ಸೇವಾಸಾಗರ ಟ್ರಸ್ಟ್ ಸಾಗರದ ನೂತನ ಕಟ್ಟಡದ ಶಿಲಾನ್ಯಾಸವನ್ನು ಸಂಸದರಾದ ಬಿ. ವೈ ರಾಘವೇಂದ್ರ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಜನರ ಸೇವೆಗಾಗಿ ಸೇವಸಾಗರ ಟ್ರಸ್ಟ್ ಮುಂದೆ ಬಂದಿದ್ದು, ಇದೀಗ ನೂತನ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಲಾಗಿದೆ ಎಂದರು. ಈ ಸಂದರ್ಭದಲ್ಲಿ ಶಾಸಕರಾದ ಹೆಚ್ ಹರತಾಳು ಹಾಲಪ್ಪ, ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದಕ್ಷಿಣ ಪ್ರಾಂತ
ಓಣಂ ಹಬ್ಬ ಕೇರಳದ ಜನರ ಪ್ರೀತಿಯ ಹಬ್ಬ,ಎಲ್ಲೆಡೆಯು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದ್ದು, ಮಂಜೇಶ್ವರದಲ್ಲಿರುವ ಓಷಿಯನ್ ಎಂಪೈರ್ ಫ್ಯಾಮಿಲಿ ರೆಸ್ಟೋರೆಂಟ್ ನಲ್ಲಿ ಹಬ್ಬದ ವಾತಾವರಣ ಮನೆಮಾಡಿದೆ. ಸಂಸ್ಕೃತಿ, ಸಂಪ್ರದಾಯದ ಪ್ರತಿರೂಪವೇ ಓಣಂ ಹಬ್ಬ. ಕೇರಳದ ಜನತೆ ಬಹಳ ಸಂಭ್ರಮದಿಂದ ಈ ಹಬ್ಬವನ್ನು ಆಚರಿಸುತ್ತಾರೆ. ಓಣಂ ಅನೇಕ ಆಸಕ್ತಿದಾಯಕ ಆಚರಣೆಗಳನ್ನು ಹೊಂದಿದೆ. ಅತ್ಯಂತ ವರ್ಣರಂಜಿತ ಓಣಂ ಆಚರಣೆಗಳಲ್ಲಿ ಒಂದು ಹೂವಿನ ರಂಗೋಲಿಗಳು
ವೈದ್ಯರ ಕಾರ್ಯ ವೈಖರಿಯನ್ನು ಗಮನಿಸಿ ಲಯನ್ಸ್ ಕ್ಲಬ್ ನಾವುಂದ ವತಿಯಿಂದ ಸನ್ಮಾನಿಸುವ ಕಾರ್ಯಕ್ರಮ ನಡೆಯಿತು. ಪ್ರಾಥಮಿಕ ಆಯುರ್ವೇದಿಕ್ ಚಿಕಿತ್ಸಾಲಯ ಇಲ್ಲಿನ ಪಿಹೆಚ್‍ಸಿ ವೈದ್ಯರಾದ ವಿನಯ ವೈದ್ಯ ಸಾಕ್ಷಿಯಾಗಿದ್ದಾರೆ. ನಾಲ್ಕೈದು ಗ್ರಾಮಕ್ಕೆ ವಿನಯ ಡಾಕ್ಟರ್ ಎಂದರೆ ಹೆಸರುವಾಸಿ ನಗುಮುಖದಿಂದ ಚಿಕಿತ್ಸೆ ನೀಡುವ ವ್ಯಕ್ತಿತ್ವದ್ದು ಇವರದ್ದು.ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ವಲಯ ಅಧ್ಯಕ್ಷರಾದ ನರಸಿಂಹ ದೇವಾಡಿಗ, ಉಪಾಧ್ಯಕ್ಷರಾದ ಪ್ರದೀಪ್ ಶೆಟ್ಟಿ, ಲಯನ್ಸ್
ಮೂಡುಬಿದಿರೆಯ ನಿತ್ಯ ಸಹಾಯ ಮಾತಾ ದೇವಾಲಯ ಗಂಟಾಲ್ ಕಟ್ಟೆ ಇಲ್ಲಿ ಮೊಂತಿ ಫೆಸ್ತ್ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಚರ್ಚಿನ ಧರ್ಮಗುರು ರೆ/ಫಾ ರೊನಾಲ್ಡ್ ಡಿ’ಸೋಜಾ ಹಾಗೂ ಅತಿಥಿ ಧರ್ಮಗುರು ರಾಕೇಶ್ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಹಬ್ಬದ ಸಂದೇಶವನ್ನು ನೀಡಿದರು. ನಂತರ ಮನೆ ಮನೆಗೆ ಭತ್ತವನ್ನು ನೀಡಲಾಯಿತು. ಧರ್ಮಗುರು ರಾಕೇಶ್ ಮಥಾಯಿಸ್ ಭಾಗವಹಿಸಿದ್ದರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಶ್ರೀ ಎಸ್ ಅಂಗಾರ ಅವರು ಕುಲ್ಕುಂದದಲ್ಲಿ ಇಂದು 22 ಕೋಟಿಯ ರಾಜ್ಯ ಹೆದ್ದಾರಿ ಅಭಿವೃದ್ಧಿಯ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ಲೋಕೋಪಯೋಗಿ ಇಲಾಖೆ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ ನಾಲ್ಕನೇ ಹಂತದ ಎರಡನೇ ಘಟ್ಟದ ಯೋಜನೆ ಅಡಿಯಲ್ಲಿ ಸುಳ್ಯ ವಿಧಾನಸಭಾ ಕ್ಷೇತ್ರದ ಸುಬ್ರಹ್ಮಣ್ಯ ಉಡುಪಿ ರಾಜ್ಯ ಹೆದ್ದಾರಿ 37ರ ಕುಲ್ಕುಂದದಿಂದ ವೆಂಕಟಪುರ ಮತ್ತು ಕೈಕಂಬದಿಂದ ನೆಟ್ಟಣ ಒಟ್ಟಾಗಿ 7.08
ಈ-ಮಣ್ಣು ಚಲನ ಚಿತ್ರವನ್ನು ದುಬೈನ ಗಲೇರಿಯಾ ಚಿತ್ರಮಂದಿರದಲ್ಲಿ ವಿಶೇಷ ಅತಿಥಿಗಳನ್ನು ಆಹ್ವಾನಿಸಿ ಪ್ರದರ್ಶಿಸಿದ್ದು, ಯು.ಎ.ಇ.ಕನ್ನಡಿಗರಲ್ಲಿ ಸಡಗರ ಮೂಡಿಸಿತ್ತು. ಹೃದಯ ಸ್ವರ್ಶಿ ಮತ್ತು ಸಮಾಜಕ್ಕೆ ಒಂದು ಉತ್ತಮ ಸಂದೇಶ ನೀಡುವ ಈ ಚಲನಚಿತ್ರವನ್ನು ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ದೇಶಕ ಶಿವಧ್ವಜ್ ಶೆಟ್ಟಿ ನಿರ್ದೇಶಿಸಿದ್ದು, ದುಬೈನ ಅನಿವಾಸಿ ಕನ್ನಡಿಗ ಈಶ್ವರಿದಾಸ್ ಶೆಟ್ಟಿ ನಿರ್ಮಿಸಿದ್ದಾರೆ. ಈ ಚಲನಚಿತ್ರದ ಕನ್ನಡ ಭಾಷೆ ಮತ್ತು ಲಾಭ ರಹಿತ ಪ್ರದರ್ಶನಕ್ಕೆ
ಸುಹಾಸಂ ಉಡುಪಿ, ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು ಘಟಕ ಮತ್ತು ಧಾತ್ರಿ ಪ್ರಕಾಶನ ಇವರ ಜಂಟಿ ಆಶ್ರಯದಲ್ಲಿ, ಸೆಪ್ಟೆಂಬರ್ 03, 2022 ರ ಶನಿವಾರದಂದು ಉಡುಪಿಯ ಕಿದಿಯೂರು ಹೋಟೆಲ್‍ನ ಅನಂತ ಶಯನ ಹಾಲ್‍ನಲ್ಲಿ, ಲೇಖಕ ಎಸ್. ಉಮೇಶ್ ರವರ “ಕಾಶ್ಮೀರ್ ಡೈರಿ” ಕೃತಿಯ ಲೋಕಾರ್ಪಣೆ ಕಾರ್ಯಕ್ರಮ ಜರುಗಿತ್ತು. ಈ ಸಮಾರಂಭದಲ್ಲಿ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಇದರ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ ರವರು ಕೃತಿಯನ್ನು
ಬಂಟ್ವಾಳ: ಮಣಿನಾಲ್ಕೂರು ಗ್ರಾಮದ ಪುಣ್ಕೆದಡಿಯಲ್ಲಿ ಮಂಗಳವಾರ ತಡರಾತ್ರಿ ಮನೆಯೊಂದಕ್ಕೆ ಅತ್ಯಂತ ಭೀಕರ ರೀತಿಯಲ್ಲಿ ಸಿಡಿಲು ಬಡಿದು ಲಕ್ಷಾಂತರ ಮೌಲ್ಯದ ಮನೆಯ ಸೊತ್ತುಗಳ ಜತೆಗೆ ಕ್ಯಾಟರಿಂಗ್ ಉದ್ಯಮ ಪಾತ್ರೆ ಪಗಡೆಗಳು ಸಂಪೂರ್ಣ ಸುಟ್ಟು ಭಸ್ಮವಾದ ಘಟನೆ ನಡೆದಿದೆ.ಪುಣ್ಕೆದಡಿ ನಿವಾಸಿ ಲೋಕೇಶ್ ಪೂಜಾರಿ ಅವರ ಮನೆಗೆ ಸಿಡಿಲು ಬಡಿದಿದ್ದು, ಆದರೆ ಮನೆಮಂದಿ ಪಕ್ಕದ ಮನೆಯಲ್ಲಿ ಮಲಗಿದ್ದ ಹಿನ್ನೆಲೆಯಲ್ಲಿ ಬಾರಿ ಅನಾಹುತವೊಂದು ತಪ್ಪಿದಂತಾಗಿದೆ. ಇಲ್ಲದೇ ಇದ್ದರೆ ಜೀವಕ್ಕೂ
ಮಂಜೇಶ್ವರ: ತಲಪಾಡಿ-ಚೆಂಗಳ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಕಾಮಗಾರಿ ತ್ವರಿತ ಗತಿಯಲ್ಲಿ ಸಾಗುತ್ತಿರುವ ಮಧ್ಯ ತಲಪ್ಪಾಡಿಯಿಂದ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ನಿರ್ಮಿಸಿರುವ ರಿಟರ್ನ್ ಹಾಲ್ ಬಿರುಕು ಬಿಟ್ಟಿರುವುರಾಗಿ ಎಂದು ಸ್ಥಳೀಯರು ಆರೋಪಿಸಿದ್ದಾರೆ.ಯಾವುದೇ ಮಾಹಿತಿ ನೀಡದೆ ಕಾಮಗಾರಿ ಮುಂದುವರಿಸುತ್ತಿರುವ ಗುತ್ತಿಗೆದಾರರು ಬಿರುಕು ಬಿಟ್ಟಿರುವ ಬಗ್ಗೆ ಸ್ಥಳೀಯರ ಪ್ರಶ್ನೆಗಳಿಗೆ ಸ್ಪಂದಿಸದಿರುವುದು ಜನರ ಆತಂಕ ಹೆಚ್ಚಿಸಿದೆ. ರಾಷ್ಟ್ರೀಯ ಹೆದ್ದಾರಿ
ವಸಾಯಿಯ ಪಶ್ಚಿಮದ ಗೊರೈಪಾಡದ ಜೀವನ್ ನಗರ ನಿವಾಸಿ 35 ವರ್ಷ ಸುಧೀರ್ ಕುಮಾರ್ ಸಫಲ್ಯ ಅವರು ಆ.14ರಂದು ನಾಪತ್ತೆಯಾಗಿದ್ದು ಬಳಿಕ ಸೋಮವಾರ ಸಂಜೆ ಶವವಾಗಿ ಪತ್ತೆಯಾಗಿದ್ದಾರೆ. ಮೂಲತಃ ಮಂಜೇಶ್ವರ ಬಳಿಯ ಉಪ್ಪಳ ನಿವಾಸಿಯಾಗಿದ್ದ ಸುಧೀರ್ ಅವಿವಾಹಿತನಾಗಿದ್ದು, ಇವರನ್ನು ಕೊಲೆ ಮಾಡಲಾದ ಬಗ್ಗೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಗೊರೈಪಾಡದ ಕಂಪನಿಯಲ್ಲಿ ಉದ್ಯೋಗಿಯಾಗಿದ್ದ ಸುಧೀರ್ ಆ.14ರಂದು ಉಪ್ಪಳ ಸಮಿತಿಯ ಕಾರ್ಯದರ್ಶಿಯವರಿಗೆ ಫೋನ್ ಕರೆ ಮಾಡಿ ಭೇಟಿಗಾಗಿ




























