Home Posts tagged V4News (Page 5)

ಮಂಗಳೂರು: ಕುಂಜತ್ತಬೈಲ್‌ನ ಮುಡಾ ಲೇಔಟ್‌ಗೆ ಸಚಿವ ದಿನೇಶ್ ಗುಂಡೂರಾವ್ ಭೇಟಿ, ಪರಿಶೀಲನೆ

ಮಂಗಳೂರು ಕುಂಜತ್ತಬೈಲ್ ನ ಮೂಡಾ ಲೇಔಟ್ ಗೆ ದ.ಕಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಭೇಟಿ ನೀಡಿ ಪರಿಶೀಲಿಸಿದರು.ಇದೇ ವೇಳೆ ಮುಡಾ ಆಯುಕ್ತರಾದ ಮುಹಮ್ಮದ್ ನಜೀರ್ ಅವರಿಂದ ಮಾಹಿತಿಯನ್ನ ಪಡೆದುಕೊಂಡರು. ಈ ವೇಳೆ ಜಿಲ್ಲಾಧಿಕಾರಿ ದರ್ಶನ್, ಮುಡಾ ಅಧ್ಯಕ್ಷ ಸದಾಶಿವ, ಮತ್ತಿತರರು ಉಪಸ್ಥಿತರಿದ್ದರು.

ಕುಂದಾಪುರ: ಶ್ರೀ ಸಾಯಿ ಆಸ್ಪತ್ರೆಯಲ್ಲಿ24 ಗಂಟೆ ಅಪಘಾತ ಮತ್ತು ತುರ್ತು ಚಿಕಿತ್ಸಾ ಘಟಕದ ಉದ್ಘಾಟನೆ ಸಮಾರಂಭ

ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಜಯಕರ ಶೆಟ್ಟಿ ಶ್ರೀ ಸಾಯಿ ಆಸ್ಪತ್ರೆಯಲ್ಲಿ ಮಂಗಳೂರಿನ ಕೆ.ಎಂ.ಸಿ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗ, ಟ್ರಾಮಾ ಮತ್ತು ತುರ್ತು ಚಿಕಿತ್ಸಾ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿ ಕು೦ದಾಪುರದ೦ತಹ ಅಭಿವೃದ್ಧಿ ಹೊಂದುತ್ತಿರುವ ಪ್ರದೇಶಗಳಿಗೆ ತುರ್ತು ಮತ್ತು ಅಪಘಾತ ಚಿಕಿತ್ಸಾ ಸೇವೆಗಳನ್ನು ವಿಸ್ತರಿಸುವುದು ಜೀವ ರಕ್ಷಣೆಯಲ್ಲಿ ಅತ್ಯಂತ ಪ್ರಮುಖ ಹೆಜ್ಜೆ ತುರ್ತು ಪರಿಸ್ಥಿತಿಗಳಲ್ಲಿ ಸಮಯೋಚಿತ ವೈದ್ಯಕೀಯ ಪ್ರತಿಕ್ರಿಯೆ

ಪುತ್ತೂರು:ಕಲ್ಲಡ್ಕ ಪ್ರಭಾಕರ ಭಟ್, ಕಾರ್ಯಕ್ರಮ ಆಯೋಜಕರ ವಿರುದ್ಧ ಪ್ರಕರಣ ದಾಖಲು

ಪುತ್ತೂರಿನಲ್ಲಿಆರ್‌ಎಸ್ ಎಸ್ ಪ್ರಮುಖ ಕಲ್ಲಡ್ಕ ಪ್ರಭಾಕರ ಭಟ್,ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು. ದೀಪಾವಳಿ ಹಬ್ಬದ ಪ್ರಯುಕ್ತ ಉಪ್ಪಳಿಗೆ ಎಂಬಲ್ಲಿ ಆಯೋಜಿಸಿದ ದೀಪೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರು ಸಾರ್ವಜನಿಕವಾಗಿ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ, ಮಹಿಳೆಯರನ್ನು ಅವಮಾನಿಸುವ ಮತ್ತು ವಿಭಿನ್ನ ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಪ್ರಚೋದಿಸುವ ರೀತಿಯ ಭಾಷಣ

ಮಂಗಳೂರು: ತುಳು ಅಕಾಡೆಮಿ ವತಿಯಿಂದ ಲೇಖಕಿ ಲಲಿತಾ ರೈ, ಭಾಗವತ ದಿನೇಶ್ ಅಮ್ಮಣ್ಣಾಯರಿಗೆ ನುಡಿ ನಮನ

ಮಂಗಳೂರು: ತುಳು ಭಾಷಿಗರು ಕನ್ನಡ ಕೃತಿಗಳನ್ನು ಬರೆದಾಗ ಕೃತಿಯಂತೂ ಕನ್ನಡದ್ದು ಆಗಿದ್ದರೂ ಕೃತಿಯೊಳಗಡೆ ತುಳುವಿನ ಸತ್ವಗಳೇ ತುಂಬಿರುತ್ತದೆ. ಲಲಿತಾ ರೈ ಅವರ ಎಲ್ಲಾ ಕೃತಿಗಳಲ್ಲಿ ತುಳುವಿನ ನೈಜ ಸತ್ವ ಹಾಗೂ ವೈಚಾರಿಕ ನಿಲುವು ಇತ್ತು ಎಂದು ವಿಶ್ರಾಂತ ಕುಲಪತಿ ಪ್ರೊ.ಬಿ.ಎ.ವಿವೇಕ ರೈ ಅವರು ಹೇಳಿದರು. ಅವರು ಶನಿವಾರ ತುಳು ಅಕಾಡೆಮಿ ವತಿಯಿಂದ ಹಿರಿಯ ಲೇಖಕಿ ಲಲಿತಾ ರೈ ಮತ್ತು ಭಾಗವತ ದಿನೇಶ್ ಅಮ್ಮಣ್ಣಾಯರಿಗೆ ಶ್ರದ್ದಾಂಜಲಿ ಹಾಗೂ ನುಡಿ ನಮನ ಕಾರ್ಯಕ್ರಮದಲ್ಲಿ

ಅ. 27ರಂದು ಮಂಗಳೂರಿಗೆ ಸಿಎಂ ಭೇಟಿ

 ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅ. 27ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ವಿಶೇಷ ವಿಮಾನದಲ್ಲಿ ಆಗಮಿಸಿ 4.25ಕ್ಕೆ ಉರ್ವ ಒಳಾಂಗಣ ಕ್ರೀಡಾಂಗಣದಲ್ಲಿ ಚೀಫ್‌ ಮಿನಿಸ್ಟರ್ಸ್‌ ಮಂಗಳೂರು ಇಂಡಿಯಾ ಇಂಟರ್‌ನ್ಯಾಶನಲ್‌ ಚಾಲೆಂಜ್‌ -2025 ಬ್ಯಾಡ್ಮಿಂಟನ್‌ ಟೂರ್ನಮೆಂಟ್‌ ಉದ್ಘಾಟಿಸುವರು. ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ರಾತ್ರಿ 7.25ಕ್ಕೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಮರಳಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

ಕನ್ನಡ ಮಿತ್ರರು ಯು.ಎ.ಇ ಆಯೋಜನೆಯ “ಕನ್ನಡ ಪಾಠ ಶಾಲೆ ದುಬೈ” ಗೆ ಗಡಿನಾಡು ಸಾಧಕ ಅಂತಾರಾಷ್ಟ್ರೀಯ ಪುರಸ್ಕಾರ

ಅನಿವಾಸಿ ಯುವ ಪೀಳಿಗೆ ಕನ್ನಡ ಸಾಕ್ಷರತೆಯನ್ನು ಸಾರುವ ಕನ್ನಡ ಸಾಕ್ಷರತೆಯ ಮಹಾ ಅಭಿಯಾನವನ್ನು ಆರಂಭಿಸಿ, ಜಾಗತಿಕ ಕನ್ನಡ ಕಲಿಕಾ ಚಳುವಳಿಯ ಹರಿಕಾರ ಎಂದು ಪ್ರಖ್ಯಾತರಾಗಿರುವ ಶಶಿಧರ್ ನಾಗರಾಜಪ್ಪ ಮತ್ತು ಅವರ ತಂಡವನ್ನು ದುಬೈ ಗಡಿನಾಡ ಉತ್ಸವ -2025 ರಲ್ಲಿ ಪುರಸ್ಕರಿಸಿ ಗೌರವಿಸಲಾಯಿತು. ದುಬೈ ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡಮಿ {ರಿ }ಯುಎಇ ಘಟಕ ಮತ್ತು ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರಕಾರ ಇವರ ಜಂಟಿ ಆಶ್ರಯದಲ್ಲಿ ದುಬೈಯ ಗ್ಲೆಂಡೆಲ್

ಪಾಲಡ್ಕ : ಯುವಕನಿಂದ ಮಹಿಳೆಗೆ ಕತ್ತಿಯಿಂದ ಇರಿತ; ಆರೋಪಿ ಪೊಲೀಸ್ ವಶಕ್ಕೆ

ಮೂಡುಬಿದಿರೆ: ಯುವಕನೋರ್ವ ಮಹಿಳೆಯೊಬ್ಬರಿಗೆ ಕತ್ತಿಯಿಂದ ಇರಿದ ಪರಿಣಾಮವಾಗಿ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ವರ್ಣಬೆಟ್ಟುವಿನಲ್ಲಿ ಶನಿವಾರ ನಡೆದಿದೆ. ವಣ೯ಬೆಟ್ಟುವಿನ ಕೆರೆಕೋಡಿ ನಿವಾಸಿ ನವೀನ್ ಅವರ ಪತ್ನಿ ಸಂಜೀವಿ (ನಯನಾ ನಾಯ್ಕ್) ಇರಿತಕ್ಕೊಳಗಾದ ಎಂದು ಮಹಿಳೆ ಎಂದು ಗುರುತಿಸಲಾಗಿದ್ದು ಅವರ ತಲೆ, ಕೈ ಮತ್ತು ಕಾಲುಗಳಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ರಾಮ್ ಮೋಹನ ನಗರ ನಿವಾಸಿ ರಾಜೇಶ್ ನಾಯ್ಕ್

ಕರಾವಳಿಯಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಒತ್ತಾಯ ಕುಂದಾಪುರ ವಕೀಲರಿಂದ ಪತ್ರ ಚಳವಳಿ

ಕುಂದಾಪುರ: ಕರಾವಳಿಯಲ್ಲಿ ಹೈಕೋರ್ಟ್ ಸ್ಥಾಪನೆಗೆ ಒತ್ತಾಯಿಸಿ ದ.ಕ, ಉಡುಪಿ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ವಕೀಲರ ಸಂಘಗಳಿಂದ ನಡೆಯುತ್ತಿರುವ ಅಂಚೆ ಕಾರ್ಡ್ ಚಳವಳಿಯ ಭಾಗವಾಗಿ ಕುಂದಾಪುರದಲ್ಲೂ ಪತ್ರ ಚಳವಳಿ ಶುಕ್ರವಾರ ನಡೆಯಿತು. ಬಹುಕಾಲದ ಬೇಡಿಕೆಗೆ ಎಲ್ಲಾ ಪಕ್ಷಗಳ ನಾಯಕರೂ ಬೆಂಬಲ ನೀಡಿದ್ದಾರೆ. ಈ ಭಾಗದಿಂದ ಬಹಳಷ್ಟು ವ್ಯಾಜ್ಯಗಳು ಕೋರ್ಟ್‌ಗೆ ಹೋಗುತ್ತಿದ್ದು, ಈ ನಿಟ್ಟಿನಲ್ಲಿ ಪ್ರತಿ ವಿಚಾರಣೆಗೂ ಬೆಂಗಳೂರಿಗೆ ತೆರಳುವುದರಿಂದ ಖರ್ಚು ವೆಚ್ಚಗಳು

ದುಬೈಯಲ್ಲಿ ಅಕ್ಟೋಬರ್ 25 ರಂದು “ದುಬೈ ಗಡಿನಾಡ ಉತ್ಸವ -2025”

ದುಬೈ : ಯುಎಇಯಲ್ಲಿ ಇರುವ ಎಲ್ಲಾ ಗಡಿನಾಡಿನ ಹಾಗೂ ಕರುನಾಡಿನ ಕನ್ನಡಿಗರನ್ನು ಒಟ್ಟುಗೂಡಿಸಿ “ದುಬೈ ಗಡಿನಾಡ ಉತ್ಸವ -2025″ವನ್ನು ಅದ್ದೂರಿಯಾಗಿ ಆಚರಿಸುವ ಹಾಗೂ ಈ ಕಾರ್ಯಕ್ರಮ ಒಳ್ಳೆಯ ರೀತಿಯಲ್ಲಿ ಮೂಡಿಬರಲಿ ಎಂದು ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ಗಲ್ಫ್ ನ ಅಧ್ಯಕ್ಷರಾದ ಅಶ್ರಫ್ ಶಾ ಮಾಂತುರು ರವರು ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡುತ್ತಾ ಶುಭವನ್ನು ಹಾರೈಸಿದರು.ಅಕ್ಟೋಬರ್ 25 ರಂದು ಸಂಜೆ ನಾಲ್ಕರಿಂದ ರಾತ್ರಿ ಹನ್ನೊಂದರ ವರೆಗೆ

ಅ.24 : ವಿಶೇಷ ಕಾರ್ಯಪಡೆ ಸಿಬ್ಬಂದಿಗಳಿಗಾಗಿ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರ ಉದ್ಘಾಟನೆ

ಮಂಗಳೂರು : ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಮಂಗಳೂರಿನ ವಿಶೇಷ ಪೊಲೀಸ್ ಕಾರ್ಯಪಡೆಯ(ಎಸ್ .ಎ. ಎಫ್ ) ಸಿಬ್ಬಂದಿಗಳಿಗಾಗಿ 20 ದಿನಗಳ ತುಳು ಭಾಷಾ ಕಲಿಕೆ ಮತ್ತು ಸಂಸ್ಕೃತಿ ಪರಿಚಯ ಕಾರ್ಯಗಾರವನ್ನು ಹಮ್ಮಿಕೊಂಡಿದೆ. ಇತ್ತೀಚೆಗೆ ಹೊಸದಾಗಿ ರಚಿಸಲ್ಪಟ್ಟ ವಿಶೇಷ ಕಾರ್ಯಪಡೆಯ ಸಿಬ್ಬಂದಿಗಳಿಗೆ ಸ್ಥಳೀಯ ಸಂಸ್ಕೃತಿ ಪರಿಚಯ ಮಾಡುವ ಹಾಗೂ ಭಾಷೆಯನ್ನು ಕಲಿಸುವ ನಿಟ್ಟಿನಲ್ಲಿ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಅವರು ವಿಶೇಷ ಆಸಕ್ತಿ ವಹಿಸಿದ ಹಿನ್ನೆಲೆಯಲ್ಲಿ