Home Posts tagged V4News (Page 225)

ಮಂಜೇಶ್ವರ : ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋದ ಡಾಮರು

ಮಂಜೇಶ್ವರ ಗ್ರಾಮ ಪಂಚಾಯತ್‍ನ ಎರಡನೇ ವಾರ್ಡು ವ್ಯಾಪ್ತಿಯಲ್ಲಿರುವ ತೂಮಿನಾಡು ಮಹಾಕಾಳಿ ರಸ್ತೆ, ಕಳಪೆ ಕಾಮಗಾರಿಯಿಂದ ತಿಂಗಳು ಕಳೆಯುವ ಮುನ್ನವೇ ಕಿತ್ತು ಹೋಗಿದೆ. ಕಳಪೆ ಮತ್ತು ಅರೆಬರೆ ಕಾಮಗಾರಿ ನಡೆಸಿದ ಗುತ್ತಿಗೆದಾರನ ವಿರುದ್ಧ ವ್ಯಾಪಕ ಆಕ್ರೋಶವನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ. ಮಂಜೇಶ್ವರ ಗ್ರಾಮ ಪಂಚಾಯತ್ ಫಂಡ್‍ನಿಂದ 3 ಲಕ್ಷ ರೂ.

ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ

ಬಂಟರ ಸಂಘಗಳ ವತಿಯಿಂದ ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಕಾರ್ಯಕ್ರಮವು ಪುತ್ತೂರಿನಲ್ಲಿ ನಡೆಯಿತು. ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಮಾರ್ಗದರ್ಶನದಲ್ಲಿ ತಾಲೂಕು ಬಂಟರ ಸಂಘದ ಆಶ್ರಯದಲ್ಲಿ ಮಹಿಳಾ ಬಂಟರ ಸಂಘ, ಯುವ ಬಂಟರ ಸಂಘ, ವಿದ್ಯಾರ್ಥಿ ಬಂಟರ ಸಂಘಗಳ ಸಹಯೋಗದೊಂದಿಗೆ ನೂತನ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಅಭಿನಂದನೆ ಹಾಗೂ ವಿದ್ಯಾರ್ಥಿ ವೇತನ ವಿತರಣಾ ಸಮಾರಂಭದಲ್ಲಿ ನಡೆಯಿತು. ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅಶೋಕ್

ಮೂಡುಬಿದರೆ : ಅಕ್ರಮ ಗೋವು ಸಾಗಾಟ – ಮೂರು ಗೋವುಗಳ ರಕ್ಷಣೆ

ಮೂಡುಬಿದಿರೆ: ಅಕ್ರಮವಾಗಿ ಸಾಗಿಸುತ್ತಿದ್ದ ಮೂರು ಗೋವುಗಳನ್ನು ಬಜರಂಗದಳದ ಕಾರ್ಯಕರ್ತರು ಮತ್ತು ಮೂಡುಬಿದಿರೆ ಪೊಲೀಸರು ರಕ್ಷಿಸಿದ್ದಾರೆ. ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದಾರೆಂಬ ಖಚಿತ ಮಾಹಿತಿ ಪಡೆದ ಬಜರಂಗದಳದ ಕಾರ್ಯಕರ್ತರು ಮೂಡುಬಿದಿರೆ ಪೊಲೀಸರಿಗೆ ಮಾಹಿತಿ ನೀಡಿ ಜಂಟಿ ಕಾರ್ಯಚರಣೆ ನಡೆಸಿ ಕೆಲ್ಲಪುತ್ತಿಗೆ ಬಳಿಯಿಂದ ಕಾರನ್ನು ಹಿಂಬಾಲಿಸಿಕೊಂಡು ಬಂದು ಜಿ.ಕೆ.ಗಾರ್ಡನ್ ಹಿಡಿದಿದ್ದಾರೆ. ಈ ಸಂದರ್ಭ ಕಾರಿನಲ್ಲಿದ್ದ ಇಬ್ಬರು ಪರಾರಿಯಾಗಿದ್ದಾರೆ.

ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

ಮೂಡುಬಿದಿರೆ: ನಿಟ್ಟೆಯ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಘಟನೆ ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಆಲಂಗಾರಿನಲ್ಲಿ ಭಾನುವಾರ ನಡೆದಿದೆ. ಪುರಸಭಾ ವ್ಯಾಪ್ತಿಯ ಅಲಂಗಾರು ಆಶ್ರಯ ಕಾಲನಿಯ ನಿವಾಸಿ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆಯ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿ ಸಾತ್ವಿಕ್ (೨೧) ಆತ್ಮಹತ್ಯೆ ಮಾಡಿಕೊಂಡಾತ.ಹೆತ್ತವರು ಮನೆಯಲ್ಲಿ ಚನ್ನಾಗಿ ಓದುವಂತೆ ಬುದ್ಧಿಮಾತು ಹೇಳಿದ್ದು, ಅದರಂತೆ ಸಾತ್ವಿಕ್

ಮೆಹೆಂದಿ ಶಾಸ್ತ್ರದಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಾಸ್!

ಉಳ್ಳಾಲ: ಮದುವೆ ಮೆಹೆಂದಿಯಂದು ನಾಪತ್ತೆಯಾಗಿದ್ದ ವರ ಮನೆಗೆ ವಾಪಸ್ಸಾಗಿದ್ದಾನೆ. ನಾಪತ್ತೆಯಾದ ಹಲವು ದಿನಗಳ ನಂತರ ಬಳ್ಳಾರಿಯಲ್ಲಿ ಇರುವುದಾಗಿ ಸಹೋದರಿಗೆ ಕರೆ ಮಾಡಿ ತಿಳಿಸಿದ ನಂತರ ಜೂ.16 ರಂದು ಕೊಣಾಜೆ ಠಾಣೆಗೆ ಬಂದು ಮನೆಗೆ ವಾಪಸ್ಸಾಗಿದ್ದಾರೆ.ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ‌ ಐತಪ್ಪ ಶೆಟ್ಟಿ ಎಂಬವರ ಪುತ್ರ ಕಿಶನ್ ಶೆಟ್ಟಿ ಮೇ 31ರಂದು ಮೆಹಂದಿ ಶಾಸ್ತ್ರಕ್ಕೆ ಹಣ್ಣು ತರಲು ತೆರಳಿದ್ದವರು ನಾಪತ್ತೆಯಾಗಿದ್ದರು. ಇದರಿಂದಾಗಿ ನಿಗದಿಯಾಗಿದ್ದ ಮದುವೆಯೂ

ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ : ರಾಜೇಶ್ ನಾಯ್ಕ್ ಉಳಿಪ್ಪಾಡಿ

ಬಂಟ್ವಾಳ: ಬಲತ್ಕಾರದ ಮತಾಂತರವನ್ನು ತಡೆಗಟ್ಟುವ ಉದ್ದೇಶದಿಂದ ಹಿಂದಿನ ಬಿಜೆಪಿ ಸರಕಾರ ಜಾರಿಗೆ ತಂದಿದ್ದ ಜನಪರವಾದ ಮತಾಂತರ ನಿಷೇಧ ಕಾಯ್ದೆ, ಎಪಿಎಂಸಿ ತಿದ್ದಪಡಿ ರದ್ದತಿ, ಶಾಲಾ ಪಠ್ಯಪುಸ್ತಕದಿಂದ ಸಾವರ್ಕರ್ ಹಾಗೂ ಹೆಗಡೇವಾರ ಅವರ ವಿಷಯವನ್ನು ಕೈ ಬಿಟ್ಟಿರುವ ಕಾಂಗ್ರೆಸ್ ಸರಕಾರದ ತೀರ್ಮಾನವನ್ನು ಖಂಡಿಸುವುದಾಗಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ತಿಳಿಸಿದರು. ಬಿ.ಸಿ.ರೋಡಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿಒರ್ವ

ಬೈಂದೂರು : ರಾಷ್ಟ್ರೀಯ ಹೆದ್ದಾರಿ ಸಮಸ್ಯೆ ಆಲಿಸಿದ ಶಾಸಕ ಗುರುರಾಜ್

ಬೈಂದೂರು ವಿಧಾನಸಭಾ ಕ್ಷೇತ್ರದ ತಲ್ಲೂರಿನಿಂದ ಬೈಂದೂರಿನ ತನಕ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲದ ಸಂದರ್ಭ ಸಮಸ್ಯೆ ಉದ್ಭವವಾಗುವ ಪ್ರದೇಶಗಳಿಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಹೆಮ್ಮಾಡಿ, ಮುಳ್ಳಿಕಟ್ಟೆ, ತ್ರಾಸಿ, ಮರವಂತೆ, ನಾಗೂರು, ಉಪ್ಪುಂದ, ಬೈಂದೂರು ಭಾಗಗಳಲ್ಲಿ, ಜನಸಾಮಾನ್ಯರ ಸಮಸ್ಯೆ ಬಗ್ಗೆ ವಿಚಾರಿಸಿ, ಸ್ಥಳೀಯರ ಒಂದಿಷ್ಟು ಮನವಿಗಳನ್ನು

ಬಲತ್ಕಾರದ ಮತಾಂತರಕ್ಕೆ ನನ್ನ ವಿರೋಧವಿದೆ : ಡಾ. ಪ್ರಭಾಕರ ಭಟ್ ಕಲ್ಲಡ್ಕ

ಬಂಟ್ವಾಳ: ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಕೈ ಬಿಡುವ ನಿರ್ಧಾರಕ್ಕೆ ನನ್ನ ವಿರೋಧವಿದೆ ಎಂದು ಆರ್‍ಎಸ್‍ಎಸ್ ಮುಖಂಡ ಡಾ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು. ಅವರು ಬಂಟ್ವಾಳ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಸರ್ಕಾರಗಳು ಬದಲಾದಾಗ ಹಿಂದಿನ ಸರ್ಕಾರದ ತಪ್ಪುಗಳನ್ನು ಸರಿಪಡಿಸಿ, ಒಳ್ಳೆಯದನ್ನು ಮುಂದುವರೆಸುವ ಕೆಲಸ ಆಗಬೇಕು. ಆದರೆ ಈಗ ಬಂದಿರುವ ಸರ್ಕಾರ ಹಿಂದಿನವರು ಮಾಡಿದ್ದೆಲ್ಲವನ್ನು ತಪ್ಪು ಎನ್ನುವ

ಜೂನ್ 20ರಂದು ರಾಷ್ಟ್ರೀಯ ವಿಚಾರ ಸಂಕಿರಣ : ಡಾ. ಪ್ರಭಾಕರ್ ಭಟ್ ಕಲ್ಲಡ್ಕ

ಬಂಟ್ವಾಳ: ಕಲ್ಲಡ್ಕ ಶ್ರೀ ರಾಮ ಪ್ರಥಮದರ್ಜೆ ಮಹಾವಿದ್ಯಾಲಯದಲ್ಲಿ ಸ್ವತ್ವದ ಆಧಾರದ ಮೇಲೆ ಪುನರುತ್ಥಾನ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣ ಜೂ.20 ರಂದು ಮಂಗಳವಾರ ನಡೆಯಲಿದೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ ಭಟ್ ಕಲ್ಲಡ್ಕ ತಿಳಿಸಿದರು. ಅವರು ಬಿ.ಸಿ.ರೋಡು ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ಬೆಳಿಗ್ಗೆ 10 ಗಂಟೆಗೆ ಪತ್ರಕರ್ತ ಅಜಿತ್ ಹನುಮಕ್ಕನವರ್ ವಿಚಾರ ಸಂಕಿರಣ

ಮೋರಿಗೆ ಬಿದ್ದ ಕಾರು : ಆರು ಮಂದಿಗೆ ಗಾಯ

ಬೆಂಗಳೂರು-ಮಂಗಳೂರು ಹೆದ್ದಾರಿಯ ಮಧ್ಯೆ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆಯ ಪಕ್ಕದ ಮೋರಿಗೆ ಬಿದ್ದ ಘಟನೆ ಸಂಭವಿಸಿದೆ. ಬೆಂಗಳೂರು ಆರ್‍ಟಿ ನಗರದ ನಿವಾಸಿಗಳಾದ ಇವರು ಮಂಗಳೂರಿಗೆ ಪ್ರಯಾಣಿಸುತ್ತಿದ್ದರು. ಇದೇ ಸಂದರ್ಭದಲ್ಲಿ ನೆಲ್ಯಾಡಿ ಸಮೀಪದ ಎಂಜಿರ ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಪಕ್ಕದ ಮೋರಿಗೆ ಬಿದ್ದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಏಳು ಜನರ ಪೈಕಿ ಮಗು ಹೊರತುಪಡಿಸಿ ಆರು ಮಂದಿ