ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು. 5 ರವರೆಗೆ ರೆಡ್ ಅಲಟ್೯ ಘೋಷಣೆಯಾಗಿರುವ ಕಾರಣ, ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ
ಉಡುಪಿ : ಉಡುಪಿಯಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಇಂದು ಮತ್ತು ನಾಳೆ ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಉಡುಪಿ ಜಿಲ್ಲೆಯಾದ್ಯಂತ ಕಳೆದ 24 ಗಂಟೆಯಿಂದ ಸುರಿದ ಮುಂಗಾರು ಮಳೆ ವರದಿಯ ಪ್ರಕಾರ ಬೈಂದೂರು, ಕಾಪು ಮತ್ತು ಹೆಬ್ರಿಯಲ್ಲಿ ಹೆಚ್ಚು ಮಳೆ ದಾಖಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಸರಾಸರಿ 71 ಮಿಲಿ ಮೀಟರ್ ಮಳೆಯಾಗಿದ್ದು, ಕುಂದಾಪುರದಲ್ಲಿ 64, ಕಾರ್ಕಳದಲ್ಲಿ 60, ಹೆಬ್ರಿಯಲ್ಲಿ 70, ಬೈಂದೂರಿನಲ್ಲಿ 91, ಬ್ರಹ್ಮಾವರದಲ್ಲಿ 61 ಮತ್ತು
ಉಡುಪಿ : ಕುಸಿದುಬಿದ್ದು ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಜಿಲ್ಲೆಯ ಅಂಬಲಪಾಡಿಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಡಿಸೋಜ ಕಡೇಕಾರು ಎಂದು ಗುರುತಿಸಲಾಗಿದೆ. ಘಟನಾ ಸ್ಥಳಕ್ಕೆ ಸಮೀಪದ ದಾತ್ರಿ ಮೆಡಿಕಲ್ ಸಿಬ್ಬಂದಿಯೋರ್ವರು ಪ್ರಾಥಮಿಕ ಚಿಕಿತ್ಸೆ ನೀಡಿದರು. ಬಳಿಕ ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರಿಗೆ ಮಾಹಿತಿ ನೀಡುದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ನಿತ್ಯಾನಂದ ಒಳಕಾಡು ಅವರು, ವ್ಯಕ್ತಿಯನ್ನು ಉಡುಪಿ ಜಿಲ್ಲಾಸ್ಪತ್ರೆಗೆ
ಉಡುಪಿ : ದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವ ಆಕಸ್ಮಿಕವಾಗಿ ಕಾಲು ಜಾರಿ ತೋಡಿಗೆ ಬಿದ್ದು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಬೀಡಿನಗುಡ್ಡೆಯ ನಾಗಬನದ ಬಳಿ ನಿನ್ನೆ ತಡರಾತ್ರಿ ನಡೆದಿದೆ. ಮೃತ ವ್ಯಕ್ತಿಯನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ 38 ವರ್ಷದ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಇಂದು ಬೆಳಿಗ್ಗೆ ಸ್ಥಳೀಯರು ಮೃತದೇಹವನ್ನು ತೋಡಿನಿಂದ ಮೇಲೆತ್ತಿದರು. ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಮೃತದೇಹವನ್ನು
ಉಡುಪಿ : ಸೇನೆಗೆ ಸೇರಬೇಕು, ದೇಶ ಸೇವೆ ಮಾಡಬೇಕು ಅನ್ನೋದು ಸಾವಿರಾರು ಯುವಕರ ಕನಸು. ಆದರೆ ಸೂಕ್ತ ಮಾಹಿತಿ ಹಾಗೂ ತರಬೇತಿಯ ಕೊರತೆಯಿಂದ ಕನಸು ನನಸಾಗೋದೆ ಇಲ್ಲ. ಇಂತಹ ದೇಶ ಸೇವೆಯ ಕನಸು ಹೊತ್ತ ಯುವಕರಿಗೆ ತರಬೇತಿ ನೀಡಿ, ಸೈನಿಕರಾಗಲು ಪ್ರೇರೆಪಿಸುತ್ತಿದೆ ಉಡುಪಿಯ ಕೋಟಿ ಚೆನ್ನಯ ಸೇನಾ ತರಬೇತಿ ಪೂರ್ವ ಸಂಸ್ಥೆ. ಇದು ಸೈಕರಾಗಿ ದೇಶ ಕಾಯಲು ಹೊರಟ ಯುವಕರಿಗೆ ತರಬೇತಿ ನೀಡುವ ಸೇನಾ ಪೂರ್ವ ತರಬೇತಿ ಶಾಲೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಬಾರ್ಕೂರಿನಲ್ಲಿ
ಉಡುಪಿ : ಸ್ವಾತಂತ್ರ ಪೂರ್ವದಲ್ಲಿ ನಿರ್ಮಾಣಗೊಂಡ ಸರಿಸುಮಾರು 117 ವರ್ಷಗಳ ಇತಿಹಾಸ ಇರುವ ಉಡುಪಿ ನಗರದ ಹಳೆ ಸಬ್‌ಜೈಲು ಇನ್ನಿಲ್ಲದಂತಾಗುವಂತಿದೆ. ಕಾಂತಾರ ಸಿನಿಮಾದ ಕೆಲ ಭಾಗಗಳು ಚಿತ್ರೀಕರಣಗೊಂಡ, ಉಡುಪಿಯ ಏಕೈಕ ಪಾರಂಪರಿಕ ಕಟ್ಟಡದ ನೆಲಸಮಕ್ಕೆ ಇದೀಗ ಆದೇಶ ನೀಡಲಾಗಿದೆ. ಹೊಸ ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕಾಗಿ ಪಾರಂಪರಿಕ ಜೈಲನ್ನು ಕೆಡವಲು ಉಡುಪಿ ನಗರಸಭೆ ಮೂದಾಗಿರುವುದು, ಆರ್ಕಿಟೆಕ್ಟ್‌ಗಳು ಹಾಗೂ ಕಲಾವಿದರಿಂದ ಬಾರೀ ವಿರೋಧ ವ್ಯಕ್ತವಾಗುತ್ತಿದೆ. ಉಡುಪಿ,
ಉಡುಪಿ : ಕರಾವಳಿಯ ಮಣ್ಣಿನ ಸೊಬಗು, ಆಚರಣೆಯ ಸೊಗಡು ವಿಭಿನ್ನ ಮತ್ತು ವಿಶಿಷ್ಟವಾಗಿರುತ್ತದೆ. ಕರಾವಳಿಯಲ್ಲಿ ಮಳೆ ಬಂದರೆ ಸಾಕು ಅನೇಕ ಪದ್ಧತಿಗಳು, ಆಟೋಟ ಸ್ಪರ್ದೆಗಳು ಆರಂಭವಾಗುತ್ತವೆ. ಮಳೆಗಾಲ ಬಂದಾಗ ಕರಾವಾಳಿಯ ಗದ್ದೆಗಳು ತುಂಬಿ ತುಳುಕುತ್ತವೆ, ಕೃಷಿ ಚಟುವಟಿಕೆಗಳು ಆರಂಭವಾಗುತ್ತವೆ. ಆದರೆ ಇಂದಿನ ಕಂಪ್ಯೂಟರ್ ಯುಗದಲ್ಲಿ ಪಾರಂಪರಿಕವಾಗಿ ಬೆಳೆದು ಬಂದ ಹಳ್ಳಿ ಜನಪದ ಕ್ರೀಡೆಗಳು ಮೂಲೆ ಗುಂಪಾಗುತ್ತಿರುವುದರಿಂದ, ಕೆಸರುಗದ್ದೆ ಜನಪದ ಕ್ರೀಡೆಯನ್ನು ಉಳಿಸುವ
ಕಾರ್ಕಳ : ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕಾರ್ಕಳ ವತಿಯಿಂದ ನಗರ ಸಮ್ಮೇಳನ ಜುಲೈ 2 ರಂದು ಕಾರ್ಕಳದ ವೇಣುಗೋಪಾಲ ಕೃಷ್ಣ ದೇವಸ್ಥಾನ ಕಾಬೆಟ್ಟುನಲ್ಲಿ ನಡೆಯಿತು. ಈ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಮಾತನಾಡಿದ ಎಬಿವಿಪಿಯ ಹಿರಿಯ ಕಾರ್ಯಕರ್ತ ರಾಜೇಂದ್ರ ಅಮಿನ್ ಅವರು, ದೇಶ ಸೇವೆಗೆ ತಮ್ಮ ಸಮಯವನ್ನು ಮೀಸಲಿಡುವ ಮೂಲಕ ತಮ್ಮ ವಿದ್ಯಾರ್ಥಿ ಜೀವನವನ್ನು ಸಮರ್ಪಕವಾಗಿಸಿಕೊಳ್ಳಬೇಕೆಂದು ಹೇಳಿದರು. ನಂತರ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ರಾಜ್ಯ ಸಹ
ಉಡುಪಿ: ಪ್ರಥಮ ಏಕಾದಶಿ ಪ್ರಯುಕ್ತ ಪೆರ್ಡೂರು ಬ್ರಾಹ್ಮಣ ಸೇವಾ ಸಮಿತಿಯ ವತಿಯಿಂದ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ತಪ್ತ ಮುದ್ರಾಧಾರಣೆ ಕಾರ್ಯಕ್ರಮವನ್ನು ಇಂದು ನಡೆಸಲಾಯಿತು. ಶ್ರೀ ರಾಘವೇಂದ್ರ ಆಚಾರ್ಯರ ನೇತೃತ್ವದಲ್ಲಿ ಬೆಳಿಗ್ಗೆ ಶ್ರೀ ಸುದರ್ಶನ ಹೋಮ ನಡೆಸಿ, ಪೂರ್ಣಾಹುತಿಯ ನಂತರ ಶೀರೂರು ಮಠದ ಸ್ವಾಮಿಗಳಾದ ಶ್ರೀ ಶ್ರೀ ವೇದದವರ್ಧನ ತೀರ್ಥರು ತಾಮ್ರದಿಂದ ತಯಾರಿಸಿದ ಸುದರ್ಶನ ಹಾಗೂ ಪಾಂಚಜನ್ಯ ಮುದ್ರೆಯನ್ನು, ಅದೇ ಅಗ್ನಿಯಲ್ಲಿ ಕಾಯಿಸಿ ಎಲ್ಲಾ
ಉಡುಪಿ: ಮಳೆಗಾಲ ಬಂತು ಅಂದರೆ ನಾನಾ ರೋಗರುಜಿನಗಳ ಆಗಮನವಾಯಿತೆಂದೇ ಅರ್ಥ. ಈ ಸಮಯದಲ್ಲಿ ಒಂದಲ್ಲ ಒಂದು ರೀತಿಯ ರೋಗಕ್ಕೆ ತುತ್ತಾಗುವುದು ಸಾಮಾನ್ಯ. ಆದರೆ ಮಳೆಗಾಲದಲ್ಲಿ ಬರಬಹುದಾದ ರೋಗರುಜಿನಗಳಿಂದ ರಕ್ಷಣೆಯ ಸಲುವಾಗಿ ತಪ್ತ ಮುದ್ರಾಧಾರಣೆ ಮಾಡುವ ಎಂಬ ನಂಬಿಕೆಯಿದೆ. ಮುದ್ರಾಧಾರಣೆಯನ್ನು ಚಾತುರ್ಮಾಸ್ಯದ ಮೊದಲ ದಿನ ಸರ್ವೈಕಾದಶಿಯಂದೇ ನಡೆಸಲಾಗುತ್ತದೆ. ಈ ಸಲುವಾಗಿ ಇಂದು ಉಡುಪಿಯ ಶ್ರೀ ಕೃಷ್ಣ ಮಠ ಹಾಗೂ ಅಷ್ಟಮಠಗಳಲ್ಲಿ ಮುದ್ರಾಧಾರಣೆ ನಡೆಯಿತು. ಮಳೆಗಾಲದ



























