Home Posts tagged #v4newskarnataka (Page 115)

ಉಡುಪಿ : ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರೀಯಗೊಂಡ ಯುವಕನ ಅಂಗಾಂಗ ದಾನ

ಉಡುಪಿಯಲ್ಲಿ ಅಕ್ಟೋಬರ್ 9ರಂದು ನಡೆದಿದ್ದ ರಸ್ತೆ ಅಪಘಾತದಲ್ಲಿ ಎಂಐಟಿ ವಿದ್ಯಾರ್ಥಿ ಶ್ರೀ ವೆಮುಲಾ ಸುದರ್ಶನ್ ಚೌಧರಿ ಅವರಿಗೆ ಗಂಭೀರವಾದ ಗಾಯಗಳಾಗಿದ್ದು ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಮೆದುಳು ನಿಷ್ಕ್ರೀಯಗೊಂಡ ಯುವಕ ಅಂಗಾಂಗಳನ್ನು ಕುಟುಂಬಸ್ಥರು ದಾನ ಮಾಡಲು ನಿರ್ಧರಿಸಿದ್ದರು, ಅಂತೆಯೇ ಅಂಗಾಂಗಗಳನ್ನು ದಾನ ಮಾಡುವ

ಮಂಗಳೂರಿನಲ್ಲಿ ಮತ್ತೆ ಪಿಎಫ್‍ಐ ಮುಖಂಡರ ಮನೆಗಳಿಗೆ ಪೊಲೀಸ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪ್ಯಾಪುಲರ್ ಫ್ರಂಟ್ ಆಫ್ ಇಂಡಿಯಾ (PಈI) ಹಾಗೂ ಎಸ್ ಡಿಪಿಐ ಮುಖಂಡರ ಮನೆಗಳ ಮೇಲೆ ಪೊಲೀಸರು ಮತ್ತೆ ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಪೊಲೀಸರು ಪಿಎಫ್ ಐ ಹಾಗೂ ಎಸ್ ಡಿಪಿಐ ಮುಖಂಡರ ಮೇಲೆ ಕಮಿಷನರ್ ಎನ್ ಶಶಿಕುಮಾರ್ ನೇತೃತ್ವದಲ್ಲಿ ಪೊಲೀಸರು ದಾಳಿ ಮಾಡಿದ್ದು, ಐವರು ಪಿಎಫ್ ಐ ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.ಎನ್.ಶಶಿಕುಮಾರ್ ನೇತೃತ್ವದಲ್ಲಿ ಪಣಂಬೂರು, ಸುರತ್ಕಲ್ ಹಾಗೂ ಮಂಗಳೂರು ಗ್ರಾಮಾಂತರ

ಅ.25 ರ ದೀಪಾವಳಿಯಂದೇ ಸೂರ್ಯಗ್ರಹಣ

ಈ ವರ್ಷದ ಕೊನೆಯ ಭಾಗಶಃ ಸೂರ್ಯಗ್ರಹಣವು ಅಕ್ಟೋಬರ್ 25ರಂದು ಗೋಚರವಾಗಲಿದೆ. ದೀಪಾವಳಿಯಂದೇ ಈ ಸೂರ್ಯಗ್ರಹಣ ಉಂಟಾಗಲಿದ್ದು, ಯುರೋಪ್, ಪಶ್ಚಿಮ ಸೈಬೀರಿಯಾ, ಮಧ್ಯ ಏಷ್ಯಾ, ಪಶ್ಚಿಮ ಏಷ್ಯಾ ಮತ್ತು ಆಫ್ರಿಕಾದ ಈಶಾನ್ಯ ಭಾಗದಲ್ಲಿ ಗೋಚರಿಸುತ್ತದೆ. ಈ ಸೂರ್ಯಗ್ರಹಣವು ಭಾರತದ ಬಹುತೇಕ ಪ್ರದೇಶಗಳಲ್ಲಿ ಗೋಚರಿಸಲಿದೆ ಎಂದು ಹೇಳಲಾಗುತ್ತಿದೆ. ಅಕ್ಟೋಬರ್‌ 25ರ ಪಾರ್ಶ್ವ ಸೂರ್ಯ ಗ್ರಹಣವು ಸಂಜೆ ಗಂಟೆ 5.08ಕ್ಕೆ ಪ್ರಾರಂಭವಾಗಿ 6.29ಕ್ಕೆ ಅಂತ್ಯವಾಗಲಿದ್ದು, ಸೂರ್ಯ ಗ್ರಹಣವನ್ನು

ಅ.16ರಂದು ಅಡ್ಕಾರು ಗೋದಾಮು ಕಟ್ಟಡದ ಉದ್ಘಾಟನೆ

ಶತಮಾನ ಸಂವತ್ಸರಗಳನ್ನು ದಾಟಿ ಮುನ್ನಡೆಯುತ್ತಿರುವ ಕನಕಮಜಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ಅಡ್ಕಾರಿನಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಗೋದಾಮು ಕಟ್ಟಡದ ಉದ್ಘಾಟನೆಯು ಅ.16ರಂದು ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಜರುಗಲಿದೆ ಎಂದು ಸಹಕಾರ ಸಂಘದ ಅಧ್ಯಕ್ಷ ಡಾ. ಗೋಪಾಲಕೃಷ್ಣ ಭಟ್ ಅವರು ತಿಳಿಸಿದರು. ಅವರು ಸುಳ್ಯದ ಪ್ರೆಸ್‍ಕ್ಲಬ್‍ನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ಕನಕಮಜಲು ಪ್ರಾ.ಕೃ. ಪ.ಸ.ಸಂಘವು

ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನ

ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್‌ಎಫ್‌) ಮಹಿಳಾ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಜ್ಯೋತಿ (33) ಅವರು ಆತ್ಮಹತ್ಯೆ ಯತ್ನವೊಂದರಲ್ಲಿ ತನಗೆ ತಾನೇ ಗುಂಡು ಹಾರಿಸಿಕೊಂಡಿದ್ದಾರೆ. ಕೌಟುಂಬಿಕ ವಿವಾದದ ನಂತರದ ತೀವ್ರ ಹತಾಶೆಯಲ್ಲಿ ಅವರು ಈ ಕೃತ್ಯ ಎಸಗಿದ್ದಾರೆಂದು ಹೇಳಲಾಗುತ್ತದೆ. ಪತಿ ಪತ್ನಿ ಇಬ್ಬರೂ ರಾಜಸ್ಥಾನದ ಭರತ್ ಪುರ ಜಿಲ್ಲೆಯವರು. “ಗಾಯಾಳುವನ್ನು ನಗರದ ಎ.ಜೆ ಆಸ್ಪತ್ರೆಗೆ ಸೇರಿಲಾಗಿದೆ. ಶಾಸ್ತ್ರಚಿಕಿತ್ಸೆ ನಡೆಯುತ್ತಿದೆ” ಎಂದು ಮಂಗಳೂರು ನಗರ

ಯಕ್ಷಗಾನಕ್ಕೆ ಮನಸೋತು ತಾನೇ ವೇಷಧಾರಿಯಾದ ಸಚಿವ

ಯಕ್ಷಗಾನವೆಂದರೆ ಕರಾವಳಿ ಬಾಗದಲ್ಲಿ ತನ್ನದೆ ಆದ ಛಾಪನ್ನು ಮೂಡಿಸಿದ ಕಲೆ, ಇದೀಗ ಸಚಿವರೊಬ್ಬರು ಈ ಕರಾವಳಿಯ ಕಲೆಗೆ ಮನಸೋತು ತಾನೆ ವೇಷ ಧರಿಸುವ ಮೂಲಕ ಸಂಭ್ರಮಿಸಿದ್ದಾರೆ. ಆರೋಗ್ಯ ಸಚಿವರಾದ ಡಾ.ಸುಧಾಕರ್ ಉತ್ತರ ಕನ್ನಡ ಜಿಲ್ಲೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಸಂಬಂಧ ಪರಿಶೀಲನೆಗೆ ಆಗಮಿಸಿದ್ದ ಅವರು ಬಳಿಕ ಅಧಿಕಾರಿಗಳ ಸಭೆ ನಡೆಸಿ ರಾತ್ರಿ ಶಾಸಕ ಸುನೀಲ್ ನಾಯ್ಕ್ ಅವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ರಾತ್ರಿ ಶಾಸಕ ಸುನೀಲ್ ನಾಯ್ಕ್ ಅವರ

ಮಕ್ಕಳ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಮುಂಬೈ: ಮಲಾಡ್‍ಪೂರ್ವದ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಯುವ ವಿಭಾಗದ ಆಶ್ರಯದಲ್ಲಿ ಅಕ್ಟೋಬರ್ 30ರಂದು ಮಲಾಡ್ ಪೂರ್ವದ ಚಿಲ್ಡ್ರನ್ಸ್ ಅಕಾಡೆಮಿ ಶಾಲೆಯ ಸಭಾಂಗಣದಲ್ಲಿ ದಿನಪೂರ್ತಿ ನಡೆಯಲಿರುವ ಮಕ್ಕಳ ಉತ್ಸವದ ಆಮಂತ್ರನ ಪತ್ರಿಕೆಯನ್ನು ಬಿಲ್ಲವರ ಅಸೋಸಿಯೇಷನ್ ಮಲಾಡ್ ಸ್ಥಳೀಯ ಕಚೇರಿಯ ಕಾರ್ಯಾಲಯದಲ್ಲಿ ಪೂಜಾ ಸಮಿತಿಯ ಅಧ್ಯಕ್ಷರಾದ ನ್ಯಾಯವಾದಿ ಜಗನ್ನಾಥ್ ಎನ್ ಶೆಟ್ಟಿ ಪಣಿಯೂರು ಬಿಡುಗಡೆಗೊಳಿಸಿದರು. ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ

ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಪ್ರತಿಭಟನೆ : 11ನೇ ದಿನಕ್ಕೆ ಕಾಲಿಟ್ಟ ಧರಣಿ ಸತ್ಯಾಗ್ರಹ

ಮಂಜೇಶ್ವರ: ಉದ್ಯಾವರದಲ್ಲಿ ಅಂಡರ್ ಪಾಸ್ ಬೇಡಿಕೆಗಾಗಿ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ 11 ನೇ ದಿನಕ್ಕೆ ಕಾಲಿಟ್ಟಿದೆ. ಹೋರಾಟ ಸಮಿತಿಯ ನೇತಾರ ಸಂಜೀವ ಶೆಟ್ಟಿಯವರ ಅಧ್ಯಕ್ಷತೆಯಲ್ಲಿ ನಡೆದ 11 ನೇ ದಿನದ ಧರಣಿ ಸತ್ಯಾಗ್ರಹವನ್ನು ಉದ್ಯಾವರ ಶ್ರೀ ಅರಸು ಮಂಜಿಷ್ಟಾರ್ ಕ್ಷೇತ್ರದ ಪಾತ್ರಿ ರಾಜ ಬೆಲ್ಚಾಡ ರವರು ಉದ್ಘಾಟಿಸಿದರು. ಈ ಸಂದರ್ಭ ಮಂಜೇಶ್ವರ ಗ್ರಾ. ಪಂ. ವ್ಯಾಪ್ತಿಯ ಕುಟುಂಬ ಶ್ರೀ ಸದಸ್ಯರು ಧರಣಿಯಲ್ಲಿ

ಮಗುವಿನ ನೆರವಿಗೆ ನಿಂತ ಉಳ್ಳಾಲದ ಟೀಂ ಹನುಮಾನ್

ಉಳ್ಳಾಲ: ಐದು ವರ್ಷದ ಹಿಂದೆ ಸಮಾಜಮುಖಿ ಕಾರ್ಯಗಳಿಗೆ ವೇದಿಕೆಯಾಗಿ ಸ್ಥಾಪನೆಗೊಂಡ ಉಳ್ಳಾಲದ ಟೀಂ ಹನುಮಾನ್ 20 ಮಂದಿ ಯುವಕರ ತಂಡ ಉಳ್ಳಾಲದಲ್ಲಿ ಇತ್ತೀಚೆಗೆ ನಡೆದ ದಸರಾ ಉತ್ಸವದ ವೇಳೆ ವಿವಿಧ ರೀತಿಯ ವೇಷ ಧರಿಸಿ ಜನರಿಂದ ಸಂಗ್ರಹಿಸಿದ ಹಣವನ್ನು ರಕ್ತದ ಕ್ಯಾನ್ಸರಿನಿಂದ ಬಳಲುತ್ತಿರುವ ಒಂದೂವರೆ ವರ್ಷದ ಮಗುವಿನ ಚಿಕಿತ್ಸೆಗೆ ನೀಡಿ ಮಾದರಿಯಾಗಿದ್ದಾರೆ. ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂಡಬಿದ್ರೆಯ ಒಂದೂವರೆ ವರ್ಷದ ಶ್ರೀಯಾ ಹೆಸರಿನ ಮಗುವಿನ

ವಾಮಂಜೂರು : ಶಾರದೋತ್ಸವದ ಫ್ಲೆಕ್ಸ್‍ಗೆ ಹಾನಿ ವಿಚಾರ ಮೂವರು ವಶಕ್ಕೆ

ವಾಮಂಜೂರು ಜಂಕ್ಷನ್ ಆಸುಪಾಸಿನಲ್ಲಿ ಶಾರದೋತ್ಸವ ಬಗ್ಗೆ ವಾಮಂಜೂರು ಫ್ರೆಂಡ್ಸ್ ಎಂಬ ಸಂಘಟನೆಯು ಸಾರ್ವಜನಿಕ ಸ್ಥಳದಲ್ಲಿ ಹಾಕಲಾಗಿದ್ದ ಫ್ಲೆಕ್ಸ್‍ಗಳನ್ನು ಯಾರೋ ಕಿಡಿಗೇಡಿಗಳು ಹರಿದು ಹಾಕಿದ್ದರ ಬಗ್ಗೆ ಮಂಗಳೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿತರಾದ ಸುಮಿತ್ ಹೆಗ್ಡೆ, ಯತೀಶ್ ಪೂಜಾರಿ, ಪ್ರವೀಣ್ ಪೂಜಾರಿ ಎಂಬವರುಗಳನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ