Home Posts tagged V4News (Page 115)

ಪಡುಬಿದ್ರಿ: ಜನತೆಗೆ ಸಮಸ್ಯೆಯೊಡುತ್ತಿರುವ ಜೈಹಿಂದ್ ಸ್ಟೀಲ್ ಕಂಪನಿ ವಿರುದ್ಧ ಸಿಡಿದ್ದೆದ್ದ ಜನತೆ: ಬೃಹತ್ ಪ್ರತಿಭಟನೆಯ ಎಚ್ಚರಿಕೆ

ಜನರಿಗೆ ಸಮಸ್ಯೆಯೊಡ್ಡುತ್ತಿರುವ ಸುಜ್ಲಾನ್ ಕಂಪನಿಯ ಸಮೀಪದ ಜೈಹಿಂದ್ ಟ್ಯೂಬ್ಸ್ ಪ್ರೈವೇಟ್ ಲಿಮಿಟೆಡ್ ಕಂಪನಿಯ ವಿರುದ್ಧ ಸಿಡಿದ್ದೇದ್ದ ಜನರು ಕಂಪನಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದು, ಇಪ್ಪತ್ತು ದಿನದೊಳಗೆ ಸಮಸ್ಯೆ ಇತ್ಯರ್ಥ ಮಾಡದೇ ಇದ್ದಲ್ಲಿ ಕಂಪನಿಯ ಮುಂಭಾಗ ಬೃಹತ್ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ. ಪಡುಬಿದ್ರಿ-ಹೆಜಮಾಡಿ ಗಡಿಭಾಗದಲ್ಲಿ ಇರುವ

ಜೀರ್ಣೋದ್ಧಾರ ಹಂತದಲ್ಲಿರುವ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರ

ಬಂಟ್ವಾಳದ ತುಂಬೆ ಶ್ರೀ ಮಹಾಲಿಂಗೇಶ್ವರ ಕ್ಷೇತ್ರವು ಜೀರ್ಣೋದ್ಧಾರ ಹಂತದಲ್ಲಿದ್ದು, ಶ್ರೀ ಮಹಾಲಿಂಗೇಶ್ವರನ ದಿವ್ಯ ಸಾನಿಧ್ಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರಯವ ನೂತನ ಧ್ವಜ ಸ್ತಂಭದ ತೈಲಾಧಿವಾಸ ಕಾರ್ಯಕ್ರಮವು ಜರುಗಿತು. ಬ್ರಹ್ಮಶ್ರೀ ಉಚ್ಚಿಲತ್ತಾಯ ನೀಲೇಶ್ವರ ಪದ್ಮನಾಭ ತಂತ್ರಿಗಳ ಮಾರ್ಗದರ್ಶನದಲ್ಲಿ ಧ್ವಜ ಸ್ತಂಭದ ಪ್ರತಿಷ್ಠಾಪನೆಯು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಿತು. ಶ್ರೀ ಕ್ಷೇತ್ರ ಶ್ರೀ ಧಾಮ ಮಾಣಿಲ, ಶ್ರೀ ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನದ

ರೈಲ್ವೇ ಖಾಸಗೀಕರಣದ ವಿರುದ್ಧ ದೇಶಾದ್ಯಂತ ಪ್ರತಿಭಟನೆ

ಪುತ್ತೂರು: ದೇಶದ ಆರ್ಥಿಕತೆಯ ಜೀವಾಳ, ಜನರ ಜೀವನಾಡಿ ರೈಲ್ವೇ ಖಾಸಗೀಕರಣದ ವಿರುದ್ಧ ದೇಶದಾದ್ಯಂತ ಎಲ್ಲಾ ರೈಲ್ವೇ ನಿಲ್ದಾಣಗಳ ಎದುರು ಬೃಹತ್ ಪ್ರತಿಭಟನೆ ನಡೆಯುತ್ತಿದ್ದು, ಈ ನಿಟ್ಟಿನಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್, ದ.ಕ.ಜಿಲ್ಲಾ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ, ವಿವಿಧ ರೈತ ಸಂಘಟನೆಗಳ ಒಕ್ಕೂಟ ಹಾಗೂ ವಿದ್ಯಾರ್ಥಿ ಯುವಜನ ಮಹಿಳಾ ದಲಿತ ಆದಿವಾಸಿ ಹಾಗೂ ಜನಪರ ಸಂಘಟನೆಗಳ ವೇದಿಕೆ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಸಭೆ ಪುತ್ತೂರಿನ ರೈಲ್ವೇ

ತೊಕ್ಕೊಟ್ಟು: ಕೊಚ್ಚಿನ್ ಬೇಕರಿಯ ಮಳಿಗೆ ಶುಭಾರಂಭ

ತನ್ನದೇ ಆದ ರುಚಿ, ಗುಣಮಟ್ಟಕ್ಕೆ ಪ್ರಸಿದ್ಧಿಯನ್ನು ಪಡೆದ ಕೇಕ್ ಮತ್ತು ಸ್ವೀಟ್‍ನ ಕೊಚ್ಚಿನ್ ಬೇಕರಿಯ ಮತ್ತೊಂದು ಮಳಿಗೆ ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿ ಶುಭಾರಂಭಗೊಂಡಿತು. ಉತ್ತಮ ಆಹಾರಕ್ಕಿಂತ ಹೆಚ್ಚಿನ ಸಂತೋಷವನ್ನು ಬೇರೆ ಯಾವುದೂ ಜನರಿಗೆ ತರುವುದಿಲ್ಲ.ಕೇಕ್‍ಗಳು, ಸಿಹಿತಿಂಡಿಗಳು ಮತ್ತು ಬೇಕರಿ ವಸ್ತುಗಳ ಎಲ್ಲಾ ಆಹಾರ ಉತ್ಪನ್ನಗಳಲ್ಲಿ ಹೆಚ್ಚು ಜನಪ್ರಿಯತೆಯನ್ನು ಪಡೆದುಕೊಂಡಿದೆ. ದಕ್ಷಿಣ ಭಾರತದ ಅತ್ಯುತ್ತಮ ಬೇಕರಿ ಉತ್ಪನ್ನಗಳ

ಮಂಗಳೂರು: ವಿದ್ಯುತ್ ಖಾಸಗೀಕರಣದ ಮೂಲಕ ದೇಶವನ್ನೇ ಕತ್ತಲು ಮಾಡುವ ಹುನ್ನಾರ – ಸುನಿಲ್ ಕುಮಾರ್ ಬಜಾಲ್

ವಿದ್ಯುತ್ ಕ್ಷೇತ್ರದಲ್ಲಿನ ಉತ್ಪಾದನೆ,ವಿತರಣೆ ಹಾಗೂ ಕಂದಾಯ ಆಕರಣೆ ಇದ್ಯಾವುದನ್ನೂ ಸರಕಾರ ಮಾಡಬಾರದು. ಅವೆಲ್ಲವನ್ನೂ ಖಾಸಗೀಯವರಿಗೆ ವಹಿಸಿ ಸರಕಾರ ತನ್ನ ಜವಾಬ್ದಾರಿಯಿಂದ ಮುಕ್ತವಾಗಬೇಕು ಎಂದು ಕೇಂದ್ರ ಸರಕಾರದ ಅಡಿಯಲ್ಲಿರುವ ನೀತಿ ಆಯೋಗ ಅತ್ಯಂತ ಸ್ಪಷ್ಟವಾಗಿ ಹೇಳಿರುವುದು, ದೇಶದ ಸಂಪತ್ತನ್ನು ಮಾರಲು ಹೊರಟ ಕೇಂದ್ರ ಸರಕಾರದ ಧೋರಣೆ ಏನೆಂಬುದು ಜಗಜ್ಜಾಹೀರಾಗಿದೆ.ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣ ಖಾಸಗೀಕರಣಗೊಳಿಸುವ ಮೂಲಕ ಇಡೀ ದೇಶವನ್ನೇ ಕತ್ತಲು ಮಾಡಲು

ಕುಂದಾಪುರ: ತಾಲೂಕು ಆಸ್ಪತ್ರೆಗೆ ವಿದ್ಯಾರ್ಥಿಗಳ ಭೇಟಿ, ಆಸ್ಪತ್ರೆಯ ಕಾರ್ಯವೈಖರಿ ವೀಕ್ಷಣೆ

ಕುಂದಾಪುರ: ಕಂಡ್ಲೂರಿನ ಝಿಯಾ ಪಬ್ಲಿಕ್ ಇಂಗ್ಲೀಷ್ ಮೀಡಿಯಂ ಸ್ಕೂಲ್‍ನ ನೂರಕ್ಕೂ ಅಧಿಕ ವಿದ್ಯಾರ್ಥಿಗಳು ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಆಗಮಿಸಿ ಕಾರ್ಯವೈಖರಿಗಳನ್ನು ವೀಕ್ಷಿಸಿದರು. ಈ ಸಂದರ್ಭ ಕುಂದಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ ಮುಖ್ಯ ಆಡಳಿತ ಶಸ್ತ್ರಚಿಕಿತ್ಸಕರಾದ ಡಾ. ರೊಬರ್ಟ್ ರೆಬೆಲ್ಲೋ ವಿದ್ಯಾರ್ಥಿಗಳ ಜೊತೆ ಮಾತನಾಡಿ, ಸರಕಾರಿ ಸೇವೆ ಮಾಡುವುದು ಉತ್ತಮ ಅವಕಾಶ. ಅದರಲ್ಲೂ ಸರಕಾರಿ ವೈದ್ಯ ವೃತ್ತಿ ದೇವರು ಮೆಚ್ಚುವ ಕೆಲಸ.

ಕಡಬ :ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾಡಿದ ಸುಬ್ರಹ್ಮಣ್ಯ ಮೈಕ್ರೋ ಪರಮೇಶ್

ಅಕ್ಕಿ ಕಾಳಿನಲ್ಲಿ ಬರೆಯುವ ಸೂಕ್ಷ್ಮ ಕಲೆಯನ್ನು ಕರಗತ ಮಾಡಿಕೊಡಿರುವ ಕಲಾ ಸಾಧಕ, ಕಡಬ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ಮೈಕ್ರೋ ಪರಮೇಶ್ ಅವರು ನಾಡಗೀತೆಯನ್ನು ಅಕ್ಕಿ ಕಾಳಿನಲ್ಲಿ ಬರೆದು ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡಿದ್ದಾರೆ. 120 ನಿಮಿಷದಲ್ಲಿ 136 ಅಕ್ಕಿ ಕಾಳನ್ನು ಬಳಸಿಕೊಂಡು ನಾಡಗೀತೆ ಜೈ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆ ಪದ್ಯವನ್ನು ಬರೆದು ಈ ಸಾಧನೆ ಮಾಡಿದ್ದಾರೆ. ಅತೀ ಕಡಿಮೆ ಅವಧಿಯಲ್ಲಿ ಕನಿಷ್ಠ ಅಕ್ಕಿ ಕಾಳಿನಲ್ಲಿ ನಾಡಗೀತೆ

ಮೂಡುಬಿದಿರೆ : ವಿಶೇಷ ಚೇತನರ ದ.ಕ.ಜಿಲ್ಲಾ ಮಟ್ಟದ ಕ್ರೀಡಾಕೂಟ ಸಮಾರೋಪ: ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ : ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪ ನಿರ್ದೇಶಕರ ಕಛೇರಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಾಗೂ ರೋಟರಿ ಆಂಗ್ಲ ಮಾಧ್ಯಮ ಶಾಲೆ, ಮೂಡುಬಿದಿರೆ ಇವರ ಸಹಯೋಗದೊಂದಿಗೆ ನಡೆದ ದ.ಕ. ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢಶಾಲಾ ವಿಶೇಷ ಸಾಮರ್ಥ್ಯದ ಮಕ್ಕಳ ಕ್ರೀಡಾಕೂಟದಲ್ಲಿ 14 ವರ್ಷ ವಯೋಮಿತಿಯ ವಿಭಾಗದಲ್ಲಿ ಬೆಳ್ತಂಗಡಿ ತಾಲೂಕು ಹಾಗೂ‌ 17ರ ವಯೋಮಿತಿಯ ವಿಭಾಗದಲ್ಲಿ ಬಂಟ್ವಾಳ ತಾಲೂಕು ಸಮಗ್ರ ಪ್ರಶಸ್ತಿಯನ್ನು

ಮೂಡುಬಿದಿರೆ: ಮೈಸೂರು ವಿಭಾಗೀಯ ಮಟ್ಟದ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಾಗಾರಕ್ಕೆ ಚಾಲನೆ

ದ.ಕ.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ಮೂಡುಬಿದಿರೆ ಇವುಗಳ ಜಂಟಿ ಆಶ್ರಯದಲ್ಲಿ ಮೂರು ದಿನಗಳ ಕಾಲ ನಡೆಯುವ “ಮೈಸೂರು ವಿಭಾಗೀಯ ಮಟ್ಟದ ಜಾನಪದ ಕಲಾ ತಂಡಗಳ ತರಬೇತಿ ಕಾರ್ಯಗಾರ”ವು ವಿದ್ಯಾಗಿರಿಯ ಶ್ರೀಮತಿ ಅಪ್ಪಾಜಿ ನಾಯಕ್ ಸಭಾಂಗಣದಲ್ಲಿ ಗುರುವಾರ ಆರಂಭಗೊಂಡಿತು. ಮೈಸೂರು ವಿಭಾಗದ ಆ.ಕು.ಕ.ಸೇವೆಯ ವಿಭಾಗೀಯ ಜಂಟಿ‌ ನಿರ್ದೇಶಕಿ ಡಾ.ರಾಜೇಶ್ವರಿ ದೇವಿ

ನೆಲ್ಯಾಡಿ: ವಿಶ್ವವಿದ್ಯಾನಿಲಯ ಕಾಲೇಜು; 68ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆ

ನೆಲ್ಯಾಡಿಯ ವಿಶ್ವವಿದ್ಯಾನಿಲಯ ಘಟಕ ಕಾಲೇಜಿನಲ್ಲಿ 68ನೇ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಜ್ಯೋತಿ ಬೆಳಗಿಸಿ ತಾಯಿ ಭುವನೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕರಾದ ಸಚಿನ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಧ್ಯಕ್ಷೀಯ ನುಡಿಗಳಲ್ಲಿ ಕನ್ನಡ ಭಾಷೆಯ ಐತಿಹಾಸಿಕ ಹಿನ್ನೆಲೆಯ ಕುರಿತು ಇಂದಿನ ಯುವ ಸಮುದಾಯ ವಿಸ್ಮೃತಿಗೆ ಒಳಗಾಗಬಾರದು ಎಂದರು. ಕನ್ನಡದ ಅಕ್ಷರಗಳ ಪ್ರತಿಯೊಂದು ಧ್ವನಿಯ ವೈಜ್ಞಾನಿಕ