ಎಂಡೋಸಲ್ಫಾನ್ ಸಂತ್ರಸ್ತರ ಪುನರ್‌ವಸತಿ ಮತ್ತು ಭವಿಷ್ಯದ ಅನುಕೂಲಕ್ಕಾಗಿ ಎಂಆರ್‌ಪಿಎಲ್ (MRPL) ನಿಂದ 83 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಕಟ್ಟಡದ ಭೂಮಿ ಪೂಜೆ ಮಾ.8 ರಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ನೆರವೇರಿಸಿದರು. ಕೊಕ್ಕಡ ಗ್ರಾಮ ಪಂಚಾಯತಿ ಸಮೀಪ ಈ ಪುನರ್‌ವಸತಿ ಕೇಂದ್ರ ನಿರ್ಮಾಣವಾಗಲಿದ್ದು, ಎಂಡೋ ಸಂತ್ರಸ್ತರ ಆರೋಗ್ಯದ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಸುಳ್ಯ ತಾಲೂಕು ಇದರ ವತಿಯಿಂದ ಬಡ್ಡಡ್ಕದ ಕೂರ್ನಡ್ಕ ಎಂಬಲ್ಲಿ ಶ್ರೀಮತಿ ತೇಜಕುಮಾರಿಯವರಿಗೆ ವಾತ್ಸಲ್ಯ ಮನೆಯನ್ನು ಹಸ್ತಾಂತರಿಸಲಾಯಿತು. ಸುಳ್ಯ ತಾಲೂಕಿನ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಅಧ್ಯಕ್ಷರಾದ ಲೋಕನಾಥ್ ಅಮಚೂರು ನವರು ನಾಮಫಲಕವನ್ನು ಅನಾವರಣಗೊಳಿಸಿ ಗ್ರಾಮೀಣ ಮಟ್ಟದಲ್ಲಿ ಕೊರತೆಗಳು ಕಂಡುಬಂದಲ್ಲಿ ಮೊದಲಾಗಿ ಆ ಸಮಸ್ಯೆಯನ್ನು ಗುರುತಿಸಿ ಬಗೆಹರಿಸುವುದು ಶ್ರೀ ಕ್ಷೇತ್ರ ಧರ್ಮಸ್ಥಳ
ಕನ್ನಡ ಸಾಹಿತ್ಯಕ್ಕೆ ವಿಮರ್ಶಾ ಗ್ರಂಥಗಳನ್ನು ಕೊಡುಗೆಯಾಗಿ ನೀಡಿದವರು ಎಲ್ ಎಸ್ ಶೇಷಗಿರಿ ರಾವ್. ಅವರು ಸರಳ , ನೇರ ನಡೆ-ನುಡಿಯ ಮೇರು ವ್ಯಕ್ತಿತ್ವವನ್ನು ರೂಪಿಸಿಕೊಂಡು ಕನ್ನಡ ಸಾಹಿತ್ಯದಲ್ಲಿ ಹಲವಾರು ಕೃತಿಗಳನ್ನು ರಚಿಸಿದ್ದಾರೆ. ಬಿ ಎಂ ಶ್ರೀ ಅವರ ಪ್ರೋತ್ಸಾಹದಿಂದ ಮಾತೃಭಾಷೆ ಕನ್ನಡದಲ್ಲಿ ಕೃತಿಗಳನ್ನು ರಚಿಸಿದರು. ಬಹಳ ಚಿಕ್ಕವಯಸ್ಸಿನಲ್ಲಿ ಬರಹದಲ್ಲಿ ತೊಡಗಿಕೊಂಡ ಇವರು ಸ್ವಾತಂತ್ರ ಹೋರಾಟದಲ್ಲೂ ಭಾಗವಹಿಸಿ ಸೆರೆಮನೆವಾಸ ಅನುಭವಿಸಿದರು. ಶಾಂತ ಸ್ವಭಾವದ
ಕೊಚ್ಚಿ: ಮಧೂರು ಶ್ರೀಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಮಾರ್ಚ್ 27ರಿಂದ ಏಪ್ರಿಲ್ 7ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ, ಮೂಡಪ್ಪ ಸೇವೆ ಹಾಗೂ ಸಂಬಂಧಿತ ಧಾರ್ಮಿಕ ವಿಧಿವಿಧಾನಗಳನ್ನು ಸುರಕ್ಷಿತವಾಗಿ ನಡೆಸಲು ವಿಶೇಷ ಪೊಲೀಸ್ ಭದ್ರತೆ ಕೋರಿ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿದೆ. ದೇವಸ್ಥಾನ ಹಾಗೂ ಬ್ರಹ್ಮಕಲಶೋತ್ಸವ ಸಮಿತಿ ನೇತೃತ್ವದಲ್ಲಿ ಉತ್ಸವಕ್ಕೆ ವ್ಯಾಪಕ ಸಿದ್ಧತೆ ನಡೆಯುತ್ತಿದ್ದು, ಕಾನೂನು ಸುವ್ಯವಸ್ಥೆಗೆ ತೊಂದರೆಯಾಗದಂತೆ ಪೊಲೀಸ್
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಸುಬ್ರಹ್ಮಣ್ಯ ವಲಯದ ಕಲ್ಮಕಾರು ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರಿ ಸಂಘ(ನಿ.) ಇದರ ಕಟ್ಟಡ ರಚನೆಗೆ ಶ್ರೀ ಕ್ಷೇತ್ರದಿಂದ ರೂ.2,00,000/- ಮೊತ್ತ ಅನುದಾನ ಮಂಜೂರಾಗಿದ್ದು, ಹಾಲು ಉತ್ಪಾದಕರ ಸಹಕಾರಿ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಮಂಜೂರಾತಿ ಪತ್ರವನ್ನು ವಿತರಣೆ ಮಾಡಲಾಯಿತು. ಕಟ್ಟಡದ ಉಧ್ಘಾಟನೆಯನ್ನು ಶ್ರೀ ಕೆ.ಪಿ ಸುಚರಿತ ಶೆಟ್ಟಿ ಅಧ್ಯಕ್ಷರು ದ.ಕ
ಅಪ್ರಾಪ್ತ ವಯಸ್ಸಿನ ಪುತ್ರನಿಗೆ ದ್ವಿಚಕ್ರ ವಾಹನ ಚಲಾಯಿಸಲು ನೀಡಿದ್ದ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದ ಘಟನೆ ಸುಳ್ಯದಲ್ಲಿ ನಡೆದಿದೆ. ಸುಳ್ಯ ಪರಿಸರದಲ್ಲಿ ಬಾಲಕ ದ್ವಿಚಕ್ರ ವಾಹನ ಚಲಾಯಿಸುತ್ತಿದ್ದ ವೇಳೆ ಸುಳ್ಯ ಪೊಲೀಸರು ತಡೆ ಹಿಡಿದು ಪ್ರಕರಣ ದಾಖಲಿಸಿದ್ದರು. ಸುಳ್ಯ ನ್ಯಾಯಾಲಯ ಬಾಲಕನ ಪೋಷಕರಿಗೆ 25 ಸಾವಿರ ರೂ. ದಂಡ ವಿಧಿಸಿದೆ. ಬಾಲಕನಿಗೆ ವಾಹನ ಚಾಲನೆ ಮಾಡಲು ನೀಡಿದ್ದಕ್ಕಾಗಿ ಸುಳ್ಯ ಪಿಎಸ್‌ಐ ಸಂತೋಷ್ ಬಿ.ಪಿ. ಅವರು ವಾಹನ ಮಾಲಕರ ವಿರುದ್ಧ
ಸುಳ್ಯ: ಕರ್ನಾಟಕ ಅರೆಭಾಷೆ ಸಂಸ್ಕೃತಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ನೆಹರು ಮೆಮೋರಿಯಲ್ ಕಾಲೇಜು ಇದರ ಸಹಯೋಗದಲ್ಲಿ “ಸುಳ್ಯ ತಾಲ್ಲೂಕಿನ ಸ್ಥಳನಾಮೆಗಳ ಅಧ್ಯಯನ ಮತ್ತು ಮಾಹಿತಿ ಸಂಗ್ರಹ” ಕಾರ್ಯಗಾರ ಮಾರ್ಚ್ 8ರಂದು ನೆಹರು ಮೆಮೋರಿಯಲ್ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರವನ್ನು ಸದಾನಂದ ಮಾವಜಿ, ಅಧ್ಯಕ್ಷರು ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರು
ಕೆವಿಜಿ ಪಾಲಿಟೆಕ್ನಿಕ್ ನ ರಾಷ್ಟ್ರೀಯ ಸೇವಾ ಯೋಜನೆಯ ಹಿರಿಯ ವಿದ್ಯಾರ್ಥಿಗಳ ಸಂಘ “ಎನ್.ಎಸ್.ಎಸ್.ಸೇವಾ ಸಂಗಮ ಟ್ರಸ್ಟ್ (ರಿ.)” ಯ ದಶಮಾನೋತ್ಸವದ ಅಂಗವಾಗಿ ಮಹಿಳಾ ದಿನಾಚರಣೆ ಮತ್ತು” ನಾನೂ ನಾಯಕಿ’ ಎಂಬ ವಿಷಯದ ಬಗ್ಗೆ ತರಬೇತಿ ಕಾರ್ಯಕ್ರಮವು ಮಂಡೆಕೋಲು ಗ್ರಾಮ ಪಂಚಾಯತ್ ಮತ್ತು ಗ್ರಂಥಾಲಯದ ಸಹಯೋಗದೊಂದಿಗೆ ನಡೆಯಿತು. ಎನ್ಎಸ್ಎಸ್ ಸೇವಾ ಸಂಗಮ ಟ್ರಸ್ಟ್ ನ ಗೌರವಾಧ್ಯಕ್ಷ ಬಾಲಕೃಷ್ಣ ಬೊಳ್ಳೂರು ಅವರ ಅಧ್ಯಕ್ಷತೆಯಲ್ಲಿ ನಡೆದ
ಮೂಡುಬಿಬಿದಿರೆ: ಖ್ಯಾತ ಉದ್ಯಮಿ, ಸುಜಯ ಹೊಲೋ ಬ್ಲಾಕ್, ಸುಜಯ ಇಂಟರ್ಲಾಕ್ ಮಾಲಕ ಮೂಡುಬಿದಿರೆಯ ಸದಾಶಿವ ಬಂಗೇರ (71) ಇಂದು ಸಂಜೆ 5ರ ಸುಮಾರಿಗೆ ಹೃದಯಾಘಾತದಿಂದ ಮನೆಯಲ್ಲೇ ಕುಸಿದು ಬಿದ್ದು ಇಹಲೋಕವನ್ನು ತ್ಯಜಿಸಿದ್ದಾರೆ. ಜನಾನುರಾಗಿಯಾಗಿದ್ದಶ್ರೀಯುತರು ಪತ್ನಿ ತುಳು ಸಾಹಿತಿ ಜಯಂತಿ ಬಂಗೇರ, ಪುತ್ರ, ಪುತ್ರಿ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.
ಕು ರಿಶಲ್ ಬಿ ಫೆರ್ನಾಂಡಿಸ್ ಇವರು ರಾಷ್ಟ್ರೀಯ ಅಂತರಾಷ್ಟ್ರೀಯ ಹಾಗೂ ಇತರ ಮಟ್ಟದಲ್ಲಿ ಸಾಹಿತ್ಯಿಕ ಸಾಧನೆ ಮಾಡಿ ಹಲವಾರು ಪ್ರಶಸ್ತಿಗಳನ್ನು ಪಡೆದು ಹಾಗೂ ಅನೇಕ ಪತ್ರಿಕೆಗಳಲ್ಲಿ ಪ್ರಶಂಸೆಗೆ ಪಾತ್ರರಾಗಿ ಈಗಾಗಲೇ ಮೂರು ಕೃತಿಗಳನ್ನು ಪ್ರಕಟಿಸಿದ್ದಾರೆ. ಇವರು ಸುರತ್ಕಲ್ ನಿವಾಸಿಯಾಗಿದ್ದು ರೋನಾಲ್ಡ್ ಮತ್ತು ನಾನ್ಸಿ ಶಿಕ್ಷಕ ದಂಪತಿಯ ಪುತ್ರಿ. ಪ್ರಸ್ತುತ ಎಸ್ ಡಿ ಎಮ್ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯಾಗಿದ್ದಾರೆ. ಇವರಿಗೆ ಕರ್ನಾಟಕ ಸರ್ಕಾರದ ವತಿಯಿಂದ