Home Posts tagged V4News (Page 116)

ಕೇರಳ : ಪ್ರಾರ್ಥನಾ ಮಂದಿರದಲ್ಲಿ ಸರಣಿ ಸ್ಪೋಟ, ಓರ್ವ ಸಾವು, ಹಲವರಿಗೆ ಗಾಯ

ಕೊಚ್ಚಿಯ ಕಲಮಸ್ಸೆರಿ ಪ್ರದೇಶದಲ್ಲಿ ನಡೆಯುತ್ತಿದ್ದ ಯೆಹೋವನ ಪ್ರಾರ್ಥನಾ ಸಭೆಯ ವೇಳೆ ಸಂಭವಿಸಿದ ಸರಣಿ ಸ್ಫೋಟದಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿದ್ದು, 36 ಮಂದಿ ಗಾಯಗೊಂಡಿದ್ದಾರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಪೋಟಕ್ಕೆ ಕಾರಣ ತಿಳಿದು ಬಂದಿಲ್ಲ, ಪೊಲೀಸರು, ಅಗ್ನಿಶಾಮಕ ದಳ ಹಾಗೂ

ಮಂಗಳೂರು: ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡ ಉದ್ಘಾಟನೆ

ಬಜ್ಪೆ ಪೊಲೀಸ್ ಠಾಣೆಯ ನೂತನ ಕಟ್ಟಡವನ್ನು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ ಉದ್ಘಾಟಿಸಿದರು. ಈ ಸಂದರ್ಭ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಉಮಾನಾಥ ಕೋಟ್ಯಾನ್, ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಮಾಜಿ ಶಾಸಕ ಜೆ.ಆರ್.ಲೋಬೊ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಇನಾಯತ್ ಅಲಿ, ಮಿಥುನ್ ರೈ, ಡಿಐಜಿ ಡಾ. ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಡಿಸಿಪಿ ದಿನೇಶ್ ಕುಮಾರ್, ಮನೋಜ್ ಕುಮಾರ್, ನಿರೀಕ್ಷಕ ಸಂದೀಪ್ ಮತ್ತಿತರರು

ಮಂಗಳೂರು: ಕೊಟ್ಟಾರ ಶ್ರೀ ವಿದ್ಯಾ ಸರಸ್ವತಿ ದೇವಿ ಹಸ್ತಕ್ಕೆ ಬೆಳ್ಳಿಯ ವೀಣೆ ಸಮರ್ಪಣೆ

ಮಂಗಳೂರಿನ ಕೊಟ್ಟಾರದಲ್ಲಿರುವ ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನೆರವೇರಿತು. ಶ್ರೀ ವಿದ್ಯಾ ಸರಸ್ವತಿ ಕ್ಷೇತ್ರದಲ್ಲಿ ನವರಾತ್ರಿ ಪೂಜೆ, ಅಭಿಷೇಕ, ಅಲಂಕಾರ ಪೂಜೆ, ಹೂವಿನ ಪೂಜಾ, ಅಕ್ಷರಭ್ಯಾಸ ಪೂಜೆ, ಮಹಿಳಾ ಬೃಂದದಿಂದ ಸರಸ್ವತಿ ಕೀರ್ತನೆ, ಮೃತ್ಯುಂಜಯ ಶಾಂತಿ ಹೋಮ, ನವಗ್ರಹ ಶಾಂತಿ ಹೋಮ, ಮಹಿಳಾ ವೃಂದದಿಂದ ಕುಂಕುಮರ್ಚನೆ ಸೇವೆ ಹಾಗೂ ಸಪ್ತಸ್ವರ ಬಳಗದವರಿಂದ ಭಕ್ತಿಗೀತೆ, ರಾತ್ರಿ ದಿನ ಅನ್ನ ಸಂತರ್ಪಣೆ ಬಹಳ

ಸಜೀಪಮುನ್ನೂರು ಗ್ರಾ.ಪಂ. ಅಭಿವೃದ್ಧಿ ಅಧಿಕಾರಿಯಿಂದ ಅಧಿಕಾರ ದುರುಪಯೋಗ: ಕಾನೂನು ಕ್ರಮಕ್ಕೆ ಎಸ್‌ಡಿಪಿಐ ಬೆಂಬಲಿತ ಸದಸ್ಯರ ಆಗ್ರಹ

ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ಅಭಿವೃದ್ದಿ ಅಧಿಕಾರಿಯು ಅಧಿಕಾರ ದುರುಪಯೋಗ ಪಡಿಸುತ್ತಿದ್ದು ಅವರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಿ ಕರ್ತವ್ಯದಿಂದ ವಜಾಗೊಳಿಸುವಂತೆ ಸಜೀಪಮುನ್ನೂರು ಗ್ರಾ.ಪಂ.ನ ಎಸ್‌ಡಿಪಿಐ ಬೆಂಬಲಿತ ಸದಸ್ಯರು ಆಗ್ರಹಿಸಿದ್ದಾರೆ. ಬಿ.ಸಿ.ರೋಡಿನ ಪ್ರೆಸ್‌ಕ್ಲಬ್‌ನಲ್ಲಿ ಸುದ್ದಿಗೋಷ್ಟಿಯಲ್ಲಿ ಸ್ಥಳೀಯ ನಾಯಕ ಮುಬಾರಕ್ ಕಾರಾಜೆ ಮಾತನಾಡಿ ಎಸ್‌ಡಿಪಿಐ ಬೆಂಬಲಿತ ೮ ಮಂದಿ ಸದಸ್ಯರನ್ನು ಪಂಚಾಯತಿ ಕಾರ್ಯ ಚಟುವಟಿಕೆಯಲ್ಲಿ  ಯಾವುದೇ

ಹಾಸನ: ನ.2ರಿಂದ ಹಾಸನಾಂಬೆ ಜಾತ್ರಾ ಮಹೋತ್ಸವ: ಐಜಿ ಡಾ. ಬೋರಲಿಂಗಯ್ಯ ಭೇಟಿ, ಪರಿಶೀಲನೆ

ಹಾಸನ: ನವೆಂಬರ್ 2ರಿಂದ ಆರಂಭವಾಗುವ ಹಾಸನಾಂಬೆ ಜಾತ್ರಾ ಮಹೋತ್ಸವ ಹಿನ್ನಲೆಯಲ್ಲಿ ಐಜಿ ಡಾ. ಬೋರಲಿಂಗಯ್ಯ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು.        ಹಾಸನ ಜಿಲ್ಲೆಯ ಡಿಸಿ ಸಿ. ಸತ್ಯಭಾಮ ಮತ್ತು ಎಸ್ಪಿ ಮಹಮದ್ ಸುಜೀತಾ ಹಾಗೂ ಉಪವಿಭಾಗಧಿಕಾರಿ ಮಾರುತಿ ಅವರಿಂದ ಮಾಹಿತಿ ಪಡೆದ ಮೈಸೂರು ದಕ್ಷಿಣ ವಲಯ ಐ.ಜಿ ಅವರು, ದೇವಸ್ಥಾನದ ಸರತಿ ಸಾಲು, ವಾಹನಗಳ ಪಾರ್ಕಿಂಗ್, ಭಕ್ತರು ಬಂದು ಹೋಗುವ ಸ್ಥಳ ಸೇರಿದಂತೆ ಇತರೆ ವ್ಯವಸ್ಥೆಯನ್ನು

ಮಂಗಳೂರು: .30ರಂದು ಶಾಸಕ ಅಶೋಕ್ಕುಮಾರ್ ರೈ ಮಂಗಳೂರು ಪ್ರೆಸ್ ಕ್ಲಬ್ ಗೌರವ ಅತಿಥಿ

ಮಂಗಳೂರು : ಮಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಸೆ.30ರಂದು ಬೆಳಗ್ಗೆ 10.45ಕ್ಕೆ ನಗರದ ಪತ್ರಿಕಾ ಭವನದಲ್ಲಿ ನಡೆಯುವ  ಪ್ರೆಸ್ ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ, ಬೆಂಗಳೂರು ಕಂಬಳ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ರೈಭಾಗವಹಿಸಿ ಗೌರವ ಸ್ವೀಕರಿಸಲಿದ್ದಾರೆ. ದೈಜಿವರ್ಲ್ಡ್ ಮೀಡಿಯಾದ ವ್ಯವಸ್ಥಾಪಕ ನಿರ್ದೇಶಕ ವಾಲ್ಟರ್ ನಂದಳಿಕೆ ಕಾರ್ಯಕ್ರಮ ಉದ್ಘಾಟಿಸುವರು. ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ ಅಧ್ಯಕ್ಷತೆ ವಹಿಸುವರು. ಜಿಲ್ಲಾ

ಬ್ಯಾಂಕ್ ಆಫ್ ಬರೋಡಾದಿಂದ ಬಾಬ್ ಲೈಟ್ ಉಳಿತಾಯ ಖಾತೆಯ ಪರಿಚಯ – ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಖಾತೆ

ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ತನ್ನ “ಬಾಬ್ ಕಿ ಸಂಗ್, ತ್ಯೋಹಾರ್ ಕಿ ಉಮಂಗ್” ಹಬ್ಬದ ಅಂಗವಾಗಿ ಬಾಬ್ ಲೈಟ್ ಉಳಿತಾಯ ಖಾತೆ- ಜೀವಮಾನ ಶೂನ್ಯ ಬ್ಯಾಲೆನ್ಸ್ ಉಳಿತಾಯ ಬ್ಯಾಂಕ್ ಖಾತೆಯನ್ನು ಪರಿಚಯಿಸಿದೆ. ಗ್ರಾಹಕರಿಗೆ ಯಾವುದೇ ಕನಿಷ್ಟ ಬ್ಯಾಲೆನ್ಸ್ ಅಗತ್ಯವಿಲ್ಲದ ಬ್ಯಾಂಕಿಂಗ್ ಅನುಭವವನ್ನು ನೀಡುತ್ತದೆ. ಇದಲ್ಲದೆ, ವಿವಿಧ ಗ್ರಾಹಕರ ವಿಭಾಗಗಳ ಅಗತ್ಯತೆಗಳನ್ನು ಪೂರೈಸಲು, ಖಾತೆಯಲ್ಲಿ ನಾಮಮಾತ್ರ

ಮಂಗಳೂರು: ರಾಜ್ಯ ಸರಕಾರದಿಂದ ಶಾಸಕರ ಹಕ್ಕನ್ನು ಕಸಿಯುವ ಯತ್ನ : ನಳಿನ್

ಪ್ರಧಾನಿ ಮೋದಿಯವರ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸಿಗರು ನೀಡಿದ ಅವಹೇಳನಕಾರಿ ಹೇಳಿಕೆಗಳಿಗೆಲ್ಲಾ ನಾವು ದೂರು ನೀಡುತ್ತಾ ಹೋಗಿದ್ದರೆ ಅವರೆಲ್ಲರ ವಿರುದ್ಧ ಹಲವು ಪ್ರಕರಣಗಳಿರುತ್ತಿದ್ದವು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೆÇೀಸ್ಟ್ ಹಾಕಿದ್ದಾರೆ ಎಂದು ಆರೋಪಿಸಿ ಕೇಸ್ ಹಾಕಿರುವ ಬಗ್ಗೆ ಅವರು

ಬೈಕ್ ಕಳವು : ಅಂತರ್ ಜಿಲ್ಲೆ ಚೋರರನ್ನು ಬಂಧಿಸಿದ ಮೂಡುಬಿದಿರೆ ಪೊಲೀಸರು

ಮೂಡುಬಿದಿರೆ : ಉತ್ತರ ಕನ್ನಡ ಜಿಲ್ಲೆ ಮತ್ತು ದ.ಕ.ದ ಮೂಡುಬಿದಿರೆಯಿಂದ ಬೈಕ್ ಕಳವು ಮಾಡಿರುವ ಅಂತರ್ ಜಿಲ್ಲಾ ಚೋರರನ್ನು ಮೂಡುಬಿದಿರೆ ಪೊಲೀಸ್ ನಿರೀಕ್ಷಕ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸರ ತಂಡವು ಶುಕ್ರವಾರ ಬಂಧಿಸಿದ್ದಾರೆ. ತುಮಕೂರು ಜಿಲ್ಲೆಯ ಅಂಜನೇಯ ದೇವಸ್ಥಾನದ ಬಳಿ ಕೊಡವತಿ ಗ್ರಾಮದ ಆಕಾಶ್ ಕಲ್ಕಿ ಹಾಗೂ ಅಂಜನೇಯ ದೇವಸ್ಥಾನದ ಹತ್ತಿರ, ಬೀರ್ಗನಹಳ್ಳಿಯವೀರೇಂದ್ರ ಬಂಧಿತರು. ಮುಂಜಾನೆಯ ಜಾವ ಮೂಡುಬಿದಿರೆ ಪೊಲೀಸ್‌ ಠಾಣಾ ವ್ಯಾಪ್ತಿಯ ಪ್ರಾಂತ ಗ್ರಾಮದ

ಮಂಗಳೂರು: ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ: ಸಿಎಂ ಸಿದ್ದರಾಮಯ್ಯ

ಹಲವು ಸಮಯದಿಂದ ಬಾಕಿ ಇರುವ ನಿಗಮ ಮಂಡಳಿಗಳಿಗೆ ಶೀಘ್ರ ಅಧ್ಯಕ್ಷರ ನೇಮಕ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರಿಗೆ ಆದ್ಯತೆ ನೀಡಿ, ಎರಡನೇ ಹಂತದಲ್ಲಿ ಕಾರ್ಯಕರ್ತರಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಅವರು ಮಂಗಳೂರು ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು. ಗೃಹ ಸಚಿವ ಜಿ. ಪರಮೇಶ್ವರ ಅವರು ಮನೆಗೆ ಊಟಕ್ಕೆ ಕರೆದಿದ್ದರು. ನಾನು ಮತ್ತು ಕೆಲವು ಸಚಿವರು ಹೋಗಿದ್ದೆವು. ಅಲ್ಲಿ