Home Posts tagged V4News (Page 215)

ಬೈಂದೂರು : ಅಜ್ಜಿಗೆ ಆಸರೆಯಾದ ಯುವಕರ ತಂಡ

ಬೈಂದೂರು ತಾಲೂಕಿನ ನಾಡ ಗ್ರಾ.ಪಂ ವ್ಯಾಪ್ತಿಯ ತೆಂಕಬೈಲು ಗೋಳಿಹಕ್ಲು 5 ಸೆಂಟ್ಸ್ ಕಾಲೊನಿಯಲ್ಲಿ ಶಿಥಿಲಾವಸ್ಥೆಯಲ್ಲಿರುವ ಗುಡಿಸಲಿನಲ್ಲಿ ಒಂಟಿಯಾಗಿ ವಾಸಿಸುತ್ತಿದ್ದ ಚಂದು ಪೂಜಾರ್ತಿ ಎಂಬವರಿಗೆ ಸಮಾನ ಮನಸ್ಥಿತಿ ಯವಕರ ವಾಟ್ಸಾಪ್ ಗ್ರೂಪ್ ಹಾಗೂ ಲಯನ್ಸ್ ಕ್ಲಬ್ ನಾವುಂದ, ಗ್ರಾಮ ಪಂಚಾಯತ್ ನಾಡ, ಮತ್ತು ಪತ್ರಕರ್ತ ಮಿತ್ರರು ಸುಸಜ್ಜಿತವಾದ ಮನೆಯನ್ನು ನಿರ್ಮಿಸಿ

ಕಾಪು ಮಾರಿಯಮ್ಮ – ತಾತ್ಕಾಲಿಕ ನೂತನ ಗರ್ಭಗುಡಿಗೆ ಸ್ಥಳಾಂತರ

ಕಾಪುವಿನ ಪ್ರಸಿದ್ಧ ಧಾರ್ಮಿಕ ಕೇಂದ್ರಗಳಲ್ಲಿ ಒಂದಾದ ಮೂರು ಮಾರಿಗುಡಿ ದೇವಸ್ಥಾನಗಳ ಪೈಕಿ ಹೊಸ ಮಾರಿಗುಡಿ ದೇವಸ್ಥಾನ ಇದೀಗ ಜೀರ್ಣೋದ್ಧಾರ ಪ್ರಕೃಯೆ ಬಹಳ ವೇಗವಾಗಿ ನಡೆಯುತ್ತಿದ್ದು, ಹಳೆಯ ಗುಡಿಯಲ್ಲಿ ಪ್ರತಿಷ್ಠೆಗೊಂಡಿರುವ ಮಾರಿಯಮ್ಮನನ್ನು ತಾತ್ಕಾಲಿಕ ನೂತನ ಗುಡಿಗೆ ಸ್ಥಳಾಂತರಿಸಲು ಬೇಕಾದ ಎಲ್ಲಾ ಧಾರ್ಮಿಕ ವಿಧಿ ವಿಧಾನಗಳು ನಡೆಯುತ್ತಿದೆ. ಈ ಬಗ್ಗೆ ಮಾತನಾಡಿದ ಶ್ರೀ ಕ್ಷೇತ್ರದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಕಾಪು ಮಾತನಾಡಿ, ಬಹಳಷ್ಟು

ಜೂನ್ 11 ರಂದು : ವಿಧಾನಸಭೆಯ ಸ್ಪೀಕರ್ ಖಾದರ್ ಅವರಿಗೆ ಪೌರ ಸನ್ಮಾನ

ಕರ್ನಾಟಕ ವಿಧಾನಸಭಾ ಅಧ್ಯಕ್ಷ ಯು.ಟಿ ಖಾದರ್ ಅವರಿಗೆ ಉಳ್ಳಾಲ ನಗರ ಪೌರ ಸನ್ಮಾನ ಸಮಿತಿ ಆಶ್ರಯದಲ್ಲಿ ಪೌರ ಸನ್ಮಾನ ಕಾರ್ಯಕ್ರಮ ಜೂನ್ 11 ರಂದು ಸಂಜೆ 6 ಗಂಟೆಗೆ ಉಳ್ಳಾಲ ನಗರ ಸಭೆ ಮೈದಾನದಲ್ಲಿ ನಡೆಯಲಿದೆ ಎಂದು ಪೌರ ಸನ್ಮಾನ ಸಮಿತಿ ಸಮಿತಿ ಅಧ್ಯಕ್ಷ ಈಶ್ವರ್ ಉಳ್ಳಾಲ ಹೇಳಿದರು. ಉಳ್ಳಾಲ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಂಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಐದು ಬಾರಿ ಶಾಸಕರಾಗಿ, ಸಚಿವರಾಗಿ

ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಡಯಾಲಿಸಿಸ್ ಯಂತ್ರಗಳ ಲೋಕಾರ್ಪಣೆ

ಪುತ್ತೂರು : ಪುತ್ತೂರು ಸರ್ಕಾರಿ ಆಸ್ಪತ್ರೆಗೆ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಾರ್ವಜನಿಕರಿಂದ ಯಾವುದೇ ದೂರುಗಳಿಲ್ಲದ ರೀತಿಯಲ್ಲಿ ಅಸ್ಪತ್ರೆಯನ್ನು ಸಜ್ಜುಗೊಳಿಸಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು. ಅವರು ಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ, ರೋಟರಿ ಕ್ಲಬ್ ಪುತ್ತೂರು ಇಲೈಟ್, ಅಮೆರಿಕಾ ಫ್ಲೋರಿಡಾ ರೋಟರಿ ಕ್ಲಬ್ ನ್ಯೂ

ಬಿಪೋರ್ ಜಾಯ್ ಚಂಡಮಾರುತ : ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ || biporjoy cyclon

ಬಿಪೋರ್ ಜಾಯ್ ಚಂಡಮಾರುತದ ಪರಿಣಾಮ ಜೂನ್ 11ರವರೆಗೆ ಮುಂದುವರಿಯಲಿರುವ ಕಾರಣ ಹಾಗೂ ಇದೇ ವೇಳೆಯಲ್ಲಿ ಮುಂಗಾರು ಆರಂಭವಾಗಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಮಾನವ ಹಾಗೂ ಜಾನುವಾರುಗಳ ಪ್ರಾಣಹಾನಿಯಾಗದಂತೆ ಕಟ್ಟೆಚ್ಚರ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣೆಯ ಅಧಿಕಾರಿಗಳು ಸೂಚಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆ ಹೊರಡಿಸಿರುವ ಮುನ್ಸೂಚನೆಯಂತೆ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಹಿನ್ನಲೆಯಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಭಾರೀ ಮಳೆ

ಎರ್ಮಾಳು ಮೂಡಬೆಟ್ಟು ಪ್ರದೇಶದಲ್ಲಿ ಕಾಣಿಸಿಕೊಂಡ ಚಿರತೆ: ಭಯಭೀತರಾದ ಜನತೆ

ಎರ್ಮಾಳಿನ ಮೂಡಬೆಟ್ಟು ಪ್ರದೇಶದಲ್ಲಿ ರಾತ್ರಿ ಸಮಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಜನರು ಚಿರತೆಯನ್ನು ಕಂಡು ಭಯಭೀತರಾದ್ದು, ರಾತ್ರಿ ಎಲ್ಲಾ ಜಾಗರಣೆಯಿಂದ ಕೂರುವಂತಾಗಿದೆ. ಎರ್ಮಾಳು ಅದಮಾರು ರಸ್ತೆಯ ಮೂಡಬೆಟ್ಟು ಎಂಬಲ್ಲಿ ಅಟೋ ರಿಕ್ಷಾದಲ್ಲಿ ಹೋಗುತ್ತಿದ್ದವರಿಗೆ ಈ ಚಿರತೆ ವಿದ್ಯುತ್ ದೀಪದಡಿಯಲ್ಲಿ ನಡೆದು ಹೋಗುತ್ತಿದ್ದ ದೃಶ್ಯ ಕಂಡುಬಂದಿದೆ. ತಕ್ಷಣ ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಎಲ್ಲರೂ ಒಟ್ಟಾಗಿ ಟಾರ್ಚ್ ಸಹಿತ ದೊಣ್ಣೆ ಹಿಡಿದು ಚಿರತೆಗಾಗಿ

ತಾಂಡವ ಪ್ರೀಮಿಯರ್ ಲೀಗ್ ಜೂನ್ 17 ಮತ್ತು 18ರಂದು ಉರ್ವ ಮೈದಾನದಲ್ಲಿ

ಟೀಮ್ ತಾಂಡವ ಪ್ರಸೆಂಟ್ಸ್ ತಾಂಡವ ಪ್ರೀಮಿಯರ್ ಲೀಗ್ ಉರ್ವ ಮೈದಾನದಲ್ಲಿ ಜೂನ್ 17 ಮತ್ತು 18ರಂದು ನಡೆಯಲಿದೆ.ಟೀಮ್ ತಾಂಡವ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವನ್ನು ಆಯೋಜಿಸುತ್ತಿದ್ದಾರೆ.ಟೀಮ್ ಸ್ಕೈಹಾಕ್ಸ್, ಗರುಡ ಗ್ಯಾಂಗ್, ಮೋನ್ಕ್ ಸ್ಟ್ರೈಕರ್ಸ್, ಕಿಂಗ್ಸ್, ಟೀಮ್ ಗೋಲ್ಡನ್ ಗರುಡಾಸ್, ಟೀಮ್ ಕಾಲಾಕಲ್ಕಿ ಎಂಬ 6 ತಂಡಗಳು ನಡುವೆ ಪಂದ್ಯಾಟ ನಡೆಯಲಿದೆ.ಜೂನ್ 18ರಂದು ನಡೆಯಲಿರುವ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟವು ವಿ4 ನ್ಯೂಸ್‍ನ

ಉಡುಪಿ : ಇನ್‍ಸ್ಪೈಯರ್ ನೀಟ್ ಅಕಾಡೆಮಿಯಲ್ಲಿ ದಾಖಲಾತಿ ಆರಂಭ

ಉಡುಪಿಯಲ್ಲಿ ಇನ್‍ಸ್ಪೈಯರ್ ನೀಟ್ ಅಕಾಡೆಮಿ ಕಾರ್ಯಾಚರಿಸುತ್ತಿದ್ದು, 2023-24ನೇ ಸಾಲಿನ ದಾಖಲಾತಿ ಆರಂಭಗೊಂಡಿದೆ. ಎಸೆಸೆಲ್ಸಿ ಪಾಸಾದ ವಿದ್ಯಾರ್ಥಿಗಳು ಮತ್ತು ಪಿಯುಸಿ ಪಾಸಾದ ವಿದ್ಯಾರ್ಥಿಗಳು ದೀರ್ಘಕಾಲಿಕ ತರಬೇತಿಗಳನ್ನು ಈ ಸಂಸ್ಥೆಯಲ್ಲಿ ಪಡೆಯಬಹುದು. ಇನ್‍ಸ್ಫೈಯರ್ ನೀಟ್ ಅಕಾಡೆಮಿ ಸಂಸ್ಥೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಓರಿಯಂಟೆಡ್ ಕಲಿಕೆ, ಉನ್ನತಿಗಾಗಿ ಸ್ಟಡಿ ಮೆಟೀರಿಯಲ್ಸ್, ಹಾಗೂ ಉತ್ತಮ ಬೋದಕ ವೃಂದದವರು ಇದ್ದಾರೆ. ಹಾಸ್ಟೆಲ್ ಸೌಲಭ್ಯ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ – ದ.ಕ. ಜಿಲ್ಲೆಗೆ ಸಚಿವ ದಿನೇಶ್ ಗುಂಡೂರಾವ್ , ಉಡುಪಿ ಲಕ್ಷ್ಮೀ ಹೆಬ್ಬಾಳ್ಕರ್

ರಾಜ್ಯ ಸರಕಾರ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್, ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ. ಬೆಂಗಳೂರು ನಗರಕ್ಕೆ ಡಿಕೆ ಶಿವಕುಮಾರ್, ತುಮಕೂರು ಜಿಲ್ಲೆಗೆ ಡಾ. ಜಿ ಪರಮೇಶ್ವರ್, ಗದಗ ಜಿಲ್ಲೆಗೆ ಹೆಚ್.ಕೆ ಪಾಟೀಲ್, ಬೆಂಗಳೂರು ಗ್ರಾಮಾಂತರಕ್ಕೆ ಕೆ.ಹೆಚ್ ಮುನಿಯಪ್ಪ, ರಾಮನಗರಕ್ಕೆ ರಾಮಲಿಂಗಾರೆಡ್ಡಿ, ಚಿಕ್ಕಮಗಳೂರಿಗೆ ಕೆಜೆ ಜಾರ್ಜ್, ವಿಜಯಪುರಕ್ಕೆ ಎಂ.ಬಿ

ಕುಂಪಲದ ಯುವತಿ ಸಾವಿಗೆ ಟ್ವಿಸ್ಟ್ : ನಂಬಿದ್ದ ಮಹಿಳೆಯಿಂದಲೇ ಮೋಸ

ಉಳ್ಳಾಲ: ಗೃಹಪ್ರವೇಶ ನಡೆಸಿ ಐದೇ ದಿನದಲ್ಲಿ ನೂತನ ಮನೆಯಲ್ಲೇ ಯುವತಿ ನೇಣಿಗೆ ಶರಣಾದ ಪ್ರಕರಣ ತಿರುವು ಪಡೆದುಕೊಂಡಿದ್ದು, ಮನೆ ಖರೀದಿಸಿದ ಮಹಿಳೆಯೊಬ್ಬಳಿಗೆ ನಗದು ನೀಡಿ ಒಂದೆಡೆ ಮೋಸಕ್ಕೊಳಗಾಗಿದ್ದರೆ, ಇನ್ನೊಂದೆಡೆ ಮನೆಯ ಬ್ಯಾಂಕ್ ಸಾಲ ಮರುಪಾವತಿಗೆ ಗೃಹಪ್ರವೇಶದಂದೇ ಬ್ಯಾಂಕ್ ಸಿಬ್ಬಂದಿ ಮನೆಗೆ ಬಂದು ಮುಜುಗರಕ್ಕೀಡಾದ ಯುವತಿ ಮನನೊಂದು ನೇಣಿಗೆ ಕೊರಳೊಡ್ಡಿರುವುದಾಗಿ ತಾನು ಬರೆದಿಟ್ಟಿರುವ 15 ಪುಟಗಳ ಡೆತ್ ನೋಟ್ ಮೂಲಕ ಬಹಿರಂಗವಾಗಿದೆ. ಮೂಲತ: ಫರಂಗಿಪೇಟೆಯ