Home Posts tagged V4News (Page 28)

ದಾಖಲೆಗಳಿಲ್ಲದೆ ಸಾಗಾಟ ಮಾಡುತಿದ್ದ 55 ಪವನ್ ಚಿನ್ನ ಹಾಗೂ 4 ಲಕ್ಷ ರೂ. ವಶಕ್ಕೆ

ಮಂಜೇಶ್ವರ: ಮಂಗಳೂರಿನಿಂದ ಕಾಸರಗೋಡು ಕಡೆಗೆ ಬರುತ್ತಿದ್ದ ಕರ್ಣಾಟಕ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಮಂಜೇಶ್ವರ ಅಬಕಾರಿ ಇಲಾಖೆ ನಡೆಸಿದ ತಪಾಸಣೆಯಲ್ಲಿ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ಸುಮಾರು 55 ಪವನ್ (438.77 ಗ್ರಾಂ) ಚಿನ್ನಾಭರಣ ಹಾಗೂ 4 ಲಕ್ಷ ರೂಪಾಯಿ ಹಣಗಳೊಂದಿಗೆ ಇಬ್ಬರನ್ನು ಸೆರೆ ಹಿಡಿಯಲಾಗಿದೆ. ಶನಿವಾರ ಸಂಜೆ ವಾಮಂಜೂರು ಅಬಕಾರಿ ಚೆಕ್ ಪೋಸ್ಟ್

ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ವರ್ತನೆ : ವೃದ್ಧ ಆರೆಸ್ಟ್

ಮೂಡುಬಿದಿರೆ : ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಅಸಭ್ಯ ರೀತಿಯಲ್ಲಿ ವತಿ೯ಸಿದ್ದ ವೃದ್ಧನನ್ನು ಮೂಡುಬಿದಿರೆ ಪೊಲೀಸರು ಶನಿವಾರ ಬಂಧಿಸಿದ್ದಾರೆ.ಬೆಳುವಾಯಿಯ ನಿವಾಸಿ ವೃದ್ಧ ರೆಹ್ಮಾನ್ ಬಂಧಿತ.ಮಂಗಳೂರು-ಮೂಡುಬಿದಿರೆ–ಕಾಕ೯ಳ ಮಧ್ಯೆ ಸಂಚರಿಸುವ ಖಾಸಗಿ ಬಸ್ ನಲ್ಲಿ ಘಟನೆ ನಡೆದಿದ್ದು ಇದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿದಾಡುತ್ತಿದ್ದು ಈ ಬಗ್ಗೆ ಯಾರೂ ದೂರು ಕೊಡದ ಹಿನ್ನೆಲೆಯಲ್ಲಿ ಪೊಲೀಸರು ವೃದ್ಧನನ್ನು ಕರೆಸಿ ವಿಚಾರಣೆ ಮಾಡಿ ಬಿಟ್ಟಿದ್ದರು. ಆದರೆ

ತಮ್ಮನ ಮೃತದೇಹ ನೋಡಲು ಬಂದ ಅಣ್ಣನೂ ಹೃದಯಾಘಾತದಿಂದ ಸಾವು

ಮೂಡುಬಿದಿರೆ : ಅನಾರೋಗ್ಯದಿಂದ ಸಾವನ್ನಪ್ಪಿದ ತಮ್ಮನ ಮೃತದೇಹವನ್ನು ನೋಡಲು ದೂರದ ಗುಜರಾತಿನಿಂದ ಬಂದಿದ್ದ ಅಣ್ಣ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ನಿಡ್ಡೋಡಿಯಲ್ಲಿ ನಡೆದಿದೆ. ತಾಲೂಕಿನ ನಿಡ್ಡೋಡಿಯಲ್ಲಿ ನಿವಾಸಿ, ಜನಪರ ಕೆಲಸಗಳಿಂದ ಪರಿಸರದಲ್ಲಿ ಗುರುತಿಸಿಕೊಂಡಿದ್ದ ಪ್ರವೀಣ್ ಶೆಟ್ಟಿ ಅವರು ಕೆಲಕಾಲದ ಅಸೌಖ್ಯದಿಂದ ಆಸ್ಪತ್ರೆ ಸೇರಿದ್ದರು. ಸಾಕಷ್ಟು ಖರ್ಚು ಮಾಡಿದ್ದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು.ಸಹೋದರ ಮೃತಪಟ್ಟ ಸುದ್ಧಿ ತಿಳಿದು ಗುಜರಾತ್

ಮೂಡುಬಿದಿರೆ : ಬೆಳುವಾಯಿ ಪ್ಲೈ ಓವರ್ ಗೆ ಕಾರು ಢಿಕ್ಕಿ : ಓವ೯ ಬಲಿ, ಮೂವರು ಗಂಭೀರ

ಮೂಡುಬಿದಿರೆ: ಅತೀ ವೇಗದಿಂದ ಚಲಿಸುತ್ತಿದ್ದ ಕಾರೊಂದು ಬೆಳುವಾಯಿ ಪ್ಲೈ ಓವರ್ ಡಿಕ್ಕಿ ಹೊಡೆದ ಪರಿಣಾಮವಾಗಿ ಕಾರಿನಲ್ಲಿದ್ದ ಓವ೯ ಸಾವನ್ನಪ್ಪಿದ್ದು, ಉಳಿದ ಮೂವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ವೇಣೂರು ಪೆಮು೯ಡ ನಿವಾಸಿ ಸುಮಿತ್ ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ.ಸ್ಥಳಕ್ಕೆ ಮೂಡುಬಿದಿರೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಸ್ವಾತಂತ್ರೋತ್ಸವದ ಸಂಭ್ರಮಾಚರಣೆ

ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂಭಾಗದಲ್ಲಿ ಪ್ರಪ್ರಥಮ ಬಾರಿಗೆ ಸ್ವಾತಂತ್ರೋತ್ಸವವನ್ನು ಸಂಭ್ರಮದಿಂದ ಆವರಿಸಲಾಯಿತು. ಕೊಲ್ಲೂರು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೆ.ಬಾಬು ಶೆಟ್ಟಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯವು ನಮ್ಮ ಹಿರಿಯರ ನಿಸ್ವಾರ್ಥ, ತ್ಯಾಗ, ಸಂಕಲ್ಪ ಮತ್ತು ಹೋರಾಟಗಳ ಫಲವಾಗಿದೆ. ಅವರು ಮಾಡಿದ ಹೋರಾಟದಿಂದ ಇಂದು ನಾವೆಲ್ಲರೂ ಸುಖವಾಗಿದ್ದೇವೆ. ಇದನ್ನು ನಾವು ಎಂದಿಗೂ ಮರೆಯದೆ, ಆ ಹಿರಿಯರಿಗೆ ಕೃತಜ್ಞರಾಗಿರಬೇಕು

ಜನತಾ ಪಿಯು ಕಾಲೇಜು ಹೆಮ್ಮಾಡಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್

ಜನತಾ ಪಿಯು ಕಾಲೇಜು ಹೆಮ್ಮಾಡಿ ಹಾಗೂ ಜನತಾ ನ್ಯೂಸ್ಯ ಇಂಗ್ಲೀಷ್ ಮಿಡಿಯಂ ಸ್ಕೂಲ್ ಕಿರಿಮಂಜೇಶ್ವರ ಇವರ ಆಸರೆಯಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ-ಜನತಾ ವಿರಾಟ್ ಕಾರ್ಯಕ್ರಮ ಸಂಭ್ರಮ ನಡೆಯಿತು ನಂತರ ವಿದ್ಯಾರ್ಥಿಗಳಿಂದ ದೇಶ ಭಕ್ತಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.ದ್ವಜಾರೋಹಣ ಕಾರ್ಯಕ್ರಮದಲ್ಲಿ ಶ್ರೀ ವಿವಿವಿ ಮಂಡಳಿಯ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಗೋಪಾಲ ಪೂಜಾರಿಯವರು ಧ್ವಜಾರೋಹಣಗೈದುಮಾತನಾಡಿ ದೇಶ ಭಕ್ತಿ, ದೇಶ ಪ್ರೇಮ ಬೆಳಿಸಿಕೊಂಡು

ಕಡಬ: ಪಟ್ಟಣ ಪಂಚಾಯತ್‌ನ 13 ವಾರ್ಡುಗಳಿಗೆ ಚುನಾವಣೆ :ಆಡಳಿತ ಸೌಧದಲ್ಲಿ ಸ್ಟ್ರಾಂಗ್ ರೂಮ್ : ಮಸ್ಟರಿಂಗ್ ಕಾರ್ಯ

ಕಡಬ: ಇಲ್ಲಿನ ಪಟ್ಟಣ ಪಂಚಾಯತ್‌ನ 13 ವಾರ್ಡುಗಳಿಗೆ ನಾಳೆ (ಆ.17) ಚುನಾವಣೆ ನಡೆಯಲಿದ್ದು, ಇದರ ಅಂಗವಾಗಿ ಆ.16ರಂದು ತಾಲೂಕು ಆಡಳಿತ ಸೌಧದಲ್ಲಿ ಸ್ಟ್ರಾಂಗ್ ರೂಮ್ ತೆರೆಯಲಾಗಿದ್ದು ಮಸ್ಟರಿಂಗ್ ಕಾರ್ಯ ನಡೆಯಿತು. ಪ್ರತಿ ಮತಗಟ್ಟೆಯಲ್ಲಿ ಪಿ.ಆರ್.ಒ. ಜೊತೆಗೆ ಮೂವರು ಸಿಬ್ಬಂದಿಗಳು ಹಾಗೂ ಓರ್ವ ಡಿ-ಗ್ರೂಪ್ ನೌಕರ ನಿಯೋಜನೆಯಾಗಿದ್ದು, ಮತಗಟ್ಟೆ ಸಿಬ್ಬಂದಿಗಳು ತಾಲೂಕು ಆಡಳಿತ ಸೌಧದಲ್ಲಿ ಹಾಜರಾಗಿ ಮಸ್ಟರಿಂಗ್ ಪ್ರಕ್ರಿಯೆಯಲ್ಲಿ ಪಾಲ್ಗೊಂಡರು. ಸಂಜೆ ವೇಳೆಗೆ

ಮೂಡುಬಿದಿರೆ: ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ವತಿಯಿಂದ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣೆ

ಮೂಡುಬಿದಿರೆ: 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸೈಂಟ್ ಮಿಲಾಗ್ರಿಸ್ ಕ್ರೆಡಿಟ್ ಸೌಹಾರ್ದ ಕೋ ಆಪರೇಟಿವ್ ಸೊಸೈಟ್ ಲಿ. ಇದರ ವತಿಯಿಂದ ಪ್ರಜ್ಞಾ ಆಶ್ರಯ ಕೇಂದ್ರದ ವಿದ್ಯಾರ್ಥಿಗಳಿಗೆ ಬೆಡ್‌ಶೀಟ್, ಟವಲ್, ಸಿಹಿತಿಂಡಿ ವಿತರಣಾ ಕಾರ್ಯಕ್ರಮವು ನಡೆಯಿತು. ಮೂಡುಬಿದಿರೆ-ಮುಲ್ಕಿ ಕ್ಷೇತ್ರದ ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ಪಂಚಶಕ್ತಿ ವಿವಿದೋದ್ದೇಶ ಸೇವಾ ಸಹಕಾರಿ ಸಂಘ ಇದರ ಅಧ್ಯಕ್ಷರಾದ ರಂಜಿತ್ ಕುಮಾರ್ ತೋಡಾರು ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು.

ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜಿನಿಂದ ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯ ಒಪ್ಪಂದಕ್ಕೆ ಸಹಿ

ಮಂಗಳೂರು: ಶೈಕ್ಷಣಿಕ ಸಹಯೋಗ ಮತ್ತು ಅಂತರಶಿಸ್ತೀಯ ಸಂಶೋಧನೆಯನ್ನು ಮುನ್ನಡೆಸುವ ದಿಶೆಯಲ್ಲಿ ಮಹತ್ವದ ಹೆಜ್ಜೆಯನ್ನಿಟ್ಟುಕೊಂಡು, ಸೈಂಟ್ ಅಲೋಶಿಯಸ್ ಘೋಷಿತ ವಿಶ್ವವಿದ್ಯಾಲಯ, ಮಂಗಳೂರು ಮತ್ತು ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು, ಮಂಗಳೂರು ಇವರು ಆಗಸ್ಟ್ 8, 2025 ರಂದು ಒಪ್ಪಂದಕ್ಕೆ (MoU) ಅಧಿಕೃತವಾಗಿ ಸಹಿ ಹಾಕಿವೆ. ಈ ಒಪ್ಪಂದಕ್ಕೆ ಫಾದರ್ ಮುಲ್ಲರ್ ಸಂಸ್ಥೆಗಳ ನಿರ್ದೇಶಕ ರೆ। ಫಾ। ಫಾವೊಸ್ತಿನ್ ಲುಕಾಸ್ ಲೋಬೊ ಮತ್ತು ಸೈಂಟ್ ಅಲೋಶಿಯಸ್ ಘೋಷಿತ

ಎಂಸಿ.ಸಿ. ಬ್ಯಾಂಕಿನಲ್ಲಿ 79ನೇ ಸ್ವಾತಂತ್ರ‍್ಯೋತ್ಸ ದಿನಾಚರಣೆ

ಎಂಸಿಸಿ ಬ್ಯಾಂಕ್ ಮಂಗಳೂರು ಇದರ ಆಡಳಿತ ಕಚೇರಿಯಲ್ಲಿ 79 ನೇ ಸ್ವಾತಂತ್ರ‍್ಯೋತ್ಸವವನ್ನು ದಿನಾಂಕ 15.08.2025ರಂದು ಆಚರಿಸಲಾಯಿತು. ಬ್ಯಾಂಕಿನ ನಿರ್ದೇಶಕರು, ಸಿಬ್ಬಂದಿ, ಗಣ್ಯರು ಮತ್ತು ಹಿತೈಷಿಗಳು ಹಾಜರಿದ್ದರು.ಎಂ.ಸಿ.ಸಿ. ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಶ್ರೀ ಅನಿಲ್ ಲೋಬೊ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯಾವಾದಿ ಮತ್ತು ನೋಟರಿ ಪಬ್ಲಿಕ್, ಕುದ್ರೋಳಿ ದೇವಸ್ಥಾನ ಟ್ರಸ್ಟ್ನ ಖಜಾಂಚಿ ಮತ್ತು ಸಮಾಜ ಸೇವಕ ಶ್ರೀ ಪದ್ಮರಾಜ್ ಆರ್. ಪೂಜಾರಿ, ಪ್ರಸಿದ್ಧ