Home Posts tagged #v4newskarnataka (Page 134)

ಮಾಲಿನ್ಯಕಾರಕ ಕೈಗಾರಿಕೆಗಳ ಮೇಲೆ ಕ್ರಮ ಜರುಗಿಸದಿದ್ದಲ್ಲಿ‌ ಮಾಲಿನ್ಯ ನಿಯಂತ್ರಣ ಮಂಡಳಿಗೆ ಬೀಗ ಜಡಿಯುತ್ತೇವೆ : ಮುನೀರ್ ಕಾಟಿಪಳ್ಳ

  ಪರಿಸರ ನಿಯಮಗಳನ್ನು ಎಗ್ಗಿಲ್ಲದೆ ಉಲ್ಲಂಘಿಸುತ್ತಿರುವ, ಸುತ್ತಲ ಗ್ರಾಮಗಳ ಜನರ ಬದುಕನ್ನು ನರಕ ಸದೃಶಗೊಳಿಸಿರುವ ಎಸ್ಇಝಡ್, ಅದಾ‌‌ನಿ ವಿಲ್ಮಾ, ರುಚಿಗೋಲ್ಡ್, ಯು  ಬಿ ಬಿಯರ್ ಸಹಿತ ಕೈಗಾರಿಕೆ ಘಟಕಗಳ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಹಿಂಜರಿದಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಗೆ ಬೀಗ ಜಡಿಯಲಾಗುವುದು ಎಂದು ಡಿವೈಎಫ್ಐ ರಾಜ್ಯಾಧ್ಯಕ್ಷ

ಪಡುಬಿದ್ರಿ: ತಡೆರಹಿತ ಬಸ್ಸುಗಳ ಪೈಪೋಟಿ, ಹೆದ್ದಾರಿ ಬ್ಲಾಕ್

ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಮುಖ್ಯ ಪೇಟೆಯಲ್ಲಿ ಖಾಸಗಿ ಬಸ್ಸುಗಳೆರಡು ಪೈಪೋಟಿಯಿಂದ ಮುನ್ನುಗ್ಗಿ ಬಂದು ಒಂದು ಬಸ್ ಮತ್ತೊಂದಕ್ಕೆ ಅಡ್ಡವಾಗಿ ನಿಂತ ಪರಿಣಾಮ ಸುಮಾರು ಹತ್ತು ನಿಮಿಷಗಳ ಕಾಲ ಹೆದ್ದಾರಿ ತಡೆಯುಂಟಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುತ್ತಿದ್ದ ರೇಷ್ಮಾ ಹಾಗೂ ದುರ್ಗಾಂಬ ಹೆಸರಿನ ಖಾಸಗಿ ಬಸ್ ಗಳೆರಡು ರಸ್ತೆ ತಡೆಗೆ ಕಾರಣವಾದವುಗಳು. ಬಹಳಷ್ಟು ಹೊತ್ತು ರಸ್ತೆ ತಡೆಯಾಗುತ್ತಿದ್ದಂತೆ ಆಕ್ರೋಶಗೊಂಡ ಸಾರ್ವಜನಿಕರು ಬಸ್ ಚಾಲಕ ನಿರ್ವಾಹಕರನ್ನು

ಬಂಟ್ವಾಳ : ಟ್ಯಾಕ್ಸಿ ಚಾಲಕನ ಕೊಲೆ ಯತ್ನ ಪ್ರಕರಣ , ಚಾಲಕರು ಎಚ್ಚರ ವಹಿಸುವಂತೆ ಮನವಿ

ಬಾಡಿಗೆಗೆ ಟ್ಯಾಕ್ಸಿ ಗೊತ್ತುಪಡಿಸಿಕೊಂಡು ಅರ್ಧ ದಾರಿಯಲ್ಲಿ ಚಾಲಕರನ್ನು ಲೂಟಿ ಮಾಡುವ, ಹಲ್ಲೆ ಮಾಡುವ ದುಷ್ಕತ್ಯಗಳು ನಡೆಯುತ್ತಿದ್ದು, ಈ ಬಗ್ಗೆ ಚಾಲಕರು ಎಚ್ಚರಿಕೆ ವಹಿಸಬೇಕು ಎಂದು ದ.ಕ. ಜಿಲ್ಲಾ ಟ್ಯಾಕ್ಸಿಮೆನ್ಸ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಶನ್ ಸಲಹೆ ನೀಡಿದೆ.ದ.ಕ. ಜಿಲ್ಲೆಯ ಬಂಟ್ವಾಳ ಕೊಯಿಲ ನಿವಾಸಿ ಹಾಗೂ ಅಸೋಸಿಯೇಶನ್‍ನ ಸದಸ್ಯರಾದ ಅಬ್ದುಲ್ ರಹಿಮಾನ್ ಎಂಬ ಟ್ಯಾಕ್ಸಿ ಚಾಲಕರ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಉಲ್ಲೇಖಿಸಿ ಸಂಘದ ಅಧ್ಯಕ್ಷ

ಉಡುಪಿ : ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಉಡುಪಿ ವಲಯ, ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಡುಪಿ, ರೋಟರಿ ಉಡುಪಿ ರೋಯಲ್ ಜಂಟಿಯಾಗಿ ವಿಶ್ವ ಛಾಯಾಗ್ರಹಣ ದಿನ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಈ ಕಾರ್ಯಕ್ರಮದಲ್ಲಿ ಹಿರಿಯ ಛಾಯಾಗ್ರಾಹಕ ಜಗನ್ನಾಥ ಶೆಟ್ಟಿ ಹಾಗೂ ಚಂದ್ರಶೇಖರ್ ಅಂಬಲಪಾಡಿ ಇವರಿಗೆ ಛಾಯಾ ಪುರಸ್ಕಾರ ನೀಡಿ ಗೌರವಿಸಲಾಯಿತು. ವಿಶ್ವ ಛಾಯಾಗ್ರಹಣ ದಿನದ ಪ್ರಯುಕ್ತ ನಡೆದ ಛಾಯಾಚಿತ್ರ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಯಿತು ಮತ್ತು ದೇಶದ ಗಡಿ

ಕುಂದಾಪುರ : ಪತ್ನಿಯನ್ನು ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಪತಿ

ಕುಂದಾಪುರ: ಸೀಮಂತ ಕಾರ್ಯಕ್ರಮದಲ್ಲಿ ಭಾಗಿಯಾಗಲು ತವರು ಮನೆಯಿಂದ ಬಂದಿದ್ದ ಪತ್ನಿಯನ್ನು ಕುಡಿದ ಮತ್ತಿನಲ್ಲಿ ಕೊಲೆಗೈದ ಪತಿ ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಇಲ್ಲಿನ ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ದೇವಲ್ಕುಂದ ಶಾಲೆ ಸಮೀಪದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ. ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಸೊರಬ ನಿವಾಸಿ

ನಟ ಅರ್ಜುನ್ ಕಾಪಿಕಾಡ್ ಹುಲಿ ಕುಣಿತಕ್ಕೆ ಮನಸೋತ ಪ್ರೇಕ್ಷಕರು

ಕೋಸ್ಟಲ್ ವುಡ್ ನಲ್ಲಿ ಅಬತರ ಮೂವಿ ಸಖತ್ ಸದ್ದು ಮಾಡ್ತಾ ಇದೆ.ಬೊಳ್ಳಿ ಮೂವೀಸ್ ಲಾಂಛನದಲ್ಲಿ ಅರ್ಜುನ್ ಕಾಪಿಕಾಡ್ ನಿರ್ದೇಶನದ `ಅಬತರ’ ತುಳು ಮೂವಿ ಕರಾವಳಿಯಾದ್ಯಂತ ಯಶಸ್ವಿ ಪ್ರದರ್ಶನ ಕಾಣ್ತಾ ಇದೆ.ಇದೀಗ ಅಬರತ ಬೈಕ್ ರಥಯಾತ್ರೆ ಮಂಗಳೂರಲ್ಲಿ ಸಂಭ್ರಮದಿಂದ ಜರುಗಿತ್ತು. ನಗರದ ಫಾರಂ ನೆಕ್ಸಾ ಮಾಲ್ ನಲ್ಲಿ ಅಬರತ ಬೈಕ್ ರಥಯಾತ್ರೆಗೆ ಚಾಲನೆ ಸಿಕ್ಕಿತ್ತು. ನಟರಾದ ದೇವದಾಸ್ ಕಾಪಿಕಾಡ್, ಅರವಿಂದ ಬೋಳಾರ್, ಭೋಜರಾಜ್ ವಾಮಂಜೂರ್ ಅವರು ಅಧಿಕೃತವಾಗಿ ಚಾಲನೆ

ದುಸ್ಥಿತಿಯಲ್ಲಿದೆ ಮಂಗಳೂರಿನ ನಂತೂರು ಬಸ್ ನಿಲ್ದಾಣ

ಸಾರ್ವಜನಿಕರಿಗೆ ಬೇಕಾದ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವ ಜವಾಬ್ದಾರಿ ಸರಕಾರದ್ದು. ಆದರೆ ಈ ವಿಚಾರದಲ್ಲಿ ಆಡಳಿತದಲ್ಲಿರುವ ಮಂದಿ ತಮ್ಮ ಲಾಭವನ್ನೇ ನೋಡಿದಲ್ಲಿ ಅಂತಹ ಮೂಲಭೂತ ಸೌಲಭ್ಯಗಳು ಜನರಿಗೆ ಇದ್ದೂ ಇಲ್ಲದಂತಾಗುತ್ತದೆ. ಇಂತಹುದೇ ಒಂದು ವ್ಯವಸ್ಥೆ ಮಂಗಳೂರಲ್ಲಿ ಕಾಣಬಹುದು. ಹೌದು. ಮಂಗಳೂರು ನಗರದ ನಂತೂರು ಸಮೀಪದಲ್ಲಿರುವ ಬಸ್ ನಿಲ್ದಾಣ ಈಗಲೋ, ಆಗಲೋ ಬೀಳುವ ಸ್ಥಿತಿಯಲ್ಲಿದೆ. ಮಂಗಳೂರು ಮಹಾನಗರ ಪಾಲಿಕೆಯ ಬಸ್ ನಿಲ್ದಾಣ ಹಲವಾರು ವರ್ಷಗಳಿಂದ

ಮರವಂತೆ ಕಡಲ ತೀರದಲ್ಲಿ ಉಪಾಧ್ಯಕ್ಷ ಫಿಲಂ ಶೂಟಿಂಗ್

ಬೈಂದೂರು ತಾಲೂಕಿನ ವಿಶ್ವಪ್ರಸಿದ್ಧ ಮರವಂತೆ ಕಡಲ ತೀರದಲ್ಲಿ ಹಾಗೂ ಕುಂದಾಪುರ ಉಡುಪಿಯ ಪರಿಸರದಲ್ಲಿ ಇಂದು ಉಪಾಧ್ಯಕ್ಷ ಫಿಲಂ ಶೂಟಿಂಗ್ ನಡೆಯಿತು.ಸ್ಯಾಂಡಲ್‍ವುಡ್‍ನಲ್ಲಿ ಕಾಮಿಡಿ ಕಿಂಗ್ ಎಂದು ಹೆಸರು ಮಾಡಿದ ಖ್ಯಾತರಾದ ಚಲನಚಿತ್ರ ನಟ ಚಿಕ್ಕಣ್ಣ ಕೆಲವೊಂದು ಸಿನಿಮಾಗಳಲ್ಲಿ ಇವರೇ ಹೀರೋಗಿಂತ ಹಾಸ್ಯ ನಟನಾಗಿ ಹೆಚ್ಚಾಗಿ ಮಿಂಚಿದ್ದು, ಈಗ ಉಪಾಧ್ಯಕ್ಷ ಚಿತ್ರದಲ್ಲಿ ನಾಯಕನಾಗಿ ಮೋಡಿ ಮಾಡಲು ಸಜ್ಜಾಗಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳ ನಿರ್ಮಾಪಕರಾದ

ಮೆಲ್ಕಾರ್ : ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಉದ್ಘಾಟನಾ ಕಾರ್ಯಕ್ರಮ

ಬಂಟ್ವಾಳ: ಮೆಲ್ಕಾರ್‍ನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಶ್ರೀ ಗುರು ಕ್ರೆಡಿಟ್ ಕೋ- ಅಪರೇಟಿವ್ ಸೊಸೈಟಿ ನಿ. ಇದರ ನೂತನ ಕಡೆಗೋಳಿ ಶಾಖೆಯು ಪುದು ಗ್ರಾಮದ ಕಡೆಗೋಳಿಯ ಶ್ರೀ ನಾರಾಯಣ ಕಾಂಪ್ಲೆಕ್ಸ್‍ನಲ್ಲಿ ಶುಭಾರಂಭಗೊಂಡಿತು.ಸಂಘದ ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ ಸ್ವಾಗತಿಸಿ, ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ದೇಶಕ್ಕೆ ಆರ್ಥಿಕ ಶಕ್ತಿಯ ಬೆಳಕನ್ನು ದ.ಕ. ಜಿಲ್ಲೆ ನೀಡಿದೆ. ಗ್ರಾಮೀಣ ಭಾಗದ ಜನರಿಗೆ ರಾಷ್ಟ್ರೀೀಕೃತ ಬ್ಯಾಂಕುಗಳು ನೀಡಲು

ಆ.23 : ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ

ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಪ್ರಯುಕ್ತ ಕಾಂಗ್ರೆಸ್ ಪಕ್ಷದ ವತಿಯಿಂದ ಪಾದಯಾತ್ರೆ ಕಾರ್ಯಕ್ರಮ ಆ.23 ರಂದು ಮಂಗಳವಾರದಂದು ಹಮ್ಮಿಕೊಳ್ಳಲಾಗಿದ್ದು ನಾವೂರ ಗ್ರಾಮದ ಮಣ್ಣಿಹಳ್ಳ ಜಂಕ್ಷನಲ್ಲಿ ಬೆಳಿಗ್ಗೆ 9.30ಕ್ಕೆ ಪಾದಾಯಾತ್ರೆ ಪ್ರಾರಂಭಗೊಳ್ಳಲಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ತಿಳಿಸಿದರು. ಅವರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿ ಪಾದಯಾತ್ರೆಯು ಜಕ್ರಿಬೆಟ್ಟು ಮೂಲಕ ಸಾಗಿ