Home Posts tagged V4News (Page 214)

ಮತಾಂತರ, ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು : ಸಾಧು ಸಂತರಿಂದ ಸುದ್ದಿಗೋಷ್ಟಿ

ಮತಾಂತರ ನಿಷೇಧ ಮತ್ತು ಗೋಹತ್ಯೆ ನಿಷೇಧ ಕಾಯ್ದೆ ವಾಪಸ್ ಪಡೆಯಬಾರದು. ಕಾಯ್ದೆ ವಾಪಸ್ ಪಡೆದಲ್ಲಿ ಸಮಾಜದಲ್ಲಿ ಅಶಾಂತಿ ಮೂಡಬಹುದು. ಸಂತರು ಸೇರಿಕೊಂಡು ಉಪವಾಸ ಸತ್ಯಾಗ್ರಹ ಮಾಡುವುದಕ್ಕೂ ರೆಡಿ ಇದ್ದೇವೆ. ಕಾಯ್ದೆ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿ, ಗೃಹ ಸಚಿವ, ರಾಜ್ಯಪಾಲರಿಗೆ ಮನವಿ ನೀಡುತ್ತೇವೆ ಎಂದು ಸಂತರು ತಿಳಿಸಿದ್ದಾರೆ.

ಕೊಲ್ಲೂರು : ವ್ಯಕ್ತಿಯ ಮೇಲೆ ಚಿರತೆ ದಾಳಿ, ಗಂಭೀರ ಗಾಯ

ಚಿರತೆಯೊಂದು ವ್ಯಕ್ತಿಯೋರ್ವರ ಮೇಲೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ಕೊಲ್ಲೂರು ಸಮೀಪದ ನಾಗೋಡಿಯ ಕಂಚಿಕರೆ ಎಂಬಲ್ಲಿ ನಡೆದಿದೆ. ಚಿರತೆ ದಾಳಿಯಿಂದ ಗಣೇಶ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ನಿನ್ನೆ ತಡರಾತ್ರಿ ಗಣೇಶ್ ಅವರ ಮನೆಯ ಸಮೀಪವೇ ಚಿರತೆ ಕಂಡುಬಂದಿದ್ದು, ನಾಯಿಯ ಕೂಗಾಟ ಕೇಳಿ ಗಣೇಶ್ ಮನೆಯಿಂದ ಹೊರ ಬಂದಾಗ ಅವರ ಮೇಲೆ ಎರಗಿದೆ. ಗಂಭೀರ ಗಾಯಗೊಂಡಿದ್ದ ಗಣೇಶ್ ಅವರನ್ನು ಕುಂದಾಪುರದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಯಿತು.

ರಾಜ್ ಬಿ ಶೆಟ್ಟಿ ನಟನೆಯ ಟೋಬಿ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್

ರಾಜ್ ಬಿ ಶೆಟ್ಟಿ ನಟನೆಯ ಹೊಸ ಸಿನಿಮಾ ಟೋಬಿಯ ಫಸ್ಟ್ ಲುಕ್ ಟೀಸರ್ ಬಿಡುಗಡೆಗೊಂಡಿದೆ. ವಿಭಿನ್ನ ಗೆಟಪ್‍ನಲ್ಲಿ ರಾಜ್ ಬಿ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಟೀಸರ್ ತುಂಬೆಲ್ಲ ರಕ್ತದ ಕೆಂಪು ರಾರಾಜಿಸುತಿದೆ. ಶೆಟ್ಟರ್ ಮೂಗಿನ ಹೊಳೆವ ಮೂಗುತಿಯ ಗುಟ್ಟು ಚಿತ್ರ ನೋಡಿಯೇ ತಿಳಿಯಬೇಕಿದೆ. ರಾಜ್ ಬಿ ಶೆಟ್ಟಿ ಅವರು ಯಾವುದೇ ಸಿನಿಮಾ ಮಾಡಿದರೂ ತುಂಬಾ ಕುತೂಹಲ ಉಂಟಾಗುವಂತೆ ಇರುತ್ತದೆ. ಅದಕ್ಕೆ ಸಾಕ್ಷಿಯೇ ಎಂಬುದಕ್ಕೆ `ಟೋಬಿ’ ಸಿನಿಮಾದ

ಸ್ಥಗಿತಗೊಂಡ ಸರ್ಕಾರಿ ಬಸ್ ಪುನರಾರಂಭಿಸಲು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಗಳಿಂದ ಪ್ರತಿಭಟನೆ

ಸ್ಥಗಿತಗೊಂಡ ಸರ್ಕಾರಿ ಬಸ್ ಪುನರಾರಂಭಿಸಬೇಕು ಮತ್ತು ಜಿಲ್ಲೆಯ ವಿವಿಧ ಭಾಗಗಳಿಗೆ ಸರ್ಕಾರಿ ಬಸ್ ಒದಗಿಸಬೇಕೆಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಗಳವರು ಪ್ರತಿಭಟನೆ ನಡೆಸುತ್ತಿದ್ದಾರೆ. ನಗರದಲ್ಲಿ ಜನವಾದಿ ಮಹಿಳಾ ಸಂಘಟನೆಯ ವತಿಯಿಂದ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಜಯಂತಿ ಬಿ. ಶೆಟ್ಟಿ ಅವರು, ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಭರವಸೆಗಳನ್ನು ಮಾತ್ರ ಕೊಡುತ್ತಿದ್ದಾರೆ ಹೊರತು ಯಾವ

ಫಸಲು ಭೀಮಾ ಯೋಜನೆಗೆ ಅಡಿಕೆ ಮತ್ತು ಕಾಳುಮೆಣಸು ಸೇರ್ಪಡೆ

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ ಫಸಲು ಭೀಮಾ ಯೋಜನೆಯಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಕೈಬಿಟ್ಟಿರುವುದು ಅತ್ಯಂತ ನಿರಾಶದಾಯಕವಾಗಿತ್ತು. ಇದೀಗ ಅದನ್ನು ಸೇರ್ಪಡೆ ಮಾಡಲಾಗಿದೆ ಎಂದು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.ಈ ಬಗ್ಗೆ ರೈತರು ನನ್ನ ಗಮನಕ್ಕೆ ತಂದಾಗ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೃಷಿ ಮಂತ್ರಿ ಮಲ್ಲಿಕಾರ್ಜುನ ಇವರನ್ನು ಭೇಟಿಯಾಗಿ ನಿನ್ನೆ ನಡೆದ ಕ್ಯಾಬಿನೆಟ್ ನಲ್ಲಿ ಅಡಿಕೆ ಹಾಗೂ ಕಾಳುಮೆಣಸನ್ನು ಫಸಲು ಭೀಮಾ ಯೋಜನೆಗೆ

ಮಂಗಳೂರು ವಿ.ವಿ. ಅಂತರ ಕಾಲೇಜು ಪುರುಷ ಮತ್ತು ಮಹಿಳಾ ಚಾಂಪಿಯನ್‌ಶಿಪ್ : ಸಮಗ್ರ ಪ್ರಶಸ್ತಿ ಎತ್ತಿದ ಆಳ್ವಾಸ್

ವಿದ್ಯಾಗಿರಿ: ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಅಂತರ ಕಾಲೇಜು ಪುರುಷ ಮತ್ತು ಮಹಿಳಾ ವಿಭಾಗದ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್‌ಶಿಪ್ ಪ್ರಶಸ್ತಿಯನ್ನು ಆಳ್ವಾಸ್ ಕಾಲೇಜು ಎತ್ತಿ ಹಿಡಿದಿದೆ.ಮಂಗಳೂರು ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ವಿಭಾಗದ ಸಹಯೋಗದಲ್ಲಿ ಆಳ್ವಾಸ್ ದೈಹಿಕ ಶಿಕ್ಷಣ ಕಾಲೇಜು ಕೃಷಿಸಿರಿ ವೇದಿಕೆಯಲ್ಲಿ ಹಮ್ಮಿಕೊಂಡ ಪಂದ್ಯಾವಳಿಯಲ್ಲಿ ಆಳ್ವಾಸ್ ಸಮಗ್ರ ಚಾಂಪಿಯನ್ ಆಯಿತು. ಮಹಿಳಾ ವಿಭಾಗದಲ್ಲಿ ಸತತ 19ನೇ ಬಾರಿ ಚಾಂಪಿಯನ್ ಆದ ಆಳ್ವಾಸ್ ಕಾಲೇಜು ತಂಡವು

ಯುವ ಜನತೆಯ ಸಮಾಜ ಸೇವೆಯ ಚಿಂತನೆ ಶ್ಲಾಘನೀಯ: ವಂದನೀಯ ಪಾವ್ಲ್ ಸಿಕ್ವೇರ

ಭಾರತೀಯ ಕಥೊಲಿಕ ಯುವ ಸಂಚಲನ ಬಳಕುಂಜೆ ಘಟಕವು ತನ್ನ 50 ಸಂವತ್ಸರಗಳನ್ನು ಪೂರೈಸಿದ ಸವಿ ನೆನಪಿಗಾಗಿ, ಸಮಾಜಕ್ಕೆ ಕೊಡುಗೆಯಾಗಿ ಬಳಕುಂಜೆ ಗುತ್ತು ಧೂಮಾವತಿ ದ್ವಾರದ ಮುಂಭಾಗದಲ್ಲಿ ನಿರ್ಮಿಸಲಾದ ಪ್ರಯಾಣಿಕರ ತಂಗುದಾಣದ ಉದ್ಘಾಟನಾ ಸಮಾರಂಭವು ಜೂನ್ 29ರಂದು ಬೆಳಿಗ್ಗೆ 9:15 ಕ್ಕೆ ಜರುಗಿತು. ಈ ಪ್ರಯಾಣಿಕರ ತಂಗುದಾಣದ ಆಶೀರ್ವಚನವನ್ನು ಬಳಕುಂಜೆಯ ಸಂತ ಪೌಲರ ದೇವಾಲಯದ ಧರ್ಮಗುರುಗಳಾದ ವಂದನೀಯ ಪಾವ್ಲ್ ಸಿಕ್ವೇರಾರವರು ನೆರವೇರಿಸಿ, “ನಾವೆಲ್ಲರು ಇಲ್ಲಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿದ ಮೂಡುಬಿದಿರೆಯ ಸೋನಾಲ್

ಮೂಡುಬಿದಿರೆ: ಇಲ್ಲಿನ ಉದ್ಯಮಿ ಶಂಕರ್ ಎ. ಕೋಟ್ಯಾನ್ – ಜೀವಿತಾ ಶಂಕರ್ ದಂಪತಿಯ ಪುತ್ರಿಯಾಗಿರುವ ಸೋನಲ್ ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡುವ ಮೂಲಕ ಮೆಚ್ಚುಗೆಯನ್ನು ಪಡೆದಿದ್ದಾರೆ. ಕ್ಯಾನ್ಸರ್ ಪೀಡಿತರಿಗೆ ಕೂದಲು ಇರುವುದಿಲ್ಲ ಎಂಬುದನ್ನು ತಿಳಿದುಕೊಂಡಿದ್ದ ಸೋನಲ್ ತನ್ನ ನೀಳವಾದ ಕೂದಲನ್ನು ಕತ್ತರಿಸಿ ಕೇಶದಾನ ಮಾಡಬೇಕೆಂದು ಕಳೆದ ಒಂದು ವರ್ಷದಿಂದ ಕನಸು ಕಂಡಿದ್ದಳು. ಇದೀಗ ಬೆಂಗಳೂರಿನಲ್ಲಿ ಕ್ಯಾನ್ಸರ್ ಪೀಡಿತರ ನೆರವಿಗಿರುವ ಸಂಸ್ಥೆಯೊಂದಕ್ಕೆ

ಬಿಜೆಪಿಯಲ್ಲಿ ಮನೆಯೊಂದು 10 ಬಾಗಿಲು ಎಂಬಂತಾಗಿದೆ : ಮಂಗಳೂರಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಟೀಕೆ

ಬಿಜೆಪಿಯಲ್ಲಿ ಮನೆಯೊಂದು ಬಾಗಿಲು ಹತ್ತು ಎಂಬಂತಾಗಿದೆ. ಯಾರು ಏನು ಮಾತನಾಡುತ್ತಾರೆಂದು ಗೊತ್ತಾಗುತ್ತಿಲ್ಲ. ರಾಜ್ಯ ಬಿಜೆಪಿಯ ಪರಿಸ್ಥಿತಿಯನ್ನು ನಿಯಂತ್ರಿಸಲು 56 ಇಂಚಿನ ಎದೆಯವರಿಗೂ ಸಾಧ್ಯವಾಗುತ್ತಿಲ್ಲ ಎಂದು ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಟೀಕಿಸಿದ್ದಾರೆ. ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಬಿಜೆಪಿಯಲ್ಲಿ ಉದ್ಭವಿಸಿರುವ ಗೊಂದಲಗಳನ್ನು ನಿವಾರಿಸಲು ಕೇಂದ್ರದ ವರಿಷ್ಠರಿಗೂ ಸಾಧ್ಯವಾಗದ

ಉಳ್ಳಾಲ ಬೀಚ್ ಸಮುದ್ರಪಾಲಾಗುತ್ತಿದ್ದ ಯುವಕನ ರಕ್ಷಣೆ

ಉಳ್ಳಾಲ: ಸಮುದ್ರ ವಿಹಾರಕ್ಕೆ ತೆರಳಿದ್ದ ಬೆಂಗಳೂರು ಮೂಲದ ಯುವಕ ಸಮುದ್ರದ ಭಾರೀ ಗಾತ್ರದ ಅಲೆಗಳ ನಡುವೆ ಸಿಲುಕಿದ್ದು, ಪ್ರಾಣಾಪಾಯದಲ್ಲಿದ್ದ ಆತನನ್ನು ಮೊಗವೀರಪಟ್ನದ ಶಿವಾಜಿ ಜೀವರಕ್ಷಕ ದಳದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಉಳ್ಳಾಲ ಬೀಚ್ ನಲ್ಲಿ ನಡೆದಿದೆ. ಬೆಂಗಳೂರು ಯಶವಂತಪುರ ನಿವಾಸಿ ನಿಝಾಮ್ (35) ಎಂಬಾತನನ್ನು ರಕ್ಷಿಸಲಾಗಿದೆ. ಈತನನ್ನು ಮೊಗವೀರಪಟ್ನ ಶಿವಾಜಿ ಜೀವರಕ್ಷಕ ದಳದ ವಿಕ್ರಮ್ ಪುತ್ರನ್, ಶ್ರಾವಣ್, ದೀಕ್ಷಿತ್ ಬಂಗೇರ, ದೀಕ್ಷಿತ್ ಚಂದನ್,