Home Posts tagged V4News (Page 228)

ಡೇರ್​​ಡೆವಿಲ್​ ಮುಸ್ತಫಾ ಸಿನಿಮಾಗೆ ತೆರಿಗೆ ವಿನಾಯಿತಿ ಘೋಷಿಸಿದ ಸಿಎಂ

ಡೇರ್​​ಡೆವಿಲ್​ ಮುಸ್ತಫಾ ಸಿನಿಮಾಗೆ ರಾಜ್ಯದಲ್ಲಿ ತೆರಿಗೆ ವಿನಾಯಿತಿ ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿರುವ ಬಗ್ಗೆ ವರದಿಯಾಗಿದೆ. ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಅವರ ಕಥೆಯನ್ನು ಆಧರಿಸಿದ ಈ ಸಿನಿಮಾ ಇತ್ತೀಚೆಗೆ 25 ದಿನಗಳನ್ನು ಪೂರೈಸಿ ‘ಡೇರ್​​ಡೆವಿಲ್​ ಮುಸ್ತಫಾ’ ಚಿತ್ರ ಈಗ 50ನೇ ದಿನದತ್ತ ಮುನ್ನುಗ್ಗುತ್ತಿದೆ. ಈ ಸಂದರ್ಭದಲ್ಲಿ

ಪಿರ್ಕಿಲು ತುಳು ಸಿನಿಮಾ ಯಶಸ್ವಿ ಪ್ರದರ್ಶನ

ಕರಾವಳಿ ಸಿನಿಮಾಸ್ ಲಾಂಛನದಲ್ಲಿ ಎಚ್.ಡಿ. ಆರ್ಯ ನಿರ್ದೇಶನದಲ್ಲಿ ತಯಾರಾದ `ಪಿರ್ಕಿಲು’ ತುಳು ಸಿನಿಮಾ ಕರಾವಳಿಯಾದ್ಯಂತ ಯಶಸ್ವೀ ಪ್ರದರ್ಶನ ಕಾಣುತ್ತಿದೆ. ಮಂಗಳೂರು, ಪಡುಬಿದ್ರಿ, ಉಡುಪಿ, ಕಾರ್ಕಳ ಮತ್ತು ಪುತ್ತೂರಿನ ಚಿತ್ರ ಮಂದಿರದಲ್ಲಿ ಪಿರ್ಕಿಲು ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಸತೀಶ್ ಪೆರ್ನೆ ಹಾಗೂ ಶಿವಪ್ರಸಾದ್ ಇಜ್ಜಾವು ನಿರ್ಮಾಣದಲ್ಲಿ ತಯಾರಾದ ಈ ಸಿನಿಮಾ ಹಾಸ್ಯಭರಿತ ಕೌಟುಂಬಿಕ ಕತೆಯ ಎಳೆಯನ್ನು ಹೊಂದಿದೆ. ತಾರಾ ಬಳಗದಲ್ಲಿ ಚಿತ್ರದ

ಕಡಬ ಸರಸ್ವತೀ ವಿದ್ಯಾಲಯದಲ್ಲಿ ಆಂಗ್ಲ ಮಾಧ್ಯಮ ತರಗತಿಗಳ ಉದ್ಘಾಟನೆ

ಮಕ್ಕಳಿಗೆ ಶಿಕ್ಷಣ ಜೊತೆಗೆ ಸಂಸ್ಕಾರ ಕೊಟ್ಟು ಬದುಕುವುದು ಹೇಗೆ ಎಂದು ಅವರಿಗೆ ಕಲಿಸಿಕೊಟ್ಟಾಗ ಆ ಮಕ್ಕಳು ಮುಂದೆ ಜೀವನದಲ್ಲಿ ಜಯಗಳಿಸುತ್ತಾರೆ ಎಂದು ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ|ಪ್ರಭಾಕರ ಭಟ್ ಹೇಳಿದರು. ಅವರು ಕಡಬದ ಕೇವಳ ಹನುಮಾನ್ ನಗರದಲ್ಲಿರುವ ಸರಸ್ವತೀ ವಿದ್ಯಾಲಯದಲ್ಲಿ ಪ್ರಾರಂಭವಾದ ಆಂಗ್ಲ ಮಾಧ್ಯಮ ವಿಭಾಗದ ತರಗತಿಗಳ ಉದ್ಘಾಟನೆ ಹಾಗೂ ಶಾಲಾ ಪ್ರಾರಂಭೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಆಂಗ್ಲ ಮಾಧ್ಯಮ

ಕೊರಗರ ಭೂಮಿ ಸಮಸ್ಯೆ ಮತ್ತು ವಿವಿಧ ಬೇಡಿಕೆ ಆಗ್ರಹಿಸಿ ಧರಣಿ ಸತ್ಯಾಗ್ರಹ

ಕುಂದಾಪುರ: ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ನೇತೃತ್ವದಲ್ಲಿ ಕೊರಗರ ಭೂಮಿ ಸಮಸ್ಯೆ ಹಾಗೂ ವಿವಿಧ ಬೇಡಿಕೆಗೆ ಸಂಬಂಧಪಟ್ಟಂತೆ ನಾಡ ಗ್ರಾಪಂ ಮುಂಭಾಗ ಧರಣಿ ನಡೆಸುತ್ತಿದ್ದು, ಅಧಿಕಾರಿಗಳ ಭರವಸೆ ಹಿನ್ನೆಲೆಯಲ್ಲಿ ಧರಣಿ ಸತ್ಯಾಗ್ರಹವನ್ನು ಕೈಬಿಟ್ಟಿದ್ದಾರೆ. ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರ ಸೂಚನೆಯಂತೆ ಸ್ಥಳಕ್ಕೆ ಆಗಮಿಸಿದ ಕುದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ, ಧರಣಿ ನಿರತರಿಗೆ ತಿಳುವಳಿಕೆ ಪತ್ರವನ್ನು ನೀಡಿದರು. ಕೊರಗರ ವಿವಿಧ ಬೇಡಿಕೆಗಳ

ಬೆಳ್ತಂಗಡಿ : ಕಪಿಲಾ ನದಿಯಲ್ಲಿ ಕೋಳಿ ತ್ಯಾಜ್ಯದ ರಾಶಿ : ಸೂಕ್ತ ಕ್ರಮ ಕೈಗೊಳ್ಳಲು ಒತ್ತಾಯ

ಬೆಳ್ತಂಗಡಿ ತಾಲೂಕಿನ ಶಿಶಿಲದಲ್ಲಿ ಕಪಿಲಾ ನದಿ ಹರಿಯುತ್ತಿದ್ದು, ಈ ನದಿಗೆ ದಿನ ನಿತ್ಯ ಕೋಳಿ ತ್ಯಾಜ್ಯವನ್ನು ಸುರಿಯುತ್ತಿರುವುದು ಪರಿಸರ ಪ್ರಿಯರಿಗೆ ಆತಂಕವಾಗಿದೆ. ಕಪಿಲಾ ನದಿ ನಿತ್ಯ ಹರಿದ್ವರ್ಣ ಪ್ರದೇಶದಿಂದ ಹರಿಯುತ್ತಿದ್ದು, ಮತ್ಸ್ಯ ದೇವರ ಮೀನುಗಳಿಗೆ ಆಶ್ರಯ ನೀಡುತ್ತಿದೆ. ನದಿಯ ತಟದಲ್ಲಿ ಪ್ರಖ್ಯಾತ ಶಿಶಿಲೇಶ್ವರ ದೇವಾಲಯವೂ ಇದೆ. ಇಲ್ಲಿಯ ಜಲದಿಂದಲೇ ದೇವರಿಗೆ ನಿತ್ಯ ಅಭಿಷೇಕ ನಡೆಯುತ್ತಿದೆ. ಸಾವಿರಾರು ಭಕ್ತರು ಈ ನೀರನ್ನು ತೀರ್ಥವೆಂದು

ಉಜಿರೆಯ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗದಿಂದ ಶೈಕ್ಷಣಿಕ ಅಧ್ಯಯನ ಪ್ರವಾಸ 

ಉಜಿರೆಯ‌ ಎಸ್‌ಡಿಎಂ ಕಾಲೇಜಿನ ಕನ್ನಡ ವಿಭಾಗವು  ಕುಪ್ಪಳಿಗೆ ವಿದ್ಯಾರ್ಥಿಗಳಿಗಾಗಿ ಎರಡು ದಿನದ ಶೈಕ್ಷಣಿಕ  ಅಧ್ಯಯನ ಪ್ರವಾಸವನ್ನು ಆಯೋಜಿಸಿತ್ತು.ರಾಷ್ಟ್ರಕವಿ ಕುವೆಂಪು ಅವರ ಕುರಿತು ವಿದ್ಯಾರ್ಥಿಗಳಲ್ಲಿ ಮಾಹಿತಿ ಮತ್ತು ಆಸಕ್ತಿ ಮೂಡಿಸುವ ದೃಷ್ಟಿಯಿಂದ ಕುವೆಂಪು ಅವರ ಜನ್ಮಸ್ಥಳವಾದ ಕುಪ್ಪಳಿಗೆ ಅಧ್ಯಯನ ಪ್ರವಾಸ ಮಾಡಲಾಯಿತು.  ಈ ಸಂದರ್ಭದಲ್ಲಿ ಕುವೆಂಪು ಅವರು ವಾಸವಾಗಿದ್ದ ಕವಿಮನೆ, ಕವಿಶೈಲದ ಜೊತೆಯಲ್ಲಿ ಕುವೆಂಪು ಅವರ ಸಾಹಿತ್ಯ ರಚನೆಗೆ ಪ್ರೇರಣೆ ನೀಡಿದ ನವಿಲು

ಎಸ್.ಡಿ.ಎಂ ಬಿ.ವೋಕ್‌ನಿಂದ ‘ಸೀನ್ ಟು ಸ್ಕ್ರೀನ್’ ಸಿನಿಮಾ ಕಾರ್ಯಾಗಾರ

ಉಜಿರೆ : ಸಿನಿಮಾದ ಪ್ರಾಯೋಗಿಕಜ್ಞಾನ ವಿದ್ಯಾರ್ಥಿಗಳ ಬೌದ್ಧಿಕ ಸಂಪತ್ತನ್ನು ವೃದ್ಧಿಸುತ್ತದೆ ಎಂದು ಖ್ಯಾತ ಚಿತ್ರಕಥೆ ಬರಹಗಾರ ರಾಷ್ಟ್ರ ಪ್ರಶಸ್ತಿ ವಿಜೇತ ಶ್ರೀನಿಧಿ ಡಿ.ಎಸ್. ಅಭಿಪ್ರಾಯಪಟ್ಟರು. ಶ್ರೀ.ಧ.ಮ ಸ್ನಾತಕೋತ್ತರ ಕಾಲೇಜಿನ ಬಿವೋಕ್ ‌ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ವಿಭಾಗದ ವತಿಯಿಂದ ಸಿದ್ಧವನ ಗುರುಕುಲದ ಅಮೃತ ಸಿದ್ಧಿ ಸಭಾಂಗಣದಲ್ಲಿಆಯೋಜಿಸಲಾದ ನಾಲ್ಕು ದಿನಗಳ ಚಲನಚಿತ್ರ ನಿರ್ಮಾಣ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದರು. ಸಿನಿಮಾಕ್ಕೆ

ತುಳುವಿನ ಬಹುನಿರೀಕ್ಷೆಯ ಸಿನಿಮಾ “ಸರ್ಕಸ್” ಟಿಕೆಟ್ ಬುಕ್ಕಿಂಗ್ ಆರಂಭ

ತುಳು ಸಿನಿಮಾರಂಗದ ರಾಕ್ ಸ್ಟಾರ್, ಬಿಗ್‍ಬಾಸ್ 9ರ ವಿಜೇತ ರೂಪೇಶ್ ಶೆಟ್ಟಿ ನಿರ್ದೇಶನದ ಬಹುನಿರೀಕ್ಷೆಯ ತುಳು ಸಿನಿಮಾ ಸರ್ಕಸ್ ಜೂನ್ 23ರಂದು ವಿಶ್ವದಾದ್ಯಾಂತ ಏಕಕಾಲದಲ್ಲಿ ಬಿಡುಗಡೆಗೊಳ್ಳಲಿದ್ದು, ಚಿತ್ರದ ಟಿಕೆಟ್ ಬುಕ್ಕಿಂಗ್ ಈಗಾಗಲೇ ಆರಂಭವಾಗಿದೆ. ಆನ್‍ಲೈನ್ ಇಲ್ಲವೇ ದೂರವಾಣಿ ಕರೆ ಮೂಲಕ ಟಿಕೆಟ್ ಬುಕ್ಕಿಂಗ್‍ಗೆ ಅವಕಾಶವಿದ್ದು ಪ್ರೇಕ್ಷಕರು ಇಚ್ಚಿಸುವ ಸಿನಿಮಾ ಮಂದಿರಗಳಲ್ಲಿ ಚಿತ್ರ ವೀಕ್ಷಿಸಬಹುದಾಗಿದೆ. ತುಳು ಸಿನಿಮಾರಂಗದ ರಾಕ್

ಕಡಬ ಸಮುದಾಯ ಆಸ್ಪತ್ರೆ – ಡಯಾಲಿಸಿಸ್ ಕೇಂದ್ರ ಶೀಘ್ರ ಆರಂಭಿಸುವ ಭರವಸೆ : ಭಾಗೀರಥಿ ಮುರುಳ್ಯ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಕಡಬ ಸಮುದಾಯ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಆಸ್ಪತ್ರೆಯ ಸಿಬ್ಬಂದಿ ಕೊರತೆ ನೀಗಿಸಲು ಹಾಗೂ ಡಯಾಲಿಸಿಸ್ ಕೇಂದ್ರ ಆರಂಭಿಸಲು ಶೀರ್ಘ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ|ಸುಚಿತ್ರಾ ರಾವ್ ಆಸ್ಪತ್ರೆಯ ಸಿಬಂದಿ ಕೊರತೆ ಹಾಗೂ ಇತರ ಅಗತ್ಯತೆಗಳ ಕುರಿತು ಶಾಸಕಿಗೆ ಮಾಹಿತಿ ನೀಡಿದರು. ಆಸ್ಪತ್ರೆಗೆ ಹೊಸ ಡಿಜಿಟಲ್ ಎಕ್ಸ್‍ರೇ ಯಂತ್ರ ನೀಡಲಾಗಿದ್ದರೂ

ಜುಲೈ 3 ರಿಂದ ಕಾಂಗ್ರೆಸ್ ಸರಕಾರದ ವಿಧಾನಸಭೆ ಅಧಿವೇಶನ

ಕಾಂಗ್ರೆಸ್ ಸರಕಾರದ ವಿಧಾನಸಭೆ ಅಧಿವೇಶನವು ಜುಲೈ 3 ರಿಂದ 14 ರವರೆಗೆ ನಡೆಯಲಿದೆ ಎಂದು ವಿಧಾನಸಭಾ ಕಾರ್ಯದರ್ಶಿ ಎಂ ಕೆ ವಿಶಾಲಾಕ್ಷಿ ಅವರು ಆದೇಶ ನೀಡಿದ್ದಾರೆಅಧಿವೇಶನದ ಮೊದಲ ದಿನ ಉಭಯ ಸಧನವನ್ನು ಉಧ್ದೇಶಿಸಿ ರಾಜ್ಯಪಾಲರು ಬಾಷನ ಮಾಡಲಿದ್ದಾರೆ, ಶಾಸಕರಿಗೆ ಪ್ರಶ್ನೆಗಳ ಸೂಚನ ಪತ್ರವನ್ನು ಸದನಕ್ಕೆ ಸಲ್ಲಿಸಲು ಜೂನ್ 16 ಕೊನೆಯ ದಿನವಾಗಿದೆ