Home Posts tagged #v4newskarnataka (Page 104)

ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆಯ ಮಹಾಸಭೆ

ದಕ್ಷಿಣ ಕನ್ನಡ ಜಿಲ್ಲಾ ಮೂಲಗೇಣಿ ಒಕ್ಕಲು ರಕ್ಷಣಾ ವೇದಿಕೆ ಆಶ್ರಯದಲ್ಲಿ ಜನ ಸಂಪರ್ಕ ಹಾಗೂ ಸರ್ವ ಸದಸ್ಯರ ಮಹಾಸಭೆಯನ್ನು ನವೆಂಬರ್ 27ರಂದು ನಗರದ ಡಾನ್ ಬಾಸ್ಕೋ ಹಾಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ಅಧ್ಯಕ್ಷರಾದ ಮೇಕ್ಸಿಂ ಡಿಸಿಲ್ವ ಹೇಳಿದ್ರು. ಈ ಕುರಿತು ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ

ಸಮಾಜದಲ್ಲಿ ಭೀತಿ ಮೂಡಿಸುವ ಚಟುವಟಿಕೆ ಮಟ್ಟ ಹಾಕುತ್ತೇವೆ -ಸಚಿವ ಸುನೀಲ್ ಕುಮಾರ್

ಸಮಾಜದಲ್ಲಿ ಭೀತಿ ಮೂಡಿಸುವ ಎಲ್ಲಾ ಚಟುವಟಿಕೆಗಳನ್ನು ಮಟ್ಟ ಹಾಕುತ್ತೇವೆ. ಆಗಿರುವ ಘಟನೆಗಳ ನೋಡಿದರೆ ಅವರ ಉದ್ದೇಶ ಸ್ಪಷ್ಟವಾಗಿದೆ ಎಂದು ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಇಂದು ಕುಕ್ಕರ್ ಬಾಂಬ್ ಸ್ಪೋಟಗೊಂಡ ನಾಗುರಿ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭ ಮಾತನಾಡಿದರು. ಹಿಂದು ಸಮಾಜವನ್ನು ಗುರಿಯಾಗಿಸಲಾಗಿದೆ. ಅವರ ಷಡ್ಯಂತ್ರವನ್ನು ಮಟ್ಟ ಹಾಕುತ್ತೇವೆ. ಎನ್‍ಐಎಗೆ ಶೀಘ್ರವಾಗಿ ಪ್ರಕರಣ ಹಸ್ತಾಂತರ ಆಗಲಿದ್ದು, ಇಡೀ ಪ್ರಕರಣದ ಆಳ ಅಗಲ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ;ಆಟೋ ಚಾಲಕನ ಆರೋಗ್ಯ ವಿಚಾರಿಸಿದ ಸಚಿವ ಸುನೀಲ್ ಕುಮಾರ್

ಮಂಗಳೂರು ಸಮೀಪದ ನಾಗೂರಿಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಗಾಯಗೊಂಡ ಆಟೋ ಚಾಲಕ ಉಜ್ಜೋಡಿ ನಿವಾಸಿ ಪುರುಷೋತ್ತಮರವರನ್ನು ಮಾನ್ಯ ಉಸ್ತುವಾರಿ ಸಚಿವರಾದ ಸುನಿಲ್ ಕುಮಾರ್ ಅವರ ಜೊತೆ ತೆರಳಿ ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಲಾಯಿತು ಹಾಗೂ ಕುಟುಂಬದವರಿಗೆ ಧೈರ್ಯ ತುಂಬಲಾಯಿತು..

ಧರ್ಮಸ್ಥಳದ ಖಾವಂದರಿಗೆ 75ರ ಸಂಭ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ

ಕತಾರ್: ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ತುಳುನಾಡಿನ ಮಹಿಳೆ ಆಯ್ಕೆ.

ಬಂಟ್ವಾಳ: ಕತಾರ್ ಪಿಫಾ ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಸೇವೆ ಸಲ್ಲಿಸಲು ತುಳುನಾಡಿನ ಮಹಿಳೆಯೊರ್ವರು ಆಯ್ಕೆಯಾಗಿದ್ದಾರೆ.ದ.ಕ.ಜಿಲ್ಲೆಯ ಬಂಟ್ವಾಳ ತಾಲೂಕಿನ ಕುಡಂಬೆಟ್ಟು ಗ್ರಾಮದ ದೋಟ ದರ್ಖಾಸು ನಿವಾಸಿ ನವೀನ್ ಪೂಜಾರಿಯವರ ಪತ್ನಿ ಪ್ರತಿಭಾ ಎನ್.ದರ್ಖಾಸು ಎಂಬವರು ಇದೀಗ ಕತಾರಿನ ವರ್ಲ್ಡ್ ಕಪ್ ಮೆಡಿಕಲ್ ಟೀಮಿನಲ್ಲಿ ಸೇವೆ ಸಲ್ಲಿಸಲು ಆಯ್ಕೆಯಾದವರು. ಈ ಮೂಲಕ ಇವರು ವರ್ಲ್ಡ್ ಕಪ್ ಮೆಡಿಕಲ್ ಟೀಮಿಗೆ ಆಯ್ಕೆಯಾದ ಕರ್ನಾಟಕದ ಏಕೈಕ ಮಹಿಳೆ ಎಂಬ ಗೌರವಕ್ಕೆ

ನ.26ಕ್ಕೆ ಕಟಪಾಡಿ ತ್ರಿಶಾ ಕಾಲೇಜಿನ ವಿದ್ಯಾರ್ಥಿ ನಿಲಯ ಉದ್ಘಾಟನೆ

ವಿದ್ಯೆ ಎನ್ನುವುದು ವ್ಯಾಪಾರವಲ್ಲ, ಕಲಿಯಲು ಆಸಕ್ತಿ ಹೊಂದಿರುವ ಬಡ ವಿದ್ಯಾರ್ಥಿಗಳಿಗೆ ನಮ್ಮ ಸಂಸ್ಥೆ ಯವತಿಯಿಂದ ವಿದ್ಯಾರ್ಥಿ ವೇತನ ಸಹಿತ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ದೊರಕುವ ಸವಲತ್ತುಗಳನ್ನು ಸಂಸ್ಥೆ ನಿಗ ವಹಿಸಿ ಅವರಿಗೆ ತೆಗೆಸಿಕೊಳ್ಳುವ ಮೂಲಕ ಮಕ್ಕಳ ವಿದ್ಯಾರ್ಜನೆ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂಬುದಾಗಿ ಸಂಸ್ಥೆಯ ಪ್ರಾಂಶುಪಾಲ ಗುರುಪ್ರಸಾದ್ ರಾವ್ ಹೇಳಿದ್ದಾರೆ. ಅವರು ಕಾಪು ಪ್ರೆಸ್ ಕ್ಲಬ್ ನಲ್ಲಿ ನಡೆಸಿದ ಸುದ್ಧಿಗೋಷ್ಠಿಯಲ್ಲಿ ಮಾತನಾಡಿ,

ನಾಲ್ಕು ವಾರ ಪೂರ್ತಿಗೊಳಿಸಿದ ಹಗಲು ರಾತ್ರಿ ಧರಣಿ

ಟೋಲ್ ಗೇಟ್ ತೆರವಿಗೆ ಆಗ್ರಹಿಸಿ‌ ನಡೆಯುತ್ತಿರುವ ಹಗಲು ರಾತ್ರಿ ಧರಣಿ ಇಂದು 28 ದಿನಗಳನ್ನು ಪೂರ್ಣಗೊಳಿಸಿತು. ವಿವಿಧ ರಾಜಕೀಯ ಪಕ್ಷ ಹಾಗೂ ಸಂಘಟನೆಗಳ ಕಾರ್ಯಕರ್ತರು ಇಂದಿನ ಧರಣಿಯಲ್ಲಿ ಪಾಲ್ಗೊಂಡರು. ಅಧಿಸೂಚನೆ ಹೊರಟು ಹನ್ನೆರಡು ದಿನ ದಾಟಿದರೂ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ವಿಫಲವಾಗಿರುವ ಜಿಲ್ಲಾಡಳಿತದ ವಿರುದ್ದ ಪ್ರತಿಭಟನಾ ಕಾರರು ಆಕ್ರೋಶ ವ್ಯಕ್ತಪಡಿಸಿದರು. ಮಾಜಿ ಶಾಸಕ ಮೊಯ್ದಿನ್ ಬಾವಾ ಸಹಿತ ಭಾಷಣ ಮಾಡಿದ ನಾಯಕರುಗಳು ಸ್ಥಳೀಯ ಶಾಸಕ ಭರತ್ ಶೆಟ್ಟಿಯವರ

500 KG ಗಾಂಜಾ ಇಲಿ ತಿಂದಿದೆ!’ ವಿಚಿತ್ರ ಹೇಳಿಕೆ ನೀಡಿದ ಯುಪಿ ಪೊಲೀಸರು

ಶೇರ್‌ಗಡ್‌ ಮತ್ತು ಹೈವೇ ಪೊಲೀಸ್ ಠಾಣೆಯ ಗೋದಾಮುಗಳಲ್ಲಿ ವಶಕ್ಕೆ ಪಡೆದು ಇರಿಸಿದ್ದ 500 ಕೆಜಿಗೂ ಹೆಚ್ಚು ಗಾಂಜಾವನ್ನು ಇಲಿಗಳು ತಿಂದಿವೆ ಎಂದು ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್-1985 (ಎನ್‌ಡಿಪಿಎಸ್) ಅಡಿಯಲ್ಲಿರುವ ವಿಶೇಷ ನ್ಯಾಯಾಲಯಕ್ಕೆ ಉತ್ತರ ಪ್ರದೇಶದ ಮಥುರಾ ಪೊಲೀಸರು ವರದಿ ಸಲ್ಲಿಸಿದ್ದಾರೆ. ಈ ವರ್ಷದ ಆರಂಭದಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ದಾಖಲಿಸಲಾದ ಪ್ರಕರಣದಲ್ಲಿ ವಶಪಡಿಸಿಕೊಂಡ ಗಾಂಜಾವನ್ನು ಒದಗಿಸುವಂತೆ ಮಥುರಾ

ಮೂಡುಬಿದಿರೆ: ಕೊಡ್ಯಡ್ಕ ಜಯರಾಮ ಹೆಗ್ಡೆ ನಿಧನ

ಅನಿವಾಸಿ ಉದ್ಯಮಿ, ಹೊಸನಾಡು ಕೊಡ್ಯಡ್ಕ ಶ್ರೀದೇವೀ ಅನ್ನಪೂರ್ಣೇಶ್ವರಿ ದೇವಸ್ಥಾನದ ಸ್ಥಾಪಕ ಮತ್ತು ಆಡಳಿತ ಮೊಕ್ತೇಸರ ಡಾ. ಕೊಡ್ಯಡ್ಕ ಜಯರಾಮ ಹೆಗ್ಡೆ (73) ಅನಾರೋಗ್ಯದಿಂದ ನ.23, ಮಂಗಳವಾರ ಮಧ್ಯಾಹ್ನ ಮೂಡುಬಿದಿರೆ ಆಳ್ವಾಸ್ ಹೆಲ್ತ್ ಸೆಂಟರ್ ನಲ್ಲಿ ನಿಧನ ಹೊಂದಿದರು. ಪತ್ನಿ, ಪುತ್ರ , ಪುತ್ರಿಯನ್ನು ಅವರು ಅಗಲಿದ್ದಾರೆ. 23ನೇ ವಯಸ್ಸಿನಲ್ಲಿ ಮಸ್ಕತ್ ಗೆ ತೆರಳಿ ಇಲೆಕ್ಟ್ರಿಕಲ್ ಹಾರ್ಡ್ ವೇರ್ ಶೋರೂಮ್ ಆರಂಭಿಸಿದ್ದರು. ನಂತರ ಹೋಟೇಲ್ ಉದ್ಯಮಕ್ಕೆ ಕಾಲಿರಿಸಿ

ಧರ್ಮಸ್ಥಳದಲ್ಲಿ ಭೀಕರ ರಸ್ತೆ ಅಪಘಾತ, ಓರ್ವ ಸಾವು ; ಏಳು ಜನರಿಗೆ ಗಂಭೀರ ಗಾಯ

ಬೆಳ್ತಂಗಡಿ : ಭೀಕರ ರಸ್ತೆ ಅಪಘಾತ ನಡೆದಿದ್ದು ಇದರಲ್ಲಿ ಓರ್ವ ಸಾವನ್ನಪ್ಪಿದ್ದು ,ಏಳು ಜನರಿಗೆ ಗಂಭೀರ ಗಾಯಗೊಂಡು ಘಟನೆ ಧರ್ಮಸ್ಥಳದ ಕುದ್ರಾಯದಲ್ಲಿ ಇಂದು ಸಂಜೆ ನಡೆದಿದೆ. ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಗಮಿಸುತ್ತಿದ್ದ ಮಂಡ್ಯ ಜಿಲ್ಲೆಯ ಹತ್ತು ಮಂದಿಯ ಕುಟುಂಬ ನಿಡ್ಲೆ ಗ್ರಾಮದ ಕುದ್ರಾಯ ಎಂಬಲ್ಲಿ ಬೊಲೇರೋ ವಾಹನವನ್ನು ರಸ್ತೆಯ ಬಲಕ್ಕೆ ಪಾರ್ಕ್ ಮಾಡಿ ನಿಲ್ಲಿಸಿ ಇಳಿದು ಅಂಗಡಿ ಹೋಗುತ್ತಿದ್ದರು ಈ ವೇಳೆ ಧರ್ಮಸ್ಥಳ ಡಿಪೋದಿಂದ ಮೈಸೂರಿಗೆ ತೆರಳುತ್ತಿದ್ದ