Home Posts tagged #v4newskarnataka (Page 106)

ಸುಳ್ಯ : ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ವಿರುದ್ದ ಆಕ್ರೋಶ

ರಾಜ್ಯ ಬಿಜೆಪಿ ಸರಕಾರವು ಪಂಚಾಯತ್ ರಾಜ್ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ಸ್ಥಳೀಯ ಆಡಳಿತಕ್ಕೆ ಒತ್ತು ನೀಡಿ ಪಂಚಾಯತ್ ರಾಜ್ ವ್ಯವಸ್ಥೆಗೆ ನೀಡಲಾಗಿದ್ದ ಅಧಿಕಾರವನ್ನು ಮೊಟಕುಗೊಳಿಸಲು ಮುಂದಾಗಿದೆ. ಈ ತಿದ್ದುಪಡಿಯನ್ನು ರಾಜ್ಯ ಸರಕಾರ ಗ್ರಾ.ಪಂ.ಅಧ್ಯಕ್ಷರ ಅಧಿಕಾರ ಮೊಟಕು ಗೊಳಿಸುವ ವಿರುದ್ದ ಸುಳ್ಯ ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ

ಉದ್ಯಾವರ : ಅಂಡರ್ ಪಾಸ್ ನಿರ್ಮಾಣಕ್ಕೆ ಆಗ್ರಹ

ಮಂಜೇಶ್ವರ: ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ರಸ್ತೆ ಕಾಮಗಾರಿ ನಡೆಯುತ್ತಿರುವ ಉದ್ಯಾವರದಲ್ಲಿ ಅಂಡರ್ ಪಾಸ್ ನಿರ್ಮಿಸಿ ರಸ್ತೆಯ ಇಕ್ಕೆಡೆಗಳಲ್ಲಿರುವವರಿಗೆ ಆಚೀಚೆ ದಾಟಲು ಸೌಕರ್ಯವನ್ನು ಒದಗಿಸಿ ಕೊಡಬೇಕೆಂದು ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ ಹೋರಾಟ ಸಮಿತಿ ಹಾಗೂ ಊರವರು ನಡೆಸುತ್ತಿರುವ ಪ್ರತಿಭಟನಾ ಧರಣಿಗೆ ಅಧಿಕೃತರ ಭಾಗದಿಂದ ಸ್ಪಂದನೆ ಇಲ್ಲದೇ ಇರುವ ಹಿನ್ನೆಯಲ್ಲಿ ಧರಣಿಯನ್ನು ಅನಿರ್ಧಿಷ್ಟಾವಧಿಗೆ ಮುಂದುವರಿಸಿದ್ದಾರೆ. ಮಂಜೇಶ್ವರ ಶಾಸಕ ಎಕೆ ಎಂ ಅಶ್ರಫ್ ರವರ

ದಕ್ಷಿಣಕನ್ನಡ ಹಾಲು ಒಕ್ಕೂಟ : ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ

ಮಂಗಳೂರು: ದಕ್ಷಿಣಕನ್ನಡ ಹಾಲು ಒಕ್ಕೂಟದ ವ್ಯಾಪ್ತಿಯಲ್ಲಿ ಬರುವ ಹಾಲು ಉತ್ಪಾದಕರಿಗೆ ಉತ್ತೇಜನ ನೀಡುವ ಉದ್ದೇಶದಿಂದ, ವಿಶೇಷ ಪ್ರೋತ್ಸಾಹಧನ ನೀಡಲು ನಿರ್ಧರಿಸಿದ್ದಾರೆ. ಈ ಬಗ್ಗೆ ಮತ್ತೊಮ್ಮೆ ಸ್ಪಷ್ಟೀಕರಣ ನೀಡಿದ ಹಾಲು ಒಕ್ಕೂಟದ ಅಧ್ಯಕ್ಷರಾದ ಕೆ.ಪಿ. ಸುಚರಿತ ಶೆಟ್ಟಿ ಅವರು, ಅಕ್ಟೋಬರ್ 11,2022ರಿಂದ ಅನ್ವಯವಾಗುವಂತೆ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್ ಉತ್ತಮ ಗುಣಮಟ್ಟದ ಹಾಲಿಗೆ ವಿಶೇಷ ಪ್ರೋತ್ಸಾಹಧನ ರೂ.2.05 ಪೈಸೆ ನೀಡಲಾಗುವುದು. ಇದರಿಂದ ಹಾಲು

ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿರಕೇರಿ ಬಂಧನ ಖಂಡನೀಯ, ಕೂಡಲೇ ಬಿಡುಗಡೆಗೆ ಆಗ್ರಹ- ಡಿವೈಎಫ್ಐ

ಮಂಗಳೂರಿನಲ್ಲಿ ರಾಜಾರೋಷವಾಗಿ ನಡೆಯುವ ಅಕ್ರಮ, ಅನ್ಯಾಯಗಳ ವಿರುದ್ಧ, ಬಿಜೆಪಿ ಸರಕಾರಗಳ ಜನವಿರೋಧಿ ನೀತಿಗಳ ವಿರುಧ್ದ ನಿರಂತರ ಮತ್ತು ನಿರ್ಭೀತವಾಗಿ ಧ್ವನಿ ಎತ್ತುತ್ತಿದ್ದ ಸಾಮಾಜಿಕ ಕಾರ್ಯಕರ್ತ ಸುನೀಲ್ ಬಜಿಲಕೇರಿಯವರನ್ನು ನಿನ್ನೆ ರಾತ್ರಿ ಬಜಪೆ ಠಾಣಾ ಪೊಲೀಸರು ವಿನಾಃ ಕಾರಣ ಬಂಧಿಸಿರುವುದನ್ನು ಡಿವೈಎಫ್ಐ ದ.ಕ ಜಿಲ್ಲಾ ಸಮಿತಿ ಖಂಡಿಸುತ್ತದೆ. ಕರ್ನಾಟಕದ ರಾಜ್ಯದ ಬಿಜೆಪಿ ಸರಕಾರದ ದುರಾಡಳಿತದ ವಿರುಧ್ದ, ಸ್ಥಳೀಯ ಶಾಸಕ ವೇದವ್ಯಾಸ ಕಾಮತ್ , ಭರತ್ ಶೆಟ್ಟರ ಅಕ್ರಮ,

ಬಿಎನ್‍ಐ ಇನ್‍ಸ್ಪಾಯರ್ : ನೂತನ ಅಧ್ಯಕ್ಷರಾಗಿ ರೋಶನ್ ಬಾಳಿಗಾ ಆಯ್ಕೆ

ಬಿಎನ್‍ಐ ಇನ್‍ಸ್ಪಾಯರ್ ಮಂಗಳೂರು ಅಧ್ಯಕ್ಷರಾಗಿ ಜಿ.ಡಿ. ಎಡ್ವರ್ಟೈಸಿಂಗ್ ಪ್ರೈ.ಲಿ. ಇದರ ಆಡಳಿತ ನಿರ್ದೇಶಕ ರೋಶನ್ ಬಾಳಿಗಾ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಸುನೀತಾ ಡಿಸೋಜಾ, ಕಾರ್ಯದರ್ಶಿ ಹಾಗೂ ಖಜಾಂಜಿಯಾಗಿ ಅರವಿಂದ ಪ್ರಭು ಆಯ್ಕೆಯಾಗಿದ್ದಾರೆ.

5G ವಂಚಕರ ಬಗ್ಗೆ ಇರಲಿ ಎಚ್ಚರ : ಓಟಿಪಿ ನೀಡಿ ವಂಚನೆಗೊಳ್ಳಬೇಡಿ

5G ಅಥವಾ 5 ನೇ ಜನರೇಷನ್ನಿನ ಮೊಬೈಲ್ ನೆಟ್ ವರ್ಕ್ ಕೇವಲ ಇಂಟರ್ನೆಟ್ ಸ್ಪೀಡ್ ನ್ನು ಮಾತ್ರವೇ ಅಪ್ ಗ್ರೇಡ್ ಮಾಡುವುದಿಲ್ಲ ಬದಲಾಗಿ ಇದು ಮುಂದಿನ ಜನರೇಷನ್ನಿನ ಟೆಕ್ನಾಲಜಿಯನ್ನು ಡ್ರೈವ್ ಮಾಡುತ್ತದೆ. ಇದೀಗ 5G ಯಲ್ಲಿ ಕೆಲ ಸೈಬರ್ ಹ್ಯಾಕರ್’ಗಳು ಕೂಡ ಹೊಸ ರೀತಿಯ ವಂಚನೆಗೆ ಮುಂದಾಗಿದ್ದಾರೆ. ಈ ಹೊಸ ರೂಪದ ಸೈಬರ್ ಕ್ರೈಮ್ಗೆ ಬಲಿಯಾಗಬೇಡಿ ಎಂದು ತಜ್ಞರು ಎಚ್ಚರಿಸಿದ್ದಾರೆ. ನಿಮ್ಮ ಮೊಬೈಲ್‌ನಲ್ಲಿರುವ 4G ಸಿಸ್ಟಮ್’ನ್ನ 5ಉಗೆ ಅಪ್‌ಗ್ರೇಡ್ ಮಾಡಬೇಕೆಂದು ನಿಮ್ಮ

ಮಹಾರಾಷ್ಟ್ರ: ಟ್ರಕ್‌ ಹಾಗೂ ಬಸ್ ಅಪಘಾತ: ಬೆಂಕಿ ಹೊತ್ತಿ 10 ಮಂದಿ ಸಜೀವ ದಹನ, 24 ಮಂದಿಗೆ ಗಾಯ

ಮುಂಬೈ: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಸಂಭವಿಸಿದ ಅಪಘಾತದಲ್ಲಿ ಕನಿಷ್ಠ 10 ಮಂದಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಔರಂಗಾಬಾದ್ ರಸ್ತೆಯಲ್ಲಿ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಸಂಭವಿಸಿದ ದುರ್ಘಟನೆಯಲ್ಲಿ 24 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸ್ಲೀಪರ್ ಕೋಚ್ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರು. ನಂದೂರ್ ನಾಕಾ ಎಂಬಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಕೆಲವೇ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ:ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ನಾಟಕಕಾರ, ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮವನ್ನು ನಗರದ ತುಳು ಭವನದಲ್ಲಿ ಆಯೋಜಿಸಲಾಗಿತ್ತು. ಮಂಗಳೂರಿನ ಉರ್ವಸ್ಟೋರಿನ ತುಳಭವನದಲ್ಲಿ ಸಿರಿ ಚಾವಡಿಯಲ್ಲಿ ನಾಟಕಕಾರ , ಸಾಹಿತ್ಯ ಮತ್ತು ಸಮಾಜ ಸೇವಕ ದಿ ಎ. ಶಿವಾನಂದ ಕರ್ಕೇರ ಅವರ ಸವಿ ನೆನಪು ಕಾರ್ಯಕ್ರಮದ ಪ್ರಯಕ್ತ ಅವರ ಭಾವಚಿತ್ರಕ್ಕೆ ಗಣ್ಯರು ಪುಪ್ಪನಮನ ಸಲ್ಲಿಸಿದರು. ಇನ್ನು ಸಭಾ ಕಾರ್ಯಕ್ರಮವನ್ನು ಪ್ರಪುಲ್ಲ

ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭ

ರಾಷ್ಟ್ರೀಯ ಹೆದ್ದಾರಿ 66ರ ನಾಯ್ಕನಕಟ್ಟೆ ಸರ್ಕಲ್ ಬಳಿ ನೂತನವಾಗಿ ಗೋಲ್ಡ್ ಮೊಬೈಲ್ ಮತ್ತು ಎಸ್‍ಎಲ್‍ವಿ ಟ್ರೇಡರ್ಸ್ ಮಳಿಗೆ ಶುಭಾರಂಭಗೊಂಡಿತು. ಇಲ್ಲಿ ಎಲ್ಲಾ ತರಹದ ಕಂಪನಿ ಮೊಬೈಲಗಳು ಹಾಗೂ ವಿವಿಧ ಕಂಪನಿಯ ಮೊಬೈಲ್ ರೀಚಾರ್ಜ್‍ಗಳು ಸಿಮ್ ಕಾರ್ಡ್‍ಗಳು, ಗ್ರಾಹಕರಿಗೆ ಪಾನ್ ಕಾರ್ಡ್, ಲ್ಯಾಂಡ್ ಲಿಂಕ್ಸ್, ವಿವಿಧ ಕಂಪನಿಯ ಮೋಟಾರ್ ಸೈಕಲ್‍ಗಳು, ಮಿನಿ ಎಟಿಎಂ ಇನ್ನಿತರ ಎಲ್ಲಾ ಗ್ರಾಹಕರಿಗೆ ಬೇಕಾಗುವ ಸೌಲಭ್ಯಗಳು ಸಿಗುತ್ತದೆ

ನಿಟ್ಟೆ ಡಾ. ಶಂಕರ ಅಡ್ಯಂತಾಯ ಸ್ಮಾರಕ ಪದವಿ ಪೂರ್ವ ಕಾಲೇಜು :ಎನ್. ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

“ರಾಷ್ಟ್ರೀಯ ಸೇವಾ ಯೋಜನೆಯು ವಿದ್ಯಾರ್ಥಿಗಳಿಂದ ಕೇವಲ ಕೆಲಸ ಮಾಡಿಸಲು ಇರುವುದಲ್ಲ. ವಿದ್ಯಾರ್ಥಿ ದೆಸೆಯಿಂದಲೇ ಮಕ್ಕಳು ಸಾಮಾಜಿಕವಾಗಿ ತಾವು ಹೇಗೆ ಬದುಕಬೇಕು, ಜೀವನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಮೆಟ್ಟಿ ನಿಲ್ಲುವುದು, ಆತ್ಮವಿಶ್ವಾಸ ಬೆಳೆಸಿಕೊಳ್ಳುವುದು, ಸಹಬಾಳ್ವೆಯ ಮಹತ್ವ ಮೊದಲಾದವುಗಳನ್ನು ತಿಳಿಸಿಕೊಡುತ್ತದೆ. ಒಟ್ಟಿನಲ್ಲಿ ವಿದ್ಯಾರ್ಥಿಯ ವ್ಯಕ್ತಿತ್ವದ ಸರ್ವತೋಮುಖ ಅಭಿವೃದ್ಧಿಗೆ ಎನ್‍ಎಸ್‍ಎಸ್ ದಾರಿದೀಪವಾಗಬಲ್ಲ ಜೀವನ