ಮಂಜೇಶ್ವರ : ತಲಪಾಡಿಯಲ್ಲಿ ಭೀಕರ ವಾಹನ ಅಪಘಾತ ಕಾಸರಗೋಡು ಭಾಗದಿಂದ ಮಂಗಳೂರು ಕಡೆ ಪ್ರಯಾಣಿಕರನ್ನು ಹೇರಿ ಕೊಂಡು ಹೋಗುತಿದ್ದ ಕರ್ನಾಟಕ ಸಾರಿಗೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಭಾಗದಲ್ಲಿ ನಿಲುಗಡೆಗೊಂಡಿದ್ದ ಆಟೋ ರಿಕ್ಷಾ ಹಾಗೂ ಬಸ್ಸಿಗಾಗಿ ಕಾಯತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡಿದಿದೆ. ಹೊಡೆತದ ರಭಸಕ್ಕೆ ಆಟೋ ರಿಕ್ಷಾ ಪೂರ್ಣವಾಗಿ ಜಖಂ ಗೊಂಡಿದೆ.
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಳ್ಳೂರ್ 11 25ನೇ ವರ್ಷದ ರಜತ ಮಹೋತ್ಸವದ ಸಂಭ್ರಮ ನಡೆಯಿತು. ಗಣೇಶೋತ್ಸವ ಸಂಭ್ರಮದಲ್ಲಿ ಗಣೇಶನ ವಿಗ್ರಹವನ್ನು ಭವ್ಯ ಮೆರವಣಿಗೆ ಮೂಲಕ ಕರೆತರಲಾಯಿತು ನಂತರ ಪೂಜಾ ಸ್ಥಳವನ್ನು ಸ್ವಚ್ಛಗೊಳಿಸಿ, ಕಲಶ ಸ್ಥಾಪಿಸಿ, ಅರಿಶಿನ, ಕುಂಕುಮ, ಗಂಧ, ಗರಿಕೆ, ಹೂವು, ಅಗರಬತ್ತಿ, ವೀಳ್ಯದೆಲೆ, ಅಡಿಕೆ, ಬೆಲ್ಲ, ಫಲಪುಷ್ಪ, ಹಾಗೂ 21 ಮೋದಕಗಳನ್ನು ನೈವೇದ್ಯ ಮಾಡಿ ಪೂಜೆಯನ್ನು ನೆರವೇರಿಸಲಾಯಿತು. ಪೂಜೆಯು ಕಾಯಾ, ವಾಚಾ, ಮನಸಾ, ಶೋಡಶೋಪಚಾರ
ಉದ್ಯಾವರ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉದ್ಯಾವರ ಇದರ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಮತ್ತು ಉದ್ಯಾವರ ಯುವಕ ಮಂಡಲ (ರಿ.) ಉದ್ಯಾವರ ಇದರ 62ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮ ಆಗಸ್ಟ್ 27 ಬುಧವಾರ ದಂದು ಗುರ್ಮೆ ಸುರೇಶ್ ಶೆಟ್ಟಿ ಅವರ ಉಪಸ್ಥಿತಿಯಲ್ಲಿ ನೆರವೇರಿತು. ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಶಾಸಕರಾದ ಗುರ್ಮೆ ಸುರೇಶ ಶೆಟ್ಟಿ ಅವರು ಭಾಗವಹಿಸಿ ಶುಭಹಾರೈಸಿದರು.
ಕಳೆದ ಮೂರು ವರ್ಷಗಳಿಂದ ಪಟ್ಲ ಶ್ರೀ ಸತೀಶ್ ಶೆಟ್ಟಿ ನೇತೃತ್ವದ ಯಕ್ಷ ಧ್ರುವ ಪಟ್ಲ ಫೌಂಡೇಶನ್ ಯಕ್ಷಗಾನ, ರಂಗಭೂಮಿ, ದೈವಾರಾಧನೆ ಮತ್ತು ಕಂಬಳ ಕ್ಷೇತ್ರದ ಸಾವಿರಾರು ಕಲಾವಿದರಿಗೆ ಮಂಗಳೂರು ಅಂಚೆ ವಿಭಾಗದ ಸಹಯೋಗದಲ್ಲಿ ಉಚಿತವಾಗಿ ಅಪಘಾತ ವಿಮಾ ಸುರಕ್ಷೆಯನ್ನು ಪ್ರಾಯೋಜಿಸುತ್ತಿದ್ದು ಇತ್ತೀಚೆಗೆ ಅಪಘಾತಕ್ಕೊಳಗಾಗಿ ನಿಧನರಾದ ಯಕ್ಷಗಾನ ಕಲಾವಿದರಾದ ಆನಂದ ಮತ್ತು ಪ್ರವೀತ್ ಅವರ ಕುಟುಂಬಗಳಿಗೆ ತಲಾ ರೂ.ಹತ್ತು ಲಕ್ಷದ ವಿಮಾ ಪರಿಹಾರವನ್ನು ವಿತರಣೆ ಮಾಡಲಾಯಿತು. ಹಿರಿಯ
ಮುಲ್ಕಿ: ಅಸೋಸಿಯೇಷನ್ ಆಫ್ ಸಿವಿಲ್ ಇಂಜಿನಿಯರ್ಸ್ ಮುಲ್ಕಿ ಹಾಗೂ ರೋಟರಿ ಕ್ಲಬ್ ಮುಲ್ಕಿ ಸಹಯೋಗದಲ್ಲಿ ಸೆಪ್ಟೆಂಬರ್ 16, 2025 ರ ಮಂಗಳವಾರದಂದು ಸಂಜೆ 6:30ಕ್ಕೆ ಕರ್ನಾಟಕದ ಮುಲ್ಕಿ, ಕಾರ್ನಾಡ್ ನಲ್ಲಿರುವ ರೋಟರಿ ಶತಾಬ್ಧ ಭವನದಲ್ಲಿ ಇಂಜಿನಿಯರ್ಸ್ ಡೇ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಕಾರ್ಯಕ್ರಮವು ಭಾರತ ರತ್ನ ಸರ್ ಎಂ. ವಿಶ್ವೇಶ್ವರಯ್ಯ ಅವರ ರಾಷ್ಟ್ರ ನಿರ್ಮಾಣದ ಕೊಡುಗೆಗಳನ್ನು ಸ್ಮರಿಸುವುದರ ಜೊತೆಗೆ, ಆಧುನಿಕ ಸಮಾಜದ
ಲಿಟ್ಲ್ ಫ್ಲವರ್ ಶಾಲೆ ದರ್ಬೆ ಪುತ್ತೂರು ಇಲ್ಲಿನ ಶಾಲಾ ಶೈಕ್ಷಣಿಕ ಸಂಘಗಳ ಉದ್ಘಾಟನೆ ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ ಎಸ್ ಅಧ್ಯಕ್ಷತೆಯಲ್ಲಿ ನೆರವೇರಿತು. ರಕ್ಷಕ ಶಿಕ್ಷಕ ಸಂಘದ ಸದಸ್ಯರಾದ ಗ್ರಾಫಿಕ್ ಡಿಸೈನರ್ ಶ್ರೀ ಮಂಜುನಾಥ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಜೀವನ ಅನ್ನೋದು ಸದಾ ಗೆಲುವು ಅಲ್ಲ ಸತತ ಹೋರಾಟ. ಏನೇ ಕೆಲಸ ಮಾಡಿ ಅದರಲ್ಲಿ ಶ್ರದ್ದೆ ಇರಲಿ.ಸಾಮಾಜಿಕ ಜಾಲತಾಣ ವನ್ನು ಒಳಿತಿಗೆ ಬಳಸಿದ್ರೆ ಅದ್ಬುತ ಯಶಸ್ಸು ನಿಮ್ಮದಾಗತ್ತೆ ಎಂದರು.
18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಗಸ್ಟ್ 27 ರಿಂದ ಆಗಸ್ಟ್ 28 ರವರೆಗೆ ಜರುಗಲಿದ್ದು, ಸಾವಿರಾರು ಭಕ್ತರು ಇಲ್ಲಿಗ ಆಗಮಿಸಿ ಗಣಪನ ದರ್ಶನ ಪಡೆಯುತ್ತಾರೆ. ಅದಲ್ಲದೆ ಇಲ್ಲಿ ಆಗಮಿಸುವ ಭಕ್ತಾದಿಗಳಿಂದ ಕಾಣಿಕೆ ರೂಪದಿಂದ ಸಂಗ್ರಹವಾಗುವ ಹಣವನ್ನು ನಾವು ಬಡಬಗ್ಗರಿಗೆ ಹಾಗೂ ಅವರ ವೈದ್ಯಕೀಯ ಚಿಕಿತ್ಸೆ ಹಾಗೂ ಶಿಕ್ಷಣಕ್ಕೆ ನೀಡಿ ಅವರಿಗೆ ನೆರವಾಗುತ್ತೇವೆ ಎಂದು ಸಮಿತಿಯ ಗೌರವಾಧ್ಯಕ್ಷರಾದ ಶುಭದ ರಾವ್ ಮಾಧ್ಯಮದೊಂದಿಗೆ ಹೇಳಿದರು.ಈ ಸಂದರ್ಭದಲ್ಲಿ ಪದಾಧಿಕಾರಿಗಳಾದ
ಇಲ್ಲಿನ ಸಾವ೯ಜನಿಕ ಶ್ರೀ ಗಣೇಶೋತ್ಸವ ಟ್ರಸ್ಟ್ ವತಿಯಿಂದ ಆ.27ರಿಂದ 31ರವರೆಗೆ ಸಮಾಜ ಮಂದಿರದಲ್ಲಿ ನಡೆಯಲಿರುವ 62ನೇ ವರ್ಷದ ಗಣೇಶೋತ್ಸವಕ್ಕೆ ಪೂರಕವಾಗಿ ಮಂಗಳವಾರ ಹೊರೆಕಾಣಿಕೆ ಮೆರವಣಿಗೆ ನಡೆಯಿತು.ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಎಂಸಿಎಸ್ ಸೊಸೈಟಿ ಎದುರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.ಟ್ರಸ್ಟ್ ನ ಅಧ್ಯಕ್ಷ ನಾರಾಯಣ ಪಿ.ಎಂ., ಪುರಸಭಾ ಸದಸ್ಯರಾದ ರಾಜೇಶ್ ನಾಯ್ಕ್, ಸುರೇಶ್ ಪ್ರಭು, ಟ್ರಸ್ಟ್ ನ ಪ್ರಧಾನ ಕಾಯ೯ದಶಿ೯ ಸುದಶ೯ನ್
ಆಳ್ವಾಸ್ ಸ್ಪೋರ್ಟ್ಸ್ ಕ್ಲಬ್‌ಗೆ 42 ಪದಕ . ಉಡುಪಿ ಜಿಲ್ಲಾ ಅಥ್ಲೆಟಿಕ್ಸ್ ಸಂಸ್ಥೆ(ರಿ.) ವತಿಯಿಂದ ನಡೆದ ಕರ್ನಾಟಕ ರಾಜ್ಯ ಅಂತರ್ ಜಿಲ್ಲಾ ಕಿರಿಯರ ಹಾಗೂ 23 ವಯೋಮಿತಿಯ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಸ್ಪೋಟ್ಸ್ ಕ್ಲಬ್‌ನ ಕ್ರೀಡಾಪಟುಗಳಿಗೆ 19 ಚಿನ್ನ, 15 ಬೆಳ್ಳಿ, 8 ಕಂಚು ಒಟ್ಟು 42 ಪದಕಗಳು, 3 ನೂತನ ಕೂಟ ದಾಖಲೆ ಹಾಗೂ 1 ವಿಭಾಗ ಕ್ರೀಡಾಕೂಟದ ವೈಯಕ್ತಿಕ ಪ್ರಶಸ್ತಿಯೊಂದಿಗೆ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿತು.



























