Home Posts tagged V4News (Page 213)

ಮಂಗಳೂರು : ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಪತ್ರಿಕಾ ದಿನಾಚರಣೆ

ಮಂಗಳೂರು : ಕನ್ನಡ ಪ್ರಪ್ರಥಮ ಪತ್ರಿಕೆ ಮಂಗಳೂರು ಸಮಾಚಾರದ ನೆನಪಿನಲ್ಲಿ ನಡೆಯುವ ಪತ್ರಿಕಾ ದಿನಾಚರಣೆಯ ಸಂದರ್ಭದಲ್ಲಿ ಈ ಪತ್ರಿಕೆ ಹಾಗೂ ಅದರ ಸಂಪಾದಕ ಡಾ.ಹೆರ್ಮನ್ ಮ್ಯೋಗ್ಲಿಂಗ್ ಅವರ ಚರಿತ್ರೆಯನ್ನು ಜನತೆಯ ಮುಂದಿಡುವ ಕೆಲಸ ನಡೆಯಬೇಕು ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ದ.ಕ.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಅವರು ಹೇಳಿದರು. ಮಂಗಳೂರು ಬಲ್ಮಠ

ಸಾಧನೆಯ ಹೆಜ್ಜೆಗಳಿಂದ ಶೈಕ್ಷಣ ಕ ಪರಂಪರೆಗೆ ಅರ್ಥವಂತಿಕೆ: ಡಾ.ವೀರೇಂದ್ರ ಹೆಗ್ಗಡೆ

ಉಜಿರೆ,ಜುಲೈ 1: ಶಿಸ್ತು, ಸಂಯಮ ಮತ್ತು ಜ್ಞಾನವನ್ನು ರೂಢಿಸಿಕೊಳ್ಳುವ ನಿಟ್ಟಿನಲ್ಲಿ ಜಗತ್ತಿನ ಉಳಿದ ದೇಶಗಳಿಗಿಂತ ಭಾರತದ ವಿದ್ಯಾರ್ಥಿಗಳು ಅಗ್ರಮಾನ್ಯತೆಯನ್ನು ಪಡೆದವರು. ಇಂಥ ವಿಶೇಷ ಶೈಕ್ಷಣ ಕ ಪರಂಪರೆಯ ಅರ್ಥವಂತಿಕೆ ಹೆಚ್ಚಿಸುವ ರೀತಿಯಲ್ಲಿ ವಿದ್ಯಾರ್ಥಿಗಳು ಸಾಧನೆಯ ಹೆಜ್ಜೆಗಳನ್ನಿರಿಸಬೇಕು ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅಭಿಪ್ರಾಯಪಟ್ಟರು.ಉಜಿರೆಯ ಎಸ್.ಡಿ.ಎಂ ಕಾಲೇಜಿನ ವಾರ್ಷಿಕೋತ್ಸವ

ದೇರಳಕಟ್ಟೆ : ದೇಶದ ಮೊದಲ ಕೇಶ ವಿನ್ಯಾಸ ಕಾಲೇಜು – “ಶಿವಾಸ್” ಆಗಸ್ಟ್ ನಲ್ಲಿ ಕಾರ್ಯಾರಂಭ

ಮಂಗಳೂರು ವಿಶ್ವವಿದ್ಯಾನಿಲಯದಿಂದ ಅಂಗೀಕೃತವಾದ ದೇಶದ ಮೊತ್ತ ಮೊದಲ ಕೇಶ ವಿನ್ಯಾಸ ಕಾಲೇಜು ಆಗಸ್ಟ್ ನಲ್ಲಿ ಮಂಗಳೂರಿನ ದೇರಳಕಟ್ಟೆಯಲ್ಲಿ ಶಿವಾ’ಸ್ ಕಾಲೇಜು ಹೆಸರಲ್ಲಿ ಕಾರ್ಯಾರಂಭಗೊಳ್ಳಲಿದೆ. ಆರು ತಿಂಗಳ ಸರ್ಟಿಫಿಕೇಟ್ ಕೋರ್ಸ್ ಮತ್ತು ಒಂದು ವರ್ಷದ ಡಿಪ್ಲೋಮಾ ಪೂರೈಸಿದ ವಿದ್ಯಾರ್ಥಿಗಳಿಗೆ ಮಂಗಳೂರು ವಿಶ್ವವಿದ್ಯಾನಿಲಯ ಪ್ರಮಾಣೀಕೃತ ಸರ್ಟಿಫಿಕೇಟ್ ಸಿಗಲಿದೆ. ಬಹು ಬೇಡಿಕೆಯಿರುವ ಕೇಶ ವಿನ್ಯಾಸ ಕ್ಷೇತ್ರದಲ್ಲಿ ಯುವ ಸಮುದಾಯಕ್ಕೆ ಉದ್ಯೋಗವಕಾಶ ಒದಗಿಸುವ

ಉಡುಪಿ : ಗೋಕಳ್ಳರಿಂದ ರಕ್ಷಿಸಲ್ಪಟ್ಟ ಗೋವುಗಳು ಗೋಶಾಲೆಗೆ

ಆದಿ ಉಡುಪಿ ಸಂತೆ ಮಾರ್ಕೆಟಿನ ಬಳಿ ಗೋವುಗಳ್ಳರಿಂದ ರಕ್ಷಿಸಲ್ಪಟ್ಟ ಮೂರು ಕರುಗಳನ್ನು ಕೊಡವೂರಿನ ನಂದಗೋಕುಲ ಗೋಶಾಲೆಗೆ ಸೇರಿಸಿದ್ದಾರೆ. ಗುರುರಾಜ್ ಅಮಿನ್ ಅವರು ಗೋವುಗಳ್ಳರಿಂದ ಮತ್ತು ಬೀದಿ ನಾಯಿಗಳಿಂದ ಕರುಗಳನ್ನು ರಕ್ಷಿಸಿ, ಮೇವು ನೀಡಿ ಸುರಕ್ಷಿತವಾಗಿಟ್ಟಿದ್ದರು. ಬಳಿಕ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರ ಗಮನಕ್ಕೆ ತಂದರು. ತಕ್ಷಣ ಒಳಕಾಡು ಅವರು ಅಲ್ಲಿಯ ತಂಡದವರಿಂದ ಕರುಗಳನ್ನು ಗೋಶಾಲೆಗೆ ದಾಖಲುಪಡಿಸಿದರು. ಗೋಶಾಲೆಯ ಮೇಲ್ವಿಚಾರಕ ಇಂದು ಶೇಖರ್

ಕಡಬ : ಬೃಹತ್ ಗಾತ್ರದ ಕಾಡುಕೋಣದ ಮೃತದೇಹ ಪತ್ತೆ

ಬೃಹತ್ ಗಾತ್ರದ ಕಾಡುಕೋಣದ ಮೃತದೇಹವು ಕಡಬ ಸಮೀಪದ ಕೋಡಿಂಬಾಳದ ಪುಳಿಕುಕ್ಕು ಎಂಬಲ್ಲಿ ಶನಿವಾರದಂದು ಕಂಡುಬಂದಿದೆ. ಪುಳಿಕುಕ್ಕು ಸೇತುವೆಯ ಬಳಿ ನದಿಯಲ್ಲಿ ತೇಲುತ್ತಿದ್ದ ಸ್ಥಿತಿಯಲ್ಲಿ ಕಾಡುಕೋಣದ ಮೃತದೇಹವು ಕಂಡುಬಂದಿದ್ದು, ಸ್ಥಳೀಯರು ವೀಡಿಯೋ ಮಾಡಿದ್ದಾರೆ. ಇದೀಗ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅರಣ್ಯ ಇಲಾಖೆಯವರು ಕಾಡುಕೋಣದ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಿದ್ದಾರೆ.

ಪಡುಬಿದ್ರಿ : “ಪಿಸು ಮಾತು” ಮ್ಯೂಸಿಕ್ ವಿಡಿಯೋ ಬಿಡುಗಡೆ ಕಾರ್ಯಕ್ರಮ

ಶುಭಾ ಶೆಟ್ಟಿ ಪ್ರೋಡಕ್ಷನ್ಸ್ ಬ್ಯಾನರ್‍ನಲ್ಲಿ ತಯಾರಾದ ಉಮೇಶ್ ಶೆಟ್ಟಿ ಮತ್ತು ಧನರಾಜ್ ಶೆಟ್ಟಿ ನಿರ್ಮಾಣದ “ಪಿಸುಮಾತು” ಕನ್ನಡ ಮ್ಯೂಸಿಕ್ ವಿಡಿಯೋದ ಬಿಡುಗಡೆ ಕಾರ್ಯಕ್ರಮವು ಪಡುಬಿದ್ರಿಯ ಭಾರತ್ ಸಿನಿಮಾಸ್ ಚಿತ್ರಮಂದಿರದಲ್ಲಿ ನಡೆಯಿತು. ಈ ವಿನೂತನ ಕಥಾ ಹಂದರವನ್ನು ಹೊಂದಿರುವ ಮ್ಯೂಸಿಕ್ ವಿಡಿಯೋವನ್ನು ಕಾಪುವಿನ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಭವಾನಿ ಶಂಕರ್ ಹೆಗ್ಡೆ, ಸಂಜಯ್ ಕುಮಾರ್ ಶೆಟ್ಟಿ

ಅಕ್ರಮವಾಗಿ ಡ್ರಗ್ಸ್ ಮಾರಾಟ ಪ್ರಕರಣ : ಇಬ್ಬರು ಆರೋಪಿಗಳ ಬಂಧನ

ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ಚತುರ್ಮುಖ ಬಸದಿ ಬಳಿ ಅಕ್ರಮವಾಗಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸ್ರು ಬಂಧಿಸಿದ್ದಾರೆ. ಕಸಬಾ ಗ್ರಾಮದ ಸಾಲ್ಮರ ಜರಿಗುಡ್ಡೆ ನಿವಾಸಿ ಮೊಹಮ್ಮದ್ ಅಶ್ಫಾನ್(20) ಹಾಗೂ ನಲ್ಲೂರು ಪೇರಲ್ಕೆ ನಿವಾಸಿ ರಜೀಮ್ (31) ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಕಾರ್ಕಳ ಚತುರ್ಮುಖ ಬಸದಿ ಬಳಿ ಡ್ರಗ್ಸ್ ಮಾರಾಟ ಮಾಡುತ್ತಿದ್ದಾರೆಂಬ ಖಚಿತ ಮಾಹಿತಿಯ ಮೇರೆಗೆ ಕಾರ್ಕಳ ಡಿವೈಎಸ್‍ಪಿ ಅರವಿಂದ ಕಲಗುಜ್ಜಿ

ಉಡುಪಿ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜಿಗೆ ಪೂರ್ಣ ಸಹಕಾರ-ಯಶ್ಪಾಲ್ ಸುವರ್ಣ

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಕಾರದಲ್ಲಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ರಿ. ಉಡುಪಿ ಆಶ್ರಯದಲ್ಲಿ ವೈದ್ಯರ ದಿನಾಚರಣೆ ಪ್ರಯುಕ್ತ ಉಡುಪಿಯ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಶಾಖೆಯಲ್ಲಿ ಜಿಲ್ಲೆಯ ಹಿರಿಯ ವೈದ್ಯ ದಂಪತಿಗಳಿಗೆ ಹಾಗು ವೈದ್ಯರಿಗೆ ಗೌರವ ಪುರಸ್ಕಾರ -೨೦೨೩ ನೀಡಿ ಗೌರವಿಸಲಾಯಿತು. ಉಡುಪಿ ಜಿಲ್ಲೆಯ ಪ್ರಸಿದ್ಧ ವೈದ್ಯ ದಂಪತಿಗಳಾದ ಡಾ. ಹoಗ್ಳೂರು ರಾಘವೇಂದ್ರ ಹೆಬ್ಬಾರ್ ಹಾಗೂ ಡಾ.

ಮಣಿಪುರ ವಿಚಾರ : ಕೇಂದ್ರ ಸರ್ಕಾರ ಕೂಡಲೇ ಮಧ್ಯಪ್ರವೇಶ ಮಾಡಬೇಕು : ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯದಿಂದ ಮನವಿ

ಮಣಿಪುರ ರಾಜ್ಯದಲ್ಲಿ ನಡೆಯುತ್ತಿರುವ ಹಿಂಸಾಚಾರ ವಿಚಾರದಲ್ಲಿ ಕೇಂದ್ರ ಸರಕಾರ ಕೂಡಲೇ ಮಧ್ಯಪ್ರವೇಶ ಮಾಡಿ ಶಾಂತಿ ಸ್ಥಾಪನೆ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಉಡುಪಿ ಧರ್ಮಪ್ರಾಂತ್ಯ ಹಾಗೂ ಕ್ರೈಸ್ತ ಸಮುದಾಯ ಪರವಾಗಿ ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ದೇಶದ ಪ್ರಧಾನಿ ಹಾಗೂ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಉಡುಪಿ ಕಥೊಲಿಕ್ ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕಾಧಿಕಾರಿ ವಂ|ಡೆನಿಸ್ ಡೆಸಾ ಮಾತನಾಡಿ, ಈಶಾನ್ಯ ಭಾರತದ

ಉಡುಪಿ : ಕಾಲುಸಂಕದಿಂದ ಬಿದ್ದು ವ್ಯಕ್ತಿ ಮೃತ್ಯು

ವ್ಯಕ್ತಿಯೋರ್ವರು ಕಾಲುಸಂಕದಿಂದ ಆಕಸ್ಮಿಕವಾಗಿ ಬಿದ್ದು ಮೃತಪಟ್ಟ ಘಟನೆ ಉಡುಪಿಯ ಮಠದಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಬಿಜೂರು ನಿವಾಸಿ ಸತೀಶ್ ಎಂದು ಗುರುತಿಸಲಾಗಿದೆ. ಇವರು ಉಡುಪಿಯ ಹೋಟೆಲ್‍ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ನಿನ್ನೆ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದು, ಇಂದು ಮಧ್ಯಾಹ್ನದ ವೇಳೆಗೆ ಮಠದಬೆಟ್ಟು ತೋಡಿನಲ್ಲಿ ಸತೀಶ್ ಮೃತದೇಹ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಮೇಲೆಕ್ಕೆತ್ತಿದ್ದಾರೆ. ಸಮಾಜ ಸೇವಕ