Home Posts tagged V4News (Page 216)

ಮಂಜೇಶ್ವರ ಗ್ರಾ.ಪಂ. ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿರುವುದರಿಂದ ವಿದ್ಯಾರ್ಥಿಗಳು, ಪಾದಚಾರಿಗಳು ಭಯದ ವಾತಾವರಣದಲ್ಲಿ ನಡೆದಾಡಬೇಕಾದ ಪರಿಸ್ಥಿತಿ ಬಂದೊದಗಿದೆ. ಈ ಬಗ್ಗೆ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಇದುವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಅಧಿಕಾರಿಗಳ ನಿರ್ಲ್ಯಕ್ಷ ವನ್ನು ಖಂಡಿಸಿ ಎಸ್‍ಡಿಪಿಐ

ಕಡಬ : 40ಕೆಜಿ ತೂಕದ ಆಡನ್ನೇ ನುಂಗಲು ಯತ್ನಿಸಿದ ಹೆಬ್ಬಾವು

ಕಡಬ ತಾಲೂಕಿನ ಐತ್ತೂರು ಗ್ರಾಮದ ಬ್ರಾಂತಿಕಟ್ಟೆ ಕೊಡೆಂಕಿರಿ ಎಂಬಲ್ಲಿ ಭಾರೀ ಗಾತ್ರದ ಹೆಬ್ಬಾವೊಂದು ಆಡೊಂದನ್ನು ನುಂಗಲು, ಸುಮಾರು ಒಂದು ತಾಸು ಸೆಣಸಿ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ. ಸ್ಥಳೀಯರಾದ ಜಾರ್ಜ್ ಕುಟ್ಟಿ ಎಂಬವರಿಗೆ ಸೇರಿದ ಸುಮಾರು 40 ಕೆಜಿ ತೂಕದ ಗಂಡು ಆಡು ಹೆಬ್ಬಾವಿನ ಉರುಳಿಗೆ ಸಿಕ್ಕಿ ಉಸಿರುಗಟ್ಟಿ ಪ್ರಾಣ ಬಿಟ್ಟಿದೆ. ಆಡಿನ ತಲೆಯ ಭಾಗವನ್ನು ನುಂಗಿದರೂ ಉಳಿದ ಭಾಗವನ್ನು ನುಂಗಲು ಸಾಧ್ಯವಾಗದೆ ಸೋತು, ಸತ್ತ ಆಡನ್ನು ಸ್ಥಳದಲ್ಲೇ ಬಿಟ್ಟು

ಕಾರ್ಕಳ : ಮನೆಯ ಬೀಗ ಮುರಿದು ಕಳ್ಳತನಕ್ಕೆ ಯತ್ನ

ಮನೆಯೊಂದರ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ್ದ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಗೀತಾ ಎಂಬವರ ಮನೆಯಲ್ಲಿ ನಡೆದಿದೆ. ಸುಂದರ ಕುಲಾಲ್ ಎಂಬವರ ಪತ್ನಿ ಗೀತಾ ಅವರು ಅತ್ತೂರಿನ ತಾಯಿ ಮನೆಗೆ ಹೋಗಿದ್ದರು. ರಾತ್ರಿಯ ವೇಳೆಗೆ ಕಳ್ಳರು ಮನೆಯ ಮುಂದಿನ ಬಾಗಿಲನ್ನು ಮುರಿದು ಕಳ್ಳತನಕ್ಕೆ ವಿಫಲ ಯತ್ನ ಮಾಡಿದ್ದಾರೆ. ನೆರೆಮನೆಯವರು ಗೀತಾ ಅವರ ಮನೆಯ ಬಾಗಿಲು ತೆರೆದಿದ್ದ ಕಾರಣ ಬಂದು ನೋಡಿದಾಗ ಮನೆಯಲ್ಲಿ ದರೋಡೆಯಾದ ವಿಚಾರ ಬೆಳಕಿಗೆ ಬಂದಿದೆ. ಮನೆಯೊಳಗಿದ್ದ

Mangaluru : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು : ನಳಿನ್ ಕುಮಾರ್ ಕಟೀಲ್

ಆ್ಯಂಕರ್ : ಗೋ ಕಳ್ಳತನ ಹಾಗೂ ಗೋಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.ಮಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಗೋ ಸಂಸ್ಕøತಿ ಇದೆ. ಕೃಷಿ, ಜೀವನ, ಆರಾಧನೆ ಎಲ್ಲದಕ್ಕೂ ಗೋವು ಮುಖ್ಯವಾಗಿದೆ. ಗೋ ರಕ್ಷಣೆಗಾಗಿ ಬಿಜೆಪಿ ಸರಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಕೈ ಬಿಡುವ ನಿರ್ಧಾರ ಮಾಡುತ್ತಿದೆ. ರಾಜ್ಯದಲ್ಲಿ ಗೋ

“90 ಬಿಡಿ ಮನೀಗ್ ನಡಿ” ಸಿನಿಮಾ ಜೂನ್ 29ರಿಂದ ರಾಜ್ಯಾದ್ಯಂತ ಬಿಡುಗಡೆ

ಕುಂದಾಪುರದ ನಾಗರಾಜ್ ಅರೆಹೊಳೆ ನಿರ್ದೇಶನದ ಅಮ್ಮ ಟಾಕೀಸ್ ಬಾಗಲಕೋಟ ಸಂಸ್ಥೆಯಡಿ ರತ್ನಮಾಲಾ ಬಾದರದಿನ್ನಿ ನಿರ್ಮಿಸುತ್ತಿರುವ “90 ಬಿಡಿ ಮನೀಗ್ ನಡಿ” ಚಿತ್ರ ಜೂನ್ 29ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಇದಾಗಿದ್ದು, ಚಿತ್ರದಲ್ಲಿ ವಿಭಿನ್ನ ಗೆಟಪ್‍ಗಳ ಮೂಲಕ ಈಗಾಗಲೇ ಸುದ್ದಿಯಲ್ಲಿದ್ದಾರೆ. ಕ್ರೈಂ ವರದಿಗಾರರಾಗಿ ಪತ್ರಿಕೆ ಮತ್ತು ವಾಹಿನಿಗಳಲ್ಲಿ ಕೆಲಸ ಮಾಡಿರುವ ಕುಂದಾಪುರ ಮೂಲದ

ಪುತ್ತೂರಿನಲ್ಲಿ ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ನಾಡಪ್ರಭು ಕೆಂಪೇ ಗೌಡ 514ನೇ ಜಯಂತಿ ಆಚರಣೆಯು ತಾಲೂಕು ಆಡಳಿತ ಸೌಧದಲ್ಲಿರುವ ತಹಶಿಲ್ದಾರ್ ಸಭಾಂಗಣದಲ್ಲಿ ನಡೆಯಿತು. ಸಂಸ್ಮರಣಾ ಜ್ಯೋತಿ ಬೆಳಗಿಸಿ, ಅಧ್ಯಕ್ಷತೆ ವಹಿಸಿದ್ದ ಸಹಾಯಕ ಆಯುಕ್ತ ಗಿರೀಶ್ ನಂದನ್ ಮಾತನಾಡಿ, ರಾಜದಾನಿ ಬೆಂಗಳೂರನ್ನು ವಿಶ್ವಕ್ಕೆ ಮಾದರಿಯಾಗುವ ರೀತಿಯಲ್ಲಿ ಕೆಂಪೇ ಗೌಡರವರು 14ನೇ ಶತಮಾನದಲ್ಲಿ ನಿರ್ಮಿಸಿಕೊಟ್ಟಿದ್ದಾರೆ. ಅವರ ದೂರ ದೃಷ್ಠಿಯ ಕಲ್ಪಣೆಗಳು ಮಹತ್ವವಾಗಿದ್ದು 21ನೇ ಶತಮಾನದಲ್ಲಿಯೂ

ಗೋಸಾಗಾಟ, ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು :ಶಾಸಕ ವೇದವ್ಯಾಸ್ ಕಾಮತ್

ಜಿಲ್ಲೆಯಲ್ಲಿ ಅಕ್ರಮ ಗೋಸಾಗಾಟ ಹಾಗೂ ಗೋವಧೆ ನಡೆಸುವವರ ವಿರುದ್ಧ ನಿಗಾ ವಹಿಸಬೇಕು. ಗೋಕಳ್ಳತನ ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಕಾಮತ್ ಅವರು, ಗೋವು ಹಿಂದುಗಳಿಗೆ ಪವಿತ್ರವಾಗಿದೆ. ಜಿಲ್ಲೆಯಲ್ಲಿ ಶಾಂತಿ ಕಾಪಾಡುವ ದೃಷ್ಟಿಯಿಂದ ಅಕ್ರಮ ಗೋವಧೆ, ಅಕ್ರಮ ಗೋಹತ್ಯೆ ತಡೆಯಲು ಪೆÇಲೀಸ್ ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಅನೇಕ ಕಡೆಗಳಲ್ಲಿ

bantwala : ಗುಡಿಸಲಲ್ಲಿ ವಾಸವಾಗಿದ್ದ ಬಡ ಕುಟುಂಬಕ್ಕೆ ಕಾಂಗ್ರೆಸ್ ನೇತೃತ್ವದಲ್ಲಿ ಮನೆ ನಿರ್ಮಾಣ

ಬಂಟ್ವಾಳ: ಹಲವು ವರ್ಷಗಳಿಂದ ಸ್ವಂತ ಸೂರಿಲ್ಲದೆ ಗುಡಿಸಲಿನಲ್ಲಿ ವಾಸವಾಗಿದ್ದ ಪರಿಶಿಷ್ಠ ಜಾತಿ ಸಮುದಾಯದ ಬಡ ಕುಟುಂಬಕ್ಕೆ ಸಜೀಪಮೂಡ ವಲಯ ಕಾಂಗ್ರೆಸ್ ನೇತೃತ್ವದಲ್ಲಿ ಸುಜ್ಜಿತವಾದ ಮನೆಯೊಂದು ನಿರ್ಮಾಣಗೊಳ್ಳುತ್ತಿದೆ. ಸ್ಥಳೀಯ ಯುವ ಸಿವಿಲ್ ಇಂಜಿನಿಯರ್ ಶೈಲೇಶ್ ಪೂಜಾರಿ ಕುಚ್ಚಿಗುಡ್ಡೆ ಮಾನವೀಯ ನೆಲೆಯಲ್ಲಿ ಮನೆ ನಿರ್ಮಿಸಿ ಕೊಡುತ್ತಿದ್ದಾರೆ. ಸಜೀಪಮೂಡ ಗ್ರಾಮದ ಕುಚ್ಚಿಗುಡ್ಡೆ ಎಂಬಲ್ಲಿ ಪರಿಶಿಷ್ಠ ಜಾತಿ ಸಮುದಾಯಕ್ಕೆ ಸೇರಿದ ಬಾಡ ಹಾಗೂ ನೊಕ್ಕೆ ದಂಪತಿ ಕುಟುಂಬ

ಯುವ ಸಮುದಾಯ ದುಶ್ಚಟಗಳಿಗೆ ಬಲಿಯಾಗಬೇಡಿ : ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿಕೆ

ವಿದ್ಯಾಗಿರಿ: `ವಿದ್ಯಾರ್ಥಿ ಜೀವನ ಎಂದರೆ ಸ್ವರ್ಗ ಇದ್ದಂತೆ. ಇಲ್ಲಿ ಹಲವಾರು ಆಕರ್ಷಣೆಗಳಿದ್ದರೂ, ನೀವು ಯಾವುದೇ ದುಶ್ಚಟಗಳಿಗೆ ಬಲಿಯಾಗಬಾರದು ಎಂದು ಶಾಸಕ ಉಮಾನಾಥ ಎ. ಕೋಟ್ಯಾನ್ ಹೇಳಿದರು. ಅವರು ಆಳ್ವಾಸ್ ಕಾಲೇಜಿನ ರೆಡ್ ಕ್ರಾಸ್ ಘಟಕ ಮತ್ತು ಆಳ್ವಾಸ್ ಪುನರ್ಜನ್ಮದ ಆಶ್ರಯದಲ್ಲಿ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ಸೇವನೆ ಹಾಗೂ ಕಳ್ಳಸಾಗಣೆ ವಿರೋಧಿ ದಿನದ ಅಂಗವಾಗಿ ನಡೆದ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಉದ್ಯಮಿ ಹಾಜಿ ಮುಸ್ತಫಾ ಕೆಂಪಿ ನಿಧನ

ಉಪ್ಪಿನಂಗಡಿಯ ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಹಾಜಿ ಮುಸ್ತಫಾ ಕೆಂಪಿ (49) ಅಲ್ಪಕಾಲದ ಅನಾರೋಗ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಸಂಜೆ ನಿಧನರಾದರು. ಅವರು ಮಾಲಿಕುದ್ದೀನಾರ್ ಜುಮಾ ಮಸೀದಿಯ ಅಧ್ಯಕ್ಷ ಸೇರಿದಂತೆ ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಗುರುತಿಸಿಕೊಂಡಿದ್ದು, ಉದ್ಯಮಿಯಾಗಿದ್ದರು.ಮೃತರು ಪತ್ನಿ, ಐವರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.ವರದಿ: ಮಂಗಳೂರು