Home Posts tagged V4News (Page 329)

ಅಡುಗೆ ಅನಿಲ ದರ ಏರಿಕೆ : ದೊಂದಿ ಮೆರವಣಿಗೆ

ಕಾಸರಗೋಡು ಜಿಲ್ಲೆಯ ಪೆರ್ಲದ ಬೆದ್ರಂಪಳ್ಳದಲ್ಲಿ ಡಿ.ವೈ.ಎಫ್.ಐ ನೇತೃತ್ವದಲ್ಲಿ ಅಡುಗೆ ಅನಿಲ ದರ ಏರಿಕೆಯನ್ನು ಖಂಡಿಸಿ ದೊಂದಿ ಮೆರವಣಿಗೆ ನಡೆಯಿತು. ಅಡುಗೆ ಅನಿಲ ದರ ಏರಿಕೆಯನ್ನು ವಿರೋಧಿಸಿ ಬೆದ್ರಂಪಳ್ಳದಲ್ಲಿ ನಡೆದ ದೊಂದಿ ಮೆರವಣಿಗೆಯನ್ನು ಡಿ.ವೈ.ಎಫ್.ಐ ಕಾಸರಗೋಡು ಜಿಲ್ಲಾ ಸಮಿತಿ ಸದಸ್ಯೆ ಸಚಿತಾ ಬಿ ಪೆರ್ಲ ಉದ್ಘಾಟಿಸಿದರು. ವಾಣಿಜ್ಯ ಸಿಲಿಂಡರ್ ಗೆ 350

ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯ: ಶಾಸಕ ಸಂಜೀವ ಮಠಂದೂರು

ಪುತ್ತೂರು: ಶಿಕ್ಷಣ ಪದ್ಧತಿಯಿಂದ ದೇಶದ ಚಿತ್ರಣ ಬದಲು ಮಾಡಲು ಸಾಧ್ಯವಿದ್ದು, ರಾಷ್ಟ್ರೀಯತೆಯನ್ನು ಮೈಗೂಡಿಸಿಕೊಳ್ಳಬೇಕೆಂಬ ನಿಟ್ಟಿನಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗಿದೆ. ವಿದ್ಯಾರ್ಥಿಗಳಿಗೆ ಆಸಕ್ತಿ ಇರುವ ಕ್ಷೇತ್ರದಲ್ಲೇ ಅಭ್ಯಾಸ ಮಾಡುವ ವ್ಯವಸ್ಥೆಯನ್ನು ಮಾಡಲಾಗಿದೆ. ಐದು ಸರ್ಕಾರಿ ಪದವಿ ಕಾಲೇಜು ಹೊಂದಿರುವ ಏಕೈಕ ವಿಧಾನ ಸಭಾಕ್ಷೇತ್ರ ಪುತ್ತೂರು. ಅದರಲ್ಲೂ ಒಂದು ಮಹಿಳಾ ಕಾಲೇಜು ಇರುವುದು ವಿಶೇಷವಾಗಿದೆ. ಇಲ್ಲಿರುವ ಪ್ರಾಥಮಿಕ ಶಾಲೆಯನ್ನು

ಯಕ್ಷ ಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನೆ

ದೇರಳಕಟ್ಟೆ: ಯಕ್ಷಧ್ರುವ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ಉದ್ಘಾಟನಾ ಸಮಾರಂಭ ದೇರಳಕಟ್ಟೆಯ ಕಂಫರ್ಟ್ ಆಫ್ ಹೋಟೆಲ್‍ನ ನೆಲಮಹಡಿಯಲ್ಲಿ ನಡೆಯಿತು.ಮುಂಬಯಿಯ ಹೇರಂಭಾ ಇಂಡಸ್ಟೀಸ್ ಲಿ. ಮತ್ತು ಕೆಮಿನೋ ಫಾರ್ಮಾ ಅಧ್ಯಕ್ಷಕನ್ಯಾನ ಸದಾಶಿವ ಶೆಟ್ಟಿ ನೂತನ ಸೊಸೈಟಿಯನ್ನು ಉದ್ಘಾಟಿಸಿದರು.ಶ್ರೀ ಕ್ಷೇತ್ರ ಒಡಿಯೂರಿನ ಶ್ರೀ ಗುರುದೇವಾನಂದ ಸ್ವಾಮೀಜಿ ಆಶೀರ್ವಚನ ನೀಡಿ ಮಾತನಾಡಿ ಸಂಪತ್ತಿನ ಗಳಿಕೆ, ಬಳಕೆ ಹಾಗೂ ಉಳಿಕೆಧರ್ಮಯುಕ್ತವಾಗಿ ಮಾಡಬೇಕು. ಒಂದು ಕೈಗೆ ಮತ್ತೊಂದು

ಪುತ್ತೂರಿನಲ್ಲಿ ಎಸ್‍ಟಿ ಮೋರ್ಚಾದ ಜಿಲ್ಲಾ ಸಮಾವೇಶ

ಪುತ್ತೂರು: ಕೇವಲ ಅಧಿಕಾರ ಗದ್ದುಗೆಯ ಉದ್ದೇಶ ಇಟ್ಟುಕೊಂಡು ಬಿಜೆಪಿ ಪಕ್ಷ ಸ್ಥಾಪನೆಯಾಗಿಲ್ಲ. ಇದಕ್ಕೆ ಹೊರತಾಗಿ ಸಾಮಾಜಿಕ ನ್ಯಾಯ ನೀಡುವ ನಿಟ್ಟಿನಲ್ಲಿ ಸಂಕಲ್ಪ ತೊಟ್ಟಿರುವ ಏಕೈಕ ಪಕ್ಷ ಇದ್ದರೆ ಅದು ಬಿಜೆಪಿ ಪಕ್ಷ ಎಂದು ದ.ಕ.ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡಬಿದಿರೆ ಹೇಳಿದರು.ಅವರು ತೆಂಕಿಲ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ಬಿಜೆಪಿ ಎಸ್‍ಟಿ ಮೋರ್ಚಾದ ಜಿಲ್ಲಾ ಮಟ್ಟದ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.ಸಾಮಾಜಿಕ ನ್ಯಾಯ ನೀಡಲು ಪೂರಕವಾಗಿ

ಕೊರಗಜ್ಜನ ಆರಾಧಕ ಖಾಸಿಂ ಸಾಹೇಬ್(66) ನಿಧನ

ಮಂಗಳೂರು: ಕಳೆದ 20 ವರ್ಷಗಳಿಂದ ಕೊರಗಜ್ಜನ ಆರಾಧಕರಾಗಿ ಗುರುತಿಸಿಕೊಂಡಿದ್ದ ಖಾಸಿಂ ಸಾಹೇಬ್(66) ಅವರು ಹೃದಯಾಘಾತದಿಂದಾಗಿ ಮಾ. 5ರಂದು ಮುಂಜಾನೆ ನಿಧನರಾಗಿದ್ದಾರೆ. ಖಾಸಿಂ ಅವರು ಮೂಲತಃ ಕೇರಳದ ಪಾಲಕ್ಕಾಡ್‌ ಜಿಲ್ಲೆಯವರಾಗಿದ್ದು, ಕೇರಳದಿಂದ 35 ವರ್ಷದ ಹಿಂದೆ ಬಂದು ಸದ್ಯ ಮಂಗಳೂರು ಹೊರವಲಯದ ಮುಲ್ಕಿ ಬಳ್ಕುಂಜೆಯಲ್ಲಿ ನೆಲೆಸಿದ್ದರು. ಇವರು ದೈವಗಳಿಗೆ ಗುಡಿ ನಿರ್ಮಿಸಿ ಪ್ರತಿದಿನ ಪೂಜಿಸುತ್ತಿದ್ದರು.

ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಿರುವ ಸರ್ಕಾರ : ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ

ರಾಜ್ಯ ಸರ್ಕಾರ ವಿಶ್ವಕರ್ಮ ಸಮುದಾಯವನ್ನು ನಿರ್ಲಕ್ಷಿಸುತ್ತಾ ಬಂದಿದ್ದು, ಈ ಬಾರಿಯ ಬಜೆಟ್‍ನಲ್ಲೂ ಸಮುದಾಯಕ್ಕೆ ವಿಶೇಷ ಅನುದಾನ, ವಿಶ್ವಕರ್ಮ ಅಭಿವೃದ್ಧಿ ನಿಗಮಕ್ಕೆ ಅನುದಾನ ಘೋಷಣೆ ಮಾಡಿಲ್ಲ ಎಂದು ಅಖಿಲ ಭಾರತ ವಿಶ್ವಕರ್ಮ ಪರಿಷತ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಈ ಬಗ್ಗೆ ನಗರದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಪರಿಷತ್‍ನ ರಾಜ್ಯ ಸಂಚಾಲಕ ಉದಯ ಜಿ ಆಚಾರ್ಯ ಅವರು, ಸಮುದಾಯದ ಶೇ.90ರಷ್ಟು ಜನರು

ಮೂಡುಬಿದರೆಯ ಆದರ್ಶ ಸಂಸ್ಥೆಯಿಂದ ಸ್ವಾವಲಂಬನಾ ದಿನಾಚರಣೆ

ಮೂಡುಬಿದಿರೆ: ಆದರ್ಶ ಗ್ರಾಮಾಭಿವೃದ್ಧಿ ಮತ್ತು ಸೇವಾ ಸಂಸ್ಥೆ (ರಿ.) ಮೂಡುಬಿದಿರೆ ಇದರ ಆಶ್ರಯದಲ್ಲಿ ಸಂಸ್ಥೆಯ ಮೂಲಕ ಪ್ರವರ್ತಿಸಲ್ಪಟ್ಟು ಕಾರ್ಯನಿರ್ವಹಿಸುತ್ತಿರುವ ಸ್ವಸಹಾಯ ಸಂಘಗಳ 23ನೇ ವಾರ್ಷಿಕ ಹಾಗೂ ಸ್ವಾವಲಂಬನಾ ದಿನಾಚರಣೆಯು ವಿಜಯನಗರದ ಆದರ್ಶಧಾಮದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಿ.ಬೆಂಗಳೂರು ಇದರ ನಿರ್ದೇಶಕಿ ಭಾರತಿ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಪ್ರತಿಯೊಬ್ಬ ಮನುಷ್ಯನಿಗೂ ಬದುಕಲು ಉತ್ತಮವಾದ ಆರೋಗ್ಯ

ಎನ್‍ಐಎ ತಂಡ ಸಂಚರಿಸುತಿದ್ದ ಪೊಲೀಸ್ ವಾಹನಕ್ಕೆ ಬೈಕ್ ಢಿಕ್ಕಿ…!

ಪುತ್ತೂರು: ಪುತ್ತೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ ( ಎನ್.ಐ.ಎ) ತಂಡ ಸಂಚರಿಸುತಿದ್ದ ಪೊಲೀಸ್ ವಾಹನ ಹಾಗೂ ಬೈಕ್ ಅಪಘಾತ ನಡೆದು ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಮಾಣಿ ಮೈಸೂರು ರಸ್ತೆಯ ಸಂಪ್ಯ ಪೊಲೀಸ್ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ಎನ್. ಐ. ಎ. ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿದೆ. ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಣ ನಾಯ್ಕ ಬಿ. (50) ಮೃತ

ಪಾಟ್ನಾ ಬಾಂಬ್ ಪ್ರಕರಣ : ಬಂಟ್ವಾಳದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ದಾಳಿ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಬಿಹಾರದ ಪಾಟ್ನಾ ದ ಕಾರ್ಯಕ್ರಮವನ್ನು ವಿಫಲಗೊಳಿಸಬೇಕು ಎಂಬ ನಿಟ್ಟಿನಲ್ಲಿ ಬಾಂಬ್ ಇಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಣಕಾಸಿನ ನೆರವು ಒದಗಿಸಿದ ಬಂಟ್ವಾಳ ಮ‌ೂಲದ ನಾಲ್ವರು ಆರೋಪಿಗಳ ಮನೆಗೆ ಎನ್.ಐ.ಎ ತಂಡ ದಾಳಿ ನಡೆಸಿ ತನಿಖೆ ನಡೆಸಿದೆ. ನಂದಾವರ ನಿವಾಸಿಗಳಾದ ಮಹಮ್ಮದ್ ಸಿನಾನ್, ಇಕ್ಬಾಲ್, ಸರ್ಪಾಜ್ ನವಾಜ್, ನೌಫಲ್ ಮನೆಗೆ ದಾಳಿ ನಡೆದಿದ್ದು, ಈ ಅರೋಪಿಗಳು ಪಾಟ್ನಾ ದ ಪ್ರಧಾನಿ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ

ಮಂಗಳೂರು ಪ್ರೆಸ್ ಕ್ಲಬ್ ದಿನಾಚರಣೆ

ಮಂಗಳೂರು: ಸೂಕ್ಷ್ಮ, ಸಂವೇದನಾಶೀಲ ಬೆಳೆಸಿಕೊಂಡು ಟೀಕೆ, ಟಿಪ್ಪಣಿ ಎದುರಿಸಿ ನಿರ್ಭೀತಿಯಿಂದ ಕೆಲಸ ಮಾಡಬೇಕಾದುದು ಪತ್ರಕರ್ತರ ಧರ್ಮ. ಸಮಾಜದ ಆರೋಗ್ಯ ಕಾಪಾಡುವ ಜವಾಬ್ದಾರಿ ಕೂಡ ಪತ್ರಕರ್ತರದ್ದಾಗಿದೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಕೆ.ಸದಾಶಿವ ಶೆಣೈ ಹೇಳಿದರು. ಬೋಳೂರಿನ ಪ್ಯಾರಡೈಸ್ ಐಲ್ಯಾಂಡ್‍ನಲ್ಲಿ ಭಾನುವಾರ ಮಂಗಳೂರು ಪ್ರೆಸ್ ಕ್ಲಬ್, ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪತ್ರಿಕಾ ಭವನ ಟ್ರಸ್ಟ್ ಆಶ್ರಯದಲ್ಲಿ ನಡೆದ ಪ್ರೆಸ್