Home Posts tagged V4News (Page 221)

ಉಳ್ಳಾಲ,ಉಚ್ಚಿಲದಲ್ಲಿ ತೀವ್ರಗೊಂಡ ಕಡಲ್ಕೊರೆತ – ಚರ್ಮುರಿ ಅಂಗಡಿ, ಮರಗಳು ಸಮುದ್ರಪಾಲು

ಉಳ್ಳಾಲ ಹಾಗೂ ಉಚ್ಚಿಲ ಭಾಗದಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಉಳ್ಳಾಲ ಬೀಚ್ ಬಳಿ ಹಾಕಲಾಗಿದ್ದ ಚರ್ಮುರಿ ಅಂಗಡಿಗಳು ಸಮುದ್ರಪಾಲಾಗಿದೆ. ಉಚ್ಚಿಲ ಭಾಗದಲ್ಲಿ ಸಮುದ್ರ ತೀರದ ಮನೆಗಳಿಗೆ ಅಪ್ಪಳಿಸಿ, ಹಲವು ಮರಗಳು ಸಮುದ್ರಪಾಲಾಗಿವೆ. ಸಮುದ್ರತೀರದಲ್ಲಿ 80 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಭಾರೀ ಗಾತ್ರದ ಅಲೆಗಳು ತೀರಕ್ಕೆ ಅಪ್ಪಳಿಸುತ್ತಿವೆ. ಉಳ್ಳಾಲ

ಗುರುಪುರ : ಗ್ರಾಮ ಸಭೆ ನಡೆಸದಂತೆ ಗ್ರಾಮಸ್ಥರಿಂದ ಪ್ರತಿಭಟನೆ

ಕಳೆದು ಮೂರು ವರ್ಷಗಳ ಹಿಂದೆ ಗುರುಪುರ ಬಂಗ್ಲಗುಡ್ಡೆಯಲ್ಲಿ ಗುಡ್ಡ ಕುಸಿದು ಮನೆ ಕಳೆದುಕೊಂಡಿದ್ದ ಗ್ರಾಮಸ್ಥರು ಇಂದು ಗುರುಪುರ ಗ್ರಾಮಸಭೆ ನಡೆಸದಂತೆ ಪ್ರತಿಭಟನೆ ನಡೆಸಿದ್ದಾರೆ. ಗುಡ್ಡ ಕುಸಿತದಿಂದ 11 ಕುಟುಂಬಗಳು ಮನೆ ಕಳೆದುಕೊಂಡಿದ್ದಾರೆ. ಪರಿಹಾರ ಒದಗಿಸಬೇಕು ಎಂದು ಸಂತ್ರಸ್ತ ಕುಟುಂಬದವರು ಪ್ರತಿಭಟನೆ ನಡೆಸಿದ್ದಾರೆ. ಪರಿಹಾರ ಒದಗಿಸುವ ದಿನಾಂಕ ಮತ್ತು ಎಲ್ಲಾ ಅಧಿಕಾರಿಗಳು ಬಂದರೆ ಮಾತ್ರ ಸಭೆ ನಡೆಸಬೇಕೆಂದು ಒತ್ತಾಯಿಸಿದರು. ಇಂದು ಸಭೆಗೆ 28 ಅಧಿಕಾರಿಗಳ

ಪೂಜ್ಯ ಶ್ರೀ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮಾರಕ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಜುಲೈ 5ರಂದು ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ಮೂಡುಬಿದಿರೆಯ ಎಕ್ಸಲೆಂಟ್ ಶಿಕ್ಷಣ ಪ್ರತಿಷ್ಠಾನದ ಆಡಳಿತ ನಿರ್ದೇಶಕ ಡಾ. ಬಿ. ಪಿ. ಸಂಪತ್ ಕುಮಾರ ಅವರು ಬೆಳಗ್ಗೆ 9.30ಕ್ಕೆ ಉದ್ಘಾಟನೆ ನೆರವೇರಿಸಲಿದ್ದಾರೆ. ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ

ಜು.6: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣ

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ವಿಭಾಗ ಹಾಗೂ ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಹಯೋಗದಲ್ಲಿ ‘ಹೊಸ ತಲೆಮಾರಿಗೆ ಕುವೆಂಪು ಸಾಹಿತ್ಯ ದರ್ಶನ’ ರಾಜ್ಯಮಟ್ಟದ ವಿಚಾರ ಸಂಕಿರಣವು ಜು.6ರಂದು ಉಜಿರೆ ಎಸ್.ಡಿ.ಎಂ. ಕಾಲೇಜಿನ ‘ಸಮ್ಯಗ್ದರ್ಶನ’ ಸೆಮಿನಾರ್ ಹಾಲ್ ನಲ್ಲಿ ನಡೆಯಲಿದೆ. ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಬೆಳಗ್ಗೆ 9.45ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ.

Mangaluru : ಹಿರಿಯ ನಾಗರಿಕರಿಗೆ ಬಸ್ಸಿನಲ್ಲಿ ಸೀಟು ಕೊಡಲ್ಲ ದೂರಿನ ಹಿನ್ನಲೆ ; ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿದ ಎಎಸ್‍ಐ

ಹಿರಿಯ ನಾಗರಿಕರಿಗೆ ಬಸ್‍ನಲ್ಲಿ ಸೀಟ್ ವ್ಯವಸ್ಥೆಯಿಲ್ಲ ಎಂದು ಪೊಲೀಸ್ ಫೋನ್ ಇನ್ ಕಾರ್ಯಕ್ರಮದಲ್ಲಿ ದೂರು ಕೇಳಿ ಬಂದ ಬೆನ್ನಲ್ಲೇ ಎಎಸ್‍ಐ ಒಬ್ಬರು ಬಸ್ ಹತ್ತಿ ಸೀಟ್ ವ್ಯವಸ್ಥೆ ಮಾಡಿ ಪೊಲೀಸ್ ಕಮಿಷನರ್ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ಫೋನ್ ಇನ್ ಕಾರ್ಯಕ್ರಮದಲ್ಲಿ ಹಿರಿಯ ನಾಗರಿಕರೊಬ್ಬರು ಕರೆ ಮಾಡಿ ನಮಗೆ ಬಸ್ ನಲ್ಲಿ ಸೀಟ್ ಮೀಸಲಾತಿ ಇದ್ದರೂ ಅದು ಪಾಲನೆಯಾಗುತ್ತಿಲ್ಲ ಎಂದು ದೂರಿದ್ದರು. ಅದರ ಬೆನ್ನಲ್ಲೇ ಪಾಂಡೇಶ್ವರ ಸಂಚಾರ

ಉಳ್ಳಾಲ : ಕಾಲು ಸಂಕಕ್ಕೆ ಬಿದ್ದು ವ್ಯಕ್ತಿ ಸಾವು

ಉಳ್ಳಾಲ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯಾರ್ಭಟ ಮುಂದುವರೆದಿದ್ದು ಉಳ್ಳಾಲ ತಾಲೂಕಿನ ಸೋಮೇಶ್ವರ ಪುರಸಭಾ ವ್ಯಾಪ್ತಿಯ‌ ಪಿಲಾರು ಎಂಬಲ್ಲಿ ಮನೆ ಸಂಪರ್ಕದ ಮೋರಿ‌ ದಾಟುವ ಸಂದರ್ಭ ವ್ಯಕ್ತಿಯೋರ್ವರು ಆಯ ತಪ್ಪಿ ಬಿದ್ದು ಮಳೆ ನೀರಿಗೆ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಪಂಜಂದಾಯ ದೈವಸ್ಥಾನದ ಬಳಿಯ ಬಾಡಿಗೆ ಮನೆ ನಿವಾಸಿ ಸುರೇಶ್ ಗಟ್ಟಿ‌(52)ಮೃತ ವ್ಯಕ್ತಿ. ಸುರೇಶ್ ಗಟ್ಟಿ ಅವರು ವೃತ್ತಿಯಲ್ಲಿ ಪೈಂಟರ್ ಆಗಿದ್ದು ಕೆಲಸ

ವ್ಯಾಪಕ ಮಳೆ: ಜುಲೈ5ರಂದು ಶಾಲಾ-ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜು.5ರ ಬುಧವಾರ ರಜೆ ಘೋಷಿಸಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲಾ ವಿಪತ್ತು

ಮೂಡುಬಿದಿರೆ: ಯುವಕ ಆತ್ಮಹತ್ಯೆ

ಮೂಡುಬಿದಿರೆ: ಇಲ್ಲಿನ ಪುರಸಭೆ ವ್ಯಾಪ್ತಿಯ ಸುವರ್ಣನಗರ ನಿವಾಸಿ ಯುವಕನೊಬ್ಬ ಸೋಮವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ಬಳಿಯ ಸುವರ್ಣನಗರ ನಿವಾಸಿ ಸುರೇಶ್ ಎಂಬವರ ಪುತ್ರ ಸುಮಂತ್ (21ವ) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೌಟುಂಬಿಕ‌ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದೆ.

ಕರಾವಳಿ : ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರ ಮಳೆ – ರೆಡ್ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಮುಂದಿನ ಕೆಲವು ಗಂಟೆಗಳ ಕಾಲ ಧಾರಕಾರವಾಗಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜು.4 ರ ಇಂದು ಮಧ್ಯಾಹ್ನದಿಂದ ಜು.5 ರ ಬೆಳಗ್ಗೆ 8.30ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜು.4ರ ಮಧ್ಯಾಹ್ನ ಬಳಿಕ ಮುಂದಿನ ಕೆಲವು ಗಂಟೆಗಳ ಕಾಲ ಬಲವಾದ ಮೇಲ್ಮೈ ಮಾರುತಗಳು ಬೀಸಲಿದ್ದು, ಗುಡುಗು ಮತ್ತು ಮಿಂಚು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆಯಿರುವುದರಿಂದ ರೆಡ್ ಅಲರ್ಟ್

Bynduru : ವಂಡ್ಸೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ

ಬೈಂದೂರಿನ ವಂಡ್ಸೆ ಗ್ರಾಮ ಪಂಚಾಯತ್ ಹಳೆ ಎಸ್‍ಎಲ್‍ಆರ್‍ಎಂ ಘಟಕದಲ್ಲಿರುವ ಕಸ ವಿಲೇವಾರಿ ಮಾಡದೆ ಇರುವುದರಿಂದ ಗಬ್ಬು ನಾರುತ್ತಿದೆ. ಪರಿಸರದಲ್ಲಿರುವ ಶಾಲಾ ಮಕ್ಕಳಿಗೆ ತೊಂದರೆ ಆಗಿದ್ದು, ಕಸವನ್ನು ವಿಲೇವಾರಿ ಮಾಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ. ವಂಡ್ಸೆ ಅಂಗನವಾಡಿ ಕೇಂದ್ರ ಮತ್ತು ಸರಕಾರಿ ಶಾಲೆ ಬಳಿ ಇದ್ದ ಹಳೆ ಎಸ್‍ಎಲ್‍ಆರೆಂ ಘಟಕವನ್ನು ಜನತಾ ಕಾಲೋನಿ ಬಳಿ ನಿರ್ಮಿಸಿದ ಹೊಸ ಎಸ್‍ಎಲ್‍ಆರೆಂ