Home Posts tagged V4News (Page 120)

ಅಲೆವೂರು: ಟೆಂಪೋ ಬೈಕ್ ಡಿಕ್ಕಿ ಯುವಕ ಸಾವು

ಅಲೆವೂರು: ಟೆಂಪೋ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟ ಘಟನೆ ಅಲೆವೂರು ವಿಠಲ ಸಭಾಭವನದ ಬಳಿ ನಡೆದಿದೆ. ಘಟನೆಯಲ್ಲಿ ಪ್ರಗತಿ ನಗರದ ಮೊಹಮ್ಮದ್ ತನ್ಸಿಲ್ ( 28) ಮೃತ ದುರ್ದೈವಿಯಾಗಿದ್ದಾರೆ.

Mangaluru : ವಿದ್ಯುತ್ ಖಾಸಗೀಕರಣದ ವಿರುದ್ದ ಮೆಸ್ಕಾಂ ಕಚೇರಿಯೆದುರು ಪ್ರತಿಭಟನೆ

ಆಧುನಿಕ ನಾಗರಿಕ ಸಮಾಜದ ಕೇಂದ್ರ ನರಮಂಡಲದಂತೆ ಕಾರ್ಯನಿರ್ವಹಿಸುವ ಹಾಗೂ ಎಲ್ಲಾ ಕೈಗಾರಿಕೆಗಳ ತಾಯಿಯಂತಿರುವ ಅತ್ಯಂತ ಪ್ರಮುಖ ಸೇವೆಯಾದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ನರೇಂದ್ರ ಮೋದಿ ಸರಕಾರದ ಕಾರ್ಪೊರೇಟ್ ಪರ ನೀತಿಯನ್ನು ವಿರೋಧಿಸಿ ದೇಶಾದ್ಯಂತ ನಡೆದ ಹೋರಾಟದ ಭಾಗವಾಗಿ ಮಂಗಳೂರಿನ ಬಿಜೈಯಲ್ಲಿರುವ ಮೆಸ್ಕಾಂ ಪ್ರಧಾನ ಕಚೇರಿ,ತೊಕ್ಕೋಟು ಹಾಗೂ ಗುರುಪುರ ಕೈಕಂಬ ಮೆಸ್ಕಾಂ ಕಚೇರಿಯೆದುರು ರೈತ ಕಾರ್ಮಿಕ ಹಾಗೂ ಜನಪರ ಸಂಘಟನೆಗಳ ಜಂಟಿ

ಬೆಳ್ತಂಗಡಿ: ತೆಕ್ಕಾರಿನಲ್ಲಿ ದೇವರ ಪುರಾತನ ಭಗ್ನ ವಿಗ್ರಹ ಪತ್ತೆ

ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಭಟ್ರಭೈಲು ದೇವರ ಗುಡ್ಡೆಯಲ್ಲಿ ಬಾವಿ ನಿರ್ಮಾಣದ ವೇಳೆ 12ನೇ ಶತಮಾನದ್ದೆನ್ನಲಾದ ಶ್ರೀ ಗೋಪಾಲಕೃಷ್ಣ ದೇವರ ವಿಗ್ರಹ ಹಾಗೂ ಇನ್ನಿತರ ಪರಿಕರಗಳು ಪತ್ತೆಯಾಗಿವೆ. ದೇವಾಲಯವಿತ್ತೆನ್ನಲಾದ ದೇವರಗುಡ್ಡೆ ಪ್ರದೇಶದಲ್ಲಿ ಬೆಳ್ತಂಗಡಿ ಶಾಸಕರ ಮುತುವರ್ಜಿಯಿಂದ ದೇವಾಲಯ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿತ್ತು. ಈ ಸಂಬಂಧ 5 ದಿನಗಳ ಹಿಂದೆ ಸ್ಥಳದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳನ್ನು ನಡೆಸಲಾಗಿತ್ತು. ಜೋತಿಷಿ ವೆಂಕಟರಮಣ ಭಟ್

ಮಂಗಳೂರು: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ನ.10 ರಂದು ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮ

ಮಂಗಳೂರು ಎ.ಬಿ.ಶೆಟ್ಟಿ ಸರ್ಕಲ್‌ನ ಪಾರಡಿಗಂ ಪ್ಲಾಜಾದಲ್ಲಿರುವ ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿ ನಿಧಿ ವಿತರಣಾ ಕಾರ್ಯಕ್ರಮವು ನ.10 ರಂದು ನಗರದ ಪುರಭವನದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕರ್ನಾಟಕ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಉದ್ಘಾಟಿಸಲಿದ್ದು, ಶಾಸಕ ಡಿ.ವೇದವ್ಯಾಸ್ ಕಾಮತ್ ವಿದ್ಯಾರ್ಥಿ ವೇತನ ವಿತರಿಸಲಿದ್ದಾರೆ. ಶ್ರೀರಾಮ್ ಫೈನಾನ್ಸ್ ಲಿಮಿಟೆಡ್‌ನ ಜಂಟಿ ನಿದೇರ್ಶಕರಾಧ ಸುದರ್ಶನ್ ಬಿ ಹೊಳ್ಳ ಅವರು

ಕುಂದಾಪುರ: ಕೊಲ್ಲೂರಿನಲ್ಲಿ ಕನ್ನಡ ನಾಮಫಲಕ ಕಡ್ಡಾಯಗೊಳಿಸುವಂತೆ ಕರವೇಯಿಂದ ಅಭಿಯಾನ

ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ. ಎ ನಾರಾಯಣ ಗೌಡರ ಆದೇಶದಂತೆ ಕರವೇ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿಯವರ ನೇತೃತ್ವದಲ್ಲಿ ಉಡುಪಿ ತಾಲೂಕು ಅಧ್ಯಕ್ಷ ಅ,ರಾ ಪ್ರಭಾಕರ್ ಪೂಜಾರಿ ಮುಂದಾಳತ್ವದಲ್ಲಿ ಜಿಲ್ಲಾ ಹಾಗೂ ತಾಲೂಕು ಘಟಕದ ವತಿಯಿಂದ ಕೊಲ್ಲೂರಿಗೆ ಭೇಟಿ ನೀಡಿ ಅಂಗಡಿ ಮುಂಗಟ್ಟುಗಳ ನಾಮ ಫಲಕದಲ್ಲಿ 70% ಕನ್ನಡ ಹಾಗೂ ಉಳಿದ ಭಾಷೆಗಳಿಗೆ ಶೇಕಡಾ 30/ ಕಡ್ಡಾಯಗೊಳಿಸುವಂತೆ ಅಭಿಯಾನ ಹಮ್ಮಿಕೊಳ್ಳಲಾಯಿತು. ಅಭಿಯಾನ ಉದ್ದೇಶಿಸಿ ಮಾತನಾಡಿದ ಅ.ರಾ

ಮೂಡುಬಿದಿರೆ: ಡಿ.14ರಿಂದ 17ರ ವರೆಗೆ 29ನೇ ವರ್ಷದ ಆಳ್ವಾಸ್ ವಿರಾಸತ್-2023

ಮೂಡುಬಿದಿರೆ : ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ (ರಿ) ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ ಆಳ್ವಾಸ್ ವಿರಾಸತ್ 29ನೇ ವರ್ಷಕ್ಕೆ ಕಾಲಿರಿಸಿದ್ದು ಈ ಬಾರಿ ಡಿ.14ರಿಂದ 17ರವರೆಗೆ ನಡೆಯಲಿದ್ದು ಅದಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದರು. ಅವರು ಮೂಡುಬಿದಿರೆಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿದರು. ಪುತ್ತಿಗೆ ವಿವೇಕಾನಂದ ನಗರದಲ್ಲಿರುವ ಶ್ರೀಮತಿ

ನೆಲ್ಯಾಡಿ: ಹೃದಯಾಘಾತದಿಂದ ವಿದ್ಯಾರ್ಥಿ ನಿಧನ

ನೆಲ್ಯಾಡಿ: ಹೃದಯಾಘಾತಕ್ಕೆ ಒಳಗಾಗಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದಲ್ಲಿ ನ.6ರಂದು ಸಂಜೆ ನಡೆದಿದೆ. ಕೌಕ್ರಾಡಿ ಗ್ರಾಮದ ಶಾಂತಿಬೆಟ್ಟು ನಿವಾಸಿ ಯೂಸುಫ್ ಎಂಬವರ ಪುತ್ರ ಮಹಮ್ಮದ್ ಇರ್ಪಾನ್(18ವ.)ಮೃತಪಟ್ಟ ದುರ್ದೈವಿಯಾಗಿದ್ದಾರೆ. ಪುತ್ತೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಎ.ಸಿ.ಮೆಕ್ಯಾನಿಕ್ ವ್ಯಾಸಂಗ ಮಾಡುತ್ತಿದ್ದ ಇರ್ಪಾನ್ ಎಂದಿನಂತೆ ಶಾಲೆಗೆ ಹೋಗಿ ಸಂಜೆ ಮನೆಗೆ ಬಂದಿದ್ದರು. 6 ಗಂಟೆಯ ವೇಳೆಗೆ ಇರ್ಪಾನ್ ದಿಢೀರ್

ಪುತ್ತೂರು: ಕಲ್ಲೇಗ ಟೈಗರ್ಸ್ ತಂಡದ ಸಾರಥಿ ಅಕ್ಷಯ್ ಕಲ್ಲೇಗ ಬರ್ಬರ ಹತ್ಯೆ

ಪುತ್ತೂರು ಪೇಟೆಯ ಹೊರ ವಲಯ ನೆಹರುನಗರದಲ್ಲಿ ನಿನ್ನೆ ತಡ ರಾತ್ರಿ ದುಷ್ಕರ್ಮಿಗಳ ತಂಡವೊಂದು ತಲವಾರು ನಿಂದ ಕೊಚ್ಚಿ ಯುವಕನೊರ್ವನ ಬರ್ಬರ ಹತ್ಯೆ ನಡೆಸಿದೆ. ಪುತ್ತೂರಿನ ಪ್ರಖ್ಯಾತ ಹುಲಿ ವೇಷ ಕುಣಿತ ತಂಡ ಟೈಗರ್ಸ್ ಕಲ್ಲೇಗ ತಂಡದ ಸಾರಥ್ಯ ವಹಿಸಿದ್ದ ಅಕ್ಷಯ್ ಕಲ್ಲೇಗ ಹತ್ಯೆಯಾದವರು. ಕೆಲ ಗಂಟೆಗಳ ಮೊದಲು ಕ್ಷುಲ್ಲಕ ಕಾರಣವೊಂದಕ್ಕೆ ಅಕ್ಷಯ್ ಹಾಗೂ ಕೃತ್ಯ ಎಸಗಿದ ತಂಡದ ಸದಸ್ಯರ ಮಧ್ಯೆ ಮಾತಿನ ಚಕಮಕಿ ನಡೆದಿದ್ದು ಅದರ ಮುಂದುವರಿದ ಭಾಗವಾಗಿ ಅಕ್ಷಯ್ ನನ್ನು ನೆಹರೂ

ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಮೃತ್ಯು

ಕಡಬ, ನ.07. ತಿಂಗಳ ಹಿಂದೆ ಕಡಬ ತಾಲೂಕಿನ ಐತ್ತೂರು ಗ್ರಾಮದ ಕೊಣಾಜೆ ರಸ್ತೆಯಲ್ಲಿ ಆನೆ ತುಳಿತ್ತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೋರ್ವರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರದಂದು ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಕೊಣಾಜೆ ಸಮೀಪದ ಗೇರ್ತಿಲ ನಿವಾಸಿ ಚೋಮ ಎಂದು ಗುರುತಿಸಲಾಗಿದೆ. ಚೋಮ ಅವರು ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು – ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದರು. ಬಳಿಕ

ಮೂಡುಬಿದಿರೆ : ಬಾವಿಗೆ ಬಿದ್ದ ಚಿರತೆಯನ್ನು ರಕ್ಷಿಸಿದ ಅರಣ್ಯಾಧಿಕಾರಿಗಳು

ಮೂಡುಬಿದಿರೆ: ಅಕಸ್ಮಿಕವಾಗಿ ಬಾವಿಗೆ ಬಿದ್ದ ಚಿರತೆಯನ್ನು ಊರವರ ಸಹಕಾರದೊಂದಿಗೆ ಅರಣ್ಯಾಧಿಕಾರಿಗಳು ರಕ್ಷಿಸಿದ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ತಾಲೂಕಿನ ಪುರಸಭಾ ವ್ಯಾಪ್ತಿಯ ಮಾರೂರು ಗುತ್ತು ಬಳಿಯ ಎಸ್ ಸಿ ಕಾಲನಿಯಲ್ಲಿರುವ ಬಾವಿಯೊಂದಕ್ಕೆ ದೊಡ್ಡ ಗಾತ್ರದ ಚಿರತೆಯೊಂದು ಆಯತಪ್ಪಿ ಬಿದ್ದಿದೆ. ಈ ಬಗ್ಗೆ ಗ್ರಾಮಸ್ಥರು ಅರಣ್ಯಾಧಿಕಾರಿಗಳಿಗೆ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಅವರ ಮಾರ್ಗದರ್ಶನದೊಂದಿಗೆ