Home Posts tagged V4News (Page 224)

ತೌಡುಗೋಳಿ : ನಿಯಂತ್ರಣ ತಪ್ಪಿದ ಕಾರು, ಬೈಕ್, ಬಸ್ ನಿಲ್ದಾಣಕ್ಕೆ ಢಿಕ್ಕಿ

ಉಳ್ಳಾಲ: ಚಾಲಕನ ನಿಯಂತ್ರಣ ತಪ್ಪಿದ ಕಾರು ಜಂಕ್ಷನ್‍ನಲ್ಲಿ ತಿರುವು ಪಡೆದುಕೊಳ್ಳುತ್ತಿರುವಂತೆಯೇ ರಸ್ತೆಯ ಪಕ್ಕದಲ್ಲಿದ್ದ ಆಕ್ಟಿವಾ ಸ್ಕೂಟರ್‍ಗೆ ಢಿಕ್ಕಿ ಹೊಡೆದು ಬಳಿಕ ಪ್ರಯಾಣಿಕರ ತಂಗುದಾಣಕ್ಕೆ ಢಿಕ್ಕಿಯಾದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ತೌಡುಗೋಳಿ ಕ್ರಾಸ್ ನಲ್ಲಿ ನಡೆದಿದೆ.ಘಟನೆಯಿಂದ ಸ್ಕೂಟರ್ ಸವಾರನಿಗೆ ಸಣ್ಣಪುಟ್ಟ

ಮೂಲ ಸೌಕರ್ಯ ವಂಚಿತ ತ್ರಾಸಿ ಮರವಂತೆ ಬೀಚ್ : ಸೂಕ್ತ ಭದ್ರತೆಗೆ ಸ್ಥಳೀಯರ ಆಗ್ರಹ

ಬೈಂದೂರು: ವಿಶ್ವ ಪ್ರಸಿದ್ಧ ತ್ರಾಸಿ ಮರವಂತೆ ಕಡಲ ಸೌಂದರ್ಯ ನೋಡಲು ದೇಶ, ವಿದೇಶಗಳಿಂದ ಸಾವಿರಾರು ಪ್ರವಾಸಿಗರು ಬರುತ್ತಿದ್ದಾರೆ. ಆದರೆ ಪ್ರವಾಸಿ ತಾಣದ ಅಭಿವೃದ್ಧಿ ಸೇರಿದಂತೆ ಸೂಕ್ತ ಭದ್ರತೆಯನ್ನು ಒದಗಿಸುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ. ಒಂದು ಕಡೆ ಸಮುದ್ರ ಇನ್ನೊಂದು ಕಡೆ ನದಿ ಮಧ್ಯದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಾಗುವುದೇ ರೋಚಕದ ಅನುಭವ. ರಸ್ತೆಯಲ್ಲಿ ಸಂಚಾರ ಮಾಡುತ್ತಲೆ ಕಡಲ ತೀರಕ್ಕೆ ಹಾಲಿನ ನೊರೆಯಂತೆ ಧುಮುಕ್ಕಿ ಬರುವ ಕಡಲ

ಕಲ್ಲರ್ಪೆ : ಕಾರು ಮತ್ತು ಸ್ಕೂಟರ್ ಅಪಘಾತ : ಸ್ಕೂಟರ್ ಸವಾರ ಮೃತ್ಯು

ಪುತ್ತೂರು ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಕಾರು ಹಾಗು ದ್ವಿಚಕ್ರ ವಾಹನ ನಡುವೆ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಬೆಳಿಗ್ಗೆ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ ಸಂಭವಿಸಿದೆ. ಗಂಭೀರ ಗಾಯಗೊಂಡಿದ್ದ ಇಸ್ಮಾಯಿಲ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ. ಅಪಘಾತದ ರಭಸಕ್ಕೆ ಸ್ಕೂಟರ್

ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಬೀದಿಗಿಳಿದು ಹೋರಾಟ :ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಎಚ್ಚರಿಕೆ

ಪುತ್ತೂರು: ಮತಾಂತರದ ಪಿಡುಗು ಸಾಮಾನ್ಯವಾದುದಲ್ಲ. ಇದರ ವಿರುದ್ಧ ತಂದ ಕಾನೂನುಗಳನ್ನು ರದ್ದು ಮಾಡುವ ಮೂಲಕ ನಮ್ಮ ಮನೆಯಲ್ಲಿ ನಮಗೇ ಸ್ವಾತಂತ್ರ್ಯ ಇಲ್ಲದ ಸ್ಥಿತಿಯನ್ನು ರಾಜ್ಯ ಸರಕಾರ ಮಾಡುತ್ತಿದೆ. ಸಂತರಿಗೆ ಹಿಂದೂ ಎಂಬುದು ಮಾತ್ರ ಪಕ್ಷ. ಹಿಂದೂ ವಿರೋಧಿ ನಿಲುವುಗಳ ವಿರುದ್ಧ ಯಾವುದೇ ಸರಕಾರ ಕೆಲಸ ಮಾಡಿದರೂ ಬೀದಿಗಿಳಿದು ಹೋರಾಟ ಮಾಡಲು ಸಂತರೆಲ್ಲರೂ ಈಗಾಗಲೇ ತೀರ್ಮಾನ ಮಾಡಿದ್ದೇವೆ ಎಂದು ಕಣಿಯೂರು ಶ್ರೀ ಮಹಾಬಲೇಶ್ವರ ಸ್ವಾಮೀಜಿ ಸರಕಾರಕ್ಕೆ ಎಚ್ಚರಿಕೆ

ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಿಕ್ಷಕರ ಸಂಖ್ಯೆ ಹೆಚ್ಚಳ ಮಾಡುವಂತೆ ವಿದ್ಯಾರ್ಥಿಗಳ ಪ್ರತಿಭಟನೆ

ಉಡುಪಿ ಜಿಲ್ಲೆಯ ಕೋಡಿ ಬೆಂಗ್ರೆಯಲ್ಲಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ಸಂಖ್ಯೆ ಹೆಚ್ಚು ಮಾಡುವಂತೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. 98 ವರ್ಷ ಇತಿಹಾಸ ಇರುವ ಉಡುಪಿಯ ಕೋಡಿ ಬೆಂಗ್ರೆ ಶಾಲೆಯಲ್ಲಿ ಈಗ ಕೇವಲ ಮೂವರು ಖಾಯಂ ಶಿಕ್ಷಕರಿದ್ದು 1ರಿಂದ 7ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಬೋಧನೆಯನ್ನು ಮಾಡುತ್ತಿದ್ದಾರೆ. ಕಳೆದ ವರ್ಷ ಇಲ್ಲಿ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯ ನೆಪ ಒಡ್ಡಿ ಮೂವರು ಶಿಕ್ಷಕರಲ್ಲಿ ಒಬ್ಬರನ್ನು ವರ್ಗಾವಣೆ

ಸುಳ್ಯ ಎಸ್‌ಐ ಆಗಿ ಈರಯ್ಯ ದೂಂತೂರು ಅಧಿಕಾರ ಸ್ವೀಕಾರ

ಸುಳ್ಯ: ಸುಳ್ಯ ಪೊಲೀಸ್ ಠಾಣಾ ಉಪ ನಿರೀಕ್ಷಕರಾಗಿ ಈರಯ್ಯ ದೂಂತೂರು ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಸೋಮವಾರ ಈರಯ್ಯ ದೂಂತೂರು ಅವರಿಗೆ ವರ್ಗಾವಣರಗೊಂಡ ಎಸ್‌ಐ ದಿಲೀಪ್ ಜಿ.ಆರ್ ಅಧಿಕಾರ ಹಸ್ತಾಂತರಿಸಿದರು. ಕಳೆದ ಎರಡು ವರ್ಷಗಳಿಂದ ಸುಳ್ಯ ಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಿಲೀಪ್ ಜಿ.ಆರ್. ಅವರಿಗೆ ವರ್ಗಾವಣೆಯಾಗಿದೆ. ಈರಯ್ಯ ದೂಂತೂರು ಅವರನ್ನು ಸುಳ್ಯ ಎಸ್‌ಐ ಆಗಿ ನೇಮಕ‌ ಮಾಡಿ ಸರಕಾರ ಆದೇಶ ಮಾಡಿದೆ. 2014ನೇ ಬ್ಯಾಚ್‌ನ ಅಧಿಕಾರಿಯಾದ ಈರಯ್ಯ ದೂಂತೂರು

ಅಂಬಲಪಾಡಿ ನೀರಿನ‌ ಸಮಸ್ಯೆ: ಪಂಚಾಯತ್ ಅಧ್ಯಕ್ಷರ ಹೇಳಿಕೆ ವಿರುದ್ಧ ಗ್ರಾಮಸ್ಥರು ಗರಂ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ನೀರಿನ‌ ಸಮಸ್ಯೆ ತೀವ್ರಗೊಂಡಿದ್ದು ಗ್ರಾಮದ ಮಹಿಳೆಯರು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದರು. ಅಲ್ಲಿನ 90ಕ್ಕು ಅಧಿಕ ಮನೆಗಳಿಗೆ ನೀರು ಸಿಗದಿರುವ ಪರಿಣಾಮ, ನೀರು ಪೂರೈಕೆ ಮಾಡಬೇಕು ಎಂದು ಕೊಡ ಹಿಡಿದು ಪಂಚಾಯತ್ ಗೆ ಮುತ್ತಿಗೆ ಹಾಕಿದ್ದ ಮಹಿಳೆಯರು ಮತ್ತು ಗ್ರಾಮಸ್ಥರು ತಮ್ಮ ಪ್ರತಿಭಟನೆ ದಾಖಲಿಸಿದ್ದರು. ಆದರೆ ಈ ಪ್ರತಿಭಟನೆ ರಾಜಕೀಯ ಪ್ರೇರಿತ ಎಂದು ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರೋಹಿಣಿ

ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿದು ಎಚ್ಚರಿಕೆ : ಮಾಜಿ ಸಚಿವ ರಮಾನಾಥ ರೈ

ಬಡವರಿಗೆ ಅಕ್ಕಿ ನೀಡುವ ಯೋಜನೆಗೆ ಅಡ್ಡಿಪಡಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಅನ್ನದ ಬಟ್ಟಲು ಬಡಿಯುವ ಮೂಲಕ ಮಂಗಳವಾರ ಪ್ರತಿಭಟನೆ ನಡೆಸಿ ಎಚ್ಚರಿಕೆ ನೀಡಲಿದ್ದೇವೆ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಅವರು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದರು. ಬಡವರ ಅನ್ನಕ್ಕೆ ಕಲ್ಲು ಹಾಕುವವರಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ. ದೇಶದಲ್ಲೇ ಬಡವರಿಗೆ ಪ್ರಥಮವಾಗಿ ಉಚಿತವಾಗಿ ಅಕ್ಕಿ ನೀಡಿದ ಕೀರ್ತಿ ಸಿದ್ದರಾಮಯ್ಯ ನೇತೃತ್ವದ

ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಉಚಿತ ಭಗವದ್ಗೀತೆ ಪುಸ್ತಕ ವಿತರಣೆ

ಮೂಡಬೆಟ್ಟು ಕುಳಾಯಿಯ ಇಸ್ಕಾನ್ ಶ್ರೀ ರಾಧಾ ಗೋವಿಂದ ದೇವಸ್ಥಾನದ ವತಿಯಿಂದ ವಾಮಂಜೂರಿನ ಮಂಗಳಾಜ್ಯೋತಿ ಶಾಲಾ ಮಕ್ಕಳಿಗೆ ಭಗವದ್ಗೀತೆ ಪುಸ್ತಕ ಉಚಿತವಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಇಸ್ಕಾನ್‍ನ ಸಚ್ಚಿದಾನಂದ ಅದೈತದಾಸ ಅವರು ಭಗವದ್ಗೀತ ತರಗತಿ, ಕೀರ್ತನೆ ನಡೆಸಿಕೊಟ್ಟರು. ನಂತರ ಪ್ರಸಾದ ವಿತರಿಸಲಾಯಿತು.ಕಾರ್ಯಕ್ರಮದಲ್ಲಿ ಉದ್ಯಮಿಗಳಾದ ಸುಬೋದ್ ಮಾರ್ತ, ಪ್ರದೀಪ್ ಮೆಂಡನ್, ಮಾಧವ ಭಂಡಾರಿ, ಅಶ್ವಿನ್ ಅವರು ಭಾಗವಹಿಸಿದ್ದರು.

ಗಂಗೊಳ್ಳಿ : ಸಂಪೂರ್ಣ ನಿರ್ಲಕ್ಷ್ಯಕ್ಕೆ ಒಳಗಾದ ಜೆಟ್ಟಿ ನಿರ್ಮಾಣ ಕಾರ್ಯ

ಕರಾವಳಿಯ ಪ್ರಮುಖ ಮೀನುಗಾರಿಕಾ ಬಂದರುಗಳಲ್ಲಿ ಒಂದಾದ ಗಂಗೊಳ್ಳಿ ಮೀನುಗಾರಿಕಾ ಜೆಟ್ಟಿ ಸಂಪೂರ್ಣ ನಿರ್ಲಕ್ಷ್ಯಕ್ಕೊಗಾದ ಸ್ಥಿತಿಗೆ ತಲುಪಿದೆ. ಕಳೆದ ವರ್ಷದ ಮಳೆಗಾಲದಲ್ಲಿ ಇಲ್ಲಿನ ಜೆಟ್ಟಿಯ ಒಂದು ಭಾಗ ಕುಸಿದು ಮೀನುಗಾರಿಕೆಗೆ ತೊಂದರೆಯಾಗಿದ್ದರೂ ಜೆಟ್ಟಿಯ ಮರು ನಿರ್ಮಾಣದ ಕಾರ್ಯ ಕನಸಾಗಿಯೇ ಉಳಿದಿದೆ. ಗಂಗೊಳ್ಳಿಯಲ್ಲಿ 2013ರಲ್ಲಿ 10 ಕೋಟಿ ವೆಚ್ಚದಲ್ಲಿ ಜೆಟ್ಟಿ ನಿರ್ಮಿಸಲಾಗಿತ್ತು. ಇದು 2016ರಲ್ಲಿ ಹಾನಿಗೊಳಗಾಯಿತು. 2018 ರಲ್ಲಿ ದುರಸ್ತಿಗಾಗಿ ಹೆಚ್ಚುವರಿ 3