯಲ್ಲೇ ವಾಹನ ನಿಲುಗಡೆ ಪರಿಪಾಠ ಹೊಂದಿರುವ ಪಡುಬಿದ್ರಿ ಪೇಟೆ ಪ್ರದೇಶದಲ್ಲಿ ಟ್ಯಾಂಕರ್ ನಡಿಗೆ ಬಿದ್ದ ಯುವಕನೊರ್ವ ದಾರುಣವಾಗಿ ಮೃತಪಟ್ಟ ಘಟನೆ ಘಟಿಸಿದೆ. ಮೃತ ಯುವಕ ಪಡುಬಿದ್ರಿ ಕಂಚಿನಡ್ಕ ನಿವಾಸಿ ರಮೇಶ್ ಪೂಜಾರಿ ಎಂಬವರ ಪುತ್ರ ಪ್ರಜ್ವಲ್ ಪೂಜಾರಿ (19) ಈತ ಎಲ್ಲೂರಿನಲ್ಲಿ ಐಟಿಐ ಕೋರ್ಸ್ ನಡೆಸುತ್ತಿದ್ದು, ಇವರ ಸಂಬಂಧಿಗಳು ಮೃತಪಟ್ಟ ಹಿನ್ನಲೆಯಲ್ಲಿ ಈತನ ಮನೆಮಂದಿ ಕಿನ್ನಿಗೋಳಿಯ ಅಂಗರಗುಡ್ಡೆಗೆ ಹೋದ ಕಾರಣ ಈತನೂ ಅಲ್ಲಿಗೆ ಹೊರಟು

ಸುಳ್ಯ : ಸುಳ್ಯ ಪೇಟೆಯಲ್ಲಿ ಮಳೆಗೆ ಧರೆಗುರುಳಿದ ಟ್ರಾನ್ಸ್ ಫಾರ್ಮರ್

ಸುಳ್ಯ ಪೇಟೆಯಲ್ಲಿ ಭಾರಿ ಮಳೆಗೆ ಭೂಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರೆಗುರುಳಿರುವ ಘಟನೆ ನಡೆದಿದೆ ಸುಳ್ಯ ತಾಲೂಕಿನಲ್ಲಿ ಕಳೆದ ಕೆಲವು ದಿನಗಳಿಂದ ಗುಡುಗು ಸಹಿತ ಭಾರಿ ಮಳೆಯಾಗುತ್ತಿದು ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಭಾರಿ ಮಳೆಯಿಂದಾಗಿ ಸುಳ್ಯ ತಾಲೂಕಿನ ಹಲವೆಡೆ ಭೂ ಕುಸಿತ ಉಂಟಾಗಿದೆ. ಏಕಾಏಕಿ ಭೂ ಕುಸಿತ ಉಂಟಾಗಿ ಟ್ರಾನ್ರ್ಸ್‍ಫಾರ್ಮರ್ ಧರಾಶಾಹಿಯಾಗಿರುವ ಘಟನೆ ಸುಳ್ಯ ಪೇಟೆಯಲ್ಲಿ ನಡೆದಿದೆ.