ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ನೇತೃತ್ವದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ರಾಜ್ಯಾದ್ಯಂತ ಹಮ್ಮಿಕೊಂಡಿರುವ ಕೋಟಿ ಕಂಠ ಗಾಯನ ಕಾರ್ಯಕ್ರಮವು ಕರಾವಳಿಯ ವಿವಿಧ ಭಾಗಗಳಲ್ಲಿ ಅತ್ಯುತ್ತಮವಾಗಿ ನಡೆಯಿತು. ಉಡುಪಿಯ ಪ್ರಖ್ಯಾತ ಆರೋಗ್ಯ ಸಂಸ್ಥೆ ಆದರ್ಶ ಆಸ್ಪತ್ರೆ ಸೂಪರ್ ಸ್ಪೆಷಾಲಿಟಿ
ಸ್ಮಾರ್ಟ್ ಸಿಟಿಯಾಗಿ ಹೊರಹೊಮ್ಮುತ್ತಿರುವ ಮಂಗಳೂರು ನಗರದ ಕೆಲವು ಪ್ರದೇಶಗಳಲ್ಲಿ ಸ್ವಚ್ಚತೆಗೆ ಗಮನಹರಿಸದಿರುವುದು ವಿಷಾದನೀಯ ಸಂಗತಿ, ನಗರದ ಕದ್ರಿ ಮಲ್ಲಿಕಟ್ಟೆ ಸಮೀಪದ ವಾರ್ಡ್ ನಂಬರ್ 33ರ ಜುಗುಲ್ ಹಾಲ್ ಹಿಂಬದಿಯ ರಸ್ತೆಯಲ್ಲಿ ಮನೆಗಳ ಮುಂದೆ ಕಳೆದ ಮೂರು ದಿನಗಳಿಂದ ಚರಂಡಿ ತುಂಬಿ ಹರಿಯುತ್ತಿದೆ, ಸಮಸ್ಯೆ ಬಗೆಹರಿಸುವುದಾಗಿ ನಗರಪಾಲಿಕೆ ಅಧಿಕಾರಿಗಳು ಭರವಸೆ ನೀಡಿದ್ದಾರೆ ಆದರೆ ಇನ್ನು ಕೂಡ ಭರವಸೆ ಈಡೆರಿಲ್ಲ, ಸ್ಥಳಿಯ ನಿವಾಸಿಗಳು ಪ್ರತಿದಿನವೂ ದುರ್ವಾಸನೆಯಿಂದ
ಬಂಟ್ವಾಳ: ತುಂಬೆ ಕಡೆಗೋಳಿಯ ನಿರತ ಸಾಹಿತ್ಯ ಸಂಪದ ರಜತ ಸಂಭ್ರಮ ಆಚರಿಸಿಕೊಳ್ಳುತ್ತಿದೆ. ನ.6ರಂದು ಮಧ್ಯಾಹ್ನದಿಂದ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಬಿ.ಸಿ.ರೋಡಿನ ಕೈಕುಂಜೆ ಕನ್ನಡ ಭವನದಲ್ಲಿ ನಡೆಯಿತು. ನ.6ರಂದು ಬಿ.ಸಿ.ರೋಡಿನ ಕನ್ನಡ ಭವನದಲ್ಲಿ ಮಧ್ಯಾಹ್ನ 2ರಿಂದ ಬೆಳ್ಳಿಹೆಜ್ಜೆ ಕಾರ್ಯಕ್ರಮ ನಡೆಯಲಿದ್ದು, ಪೆÇ್ರ.ತುಕಾರಾಮ ಪೂಜಾರಿ ಚಾಲನೆ ನೀಡಲಿದ್ದಾರೆ. ಈ ಸಂದರ್ಭ ನಿರತ ಪ್ರಶಸ್ತಿಯನ್ನು ಹಿರಿಯ
ಕಡಬ ತಾಲೂಕಿನ ದೋಳ್ಪಾಡಿ ಗ್ರಾಮದ ದೋಳ್ಪಾಡಿ ಗ್ರಾಮದ ಕಟ್ಟ ಎಂಬಲ್ಲಿ ಬಟ್ಟೆ ವ್ಯಾಪಾರಿಗಳ ಸೋಗಿನಲ್ಲಿ ಬಂದ ಇಬ್ಬರು ದಲಿತ ಮಹಿಳೆಯ ಮಾನಭಂಗ ಯತ್ನ ಮಾಡಿರುವ ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು, ವಿರೋಧ ಪಕ್ಷಗಳು ಆರೋಪಿಗಳಿಗೆ ಬೆಂಬಲ ನೀಡುವುದನ್ನು ನಿಲ್ಲಿಸಬೇಕು ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಹೇಳಿದರು. ಕಡಬದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಒಂಟಿ ಮಹಿಳೆ ಮನೆಯಲ್ಲಿ ಒಬ್ಬರೇ
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕಾಮಧೇನು ಗೋ ಶಾಲೆ ಪ್ರಾರಂಭೋತ್ಸವ ಮತ್ತು ಗೋ ಪೂಜೆ ಕಾರ್ಯಕ್ರಮ ನಡೆಯಿತು. ಬೆಳಿಗ್ಗೆ ಗಣಪತಿ ಹೋಮ ಸಂಜೆ ಗೋ ಪೂಜೆ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ನೇತೃತ್ವದಲ್ಲಿ ಗೋ ಪೂಜೆ ನಡೆಯಿತು. ಗೋವುಗಳನ್ನು ಶೃಂಗರಿಸಿ. ಗಂಧ ಪ್ರಸಾದವನ್ನು ಹಚ್ಚಿ, ಅದಕ್ಕೆ ದೋಸೆ, ಅವಲಕ್ಕಿ, ಬಾಳೆ ಹಣ್ಣುಗಳನ್ನು ನೀಡಲಾಯಿತು. ಗೋ ಪೂಜೆ ಸಭಾ ಕಾರ್ಯಕ್ರಮದಲ್ಲಿ ಗೋ ಸಮರ್ಪಣೆ
ಮಂಗಳೂರು: ಬಸ್ಸೊಂದು ಓವರ್ ಟೇಕ್ ಮಾಡುವ ಭರದಲ್ಲಿ ನಿಲ್ಲಿಸಿದ್ದ ಮೊಟ್ಟೆ ಸಾಗಾಟದ ವಾಹನಕ್ಕೆ ಡಿಕ್ಕಿ ಹೊಡೆದ ಘಟನೆ ವೆಲೆನ್ಸಿಯಾದಲ್ಲಿ ನಡೆದಿದೆ. ಮಂಗಳಾದೇವಿ ಕಡೆಯಿಂದ ಬರುತ್ತಿದ್ದ ಎರಡು ಬಸ್ ಗಳು ವೆಲೆನ್ಸಿಯಾದ ಸರ್ಕಲ್ ಬಳಿ ತಲುಪಿದಾಗ ಬಸ್ ಓವರ್ ಟೇಕ್ ಮಾಡಲು ಮುಂದಾಗಿದೆ. ಪರಿಣಾಮ ಚಾಲಕನ ನಿಯಂತ್ರಣ ಕಳೆದುಕೊಂಡಿದ್ದು, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಮೊಟ್ಟೆ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಬಸ್, ಮೊಟ್ಟೆ ಸಾಗಾಟದ ವಾಹನ ಡಿಕ್ಕಿ ಹೊಡೆದ ಪರಿಣಾಮ
ಮಂಗಳೂರು: ಇಂದಿನಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗಾಗಿ ಅನಿರ್ದಿಷ್ಟಾವಧಿ ಹಗಲು ರಾತ್ರಿ ಮುಷ್ಕರವನ್ನು ನಡೆಸುವುದಾಗಿ ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯು ಈ ಹಿಂದೆ ಕರೆನೀಡಿದ್ದು, ಆದರೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಸುರತ್ಕಲ್ ಠಾಣಾ ವ್ಯಾಪ್ತಿಯ ಟೋಲ್ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಇಂದು ಬೆಳಿಗ್ಗೆ 6ರಿಂದ ನವಂಬರ್ 3ರ ಸಂಜೆ 6 ಗಂಟೆಯ ತನಕ
ಇಂಗ್ಲೆಂಡ್: ಬ್ರಿಟನ್’ನ ನೂತನ ಪ್ರಧಾನಿಯಾಗಿ ಭಾರತೀಯ ಮೂಲದ ರಿಷಿ ಸುನಕ್ ಆಯ್ಕೆಯಾಗಿದ್ದಾರೆ. ಮಾಜಿ ಹಣಕಾಸು ಸಚಿವರಾಗಿದ್ದ ರಿಷಿ ಸುನಕ್ ಅವರಿಗೆ 193 ಸಂಸದರ ಬೆಂಬಲ ಲಭಿಸಿದ್ದು, ಪ್ರತಿಸ್ಪರ್ಧಿ ಪೆನ್ನಿ ಮೊರ್ಡಾಂಟ್ ಅವರಿಗೆ 26 ಸಂಸದರ ಬೆಂಬಲ ದೊರೆತಿದ್ದವು. ಬ್ರಿಟನ್’ನಲ್ಲಿ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿನ ಮಧ್ಯೆ 45 ದಿನಗಳ ಹಿಂದೆ ಪ್ರಧಾನಿ ಹುದ್ದೆಗೇರಿದ ಲಿಝ್ ಟ್ರಸ್ ಅವರು ದಿಢೀರ್ ಬೆಳವಣಿಗೆಯಲ್ಲಿ ಪ್ರಧಾನಿ ಹುದ್ದೆಗೆ ಕಳೆದ ವಾರ
ಕಾರ್ಗಿಲ್ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕಾರ್ಗಿಲ್ ನಲ್ಲಿ ಭಾರತೀಯ ಯೋಧರೊಂದಿಗೆ ದೀಪಾವಳಿ ಆಚರಿಸಿದ್ದಾರೆ. ಪ್ರತಿ ವರ್ಷದಂತೆ ಈ ಬಾರಿಯೂ ಸೈನಿಕರೊಂದಿಗೆ ದೀಪಾವಳಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ಕಾರ್ಗಿಲ್‌ಗೆ ಆಗಮಿಸಿದ್ದಾರೆ. ಇನ್ನು ಮೋದಿಯರವರು 2014ರಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಉತ್ತರಾಖಂಡ, ಹಿಮಾಚಲ ಪ್ರದೇಶ, ರಾಜಸ್ಥಾನ, ಪಂಜಾಬ್ ಮತ್ತು ಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶಗಳಂತಹ ರಾಜ್ಯಗಳಲ್ಲಿ ದೀಪಾವಳಿಯಂದು
ವಿಶ್ವದ ಹಲವಾರು ದೇಶಗಳಲ್ಲಿ ಅಕ್ಟೋಬರ್ 25ರಂದು ಕಾಣಲಿರುವ ಸೂರ್ಯಗ್ರಹಣ, ಭಾರತದ ಭೂಭಾಗದಲ್ಲಿ ಪಾರ್ಶ್ವ ಸೂರ್ಯಗ್ರಹಣವಾಗಿ ಗೋಚರಿಸಲಿದೆ. ಮಂಗಳೂರಿನ ಆಸುಪಾಸಿನಲ್ಲಿ ಸುಮಾರು ಘಂಟೆ ಸಂಜೆ 5:09 ರಿಂದ 6:06ರ ವರೆಗೆ ಕಾಣಸಿಗುವ ಈ ಘಟನೆಯಲ್ಲಿ ಸುಮಾರು ಘಂಟೆ ಸಂಜೆ 5:50ರ ಹೊತ್ತಿಗೆ ಅತಿಹೆಚ್ಚು ಅಂದರೆ ಸೂರ್ಯನ ಬಿಂಬದ 10.9% ಶೇಕಡದಷ್ಟು ಭಾಗವನ್ನು ಮರೆಮಾಚಲಿದೆ. ಗ್ರಹಣವೀಕ್ಷಣೆ ಬರಿಗಣ್ಣಿನಿಂದ ನೋಡುವುದು ಹಾನಿಕಾರಕ. ಇದನ್ನು ದೂರದರ್ಶಕದಿಂದ (ಟೆಲೆಸ್ಕೋಪ್)




























