ವಿವಿಧ ರೀತಿಯ ವಿನ್ಯಾಸದೊಂದಿಗೆ ಮಾರುಕಟ್ಟೆಗೆ ವಾಹನವನ್ನ ಪರಿಚಯಿಸುತ್ತಿರುವ ಮಂಗಳೂರಿನ ದ್ವಿಚಕ್ರ ವಾಹನ ಷೋರೂಮ್ ಆದ ವೆಸ್ಟ್ ಕೋಸ್ಟ್ನಲ್ಲಿ ಇದೀಗ 3ನೆ ವಾರದ ಲಕ್ಕಿ ಡ್ರಾ ವು ನಡೆಯಿತು. ವೆಸ್ಟ್‍ಕೋಸ್ಟ್ ಹೀರೋ ಉತ್ಸವದ ಮೂರನೇ ವಾರದ ಅದೃಷ್ಟಶಾಲಿಯಾಗಿ ಕಿಶೋರ್ ಸಂಧ್ಯಾ ದಂಪತಿಗಳು ಆಯ್ಕೆಯಾಗಿದ್ದಾರೆ. ಅವರಿಗೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಿವೃತ್ತ
ಮಂಜೇಶ್ವರ: ಅಂಗಡಿಮೊಗರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ ಕನ್ನಡ ಮಾಧ್ಯಮಕ್ಕೆ ಮತ್ತೆ ಮಲಯಾಳ ಶಿಕ್ಷಕರ ನೇಮಕ ವಿರುದ್ಧ ಪ್ರತಿಭಟನೆ ತೀವ್ರಗೊಂಡಿದೆ.ನೇಮಕಾತಿ ವಿರೋಧಿಸಿ ಶಾಲಾ ವಿದ್ಯಾರ್ಥಿಗಳು, , ಶಾಲಾ ರಕ್ಷಕ – ಶಿಕ್ಷಕ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಕಳೆದ ವರ್ಷವೂ ಫಿಸಿಕಲ್ ಸಯನ್ಸ್ ಗೆ ಮಲಯಾಳಿ ಶಿಕ್ಷಕ ರನ್ನು ನೇಮಕ ಮಾಡಲಾಗಿತ್ತು.ಈ ಸಂದರ್ಭದಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಇದರಿಂದ ನೇಮಕಾತಿಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ
ತುಳು ಭಾಷೆ ಮತ್ತು ಸಂಸ್ಕೃತಿಯನ್ನು ಪ್ರಚಾರ ಪಡಿಸುವ ನಿಟ್ಟಿನಲ್ಲಿ ಕೇರಳ ತುಳು ಅಕಾಡೆಮಿ ನೂತನ ಚಿಂತನೆಗಳನ್ನು ಸಿದ್ದಪಡಿಸುತ್ತಿದೆ. ಭಾಷಾ ಅಲ್ಪಸಂಖ್ಯಾತ ತುಳು ಜನರ ಕಲಾ, ಸಾಂಸ್ಕೃತಿಕ ಚಟುವಟಿಕೆಗಳನ್ನು ಸಮಾಜಕ್ಕೆ ತಲುಪಿಸುವ ನಿಟ್ಟಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ನೂತನವಾಗಿ ಆಯ್ಕೆಯಾಗಿರುವ ಕೆ.ಆರ್.ಜಯಾನಂದ ಅವರನ್ನೊಳಗೊಂಡ ಸಮಿತಿ ತಿಳಿಸಿದೆ.ಕೋವಿಡ್ ಹರಡುವಿಕೆಯ ಪರಿಣಾಮ ಕಳೆದ ಮೂರು ವರ್ಷಗಳಿಂದ ಸ್ಥಗಿತಗೊಂಡಿದ್ದ ಅಕಾಡೆಮಿಯ ಚಟುವಟಿಕೆಗಳು
ಮಂಗಳೂರಿನ ವಿನಾಯಕ ಮಾರ್ಕೇಟಿಂಗ್ ನೂತನ ಶೋರೂಂ, ನಗರದ ಎಂ.ಜಿ.ರೋಡ್ ನ ಕೊಡಿಯಾಲ್‍ಗುತ್ತು, ಪತ್ತು ಮುಡಿ ಜನತಾ ಡಿಲಕ್ಸ್ ನ ಹೋಟೇಲ್ ಸಮೀಪದ ತಕ್ಷೀಲ ಬಿಲ್ಡಿಂಗ್‍ನಲ್ಲಿ ಆ.28ರಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನೆಗೊಳ್ಳಲಿದೆ ಎಂದು ವಿನಾಯಕ ಮಾರ್ಕೇಟಿಂಗ್‍ನ ವ್ಯವಸ್ಥಾಪಕ ನಿರ್ದೇಶಕರಾದ ಉಮನಾಥ್ ಹೇಳಿದರು. ಮಂಗಳೂರಿನ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿನಾಯಕ ಮಾರ್ಕೇಟಿಂಗ್
ಪ್ರಧಾನಿ ನರೇಂದ್ರ ಮೋದಿಯವರ ಮಂಗಳೂರು ಭೇಟಿಗೆ ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿಯವರ ಸಮಾವೇಶದ ತಾಣವಾಗಿರುವ ಕೂಳೂರಿನ ಗೋಲ್ಡ್ ಫಿಂಚ್ ಸಿಟಿ ಮೈದಾನದಲ್ಲಿ ಬಿರುಸಿನ ಸಿದ್ಧತೆಗಳು ನಡೆಯುತ್ತಿವೆ. ಸುಮಾರು 2 ಲಕ್ಷ ಮಂದಿ ಕುಳಿತುಕೊಳ್ಳಲು ಸಾಧ್ಯವಾಗು ವಂತಹ ಶೀಟ್‍ಗಳನ್ನು ಅಳವಡಿಸಿ ಬೃಹತ್ ಚಪ್ಪರ ಹಾಕುವ ಕಾಮಗಾರಿ ಭರದಿಂದ ಸಾಗುತ್ತಿದೆ. 20 ಅಡಿ ಎತ್ತರ, 60 ಅಡಿ ಉದ್ದ ಹಾಗೂ 80 ಅಡಿ ಅಗಲದ ಸಭಾವೇದಿಕೆ
ಕುಂದಾಪುರ: ಕೊಲ್ಲೂರಿನಲ್ಲಿ ಕಳೆದ ನಾಲ್ಕು ದಿನಗಳಿಂದ ಲೋಕ ಕಲ್ಯಾಣಾರ್ಥವಾಗಿ ಬೈಂದೂರು ಶಾಸಕ ಬಿ.ಎಂ ಸುಕುಮಾರ ಶೆಟ್ಟಿ ಅವರ ನೇತೃತ್ವದಲ್ಲಿ ನಡೆಯುತ್ತಿದ್ದ ಚಂಡಿಕಾ ಪಾರಾಯಣ ಹಾಗೂ ಶತ ಚಂಡಿ ಮಹಾಯಾಗಕ್ಕೆ ಶುಕ್ರವಾರ ಮಧ್ಯಾಹ್ನ ಪೂರ್ಣಾಹುತಿ ನೀಡಲಾಯಿತು.ಕೊಲ್ಲೂರು ದೇವಳದ ಮೂರ್ತಿದಾರಕ ಮೂರ್ತಿ ಕಾಳಿದಾಸ ಭಟ್ ಅವರ ನಿವಾಸದಲ್ಲಿ ನಡೆದ ಶತ ಚಂಡಿ ಯಾಗಕ್ಕೆ ಋತ್ವಿಜರ ಮಂತ್ರ ಪಠಣದೊಂದಿಗೆ ಹೋಮ ಕುಂಡಕ್ಕೆ ವಿವಿಧ ಹವಿಸ್ಸುಗಳನ್ನು ಅರ್ಪಿಸುವ ಮೂಲಕ ಶುಕ್ರವಾರ ಮಧ್ಯಾಹ್ನ
ಪುತ್ತೂರು : ಪುತ್ತೂರು ತಾಲ್ಲೂಕಿನ ಆರ್ಯಾಪು ಗ್ರಾಮದ ಸಂಪ್ಯ ಸಮೀಪದಲ್ಲಿರುವ ಪುರಾತನ ಕಾಲದ ಕೊಲ್ಯ ಕೆರೆ' ಯ ಬದಿಯಲ್ಲಿದ್ದ ಬೃಹತ್ ಗಾತ್ರದ ಮರಗಳೆರಡು ಬುಡಸಮೇತ ಉರುಳಿಬಿದ್ದು, ಸಂಪೂರ್ಣವಾಗಿ ಕೆರೆಯನ್ನು ಆವರಿಸಿಕೊಂಡಿದೆ, ಮಾತ್ರವಲ್ಲದೆ ಅಭಿವೃದ್ಧಿಗೊಂಡಿದ್ದ ಕೆರೆಗೆ ಹಾನಿಯಾಗಿದೆ. ಮರಗಳು ಬುಡಸಮೇತ ಉರುಳಿ ಬಿದ್ದಿರುವ ಪರಿಣಾಮವಾಗಿ ಕೆರೆಯ ಬದಿಯಲ್ಲಿರುವ ರಸ್ತೆ ಭಾಗ ಕುಸಿದು ಅಪಾಯದ ಸ್ಥಿತಿಯಲ್ಲಿದ್ದು, ರಸ್ತೆ ಸಂಪರ್ಕಕ್ಕೆ ತಡೆಯಾಗುವ ಆತಂಕ ಎದುರಾಗಿದೆ.
ಮೂಡುಬಿದಿರೆ: ಪಾಲಡ್ಕ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಡಂದಲೆ ಗ್ರಾಮದಲ್ಲಿ 400/220 ಕೆ.ವಿ ವಿದ್ಯುತ್ ಸ್ಥಾಪನೆಯ ಕುರಿತು ಈಗಾಗಲೇ ಪಂಚಾಯತ್‍ಗೆ ಮಾಹಿ ತಿಯನ್ನು ನೀಡಿದ್ದೇವೆ ಎಂದು ಸುಳ್ಳು ಮಾಹಿತಿಯನ್ನು ನೀಡಿ ಪಂಚಾಯತ್‍ನ ಅಭಿವೃದ್ಧಿ ಅಧಿಕಾರಿ, ಅಧ್ಯಕ್ಷರು, ಸದಸ್ಯರ ಹಾಗೂ ಗ್ರಾಮಸ್ಥರ ಯಾರ ಗಮನಕ್ಕೂ ಬಾರದೇ ಜನ ವಾಸ್ತವ್ಯವಿರುವ ಪ್ರದೇಶ, ಕೃಷಿ ಭೂಮಿಯಲ್ಲಿ ವಿದ್ಯುತ್ ಸಬ್ ಸ್ಟೇಶನ್ ಅನುಷ್ಠಾನಗೊಳಿಸಲು ಕೆ.ಪಿ.ಟಿ.ಸಿ.ಎಲ್‍ನ
ಬಂಟ್ವಾಳ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಜಿಲ್ಲಾ ಮಟ್ಟದ ಸ್ಕೇಟಿಂಗ್ ಚಾಂಪಿಯನ್‍ಶಿಪ್ ಸ್ಪರ್ಧೆಯಲ್ಲಿ ಪೊಳಲಿ ಶ್ರೀ ರಾಮಕೃಷ್ಣ ತಪೋವನದಲ್ಲಿ ತರಬೇತಿ ಪಡೆಯುತ್ತಿರುವ 8 ಮಂದಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಗಮನಾರ್ಹ ಸಾಧನೆಯನ್ನು ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸ್ಪರ್ಧಾ ಕೂಟದಲ್ಲಿ ಕಳ್ಳಿಗೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಾದ ಹಂಸಿಕಾ ಹಾಗೂ ಗಿತೇಶ್ ದ್ವಿತೀಯ ಸ್ಥಾನ ಗೆದ್ದುಕೊಂಡಿದ್ದಾರೆ ಪೊಳಲಿ
ಪುತ್ತೂರು: ಪ್ರಸ್ತುತ ದೇಶದಾದ್ಯಂತ ಚಲಾವಣೆಯಲ್ಲಿರುವ 10 ರೂ. ಮೌಲ್ಯದ ಕಾಯಿನ್ ಆರ್‍ಬಿಐ ಸಂಯೋಜಿತ ಅಧಿಕೃತ ಚಲಾವಣೆಯಾಗಿದ್ದು, ಯಾರೂ ಅಪಪ್ರಚಾರಕ್ಕೆ ಕಿವಿಗೊಡದೆ ಮುಕ್ತವಾಗಿ ದೈನಂದಿನ ಹಣಕಾಸು ವ್ಯವಹಾರದಲ್ಲಿ ಬಳಸಬೇಕು ಎಂದು ಪುತ್ತೂರು ವರ್ತಕ ಸಂಘದ ಅಧ್ಯಕ್ಷ ಜೋ ಡಿಸೋಜ ಹಾಗೂ ಕೆನರಾ ಬ್ಯಾಂಕ್ ಪುತ್ತೂರು ವಿಭಾಗೀಯ ಮ್ಯಾನೇಜರ್ ನರೇಂದ್ರ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.10 ರೂ. ಕಾಯಿನ್ ಚಲಾವಣೆಯಲ್ಲಿ ಇಲ್ಲ ಎಂಬ ಕುರಿತು ಸಾರ್ವಜನಿಕ ವಲಯದಲ್ಲಿ




























