Home Posts tagged V4News (Page 118)

ಬಂಟ್ವಾಳ:ನವ ವಿವಾಹಿತೆ ನೇಣು ಬಿಗಿದು ಆತ್ಮಹತ್ಯೆ

ಬಂಟ್ವಾಳ: ಗಂಡನ ಮನೆಯಲ್ಲಿನ ವರದಕ್ಷಿಣೆ ಕಿರುಕುಳ ತಾಳಲಾರದೆ ಮಾನಸಿಕವಾಗಿ ನೊಂದಿದ್ದ ನವ ವಿವಾಹಿತೆಯೋರ್ವಳು ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು,‌ ತಡವಾಗಿ ಬೆಳಕಿಗೆ ಬಂದಿದೆ. ಬಂಟ್ವಾಳ ಸಜೀಪ ಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ನೌಸೀನ್ (22) ಮೃತಪಟ್ಟ ಮಹಿಳೆಯಾಗಿದ್ದಾಳೆ. ನೌಸೀನ್ ಅವರು ಉಳ್ಳಾಲದ ಆಜ್ಮಾನ್ ಜೊತೆ ಮೂರು

ಪುತ್ತೂರು: ಉದ್ಯಮಿ ಪ್ರಶಾಂತ್ ಪಲ್ಲತ್ತಡ್ಕ ನಿಧನ

ಪುತ್ತೂರು: ಉದ್ಯಮಿ ಪ್ರಶಾಂತ್ ಪಲ್ಲತ್ತಡ್ಕ (32ವರ್ಷ )ಇವರು ಅಲ್ಪಕಾಲದ ಅನಾರೋಗ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ತಂದೆ ತಾಯಿ ಅಕ್ಕಂದಿರು, ಸಿಬ್ಬಂದಿ ವರ್ಗ ಹಾಗೂ ಅನೇಕ ಬಂಧು ಮಿತ್ರರನ್ನು ಅಗಲಿದ್ದಾರೆ

ಮಂಗಳೂರು: ಮತದಾರರ ಪಟ್ಟಿ ಪರಿಷ್ಕೃತ ಕರಡು ಪ್ರತಿ ಬಿಡುಗಡೆ: ಡಿ.9ರ ವರೆಗೆ ಹಕ್ಕು-ಆಕ್ಷೇಪಣೆಗೆ ಅವಕಾಶ

ಮಂಗಳೂರು: ಭಾರತೀಯ ಚುನಾವಣಾ ಆಯೋಗದಿಂದ ಮತದಾರರ ಪಟ್ಟಿ ಪರಿಷ್ಕೃತ ಕರಡು ಪ್ರತಿ ಬಿಡುಗಡೆ ಮಾಡಿದೆ. ಡಿಸೆಂಬರ್ 09ರ ವರೆಗೆ ಹಕ್ಕು – ಆಕ್ಷೇಪಣೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಹೇಳಿದರು. ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಮತದಾರರ ಪಟ್ಟಿಗೆ ವಿಶೇಷ ನೋಂದಣಿ ಅಭಿಯಾನಕ್ಕೆ ಎರಡು ಶನಿವಾರ ಮತ್ತು ಎರಡು ಭಾನುವಾರ ದಿನ ನಿಗದಿ ಪಡಿಸಿದೆ. ನವೆಂಬರ್ 18 ಮತ್ತು19, ಡಿಸೆಂಬರ್ 2 ಮತ್ತು 3

ವಿದ್ಯುತ್ ಹಾಗೂ ರೈಲ್ವೇ ಖಾಸಗೀಕರಣದ ಮೂಲಕ ದೇಶದ ಸಂಪತ್ತು ಕಾರ್ಪೊರೇಟ್ ಗಳ ಸುಪರ್ದಿಗೆ – ಮೀನಾಕ್ಷಿ ಸುಂದರಂ*

ಒಳ್ಳೆಯ ದಿನಗಳು ಬರಲಿದೆ ಎಂದು ದೇಶದ ಜನತೆಗೆ ಮಂಕುಬೂದಿ ಎರಚಿ ಅಧಿಕಾರದ ಗದ್ದುಗೆಯೇರಿ ಕಳೆದ 9 ವರ್ಷಗಳಿಂದ ಜನಸಾಮಾನ್ಯರ ಬದುಕನ್ನು ಸರ್ವನಾಶಗೊಳಿಸಿದ ಕೇಂದ್ರದ ನರೇಂದ್ರ ಮೋದಿ ಸರಕಾರವು ನಿತ್ಯ ನಿರಂತರವಾಗಿ ಕಾರ್ಪೊರೇಟ್ ಪರ ನೀತಿಗಳನ್ನು ಹಾಗೂ ರೈತ ಕಾರ್ಮಿಕ ಜನವಿರೋಧಿ ನೀತಿಗಳನ್ನು ಜಾರಿಗೊಳಿಸುವ ಮೂಲಕ ಕಾರ್ಪೊರೇಟ್ ಕಂಪನಿಗಳ ಹಿತಾಸಕ್ತಿಗಳನ್ನು ಕಾಪಾಡುತ್ತಿದೆ.ಎಲ್ಲಾ ಕೈಗಾರಿಕೆಗಳ ತಾಯಿ ಹಾಗೂ ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ

ಉಡುಪಿ: ಬಯ್ ಹುಲ್ಲಿನ ಬೇಲ್, 50 ವರುಷದ ಹಿಂದಿನ ನೆನಪು

ನಾವು ಸಣ್ಣವರಿದ್ದಾಗ ಮನೆಯವರೆಲ್ಲ ಕೃಷಿ ಕಾರ್ಮಿಕರೆ. ಈಗ ಬೇಸಾಯ ಬಲ್ಲವರು ಕಡಿಮೆ. ಹೊಸ ತಲೆಮಾರು ಗದ್ದೆಗೆ ಇಳಿಯುವುದಿಲ್ಲ. ಆದರೆ ಕೃಷಿಗೆ ಯಂತ್ರಗಳ ಬಾಡಿಗೆ ನೆರವು ಧಾರಾಳ ಸಿಗುತ್ತದೆ. ಎಪ್ಪತ್ತರ ದಶಕದಲ್ಲಿ ಕೆಲವು ಇಂಗ್ಲಿಷ್ ಚಿತ್ರಗಳಲ್ಲಿ ಬೆಳೆಯ ಹುಲ್ಲಿನ ಕಟ್ಟು ಕಂಡಾಗ ಎಷ್ಟು ಅಚ್ಚುಕಟ್ಟು ಎಂದುಕೊಂಡದ್ದಿದೆ. ಈ ಒಣ ಹುಲ್ಲಿನ ಕಟ್ಟನ್ನು ಇಂಗ್ಲಿಷಿನಲ್ಲಿ ಬೇಲ್ ಎನ್ನುತ್ತಾರೆ. ಕಟಾವು ಮಾಡಿ ಈ ಕಟ್ಟು ಕಟ್ಟುವ ಯಂತ್ರವನ್ನು ಬೇಲರ್ ಎನ್ನುವರು. ಪೇರೂರು

ನೆಲ್ಯಾಡಿ: ಕಾರು ಅಪಘಾತ; ಮೂವರಿಗೆ ಗಾಯ

ನೆಲ್ಯಾಡಿ: ಕೊಣಾಲು ಗ್ರಾಮದ ಕೊಲ್ಪೆ ಎಂಬಲ್ಲಿ ಕಾರು ಅಪಘಾತಗೊಂಡು ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಚಾಲಕ ಸೇರಿ ಮೂವರು ಗಾಯಗೊಂಡಿರುವ ಘಟನೆ ಅ.30ರಂದು ಬೆಳಿಗ್ಗೆ ಘಟನೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರಿಗೆ ಬರುತ್ತಿದ್ದ ಕಾರು ರಸ್ತೆ ಬದಿಯ ಚರಂಡಿಯ ತಡೆಗೋಡೆಗೆ ಡಿಕ್ಕಿಯಾಗಿ, ಡಿಕ್ಕಿ ರಬಸಕ್ಕೆ ಕಾರು ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಪ್ರಯಾಣಿಕರು ನೆಲ್ಯಾಡಿ ಯ ಖಾಸಗಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ

ಬೆಳ್ತಂಗಡಿ: ತಂದೆ-ಮಗನ ನಡುವೆ ವೈದ್ಯಕೀಯ ದಾಖಲೆ ವಿಷಯದಲ್ಲಿ ಜಗಳ: ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ತಂದೆ

ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಉಜಿರೆ ಗ್ರಾಮದ ಕೊಡೆಕಲ್ಲು ನಿವಾಸಿ ಕೃಷ್ಣಯ್ಯ ಆಚಾರ್(75ವ) ಅವರ ಪುತ್ರ ಜಗದೀಶ್(30ವ) ಎಂಬವರು ಈ ಘಟನೆಯಲ್ಲಿ ಮೃತಪಟ್ಟವರಾಗಿದ್ದಾರೆ. ಇವರ ತಂದೆ ಕೃಷ್ಣಯ್ಯ ಆಚಾರ್ ಚೂರಿಯಿಂದ ಇರಿದು ಮಗನನ್ನು ಕೊಲೆಗೈದ ಆರೋಪಿಯಾಗಿದ್ದಾರೆ. ರಾತ್ರಿಯ ವೇಳೆ ವೈದ್ಯಕೀಯ

ಉಡುಪಿ: ಕೇರಳದಲ್ಲಿ ಬಾಂಬ್ ಸ್ಫೋಟ ವಿಚಾರ: ಕರಾವಳಿ ಗಡಿ ಭಾಗದಲ್ಲಿ ತೀವ್ರ ನಿಗಾ: ಗೃಹ ಸಚಿವ ಡಾ. ಜಿ. ಪರಮೇಶ್ವರ್

ಕೇರಳ ರಾಜ್ಯದ ಎರ್ನಾಕುಲಂನಲ್ಲಿ ಬಾಂಬ್ ಸ್ಫೋಟ ನಡೆದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸೂಕ್ಷ್ಮವಾಗಿ ಗಮನಿಸಿದ್ದೇವೆ. ಕರಾವಳಿ ಭಾಗ ಮತ್ತು ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಗುಪ್ತಚರ ಇಲಾಖೆ ತೀವ್ರ ನಿಗಾ ಇರಿಸುವಂತೆ ಸೂಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದರು. ಅವರು ಉಡುಪಿಯಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದರು. ಕರ್ನಾಟಕದಲ್ಲಿ ಬಾಂಬ್ ಸ್ಫೋಟದಂತಹ ಘಟನೆಗಳು ನಡೆಯಲು ಬಿಡಲ್ಲ. ಯಾವುದೇ ವ್ಯಕ್ತಿ ಅಥವಾ

ವಿಟ್ಲ: ಸಿಡಿಲು ಬಡಿದು ತೆಂಗಿನ ಮರ ಬೆಂಕಿಗಾಹುತಿ

ವಿಟ್ಲ: ತೆಂಗಿನ ಮರವೊಂದಕ್ಕೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ಬುಡೋಳಿ ಜಂಕ್ಷನ್ ನಲ್ಲಿ ನಡೆದಿದೆ.ಬುಡೋಳಿ ಫಾತಿಮಾ ಸ್ಟೋರ್ ಮಾಲಕ ಸಿದ್ದೀಕ್ ಅವರ ಮನೆಯಂಗಳದಲ್ಲಿ ಇರುವ ತೆಂಗಿನ ಮರಕ್ಕೆ ಸಿಡಿಲು ಬಡಿದಿದೆ. ಸಿಡಿಲು ಬಡಿದ ಪರಿಣಾಮವಾಗಿ ತೆಂಗಿನ ಮರದಲ್ಲಿ ಬೆಂಕಿ ಕಾಣಿಸಿಕೊಂಡಿದ್ದಲ್ಲದೆ, ಮರ ಸುಟ್ಟು ಹೋಗಿದೆ.ಮನೆಯಂಗಳದಲ್ಲಿ ತೆಂಗಿನ ಮರ ಇದೆಯಾದರೂ ಅದೃಷ್ಟವಶಾತ್ ಮನೆಯವರಿಗೆ ಯಾವುದೇ ಅಪಾಯವಾಗಿಲ್ಲ ಎಂದು ತಿಳಿಸಿದ್ದಾರೆ. ಇದರ ಪಕ್ಕದಲ್ಲೇ ಇವರಿಗೆ

ಕುಂದಾಪುರ: ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತರ ಮನೆ ಮೇಲೆ ಲೋಕಾಯುಕ್ತ ದಾಳಿ

ಕುಂದಾಪುರ ಸಲೀಂ ಅಲಿ ರಸ್ತೆಯ ನಿವಾಸಿ ವಾಣಿಜ್ಯ ತೆರಿಗೆ ಸಹಾಯಕ ಆಯುಕ್ತ ರಾಜೇಶ್ ಬೆಳ್ಕೆರೆ ಮನೆ ಮೇಲೆ ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ದಾಳಿ ನಡೆದಿದೆ. ರಾಜೇಶ್ ಬೆಳ್ಕೆರೆಗೆ ಸಂಬಂಧಪಟ್ಟಂತೆ ಮೂರು ಕಡೆ ತಪಾಸಣೆ ನಡೆಸಲಾಗುತ್ತಿದೆ. ಸೋಮವಾರ ಬೆಳಿಗ್ಗೆ ಕುಂದಾಪುರದ ಸಲೀಂ ಅಲಿ ರಸ್ತೆಯಲ್ಲಿರುವ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದ್ದು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲದ ರಾಜೇಶ್ ಬೆಳ್ಕೆರೆ ಹಲವು ವರ್ಷದಿಂದ