ಮಂಗಳೂರು : ಸಂವಿಧಾನ ದಿನದ ಅಂಗವಾಗಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಕಾರ್ಯಕ್ರಮ ಮಂಗಳೂರಿನಲ್ಲಿ ಈ ದಿನ ಹಲವೆಡೆ ನಡೆಯಿತು. ಸಂವಿಧಾನ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಅನುವಾದಿಸಿ ಫಲಕದ ರೂಪದಲ್ಲಿ ಬಿಡುಗಡೆ ಮಾಡಿತ್ತು. ಮಂಗಳೂರಿನ ತುಳು ಭವನ, ಮಂಗಳೂರು ರಥಬೀದಿ ಸರಕಾರಿ ಪ್ರಥಮ ದರ್ಜೆ ಕಾಲೇಜು, ಮಂಗಳೂರು ಬಲ್ಮಠ
ಕಡಬ ಪೊಲೀಸರಿಂದ ಯುಡಿಆರ್ ಪ್ರಕರಣ ದಾಖಲು ಕಡಬ: ಕುಟ್ರುಪ್ಪಾಡಿ ನಿವಾಸಿ ಸೊಲೊಮೊನ್ (54) ಅವರು ನೀಡಿದ ದೂರಿನ ಮೇರೆಗೆ, ಅವರ ಪುತ್ರ ರಾಕೇಶ್ (36) ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕಡಬ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ರಾಕೇಶ್ ಅವರು ಕಡಬದ ಕಳಾರದಲ್ಲಿ ದ್ವಿಚಕ್ರ ವಾಹನ ಗ್ಯಾರೇಜ್ ನಡೆಸುತ್ತಿದ್ದು, ತನ್ನ ಪತ್ನಿ ಹಾಗೂ ಸ್ನೇಹಿತನ ನಡುವೆ ಮೊಬೈಲ್ ಸಂಪರ್ಕವಿರುವ ವಿಚಾರ ತಿಳಿದ ಹಿನ್ನೆಲೆ ತೀವ್ರ
ಸಂವಿಧಾನದ ಆಶಯಗಳನ್ನು ಗೌರವಿಸಿರಿ: ಕೃಷ್ಣ ಪ್ರಸಾದ ಆಳ್ವ ಸಂವಿಧಾನದ ಜಾಗೃತಿ ಮೂಡಿಸುವ, ಬ್ಲಾಕ್ ಕಾಂಗ್ರೆಸ್ಸಿನ ಕಾರ್ಯ ಶ್ಲಾಘನೀಯ:ನೂರುದ್ದೀನ್ ಸಾಲ್ಮರಪುತ್ತೂರು : ಪುತ್ತೂರು ಬ್ಲಾಕ್ ಕಾಂಗ್ರೆಸ್ಸಿನ ವತಿಯಿಂದ, ಕಾಂಗ್ರೆಸ್ ಕಚೇರಿಯಲ್ಲಿ ಇಂದು, ಸಂವಿಧಾನ ದಿನಾಚರಣೆಯನ್ನು ಆಚರಿಸಿ, ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸುವ ನ್ಯಾಯಮೂರ್ತಿ ಎಚ್ ಎನ್ ನಾಗಮೋಹನ್ ಬರೆದ “ಸಂವಿಧಾನ ಓದು” ಎಂಬ ಪುಸ್ತಕವನ್ನು, ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಎಲ್ಲಾ
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪರಮಪೂಜ್ಯ ಖಾವಂದರ ಹುಟ್ಟುಹಬ್ಬದ ಶುಭ ಸಂದರ್ಭದಲ್ಲಿ ಸುಳ್ಯ ತಾಲೂಕಿನ ಸುಳ್ಯ ಶ್ರೀ ಚನ್ನಕೇಶವ ಸ್ವಾಮಿ ದೇವರಿಗೆ ವಿಶೇಷ ಅಲಂಕಾರ ಪೂಜೆ ಹಾಗೂ ಮಹಾಪೂಜೆ ಮತ್ತು ವಿಶೇಷ ಪ್ರಾರ್ಥನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಭಕ್ತಾಭಿಮಾನಿಗಳ ಬಳಗ ಸುಳ್ಯ ವತಿಯಿಂದ ಮಾಡಲಾಯಿತು.ವಿಶೇಷ ಸಭಾ ಕಾರ್ಯಕ್ರಮವನ್ನು ಮಾಡಿದ್ದು ಇತರ ಕಾರ್ಯಕ್ರಮಗಳಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಎಂ.ಬಿ ಫೌಂಡೇಶನ್ ನ ಅಧ್ಯಕ್ಷರಾದ ಶ್ರೀ ಎಂ.ಬಿ
WENAMITAA (NMAMIT ಹಳೆಯ ವಿದ್ಯಾರ್ಥಿಗಳ ಸಂಘ) ಮತ್ತು Nitte Mahalinga Adyanthaya Memorial Institute of Technology (NMAMIT), ನಿಟ್ಟೆ ಇವರ ಸಂಯುಕ್ತ ಆಶ್ರಯದಲ್ಲಿ ಜಾಗತಿಕ ಹಳೆಯ ವಿದ್ಯಾರ್ಥಿ ಸಮಾವೇಶ – “Nitte Nexus 2025” ಅನ್ನು ಡಿಸೆಂಬರ್ 20, 2025, ಸಂಜೆ 4 ಗಂಟೆಯಿಂದ, ಮುಲ್ಕಿಯ ಸುಂದರ ರಾಮ ಶೆಟ್ಟಿ ಕನ್ವೆನ್ಷನ್ ಸೆಂಟರ್ನಲ್ಲಿ ಆಯೋಜಿಸಲಾಗಿದೆ. 1986ರಲ್ಲಿ ಸ್ಥಾಪಿತವಾದ NMAMIT ತನ್ನ 40 ವರ್ಷಗಳ ಸೇವೆ ಮತ್ತು ಶ್ರೇಷ್ಠತೆಗೆ
ಸುಬ್ರಹ್ಮಣ್ಯ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಚಂಪಾಷಷ್ಠಿ ಮಹೋತ್ಸವದ ಅಂಗವಾಗಿ ಕಾರ್ತಿಕ ಶುದ್ಧ ಷಷ್ಠಿಯ ದಿನವಾದ ಬುಧವಾರ ಶ್ರೀ ಸುಬ್ರಹ್ಮಣ್ಯ ದೇವರ ಚಂಪಾಷಷ್ಠಿ ಮಹಾರಥೋತ್ಸವ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಶ್ರದ್ಧಾ, ಭಕ್ತಿಯಿಂದ ನೆರವೇರಿತು.ಚಿಕ್ಕ ರಥದಲ್ಲಿ ಶ್ರೀ ಉಮಾಮಹೇಶ್ವರ ದೇವರು ಆಸೀನರಾಗಿದ್ದರು. ಬ್ರಹ್ಮರಥದಲ್ಲಿ ಶ್ರೀ ಸುಬ್ರಹ್ಮಣ್ಯ ದೇವರು ಆಸೀನರಾಗಿದ್ದರು. ಸುವರ್ಣ ವೃಷ್ಟಿ, ಚಿಕ್ಕ ರಥೋತ್ಸವ ಬಳಿಕ ಚಂಪಾಷಷ್ಠಿ
ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ
ಉಚ್ಚಿಲ:ಕೇಂದ್ರ ಸಚಿವರಾದ ಸನ್ಮಾನ್ಯ ಶ್ರೀ ನಿತಿನ್ ಗಡ್ಕರಿಯವರ ಧರ್ಮಪತ್ನಿ ಶ್ರೀಮತಿ ಕಾಂಚನ ನಿತಿನ್ ಗಡ್ಕರಿ ಅವರು ಇಂದು ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿದರು. ಭೇಟಿ ನೀಡಿದ ಅವರು ಶ್ರೀ ದೇವರ ದರ್ಶನ ಪಡೆದು ಶ್ರೀಕ್ಷೇತ್ರದ ವತಿಯಿಂದ ನೀಡಿದ ಸ್ಮರಣಿಕೆ ಹಾಗೂ ಪ್ರಸಾದ ಮತ್ತು ಗೌರವವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಶ್ರೀಕ್ಷೇತ್ರ ಆಡಳಿತ ಸಮಿತಿಯ ಅಧ್ಯಕ್ಷ ಗಿರಿಧರ್ ಸುವರ್ಣ, ಸದಸ್ಯರು ಶಿವಕುಮಾರ್ ಮೆಂಡನ್, ದಿನೇಶ್ ಎರ್ಮಾಳ್,
ಕೆ.ವಿ.ಜಿ. ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ನವೆಂಬರ್ 23 ರಂದು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಲಾಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ (ರಿ.) ಸುಳ್ಯ, ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದ ಇವರು ದೀಪ ಬೆಳಗಿಸಿ ಉದ್ಘಾಟಿಸಿ, ವೈದ್ಯಕೀಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಪಾತ್ರ, ವೈದ್ಯ ಹಾಗೂ ರೋಗಿಯ ನಡುವಿನ ಸಂಬಂಧ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನದ
ಕಡಬ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಅಧ್ಯಕ್ಷರಾದ ಪೂಜ್ಯ ವೀರೇಂದ್ರ ಹೆಗ್ಗಡೆಯವರ 78ನೇ ವರ್ಷದ ಜನ್ಮದಿನದ ಪ್ರಯುಕ್ತ ಕಡಬ ತಾಲೂಕಿನಾದ್ಯಂತ ವಿವಿಧ ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳು ನಡೆಯಿತು. ಈ ಸಂದರ್ಭ ಕಡಬ ತಾಲೂಕಿನ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ವರ್ಗ ಹಾಗೂ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಕಡಬ ತಾಲೂಕು ವತಿಯಿಂದ ಕಡಬ ಪಟ್ಟಣದ ಶ್ರೀ ದುರ್ಗಾಂಬಿಕಾ ದೇವಸ್ಥಾನದಲ್ಲಿ ವಿಶೇಷ
ಮಂಗಳೂರು :ಭಾರತ ಸಂವಿಧಾನದ ಪೀಠಿಕೆಯನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ತುಳು ಭಾಷೆಗೆ ಭಾಷಾಂತರಿಸಿ ಪಠ್ಯದ ಫಲಕ ಬಿಡುಗಡೆ ಮಾಡಿದೆ.ನವೆಂಬರ್ 26ರ ಸಂವಿಧಾನ ದಿನ ಕಾರ್ಯಕ್ರಮದ ಬಳಿಕ ಮಂಗಳೂರಿನ ವಿವಿಧ ಕೇಂದ್ರಗಳಲ್ಲಿ ಸಂವಿಧಾನ ಪೀಠಿಕೆಯನ್ನು ತುಳುವಿನಲ್ಲಿ ಓದುವ ಅಭಿಯಾನ ನಡೆಯಲಿದೆ.ಸಂವಿಧಾನದ ಉದಾತ್ತ ಮೌಲ್ಯವನ್ನು ಪ್ರಾದೇಶಿಕ ಭಾಷೆಯ ಮೂಲಕ ತಳಮಟ್ಟದಲ್ಲಿ ಪಸರಿಸುವ ಆಶಯ ಹಾಗೂ ಪ್ರಾದೇಶಿಕ ಭಾಷೆಗಳ ಮೂಲಕ ಸಂವಿಧಾನದ ಸಮಗ್ರತೆಯನ್ನು ಅರ್ಥೈಸಿಕೊಳ್ಳುವ




























