ಕೆಲ ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಸುಳ್ಯದ ಅವಿನಾಶ್ ಬಸ್ ಗಳ ಮಾಲಕ ನಾರಾಯಣ ರೈ (73) ಕಳೆದ ರಾತ್ರಿ ಕುತ್ತಿಗೆಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ.ಮಾನಸಿಕವಾಗಿ ತೀವ್ರ ನೊಂದಿದ್ದರೆನ್ನಲಾಗಿದೆ. ಕಳೆದ ರಾತ್ರಿ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಸುಳ್ಯ
ಮಂಗಳೂರಿನ ರೊಸಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ಬೆಳಗ್ಗೆ 8 ಗಂಟೆಗೆ ಸ್ಟ್ರಾಂಗ್ ರೂಂನ್ನು ತೆರೆಯಲಾಯಿತು. ಬಳಿಕ ಮತಪತ್ರಗಳ ವಿಂಗಡನೆ ಮಾಡಲಾಯಿತು. 10:45ರ ಸುಮಾರಿಗೆ ಮತ ವಿಂಗಡನೆ ಕಾರ್ಯ ಪೂರ್ಣಗೊಂಡಿದ್ದು, ಕೆಲಹೊತ್ತಿನಲ್ಲಿ ಮತ ಎಣಿಕೆಗೆ ಚಾಲನೆ ಸಿಗಲಿದೆ. ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ನ ದ್ವಿ ಸದಸ್ಯತ್ವ ಸ್ಥಾನಕ್ಕೆ ಡಿ.10ರಂದು ನಡೆದ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ
ವಿಧಾನ ಪರಿಷತ್ ಚುನಾವಣೆ ಮತ ಎಣಿಕೆ ಕಾರ್ಯವು ಭರದಿಂದ ಸಾಗುತ್ತಿದ್ದು, ಹಾಸನ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಡಾ.ಸೂರಜ್ ರೇವಣ್ಣ ಗೆಲುವು ಸಾಧಿಸಿದ್ದಾರೆ. ಮಾಜಿ ಸಚಿವ ಎಚ್.ಡಿ ರೇವಣ್ಣರ ಪುತ್ರ ಡಾ.ಸೂರಜ್ ರೇವಣ್ಣ, 2247 ಮತಗಳನ್ನು ಪಡೆದುಕೊಂಡಿದ್ದು, ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಮಡಿಕೇರಿ: 20 ಕ್ಷೇತ್ರಗಳ 25 ಸ್ಥಾನಗಳಿಗೆ ಡಿ.10ರಂದು ನಡೆದ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಕೊಡಗು ವಿಧಾನ ಪರಿಷತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ. ಪ್ರತಸ್ಪರ್ಧಿ ಮಂಥರ್ ಗೌಡ ಅವರ ವಿರುದ್ಧ ಸುಜಾ ಕುಶಾಲಪ್ಪ ಗೆಲುವು ಸಾಧಿಸಿದ್ದಾರೆ.
ಬೆಂಗಳೂರು:ರಾಷ್ಟ್ರಕವಿ ಕುವೆಂಪು ಅವರ ಸೊಸೆಯಾಗಿರುವ ರಾಜೇಶ್ವರಿ ಅವರು ವಯೋ ಸಹಜ ಅನಾರೋಗ್ಯದ ಹಿನ್ನೆಲೆ ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.1937ರಲ್ಲಿ ಬೆಂಗಳೂರಿನ ಕಲಾಸಿಪಾಳ್ಯದ ಬಡಾವಣೆಯೊಂದರಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿದ ರಾಜೇಶ್ವರಿ ಅವರು ತನ್ನ ತಂದೆಯ ಪ್ರೋತ್ಸಾಹದಿಂದ ಆ ಕಾಲದಲ್ಲಿ ಉತ್ತಮ ವಿದ್ಯಭ್ಯಾಸ ಮಾಡಿದ್ದರು. ತತ್ವಶಾಸ್ತ್ರದಲ್ಲಿ
ಸ್ಥಳೀಯ ಸಂಸ್ಥೆಗಳ 20 ಕ್ಷೇತ್ರಗಳ 25 ಸ್ಥಾನಗಳಿಗೆ ನಡೆದ ವಿಧಾನಪರಿಷತ್ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಇಂದು ಬೆಳಗ್ಗೆ 8 ಗಂಟೆಯಿಂದ ಪ್ರಾರಂಭವಾಗಿದೆ. ಇನ್ನು ನಗರದ ರೋಜಾರಿಯೋ ಶಾಲಾ-ಕಾಲೇಜು ಆವರಣದಲ್ಲಿ ವಿಧಾನ ಪರಿಷತ್ ಚುನಾವಣೆಯ ಮತ ಎಣಿಕಾ ಕಾರ್ಯ ಆರಂಭವಾಗಿದೆ. ಬೆಳಿಗ್ಗೆ 7.50ಕ್ಕೆ ಸ್ಟ್ರಾಂಗ್ ರೂಂ ತೆರೆಯಲಾಗಿದ್ದು ಸುಮಾರು 8 ಗಂಟೆಯಿಂದ ಮತಗಳ ಎಣಿಕಾ ಪ್ರಕ್ರಿಯೆ ಪ್ರಾರಂಭವಾಗಿದೆ. ಈ ಚುನಾವಣೆ ಮುಂದಿನ ವಿಧಾನಸಭೆ ಚುನಾವಣೆ
ಸ್ಯಾಕ್ಸೋಫೋನ್ ಚಕ್ರವರ್ತಿ, ಪದ್ಮಶ್ರೀ ಪುರಸ್ಕøತ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನದ ಅಂಗವಾಗಿ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ ಸಜಿಪದಲ್ಲಿರುವ ಡಾ.ಕದ್ರಿ ಗೋಪಾಲನಾಥ್ರವರ ಸಮಾಧಿಯ ಜಾಗದಲ್ಲಿ ‘ಕದ್ರಿ ಸಂಗೀತ ಸೌರಭ-2021’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಮಣಿಕಾಂತ್ ಕದ್ರಿ ಹೇಳಿದರು. ಅವರು ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ ನನ್ನ ತಂದೆಯವರಾದ ಡಾ.ಕದ್ರಿ ಗೋಪಾಲನಾಥ್ ಅವರ ಜನ್ಮದಿನವಾದ ಡಿಸೆಂಬರ್ 6ರಂದು ಬಂಟ್ವಾಳ ತಾಲೂಕಿನ
ಸಂಪೂರ್ಣ ಹದಗೆಟ್ಟಿರುವ ಕಾನಾ-ಕುಳಾಯಿ ರೈಲ್ವೇ ಮೇಲ್ಸೇತುವೆ ಅವ್ಯವಸ್ಥೆ ವಿರೋಧಿಸಿ ಕೂಡಲೇ ದುರಸ್ಥಿಗೆ ಒತ್ತಾಯಿಸಿ ಡಿವೈಎಫ್ಐ ಕಾನ-ಕುಳಾಯಿ ಘಟಕದ ವತಿಯಿಂದ ಕುಳಾಯಿಗುಡ್ಡೆ ರೈಲ್ವೇ ಬ್ರಿಡ್ಜ್ ಬಳಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಡಿವೈಎಫ್ಐ ಮುಖಂಡ ಮುನೀರ್ ಕಾಟಿಪಳ್ಳ ಅವರು, ರಸ್ತೆ ಕಾಮಗಾರಿಯಾದ ಪ್ರತೀ ವರ್ಷಕೂಡ ಮೊದಲ ಮಳೆಗೆ ರಸ್ತೆ ಗುಂಡಿ ಬಿದ್ದು, ಸಂಚರಿಸಲು ಆಗದ ಪರಿಸ್ಥಿತಿ ಬಂದೊದಗಿದೆ. ಇದಕ್ಕೆ ಅವೈಜ್ಞಾನಿಕ ಕಾಮಗಾರಿ
ಮಂಗಳೂರು: ಮಂಗಳೂರು ನಗರದಲ್ಲಿ ಮತ್ತೆ ತಲವಾರು ದಾಳಿ ನಡೆದಿದೆ. ಹಳೆಯ ಕೊಲೆಯ ವೈಷಮ್ಯಕ್ಕೆ ಯುವಕನೋರ್ವನ ಕೊಲೆ ಯತ್ನ ನಿನ್ನೆ ರಾತ್ರಿ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ರೌಡಿಗಳ ತಂಡದ ಗ್ಯಾಂಗ್ ವಾರ್ ನಲ್ಲಿ ಶ್ರವಣ್ ಎಂಬ ಯುವಕನ ಮೇಲೆ 8 ಜನರ ತಂಡವೊಂದು ಮಾರಣಾಂತಿಕ ದಾಳಿ ನಡೆಸಿದೆ. ಶ್ರವಣ್ ಗಂಭೀರವಾಗಿ ಗಾಯಗೊಂಡಿದ್ದು, ಆತನ ಪರಿಸ್ಥಿತಿ ಚಿಂತಾಜನಕವಾಗಿದೆ. 2020ರಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ಇಂದ್ರಜಿತ್
ಬೇಲೂರಿನಲ್ಲಿ ಪಟ್ಟಣದ ಪುರಸಭೆ ವ್ಯಾಪ್ತೀಯ 8ನೇ ವಾರ್ಡ್ ಬಿಕ್ಕೋಡು ರಸ್ತೆಯ ಮಹಿಳಾ ಕಾಲೇಜ್ ಪಕ್ಕದಲ್ಲಿ ಅನಧಿಕೃತವಾಗಿ ಒಂದು ಕಟ್ಟಡ ನಿರ್ಮಾಣ ಮಾಡಿಕೊಂಡು ಕ್ರಿಶ್ಚಿಯನ್ ಧರ್ಮಕ್ಕೆ ಮತಾತಂತರ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಸಂಘಟನೆ ಕಾರ್ಯಕರ್ತರು ಬಂದ ಸಂದರ್ಭದಲ್ಲಿ ಪ್ರಾರ್ಥನೆ ನಡೆಯುತ್ತಿದ್ದರಿಂದ ಪ್ರಾರ್ಥನ ಮುಂಭಾಗದ ಗೇಟ್ ಗೆ ಬೀಗ ಹಾಕಿದ ಕಾರಣ ಹೊರಭಾಗದಲ್ಲಿ ನಿಂತು ಮತಾಂತರ ಗೊಳ್ಳಲು ಪ್ರೇರಣೆಯಾಗಿದ್ದ